Connect with us

ಬಿಗ್ ನ್ಯೂಸ್

Dharmasthala case-BIG NEWS: ಧರ್ಮಸ್ಥಳ ಕೇಸ್ : ಶೀಘ್ರದಲ್ಲಿ SIT ತನಿಖೆ ಮುಕ್ತಾಯ ? ಷಡ್ಯಂತ್ರ ತನಿಖೆ CIDಗೆ ?

Published

on

Ad Widget

Ad Widget

Ad Widget

Ad Widget

ದಶಕಗಳ ಹಿಂದೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳ ಮರು ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (SIT) ರಾಜ್ಯ ಸರ್ಕಾರ ಅನುಮತಿ ನೀಡುವ ಸಾಧ್ಯತೆ ಇಲ್ಲ ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ. ಈ ಕುರಿತು SIT ಕಾರ್ಯಾಚರಣೆಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಸರ್ಕಾರ ಸೂಚಿಸಿದೆ ಎಂದು ಆ ಮೂಲಗಳು ತಿಳಿಸಿವೆ.

Ad Widget

Ad Widget

Ad Widget

Ad Widget

ಬೆಂಗಳೂರು: ದಶಕಗಳ ಹಿಂದೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳ ಮರು ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (SIT) ರಾಜ್ಯ ಸರ್ಕಾರ ಅನುಮತಿ ನೀಡುವ ಸಾಧ್ಯತೆ ಇಲ್ಲ ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ. ಈ ಕುರಿತು SIT ಕಾರ್ಯಾಚರಣೆಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಸರ್ಕಾರ ಸೂಚಿಸಿದೆ ಎಂದು ಆ ಮೂಲಗಳು ತಿಳಿಸಿವೆ.

Ad Widget

Ad Widget alt="Ad Widget"/>

Ad Widget

ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರ ಮಟ್ಟದಲ್ಲಿ ಈ ಕುರಿತು ಸಮಾಲೋಚನೆ ನಡೆದಿದೆ. ಮೂರು ದಿನಗಳ ಹಿಂದೆ SIT ಮುಖ್ಯಸ್ಥ ಪ್ರಣವ್ ಮೊಹಂತಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಮಾತುಕತೆ ನಡೆಸಿದ್ದು, ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ಮೃತದೇಹಗಳನ್ನು ಹೂತಿರುವ ಪ್ರಕರಣದ ತನಿಖಾ ಪ್ರಗತಿ ಮತ್ತು ಅಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಸಭೆಯ ನಂತರ, ತನಿಖೆಗೆ ತ್ವರಿತವಾಗಿ ಇತಿಶ್ರೀ ಹಾಡುವಂತೆ SIT ಗೆ ಮುಖ್ಯಮಂತ್ರಿ ಪರೋಕ್ಷವಾಗಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಹಳೆಯ ಪ್ರಕರಣಗಳ ಮರು ತನಿಖೆಗೆ ತಡೆ:
ಕೆಲವು ತಿಂಗಳ ಹಿಂದೆ ನ್ಯಾಯಾಲಯಕ್ಕೆ ಹಾಜರಾಗಿ, ಧರ್ಮಸ್ಥಳ ಸುತ್ತಮುತ್ತ ನೂರಾರು ಮೃತದೇಹಗಳನ್ನು ಅನಧಿಕೃತವಾಗಿ ಹೂತಿರುವುದಾಗಿ ಚಿನ್ನಯ್ಯ ಎಂಬ ವ್ಯಕ್ತಿ ಹೇಳಿಕೆ ನೀಡಿದ್ದ. ತನ್ನ ಆರೋಪಕ್ಕೆ ಪುಷ್ಟಿ ನೀಡಲು ಆತ ತಲೆಬುರುಡೆ ಮತ್ತು ಮೂಳೆಗಳನ್ನು ಸಾಕ್ಷಿಯಾಗಿ ತಂದಿದ್ದ. ಈ ಹೇಳಿಕೆ ಮತ್ತು ರಾಜ್ಯ ಮಹಿಳಾ ಆಯೋಗದ ಪತ್ರದ ಆಧಾರದ ಮೇಲೆ, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ತನಿಖೆಗಾಗಿ SIT ರಚಿಸಲಾಗಿತ್ತು.

