Connect with us

ಕಾರ್ಯಕ್ರಮಗಳು

Putttur-ಪುತ್ತೂರು ಕಿಲ್ಲೆ ಮೈದಾನದಲ್ಲಿ 68ನೇ ಗಣೇಶೋತ್ಸವದ ವೈಭವ : ಇದೇ ಮೊದಲ ಬಾರಿ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಐತಿಹಾಸಿಕ ‘ಬಾಲ ಗಣಪತಿ ಹೋಮ’ – ‘ಮಕ್ಕಳ ಗಣಪತಿ’ಯ ಕಾರಣಿಕಕ್ಕೆ ಮತ್ತೊಂದು ಮೆರುಗು

Published

on



Ad Widget

Ad Widget

Ad Widget

Ad Widget

ಜ್ಞಾನ ಮತ್ತು ಸಿದ್ಧಿಯ ಅಧಿದೇವನಾದ ಶ್ರೀ ವಿಘ್ನನಿವಾರಕನ ಆರಾಧನೆಗೆ ಪುತ್ತೂರಿನ ಐತಿಹಾಸಿಕ ಕಿಲ್ಲೆ ಮೈದಾನವು 68ನೇ ವರ್ಷದ ಆಚರಣೆಗೆ ಸಜ್ಜಾಗಿದೆ. ಶ್ರೀ ದೇವತಾ ಸಮಿತಿಯ ಆಶ್ರಯದಲ್ಲಿ ಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ ಏಳು ದಿನಗಳ ಕಾಲ ನಡೆಯಲಿರುವ ಈ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ಧಾರ್ಮಿಕ ಶ್ರದ್ಧೆ ಮತ್ತು ಸಾಂಸ್ಕೃತಿಕ ಸಂಭ್ರಮದ ಮಹಾಸಂಗಮವಾಗಲಿದೆ. ಇದೇ ಮೊದಲ ಬಾರಿಗೆ ‘ಬಾಲ ಗಣಪತಿ ಹೋಮ’ವನ್ನು ವಿಶೇಷವಾಗಿ ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಜ್ಞಾನ ಮತ್ತು ಸಿದ್ಧಿಯ ಅಧಿದೇವನಾದ ಶ್ರೀ ವಿಘ್ನನಿವಾರಕನ ಆರಾಧನೆಗೆ ಪುತ್ತೂರಿನ ಐತಿಹಾಸಿಕ ಕಿಲ್ಲೆ ಮೈದಾನವು 68ನೇ ವರ್ಷದ ಆಚರಣೆಗೆ ಸಜ್ಜಾಗಿದೆ. ಶ್ರೀ ದೇವತಾ ಸಮಿತಿಯ ಆಶ್ರಯದಲ್ಲಿ ಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ ಏಳು ದಿನಗಳ ಕಾಲ ನಡೆಯಲಿರುವ ಈ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ಧಾರ್ಮಿಕ ಶ್ರದ್ಧೆ ಮತ್ತು ಸಾಂಸ್ಕೃತಿಕ ಸಂಭ್ರಮದ ಮಹಾಸಂಗಮವಾಗಲಿದೆ. ಈ ಬಾರಿಯ ಉತ್ಸವದ ಪ್ರಮುಖ ಆಕರ್ಷಣೆಯಾಗಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಯನ್ನು ಸಂಕಲ್ಪಿಸಿ, ಇದೇ ಮೊದಲ ಬಾರಿಗೆ ‘ಬಾಲ ಗಣಪತಿ ಹೋಮ’ವನ್ನು ವಿಶೇಷವಾಗಿ ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಇದೆ ಮೊದಲ ಬಾರಿಗೆ ಮಕ್ಕಳ ಶ್ರೇಯಸ್ಸಿಗಾಗಿ ‘ಬಾಲ ಗಣಪತಿ ಹೋಮ’ :

