Connect with us

ಸ್ಥಳೀಯ

Charmadi Ghat-ಚಾರ್ಮಾಡಿ ಘಾಟಿಯಲ್ಲಿ ಹೊಸ ಸಂಚಾರ ನಿಯಮ: ರಾತ್ರಿ ಐದು ವಾಹನಗಳ ಗುಂಪಿಗೆ ಮಾತ್ರ ಸಂಚಾರಕ್ಕೆ ಅನುಮತಿ

Published

on

Ad Widget

Ad Widget

Ad Widget

Ad Widget

ಚಿಕ್ಕಮಗಳೂರು-ದಕ ಜಿಲ್ಲೆಯನ್ನು ಕರಾವಳಿಯನ್ನು ಸಂಪರ್ಕಿಸುವ, ಬೆಂಗಳೂರು-ಮಂಗಳೂರು ಹೆದ್ದಾರಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ಇದೀಗ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿಗೆ ಬಂದಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇನ್ನು ಮುಂದೆ ಒಂದೆರಡು ವಾಹನಗಳಿಗಲ್ಲ, ಕನಿಷ್ಠ ಐದು ವಾಹನಗಳು ಒಟ್ಟಾದ ಬಳಿಕ ಸಂಚಾರಕ್ಕೆ ಅವಕಾಶ ಸಿಗಲಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ, ಆ.27: ಚಿಕ್ಕಮಗಳೂರು-ದಕ ಜಿಲ್ಲೆಯನ್ನು ಕರಾವಳಿಯನ್ನು ಸಂಪರ್ಕಿಸುವ, ಬೆಂಗಳೂರು-ಮಂಗಳೂರು ಹೆದ್ದಾರಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ಇದೀಗ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿಗೆ ಬಂದಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇನ್ನು ಮುಂದೆ ಒಂದೆರಡು ವಾಹನಗಳಿಗಲ್ಲ, ಕನಿಷ್ಠ ಐದು ವಾಹನಗಳು ಒಟ್ಟಾದ ಬಳಿಕ ಸಂಚಾರಕ್ಕೆ ಅವಕಾಶ ಸಿಗಲಿದೆ.

Ad Widget

Ad Widget alt="Ad Widget"/>

Ad Widget

ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ರಾತ್ರಿ ವೇಳೆ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆಗೊಳಪಡಿಸಿ, ಐದು ವಾಹನಗಳ ಗುಂಪಿನೊಂದಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

Ad Widget

Ad Widget <> Ad Widget

ದಟ್ಟ ಅರಣ್ಯದಿಂದ ಆವೃತವಾದ ಈ ಘಾಟಿಯಲ್ಲಿ ರಾತ್ರಿಯ ವೇಳೆ ಗೋವು ಕಳ್ಳತನ ಮತ್ತು ಇತರ ಅಪರಾಧ ಚಟುವಟಿಕೆಗಳ ದೂರುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಇವುಗಳನ್ನು ತಡೆಗಟ್ಟಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿರುವ ಹಳೆಯ ಬ್ಯಾರಿಕೇಡ್‌ಗೆ ಬದಲಾಗಿ ಹೊಸ ಬ್ಯಾರಿಯರ್ ನಿರ್ಮಾಣವಾಗುತ್ತಿದೆ. ರಾತ್ರಿಯ ವೇಳೆ ಒಬ್ಬ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸರು ಕಾವಲು ಕಾಯಲಿದ್ದಾರೆ. ಇದರ ಜೊತೆಗೆ, ಚೆಕ್‌ಪೋಸ್ಟ್‌ನಿಂದ 1.5 ಕಿ.ಮೀ ದೂರದಲ್ಲಿರುವ ಕಚ್ಚಾ ರಸ್ತೆಯನ್ನು ಗೋವು ಕಳ್ಳರು ದುರುಪಯೋಗ ಮಾಡುತ್ತಿರುವ ದೂರುಗಳ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸಿ, ಆ ರಸ್ತೆಗೆ ಗೇಟ್ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಗೇಟ್ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಮುಚ್ಚಿರಲಿದೆ. ಈ ಹೊಸ ಸಂಚಾರ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದೆ.

Ad Widget

Ad Widget

ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಕಾಡಾನೆಗಳು ಸೇರಿದಂತೆ ವನ್ಯಜೀವಿಗಳ ಓಡಾಟ, ಮರಗಳು ಬಿದ್ದು ಸಂಚಾರಕ್ಕೆ ಅಡ್ಡಿಯಾಗುವುದು, ಅಪಘಾತಗಳು, ಮೊಬೈಲ್ ನೆಟ್‌ವರ್ಕ್ ಲಭ್ಯವಿಲ್ಲದಿರುವುದು ಮುಂತಾದ ಸಮಸ್ಯೆಗಳಿಗೆ ಈ ವ್ಯವಸ್ಥೆ ಸಹಕಾರಿಯಾಗಲಿದೆ.

ಚಾರ್ಮಾಡಿಯಲ್ಲೂ ತಪಾಸಣೆ
ದಕ್ಷಿಣ ಕನ್ನಡ ಜಿಲ್ಲೆಯ ಕೊನೆಯ ಭಾಗವಾದ ಚಾರ್ಮಾಡಿಯಲ್ಲೂ ಪೊಲೀಸ್ ಚೆಕ್‌ಪೋಸ್ಟ್ ಕಾರ್ಯನಿರ್ವಹಿಸುತ್ತಿದೆ, ಇದು 24 ಗಂಟೆಯೂ ಕಾರ್ಯಾಚರಿಸುತ್ತದೆ. ಇಲ್ಲಿಂದ ಚಿಕ್ಕಮಗಳೂರು ಕಡೆಗೆ ಸಾಗುವ ವಾಹನಗಳನ್ನು ತಪಾಸಣೆಗೊಳಪಡಿಸಲಾಗುತ್ತದೆ. ಆದರೆ, ರಾತ್ರಿಯ ವೇಳೆ ಐದು ವಾಹನಗಳ ಗುಂಪಿನ ನಿಯಮವನ್ನು ಸದ್ಯಕ್ಕೆ ಇಲ್ಲಿ ಜಾರಿಗೊಳಿಸಿಲ್ಲ.

ಚಿಕ್ಕಮಗಳೂರು ಎಸ್‌ಪಿ ವಿಕ್ರಂ ಅಮಟೆ ಅವರು, “ಕೊಟ್ಟಿಗೆಹಾರ ಚೆಕ್‌ಪೋಸ್ಟ್ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ವಿವರಗಳನ್ನು ಸಿಸಿಟಿವಿಯಲ್ಲಿ ದಾಖಲಿಸಲಾಗುವುದು ಮತ್ತು ಪೊಲೀಸರ ದಾಖಲೆ ಪುಸ್ತಕದಲ್ಲೂ ನಮೂದಿಸಲಾಗುವುದು” ಎಂದು ತಿಳಿಸಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!