ಆದರೆ, ನ್ಯಾಯಾಲಯಕ್ಕೆ ಈಗಾಗಲೇ ಅಂತಿಮ ವರದಿ ಸಲ್ಲಿಸಿರುವ ವಿವಾದಾತ್ಮಕ ಹತ್ಯೆ ಪ್ರಕರಣಗಳ ತನಿಖೆ ಕುರಿತು ಸರ್ಕಾರದ ಆದೇಶದಲ್ಲಿ ಉಲ್ಲೇಖವಿರಲಿಲ್ಲ. ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಹಳೆಯ ಪ್ರಕರಣಗಳ ಮರು ತನಿಖೆ ನಡೆಸಬೇಕಾದರೆ ಸರ್ಕಾರದ ಪೂರ್ವಾನುಮತಿ ಅಗತ್ಯ. ಹೀಗಾಗಿ, ಅನನ್ಯಾ ಭಟ್ ನಾಪತ್ತೆ ಪ್ರಕರಣವನ್ನು ಹೊರತುಪಡಿಸಿ, ಪದ್ಮಲತಾ, ಮಾವುತ ನಾರಾಯಣ, ಯಮುನಾ ಮುಂತಾದ ಇತರೆ ನಿಗೂಢ ಹತ್ಯೆ ಪ್ರಕರಣಗಳ ಮರು ತನಿಖೆಗೆ ಸರ್ಕಾರ ಸಮ್ಮತಿಸಿಲ್ಲ. ಇತ್ತೀಚೆಗೆ ಧರ್ಮಸ್ಥಳದ ಅನಧಿಕೃತ ಮೃತದೇಹಗಳ ಪ್ರಕರಣದಂತೆಯೇ ಅನನ್ಯಾ ಭಟ್ ನಾಪತ್ತೆ ಪ್ರಕರಣವೂ ಸಾಕಷ್ಟು ಸದ್ದು ಮಾಡಿತ್ತು. ಈ ಕಾರಣಕ್ಕಾಗಿಯೇ ಈ ಪ್ರಕರಣವನ್ನು SIT ತನಿಖೆಗೆ ಸರ್ಕಾರ ವಹಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget

Ad Widget

ಇನ್ನು RTI ಮೂಲಕ ಗ್ರಾಮ ಪಂಚಾಯತ್ ನಿಂದ ಪಡೆದುಕೊಂಡಿರುವ ದಾಖಲೆಗಳಲ್ಲಿ ಒಂದಷ್ಟು ಶವಗಳ ದಫನ ನಿಯಮ ಮೀರಿ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿದ್ದರೂ, ಅದರ ತನಿಖೆಯು ನಡೆಯುವ ಸಾಧ್ಯತೆಯೂ ಇಲ್ಲ ಎಂದು ಮೂಲಗಳು ತಿಳಿಸಿವೆ.