Ad Widget

Ad Widget <> Ad Widget

ಈ ಬಾರಿಯ ಗಣೇಶೋತ್ಸವದಲ್ಲಿ ಹಿಂದೆಂದೂ ಕಾಣದ ಧಾರ್ಮಿಕ ಕಾರ್ಯಕ್ರಮವೊಂದಕ್ಕೆ ಕಿಲ್ಲೆ ಮೈದಾನ ಸಾಕ್ಷಿಯಾಗಲಿದೆ. ಆಗಸ್ಟ್ 31ರಂದು ಮುಂಜಾನೆ 4:45ರ ಬ್ರಾಹ್ಮೀ ಮುಹೂರ್ತದಲ್ಲಿ ‘ಬಾಲ ಗಣಪತಿ ಹೋಮ’ ಆರಂಭವಾಗಿ, ಸೂರ್ಯೋದಯಕ್ಕೂ ಮುನ್ನ ಪೂರ್ಣಾಹುತಿಗೊಳ್ಳಲಿದೆ. ಗಣಪತಿಯ 32 ರೂಪಗಳಲ್ಲಿ ಒಂದಾದ ಬಾಲ ಗಣಪತಿಯು ಮಕ್ಕಳ ಮುಗ್ಧ ಸ್ವರೂಪಿಯಾಗಿದ್ದು, ಈ ಹೋಮವು ಮಕ್ಕಳ ಭವಿಷ್ಯಕ್ಕೆ ಅತ್ಯಂತ ಶ್ರೇಷ್ಠ ಎಂಬ ನಂಬಿಕೆಯಿದೆ.



Ad Widget

ಈ ಹೋಮವನ್ನು ಆಯ್ದ ಕೆಲವೇ ಕೆಲವು ದೇವಸ್ಥಾನಗಳಲ್ಲಿ ಮಾತ್ರ ನಡೆಸಲಾಗುತ್ತದೆ. ಬಹಳಷ್ಟು ಭಕ್ತರ ಒತ್ತಾಸೆಯ ಮೇರೆಗೆ ಇದೇ ಮೊದಲ ಬಾರಿಗೆ ಪುತ್ತೂರಿನ ಸಾರ್ವಜನಿಕ ಗಣೇಶೋತ್ಸವದಲ್ಲಿ ಇದನ್ನು ಆಯೋಜಿಸುವ ದಿಟ್ಟ ನಿರ್ಧಾರವನ್ನು ಶ್ರೀ ದೇವತಾ ಸಮಿತಿ ಕೈಗೊಂಡಿದೆ. ಹಿಂದೆ ‘ಮಕ್ಕಳ ಗಣಪತಿ’ ಎಂಬ ಅಭಿದಾನಕ್ಕೆ ಪಾತ್ರವಾಗಿದ್ದ ಇದೇ ಗಣೇಶೋತ್ಸವದಲ್ಲಿ ಈಗ ಬಾಲ ಗಣಪತಿ ಹೋಮ ನಡೆಯುತ್ತಿರುವುದು ವಿಶೇಷವಾಗಿದೆ.

Ad Widget

Ad Widget

ಹೋಮದ ಮಹತ್ವ ಮತ್ತು ಪ್ರಯೋಜನಗಳು:

• ವಿದ್ಯಾಭ್ಯಾಸದಲ್ಲಿ ಪ್ರಗತಿ: ಮಕ್ಕಳಲ್ಲಿ ಏಕಾಗ್ರತೆ, ಜ್ಞಾಪಕಶಕ್ತಿ ವೃದ್ಧಿಸಿ ಶಿಕ್ಷಣದಲ್ಲಿನ ಅಡೆತಡೆಗಳನ್ನು ನಿವಾರಿಸುತ್ತದೆ.

• ಆರೋಗ್ಯ ವೃದ್ಧಿ: ಮಕ್ಕಳನ್ನು ಬಾಧಿಸುವ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಿ ದೀರ್ಘಾಯುಷ್ಯ ಕರುಣಿಸುತ್ತದೆ.

• ವಿಘ್ನ ನಿವಾರಣೆ: ಜೀವನದ ಪ್ರತಿ ಹಂತದಲ್ಲೂ ಎದುರಾಗುವ ಅಡೆತಡೆಗಳನ್ನು ನಿವಾರಿಸಿ ಕಾರ್ಯಸಿದ್ಧಿಗೆ ಅನುಗ್ರಹಿಸುತ್ತದೆ.

• ವಿವಾಹ ಮತ್ತು ಸಂತಾನ ಭಾಗ್ಯ: ವಿವಾಹ ವಿಳಂಬ ಹಾಗೂ ಸಂತಾನ ಭಾಗ್ಯದ ಅಪೇಕ್ಷೆಗಳನ್ನು ಪೂರೈಸುತ್ತದೆ.

