ಬಿಗ್ ನ್ಯೂಸ್
Kukke Subrahmanya Temple-ಸೆ.7 ಚಂದ್ರಗ್ರಹಣ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸೇವೆ-ದರ್ಶನದಲ್ಲಿ ಬದಲಾವಣೆ
ಚಂದ್ರಗ್ರಹಣದಿಂದಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ. 7ರಂದು ನಿತ್ಯ ಸೇವೆ, ದರ್ಶನ ಮತ್ತು ಭಕ್ತರ ಸೇವಾ ಸಮಯದಲ್ಲಿ ಬದಲಾವಣೆ ಉಂಟಾಗಲಿದೆ.
ಸುಬ್ರಹ್ಮಣ್ಯ: ಚಂದ್ರಗ್ರಹಣದಿಂದಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ. 7ರಂದು ನಿತ್ಯ ಸೇವೆ, ದರ್ಶನ ಮತ್ತು ಭಕ್ತರ ಸೇವಾ ಸಮಯದಲ್ಲಿ ಬದಲಾವಣೆ ಉಂಟಾಗಲಿದೆ.
ಮಧ್ಯಾಹ್ನದ ಮಹಾಪೂಜೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ, ಆದರೆ ರಾತ್ರಿಯ ಮಹಾಪೂಜೆ ಸಂಜೆ 5 ಗಂಟೆಗೆ ನೆರವೇರಲಿದೆ. ಅಂದು ರಾತ್ರಿಯ ಭೋಜನ ಪ್ರಸಾದ ಮತ್ತು ಸಾಯಂಕಾಲದ ಆಶ್ಲೇಷಾ ಬಲಿ ಸೇವೆ ಇರುವುದಿಲ್ಲ.
ಶನಿವಾರ ಆರಂಭವಾಗಿರುವ ಸರ್ಪ ಸಂಸ್ಕಾರ ಸೇವೆ ರವಿವಾರದಂದು ಮುಕ್ತಾಯಗೊಳ್ಳಲಿದ್ದು, ರವಿವಾರ ಹೊಸದಾಗಿ ಈ ಸೇವೆ ಆರಂಭವಾಗುವುದಿಲ್ಲ. ಸಂಜೆ 5 ಗಂಟೆಯಿಂದ ಶ್ರೀ ದೇವರ ದರ್ಶನವೂ ಲಭ್ಯವಿರುವುದಿಲ್ಲ ಹಾಗೂ ಸೆ. 8ರಂದು ಪಂಚಾಮೃತ ಮಹಾಭಿಷೇಕ ಸೇವೆಯೂ ಇರುವುದಿಲ್ಲ.
ಆ. 31ರಂದು ದರ್ಶನ ಮತ್ತು ಸೇವೆಯಲ್ಲಿ ವ್ಯತ್ಯಯ:
ಆ.31, ರವಿವಾರದಂದು ಹೊಸ್ತಾರೋಗಣೆ (ನವಾನ್ನ ಭೋಜನ) ಕಾರ್ಯಕ್ರಮ ನಡೆಯಲಿದ್ದು, ಇದರಿಂದಾಗಿ ಶ್ರೀ ದೇವರ ದರ್ಶನ ಮತ್ತು ಸೇವೆಗಳಲ್ಲಿ ವ್ಯತ್ಯಯವಾಗಲಿದೆ.
ಅಂದು ಬೆಳಗ್ಗೆ 5:15ಕ್ಕೆ ಶ್ರೀ ದೇವರಿಗೆ ಮಹಾಭಿಷೇಕ ನಡೆಯಲಿದೆ. ಬೆಳಗ್ಗೆ 7:30ಕ್ಕೆ ತೆನೆ ತರುವಿಕೆ ಮತ್ತು ಕದಿರು ಪೂಜೆ ನೆರವೇರಲಿದ್ದು, ನಂತರ ಭಕ್ತರಿಗೆ ಕದಿರು ವಿತರಣೆ ಮಾಡಲಾಗುವುದು.
ಹೊಸ್ತಾರೋಗಣೆಯ ಕಾರಣದಿಂದ ಬೆಳಗ್ಗೆ 10 ಗಂಟೆಯ ನಂತರವೇ ಶ್ರೀ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ಬೆಳಗಿನ ಆಶ್ಲೇಷಾ ಬಲಿ ಸೇವೆಯು ಬೆಳಗ್ಗೆ 9 ಗಂಟೆಯಿಂದ ಎರಡು ಪಾಳಿಯಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
ಬಿಗ್ ನ್ಯೂಸ್
Green card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ.
ವಾಷಿಂಗ್ಟನ್: ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ಈ ಕ್ರಮವು ಸಂಬಂಧಿತ ಕಂಪನಿಗಳ ಮೂಲಕ ಉದ್ಯೋಗ ಆಧಾರಿತ ಗ್ರೀನ್ ಕಾರ್ಡ್ ಪಡೆಯಲು ಕಾಯುತ್ತಿರುವ ವಿದೇಶಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಬಹುದಾಗಿದೆ.
ಅಮೆರಿಕದ ಕಾರ್ಮಿಕ ಸಚಿವ ಕೀತ್ ಸೋಂಡರ್ಲಿಂಗ್ ಹಾಗೂ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಗ್ನಿಜೆಂಟ್, ಇನ್ಫೋಸಿಸ್, ಟಾಟಾ, ವಿಪ್ರೋ, ಎಚ್‌ಸಿಎಲ್, ಕ್ಯಾಪ್‌ಜೆಮಿನಿ, ಮೈಕ್ರೋಸಾಫ್ಟ್ ಮತ್ತು ಅಡೋಬ್ ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಈ ಕಂಪನಿಗಳಿಗೆ ಸಂಬಂಧಿಸಿದ ಹೊಸ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಅಥವಾ ಪ್ರಕ್ರಿಯೆಗೊಳಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಸೋಂಡರ್ಲಿಂಗ್ ಅವರ ಹೇಳಿಕೆಯ ಪ್ರಕಾರ, 2009ರಿಂದ ಈ ಕಂಪನಿಗಳು ಸುಮಾರು 30 ಲಕ್ಷ ವಿದೇಶಿ ಉದ್ಯೋಗಿಗಳಿಗಾಗಿ ಮನವಿ ಸಲ್ಲಿಸಿವೆ. ಈ ಪೈಕಿ 2.3 ಲಕ್ಷಕ್ಕೂ ಹೆಚ್ಚು ಎಚ್-1ಬಿ ವೀಸಾ ಅನುಮೋದನೆಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳನ್ನು ಪಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಸಿನೆಮಾ
Nana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಪಣಜಿ: ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಡೋನಾ ಪೌಲಾದ ಓಷನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್‌ನ ಮಣಿಪಾಲ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ 75 ವರ್ಷದ ನಾನಾ ಪಾಟೇಕರ್ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ತನಿಖೆಯ ಭಾಗವಾಗಿ ನಟನ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯೂ ನಡೆದಿದೆ.
ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ, ಸಾವಿನ ನಿಖರ ಕಾರಣ ಮತ್ತು ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವುದು ಮಾತ್ರವೇ ಸಾವಿನಲ್ಲಿ ಅಪರಾಧ ಅಥವಾ ಸಂಶಯಾಸ್ಪದ ಕೃತ್ಯ ನಡೆದಿದೆ ಎಂಬುದನ್ನು ಸೂಚಿಸುವುದಿಲ್ಲ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
-
ಅಂತರ ರಾಜ್ಯ24 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಸ್ಥಳೀಯ6 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಂತರ ರಾಜ್ಯ23 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಪರಾಧ6 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಬಿಗ್ ನ್ಯೂಸ್6 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಸಿನೆಮಾ5 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಮಂಗಳೂರು22 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
-
ಅಪರಾಧ4 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!


