ಷಡ್ಯಂತ್ರದ ತನಿಖೆ
ಮುಸುಕುಧಾರಿ ಅನಾಮಿಕ ಚಿನ್ನಯ್ಯನನ್ನು ‘ಬುರುಡೆ ಗ್ಯಾಂಗ್’ ಷಡ್ಯಂತ್ರ ನಡೆಸಿ ಕ್ಷೇತ್ರವನ್ನು ಮಲೀನಗೊಳಿಸಲು ಸಂಚು ಹೂಡಿರುವುದು ಎಸ್ಐಟಿ ತನಿಖೆಯಲ್ಲಿ ಗೊತ್ತಾಗಿದೆ ಎಂದು ಬಹುತೇಕ ಟಿವಿ ಹಾಗೂ ಪತ್ರಿಕಾ ಮಾಧ್ಯಮಗಳಲ್ಲಿ ವರದಿಗಳು ಬಿತ್ತರವಾಗುತ್ತಿವೆ. ಇದು ನಿಜವಾಗಿದ್ದರೂ, ಷಡ್ಯಂತ್ರದ ತನಿಖೆ ನಡೆಸಲು ತಾಂತ್ರಿಕ ಅಡಚಣೆಯಿದೆ ಎಂದು ಕಾನೂನು ತಜ್ಞರು ಹೇಳುತ್ತಿದ್ದಾರೆ. ಆರೋಪಿ ಚಿನ್ನಯ್ಯ ಈಗಾಗಲೇ ತಾನು ಈ ಹೇಳಿಕೆಗಳನ್ನು ಯಾವುದೇ ಒತ್ತಡ ಇಲ್ಲದೇ ಸ್ವಇಚ್ಛೆಯಿಂದ ನೀಡುತ್ತಿರುವುದಾಗಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ (BNSS 183) ಹೇಳಿಕೆ ನೀಡಿರುವುದು ಅಲ್ಲದೇ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿರುವುದರಿಂದ ಷಡ್ಯಂತ್ರದ ತನಿಖೆಯಲ್ಲಿ ಇನ್ಯಾರನ್ನೋ ಆರೋಪಿಗಳನ್ನಾಗಿಸುವುದು ಕಷ್ಟ ಸಾಧ್ಯ ಎನ್ನುವುದು ಕಾನೂನು ತಜ್ಞರ ಅಭಿಪ್ರಾಯ. ಹೀಗಾಗಿ ಚಿನ್ನಯ್ಯ ಷಡ್ಯಂತ್ರ ನಡೆಸಿದರೂ ಅದರ ಭಾರವನ್ನು ತಾನೊಬ್ಬನೇ ಹೊರಬೇಕಾಗಿ ಬರಬಹುದು. ಹೀಗಾಗಿ ಇದರ ತನಿಖೆಯನ್ನು ಸಿಐಡಿಗೆ ಒಪ್ಪಿಸುವ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎನ್ನಲಾಗಿದೆ.

SIT ಮುಕ್ತಾಯ ಚಿಂತನೆಗೆ ಕಾರಣಗಳು:
SIT ತನಿಖೆಯನ್ನು ಮುಕ್ತಾಯಗೊಳಿಸುವ ಸರ್ಕಾರದ ಚಿಂತನೆಗೆ ಹಲವು ಕಾರಣಗಳನ್ನು ನೀಡಲಾಗಿದೆ:
• ಪುರಾವೆಗಳ ಕೊರತೆ: ಪ್ರಕರಣದ ತನಿಖೆಯಲ್ಲಿ ಈವರೆಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ದೂರುದಾರನ ಮಾಹಿತಿ ಆಧರಿಸಿ ಧರ್ಮಸ್ಥಳ ಸುತ್ತಮುತ್ತ ಭೂಮಿ ಅಗೆದರೂ ಮೃತದೇಹಗಳು ಪತ್ತೆಯಾಗಿಲ್ಲ. ಅಂತಿಮವಾಗಿ, ದೂರುದಾರನೇ ಸುಳ್ಳು ಹೇಳಿರುವುದು ತನಿಖೆಯಲ್ಲಿ ಬಯಲಾಗಿದೆ ಎನ್ನಲಾಗುತ್ತಿದೆ.

• ರಾಜಕೀಯ ಸಂಘರ್ಷ: ಧರ್ಮಸ್ಥಳ ಪ್ರಕರಣವು ರಾಜಕೀಯವಾಗಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಗೆ ಸರ್ಕಾರದ ವಿರುದ್ಧ ಸಮರ ಸಾರಲು ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ಆಡಳಿತ ಪಕ್ಷವು ಪ್ರತಿರೋಧ ಒಡ್ಡಿದರೂ, ಅದು ನಿರೀಕ್ಷಿತ ಮಟ್ಟಕ್ಕೆ ಪ್ರಭಾವ ಬೀರದೆ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

• ಸಾರ್ವಜನಿಕ ಅಭಿಪ್ರಾಯದ ಆತಂಕ: ಧರ್ಮಸ್ಥಳದಲ್ಲಿ ಮತ್ತೆ ಮೃತದೇಹಗಳಿಗಾಗಿ ಹುಡುಕಾಟ ನಡೆಸಿದರೆ ಅಥವಾ ಹಳೆಯ ಪ್ರಕರಣಗಳ ಮರು ತನಿಖೆಗೆ ಆದೇಶಿಸಿದರೆ, ಬಲಪಂಥೀಯ ಸಂಘಟನೆಗಳು ಸರ್ಕಾರದ ಕುರಿತು ಮತ್ತಷ್ಟು ನಕಾರಾತ್ಮಕ ಅಭಿಪ್ರಾಯ ಮೂಡಿಸಬಹುದು ಹಾಗೂ ‘ಹಿಂದೂ ವಿರೋಧಿ’ ಎಂದು ತೋರಿಸಬಹುದು ಎಂಬ ಆತಂಕ ಸರ್ಕಾರದ ಮಟ್ಟದಲ್ಲಿ ಎದುರಾಗಿದೆ.

• ಸಿಐಡಿಗೆ ಸಂಚಿನ ತನಿಖೆ?: ದೂರುದಾರ ಚಿನ್ನಯ್ಯನ ಹಿಂದೆ ಒಂದು ದೊಡ್ಡ ಸಂಚಿನ ಜಾಲವಿದ್ದರೆ, ಅದರ ತನಿಖೆ ಸುದೀರ್ಘಾವಧಿ ತೆಗೆದುಕೊಳ್ಳುತ್ತದೆ. ಹೀಗಾಗಿ, ಈ ಸಂಚಿನ ಬಗ್ಗೆ ತನಿಖೆಗೆ SIT ಬದಲಿಗೆ ಅಪರಾಧ ತನಿಖಾ ಇಲಾಖೆ (CID) ಗೆ ವಹಿಸುವುದು ಉತ್ತಮ ಎಂಬ ಅಭಿಪ್ರಾಯ ಸರ್ಕಾರದ ಮಟ್ಟದಲ್ಲಿ ವ್ಯಕ್ತವಾಗಿದೆ.

• ಡ್ಯಾಮೇಜ್ ಕಂಟ್ರೋಲ್: ಸರ್ಕಾರವು ‘ಅನಧಿಕೃತ ಮೃತದೇಹ ಹೂತ ಪ್ರಕರಣಕ್ಕೆ ಮಾತ್ರವೇ SIT ರಚಿಸಲಾಗಿತ್ತು’ ಎಂಬ ಕಾರಣವನ್ನು ಮುಂದಿಟ್ಟು, ಜನರ ಸಮುದಾಯದ ಒಲವು ಪಡೆಯುವ ಮೂಲಕ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದೆ ಎಂದು ಹೇಳಲಾಗಿದೆ.

ಒಟ್ಟಾರೆ, ಧರ್ಮಸ್ಥಳ ಪ್ರಕರಣದ ಮರು ತನಿಖೆಗೆ ಸರ್ಕಾರ ಅನುಮತಿ ನಿರಾಕರಿಸಿರುವುದು ಮತ್ತು SIT ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲು ಸೂಚಿಸಿರುವುದು ಹಲವು ಪ್ರಶ್ನೆಗಳಿಗೆ ಎಡೆಮಾಡಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕಿದೆ.

Ad Widget
Click to comment

Leave a Reply

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ಅಂತರ ರಾಜ್ಯ

Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!

Published

on

Ad Widget

Ad Widget

Ad Widget

Ad Widget

ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.

ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.

Ad Widget

Ad Widget

ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!