ಈ ಹೋಮವು ಕೇವಲ ಮಕ್ಕಳಿಗಷ್ಟೇ ಅಲ್ಲದೆ, ಸಕಲ ಭಕ್ತರಿಗೂ ಸುಖ, ಸಮೃದ್ಧಿ ಮತ್ತು ಯಶಸ್ಸನ್ನು ಕರುಣಿಸಲಿದೆ ಎಂದು ಸಮಿತಿ ತಿಳಿಸಿದೆ.

ಭವ್ಯ ಚಾಲನೆ ಮತ್ತು ಗಣ್ಯರ ಉಪಸ್ಥಿತಿ :

ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ಕೋರ್ಟ್ ರಸ್ತೆಯ ವಿಶ್ವ ಸಂಕೀರ್ಣದಿಂದ ಶ್ರೀ ಮಹಾಗಣಪತಿಯ ಭವ್ಯ ಮೂರ್ತಿಯ ಶೋಭಾಯಾತ್ರೆಗೆ ಚಾಲನೆ ದೊರೆಯಲಿದೆ. ಬಳಿಕ ಕಿಲ್ಲೆ ಮೈದಾನದ ವೈಭವದ ಮಂಟಪದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ಮಧ್ಯಾಹ್ನ 12 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಏಳು ದಿನಗಳ ಸಾಂಸ್ಕೃತಿಕ ರಸದೌತಣ :

ಉತ್ಸವದ ಪ್ರತಿದಿನ ಸಂಜೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಯಕ್ಷಗಾನ ಬಯಲಾಟ, ಹೆಸರಾಂತ ಕಲಾವಿದರಿಂದ ಭರತನಾಟ್ಯ, ಪುತ್ತೂರು ಶಿವಶಕ್ತಿ ಮೆಲೋಡಿಸ್ ತಂಡದಿಂದ ಭಕ್ತಿ ರಸಮಂಜರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಿ.ಕೆ. ಗಣೇಶ್ ಬಳಗದಿಂದ ಸ್ಯಾಕ್ಸೋಫೋನ್ ವಾದನ ಹಾಗೂ ‘ಅಮ್ಮ ಕಲಾವಿದೆರ್ ಕುಡ್ಲ’ ತಂಡದವರಿಂದ ‘ಆಣ್ ಮಗೆ’ ತುಳು ಹಾಸ್ಯಮಯ ನಾಟಕ ಪ್ರೇಕ್ಷಕರನ್ನು ರಂಜಿಸಲಿವೆ.

ಕಿಲ್ಲೆ ಗಣಪನ ಹಿನ್ನೆಲೆ: ‘ಮಕ್ಕಳ ಗಣಪತಿ’ಯಿಂದ ಮಹೋತ್ಸವದವರೆಗೆ

68 ವರ್ಷಗಳ ಹಿಂದೆ ದಿ. ಡಾ. ಕೆ. ಹನುಮಂತ ಮಲ್ಯರ ಮುಂದಾಳತ್ವದಲ್ಲಿ ಕೆಲವೇ ಕೆಲವು ಉತ್ಸಾಹಿ ಮಕ್ಕಳೊಂದಿಗೆ ಬೋರ್ಡ್ ಶಾಲೆಯ ಜಗುಲಿಯಲ್ಲಿ ಪ್ರಾರಂಭವಾದ ಈ ಗಣೇಶೋತ್ಸವ, ಅಂದು ‘ಮಕ್ಕಳ ಗಣಪತಿ’ ಎಂದೇ ಪ್ರಸಿದ್ಧವಾಗಿತ್ತು. ಕಾಲಕ್ರಮೇಣ ಕೋರ್ಟ್ ಮೈದಾನಕ್ಕೆ ಸ್ಥಳಾಂತರಗೊಂಡು, ಸ್ವಾತಂತ್ರ್ಯ ಹೋರಾಟಗಾರ ಎನ್.ಎಸ್. ಕಿಲ್ಲೆಯವರ ಹೆಸರಿನಿಂದ ‘ಕಿಲ್ಲೆ ಗಣಪ’ ಎಂದು ಖ್ಯಾತಿ ಪಡೆಯಿತು. ಡಾ. ಮಲ್ಯರ ನಿಸ್ವಾರ್ಥ ಸೇವೆ ಮತ್ತು ದೂರದೃಷ್ಟಿಯ ಫಲವಾಗಿ ಇಂದು ಇದು ಪುತ್ತೂರಿನ ಅತಿದೊಡ್ಡ ಧಾರ್ಮಿಕ ಉತ್ಸವಗಳಲ್ಲಿ ಒಂದಾಗಿ ಬೆಳೆದಿದೆ.

