ಮಂಗಳೂರು
Mask Man-BIG Breaking:ಮಾಸ್ಕ್ ಮ್ಯಾನ್ ಮರ್ಮ ಬಯಲಿಗೆ: ಚಿನ್ನಯ್ಯನೊಂದಿಗೆ SIT ತಮಿಳುನಾಡು, ಮಂಡ್ಯಕ್ಕೆ!
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಬೆಳ್ಳಂಬೆಳಿಗ್ಗೆ ಬೆಳ್ತಂಗಡಿ ಎಸ್ ಐಟಿ ಕಛೇರಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, “ಮಾಸ್ಕ್ ಮ್ಯಾನ್” ಎಂದೇ ಗುರುತಿಸಲ್ಪಟ್ಟಿರುವ ಚಿನ್ನಯ್ಯನನ್ನು ನಸುಕಿನ ಜಾವ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಮೂಲಗಳ ಪ್ರಕಾರ ಕೆಲವು ಅಯಕಟ್ಟಿನ ಸ್ಥಳಗಳ ಮಹಜರಿಗಾಗಿ ಆತನನ್ನು ಕರೆದುಕೊಂಡು ಹೋಗಿರುವುದಾಗಿ ಹೇಳಲಾಗುತ್ತಿದೆ.
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಬೆಳ್ಳಂಬೆಳಿಗ್ಗೆ ಬೆಳ್ತಂಗಡಿ ಎಸ್ ಐಟಿ ಕಛೇರಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, “ಮಾಸ್ಕ್ ಮ್ಯಾನ್” ಎಂದೇ ಗುರುತಿಸಲ್ಪಟ್ಟಿರುವ ಚಿನ್ನಯ್ಯನನ್ನು ನಸುಕಿನ ಜಾವ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಮೂಲಗಳ ಪ್ರಕಾರ ಕೆಲವು ಅಯಕಟ್ಟಿನ ಸ್ಥಳಗಳ ಮಹಜರಿಗಾಗಿ ಆತನನ್ನು ಕರೆದುಕೊಂಡು ಹೋಗಿರುವುದಾಗಿ ಹೇಳಲಾಗುತ್ತಿದೆ.
ಬಿಗಿ ಪೊಲೀಸ್ ಭದ್ರತೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಚಿನ್ನಯ್ಯ ನೀಡಿರುವ ಹೇಳಿಕೆಗಳಲ್ಲಿ ಉಲ್ಲೇಖಿಸಿರುವ ಕೆಲವು ಪ್ರಮುಖ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ.ಇಂದು ಮುಂಜಾನೆಯೇ SIT ಕಚೇರಿಯಿಂದ ಚಿನ್ನಯ್ಯನನ್ನು ಕರೆದುಕೊಂಡು ಹೋಗಿರುವ ಪೊಲೀಸರು, ಎರಡು ಪೊಲೀಸ್ ವಾಹನಗಳಲ್ಲಿ ಪ್ರಯಾಣ ಬೆಳೆಸಿದ್ದಾರೆ.
ಮೂಲಗಳ ಪ್ರಕಾರ, ತಮಿಳುನಾಡು ಮತ್ತು ಮಂಡ್ಯ ಕಡೆಗೆ ಚಿನ್ನಯ್ಯನನ್ನು ಕರೆದುಕೊಂಡು ಹೋಗಿರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವುಗಳು ಲಭ್ಯವಾಗಬಹುದು ಎಂದು SIT ಅಧಿಕಾರಿಗಳು ನಿರೀಕ್ಷಿಸಿದ್ದಾರೆ.
ಚಿನ್ನಯ್ಯನ ಹೇಳಿಕೆಗಳಲ್ಲಿನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ಪ್ರಕರಣದ ತನಿಖೆಯನ್ನು ಮತ್ತಷ್ಟು ಆಳವಾಗಿ ನಡೆಸಲು ಈ ಮಹಜರ್ ನಿರ್ಣಾಯಕವಾಗಿದೆ. ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದರೂ, ಈ ಕಾರ್ಯಾಚರಣೆ ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ನೀಡುವ ನಿರೀಕ್ಷೆ ಇದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಬಿಗ್ ನ್ಯೂಸ್22 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು24 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ22 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಶಿಕ್ಷಣ23 hours agoVivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ


