ವೈಭವದ ತೆರೆ :

ಸೆಪ್ಟೆಂಬರ್ 2ರಂದು ನೂರೆಂಟು (108) ಕಾಯಿಗಳ ಗಣಹೋಮ, ಸಂಜೆ ದೇವರ ಬಲಿ ಉತ್ಸವ, ರಕ್ತೇಶ್ವರಿ ದೈವದ ಕೋಲ, ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ಶ್ರೀ ಗಣೇಶನ ಮೂರ್ತಿಯ ವೈಭವದ ಶೋಭಾಯಾತ್ರೆಯು ನಡೆಯಲಿದೆ. ಇದರೊಂದಿಗೆ ಏಳು ದಿನಗಳ ಉತ್ಸವಕ್ಕೆ ತೆರೆ ಬೀಳಲಿದೆ.

ಕಳೆ ಹೆಚ್ಚಿಸುವ ದೈವಗಳು :

ಶೋಭಾಯಾತ್ರೆಯ ಕಳೆಯನ್ನು ಹೆಚ್ಚಿಸುವ ಸಂಗತಿಯೆಂದರೆ ದೈವಗಳ ಪಾಲ್ಗೊಳ್ಳುವಿಕೆ. ಮುಖ್ಯವಾಗಿ ಎರಡು ದೈವಗಳು ಜನರ ಗಮನ ಸೆಳೆಯುತ್ತವೆ. ರಕೇಶ್ವರಿ ಭೂತವು ಪೂಜಾ ಸ್ಥಳದಲ್ಲಿ ಕಟ್ಟಲ್ಪಟ್ಟು ಜಲಸ್ತಂಭನದ ಕೆರೆಯ ತನಕ ಬರುತ್ತದೆ. ಅಣ್ಣಪ್ಪ ಪಂಜುರ್ಲಿ ಭೂತವು ಕಲ್ಲೇಗದ ದೈವದ ಬನದಿಂದ ಹೊರಟು ವಿಸರ್ಜನ ಸ್ಥಳದ ತನಕ ಬರುವುದು. ಶೋಭಾಯಾತ್ರೆಯ ವೇಳೆ ಕಲ್ಲೇಗದ ಕಲ್ಲುರ್ಟಿ-ಕಲ್ಕುಡ ದೈವಗಳಿಗೆ ತಂಬಿಲ ನೆರವೇರುತ್ತದೆ

“ಈ ಎಲ್ಲಾ ಕಾರ್ಯಕ್ರಮಗಳಲ್ಲಿ, ವಿಶೇಷವಾಗಿ ಮಕ್ಕಳ ಭವಿಷ್ಯಕ್ಕಾಗಿ ಆಯೋಜಿಸಿರುವ ಬಾಲ ಗಣಪತಿ ಹೋಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತನು-ಮನ-ಧನಗಳಿಂದ ಸಹಕರಿಸಿ ಗಣೇಶನ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ದೇವತಾ ಸಮಿತಿಯ ಅಧ್ಯಕ್ಷರಾದ ಶ್ರೀ ಅಭಿಜಿತ್ ಶೆಟ್ಟಿ ನೆಲ್ಲಿಕಟ್ಟೆ ಅವರು ವಿನಂತಿಸಿದ್ದಾರೆ.”

Ad Widget
Click to comment

Leave a Reply

ಸ್ಥಳೀಯ

Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

Published

on



Ad Widget

Ad Widget

Ad Widget

Ad Widget

ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.

Ad Widget

Ad Widget

Ad Widget

Ad Widget

ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.

Ad Widget

Ad Widget <> Ad Widget

ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.



Ad Widget

ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.

Ad Widget

Ad Widget

ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.

ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.

ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ

ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.

Ad Widget
Continue Reading

ಸ್ಥಳೀಯ

Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ

Published

on



Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.



Ad Widget
Ad Widget
Continue Reading

ಕಾರ್ಯಕ್ರಮಗಳು

Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ

Published

on



Ad Widget

Ad Widget

Ad Widget

Ad Widget

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್‌ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್‌ ಮಿಷನ್‌ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

Ad Widget

Ad Widget <> Ad Widget

ವಿಟ್ಲದ ಎಂಆರ್‌ಎಫ್‌ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.



Ad Widget

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

Ad Widget

Ad Widget

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading