ಬಿಗ್ ನ್ಯೂಸ್
Dharmasthala-ನ್ಯಾಯಾಲಯಕ್ಕೆ ಚಿನ್ನಯ ಸಲ್ಲಿಸಿದ ಬುರುಡೆ ತಂದದ್ದು ಎಲ್ಲಿಂದ ? : ತಿಮರೋಡಿ ತೋಟದಲ್ಲಿ ‘ಬುರುಡೆ’ ಹುಡುಕಾಟ – ಅಸಲಿಯತ್ತೆಷ್ಟು?
ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಧರ್ಮಸ್ಥಳ ಗ್ರಾಮದ ಶವ ಹೂತಿಟ್ಟ ಪ್ರಕರಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಈ ಹಿಂದೆ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ತಾನು ಹೂತಿದ್ದೆ ಎಂದು ಹೇಳಿ ಬುರುಡೆಯೊಂದನ್ನು ಹಾಜರುಪಡಿಸಿದ್ದ. ಆದರೆ, ಈಗ ಈ ಬುರುಡೆ ಎಲ್ಲಿಂದ ಬಂತು ಎಂಬುದು ದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗಿ ಉಳಿದಿದೆ.
ಬೆಳ್ತಂಗಡಿ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಧರ್ಮಸ್ಥಳ ಗ್ರಾಮದ ಶವ ಹೂತಿಟ್ಟ ಪ್ರಕರಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಈ ಹಿಂದೆ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ತಾನು ಹೂತಿದ್ದೆ ಎಂದು ಹೇಳಿ ಬುರುಡೆಯೊಂದನ್ನು ಹಾಜರುಪಡಿಸಿದ್ದ. ಆದರೆ, ಈಗ ಈ ಬುರುಡೆ ಎಲ್ಲಿಂದ ಬಂತು ಎಂಬುದು ದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗಿ ಉಳಿದಿದೆ.
ಚಿನ್ನಯ್ಯನ ಗೊಂದಲಕಾರಿ ಹೇಳಿಕೆಗಳು:
ಜುಲೈ 11 ರಂದು ನ್ಯಾಯಾಲಯಕ್ಕೆ ಬುರುಡೆ ಸಲ್ಲಿಸಿದ ಚಿನ್ನಯ್ಯ, ಅದು ತಾನು ಹಿಂದೆ ಹೂತಿದ್ದ ವ್ಯಕ್ತಿಯದೆ ಎಂದು ಹೇಳಿಕೊಂಡಿದ್ದ. ಆದರೆ, ಎಸ್.ಐ.ಟಿ. ತಂಡ ಆತ ತೋರಿಸಿದ 15 ಸ್ಥಳಗಳಲ್ಲಿ ಉತ್ಖನನ ನಡೆಸಿದ ನಂತರ, ಬುರುಡೆ ತೆಗೆದ ಜಾಗದ ಮಹಜರು ಮಾಡಲು ಮುಂದಾದಾಗ, ಚಿನ್ನಯ್ಯ ತನ್ನ ಹೇಳಿಕೆಗಳನ್ನು ಬದಲಿಸಿದ್ದಾನೆ.
“ಆ ಬುರುಡೆಗೂ ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೂ ಸಂಬಂಧವಿಲ್ಲ. ಅದನ್ನು ಬೇರೊಂದು ಜಾಗದಿಂದ ತರಲಾಗಿದೆ,” ಎಂದು ಚಿನ್ನಯ್ಯ ಎಸ್.ಐ.ಟಿ.ಗೆ ತಿಳಿಸಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಅಲ್ಲದೆ, “ಬುರುಡೆಯನ್ನು ಯಾವುದೋ ಲ್ಯಾಬ್ನಿಂದ ತಂದು, ಬೇರೆ ಜಾಗದಲ್ಲಿ ಹೂತು, ನಂತರ ಅದನ್ನು ತೆಗೆದು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ,” ಎಂದೂ ಆರೋಪಿ ಹೇಳಿಕೊಂಡಿರುವುದಾಗಿ ಮಾಧ್ಯಮ ವರದಿಗಳು ಉಲ್ಲೇಖಿಸಿವೆ. ಈ ಕಾರಣದಿಂದ ಚಿನ್ನಯ್ಯನನ್ನು ಆರೋಪಿಯನ್ನಾಗಿ ಮಾಡಲಾಗಿದ್ದು, ಆತನ ವಿರುದ್ಧ ಹತ್ತಕ್ಕೂ ಹೆಚ್ಚು ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದೆ.
ತಿಮರೋಡಿ ತೋಟದಲ್ಲಿ ‘ಬುರುಡೆ’ ಹುಡುಕಾಟ:
ಚಿನ್ನಯ್ಯನನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದಿರುವ ಎಸ್.ಐ.ಟಿ., ಬುರುಡೆ ತಂದ ಸ್ಥಳದ ಬಗ್ಗೆ ತೀವ್ರ ವಿಚಾರಣೆ ನಡೆಸಿದೆ. ಈ ವೇಳೆ, “ಆ ಬುರುಡೆಯನ್ನು ಮಹೇಶ್ ಶೆಟ್ಟಿ ತಿಮರೋಡಿಯವರ ರಬ್ಬರ್ ತೋಟದಿಂದ ತಂದಿದ್ದೇನೆ,” ಎಂದು ಚಿನ್ನಯ್ಯ ಹೇಳಿದ್ದಾನೆ ಎನ್ನಲಾಗಿದೆ.
ಈ ಹೇಳಿಕೆಯ ಆಧಾರದ ಮೇಲೆ, ಆಗಸ್ಟ್ 26 ರಂದು ಎಸ್.ಐ.ಟಿ. ತಿಮರೋಡಿಯವರ ಮನೆಗೆ ದಾಳಿ ನಡೆಸಿ, ಸಾಕ್ಷ್ಯ ಸಂಗ್ರಹಕ್ಕೆ ಯತ್ನಿಸಿದೆ. ಚಿನ್ನಯ್ಯ ತೋರಿಸಿದ ತಿಮರೋಡಿಯವರ ರಬ್ಬರ್ ತೋಟದಲ್ಲಿನ ಸ್ಥಳದಿಂದ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿ, ಅವುಗಳನ್ನು FSL (ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ) ಗೆ ರವಾನಿಸಲಾಗಿದೆ.
FSL ಅಂಗಳದಲ್ಲಿ ‘ಮಣ್ಣಿನ’ ಪರೀಕ್ಷೆ:
ಚಿನ್ನಯ್ಯ ನ್ಯಾಯಾಲಯಕ್ಕೆ ತಂದಿದ್ದ ಬುರುಡೆಯಲ್ಲಿ ಕಂಡುಬಂದ ಮಣ್ಣಿನ ಕಣಗಳು ಮತ್ತು ತಿಮರೋಡಿ ತೋಟದಿಂದ ಸಂಗ್ರಹಿಸಿದ ಮಣ್ಣಿನ ಮಾದರಿಗಳನ್ನು FSL ನಲ್ಲಿ ಸೂಕ್ಷ್ಮವಾಗಿ ಹೋಲಿಸಲಾಗುವುದು.
ಷಡ್ಯಂತ್ರದ ಸಂಶಯ?
ಒಂದು ವೇಳೆ ಈ ಎರಡೂ ಮಣ್ಣಿನ ಮಾದರಿಗಳಲ್ಲಿ ಸಾಮ್ಯತೆ ಕಂಡುಬಂದರೆ, ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರ ಇರುವುದು ಸಾಬೀತಾಗಲಿದೆ. ಇದು ಪ್ರಕರಣಕ್ಕೆ ಮತ್ತೊಂದು ಆಯಾಮವನ್ನು ನೀಡಲಿದೆ.
ಸೌಜನ್ಯ ಹೋರಾಟಗಾರರ ಮರುಪ್ರಶ್ನೆ:
ಆದರೆ, ಸೌಜನ್ಯ ಹೋರಾಟಗಾರರ ಮೂಲಗಳ ಪ್ರಕಾರ, “ಆ ಬುರುಡೆಯನ್ನು ತಿಮರೋಡಿಯವರ ತೋಟದಿಂದ ತೆಗೆದಿಲ್ಲ. ಅದನ್ನು ತೆಗೆದ ಸ್ಥಳ ಮತ್ತು ಅದರ ಬಗೆಗಿನ ಎಲ್ಲ ದಾಖಲಾತಿಗಳು ಚಿನ್ನಯ್ಯನನ್ನು ನ್ಯಾಯಾಲಯಕ್ಕೆ ಕರೆತಂದ ವಕೀಲರ ಬಳಿ ಇವೆ. ನಮಗೆ ಯಾವುದೇ ಭಯವಿಲ್ಲ. ನಮ್ಮನ್ನು ಸಿಲುಕಿಸಲು ಯತ್ನಿಸಿದರೆ ಸೂಕ್ತ ಸಮಯದಲ್ಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ ಮತ್ತು ಸಾರ್ವಜನಿಕಗೊಳಿಸುತ್ತೇವೆ,” ಎಂದು ಹೇಳಿದ್ದಾರೆ.
ಅಲ್ಲದೆ, “ಸಮಾಧಿ ಉತ್ಖನನದ ಸಂದರ್ಭ ಸಿಕ್ಕ ಮಾನವ ಅವಶೇಷಗಳನ್ನು, ಸಿಕ್ಕ ತಕ್ಷಣವೇ ಹೆಣ್ಣೋ, ಗಂಡೋ, ಎಷ್ಟು ವರ್ಷದ ಹಿಂದೆ ಹೂಳಲಾಗಿತ್ತು ಎಂದು ಕಣ್ಣು ಮುಚ್ಚಿ ಹೇಳಬಲ್ಲ ವಿಧಿ ವಿಜ್ಞಾನ ತಜ್ಞರನ್ನು ನಾವು ಟಿವಿ ವಾಹಿನಿಗಳಲ್ಲಿ ನೋಡಿದ್ದೇವೆ. ಹಾಗಾದರೆ, ಬುರುಡೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಬಳಿಕ ಅದೇ ದಿನ (ಜುಲೈ 11 ರಂದು) ರಾತ್ರಿ ಅದನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಧಿ ವಿಜ್ಞಾನ ಇಲಾಖೆಗೆ ಒಪ್ಪಿಸಲಾಗಿತ್ತು. ಅದು ಕೃತಕ ಬುರುಡೆಯಾಗಿದ್ದರೇ ಅಥವಾ ಲ್ಯಾಬ್ನಿಂದ ತಂದದ್ದಾಗಿದ್ದರೇ, ಅದು ಆ ತಕ್ಷಣ ವಿಧಿ ವಿಜ್ಞಾನ ಇಲಾಖೆಯವರಿಗೆ ಗೊತ್ತಾಗುತ್ತಿತ್ತು. ಬುರುಡೆ FSL ಇಲಾಖೆಗೆ ಹಸ್ತಾಂತರಿಸಿದ ಒಂದು ವಾರದ ಬಳಿಕ ಪ್ರಕರಣವನ್ನು SIT ಗೆ ಒಪ್ಪಿಸಲಾಗಿದ್ದು, ಈ ಏಳು ದಿನಗಳಲ್ಲಿ FSL ಗೆ ಅದು ಲ್ಯಾಬ್ನಿಂದ ತಂದ ಬುರುಡೆಯೇ ಅಥವಾ ಕೃತಕ ಬುರುಡೆಯೇ ಎಂದು ಪತ್ತೆಹಚ್ಚಲು ಸಾಧ್ಯವಾಗಿಲ್ಲವೇ? ಒಂದು ವೇಳೆ ಆಗಲೇ ಅದು ನಕಲಿ ಬುರುಡೆ ಎಂದು ಕೊಂಡಿದ್ದರೇ ಎಸ್ ಐಟಿ ರಚಿಸುವ ಅವಶ್ಯಕತೆ ಏನಿತ್ತು ? ” ಎಂದು ಅವರು ಪ್ರಶ್ನಿಸಿದ್ದಾರೆ.
ಈ ಬೆಳವಣಿಗೆಗಳು ಪ್ರಕರಣದ ಸುತ್ತ ಭಾರೀ ಅನುಮಾನಗಳನ್ನು ಹುಟ್ಟುಹಾಕಿದ್ದು, ಜನಸಾಮಾನ್ಯರಲ್ಲಿ ಕುತೂಹಲ ಮೂಡಿಸಿವೆ. FSL ವರದಿ ಬಂದ ನಂತರವೇ ಈ ಬುರುಡೆ ರಹಸ್ಯದ ಅಸಲಿಯತ್ತು ಬಯಲಾಗಲಿದೆ.
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
ಸ್ಥಳೀಯ
Valaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.
ಬಿ.ಸಿ.ರೋಡ್ನಿಂದ ಪೆರಿಯಶಾಂತಿವರೆಗಿನ ಸುಮಾರು 46 ಕಿ.ಮೀ. ಹೆದ್ದಾರಿ ಕಾಮಗಾರಿಯಲ್ಲಿ ಈಗಾಗಲೇ ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ನಡುವೆ ಇದೀಗ ಟೋಲ್ ಪ್ಲಾಜಾ ನಿರ್ಮಾಣಗೊಂಡಿದೆ.
ಟೋಲ್ ಪ್ಲಾಜಾ ನಿರ್ಮಾಣದ ಗುತ್ತಿಗೆ ಪಡೆದಿದ್ದ ಕೆಎನ್ಆರ್ ಕನ್ಸ್ಟ್ರಕ್ಷನ್ ಸಂಸ್ಥೆಯು ಕಾಮಗಾರಿ ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿದೆ. ಇತ್ತ ಶುಲ್ಕ ಸಂಗ್ರಹ ನಿರ್ವಹಣೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು, ಮಂಗಳೂರಿನ ‘ಕೋರಲ್’ ಸಂಸ್ಥೆಯು ಗುತ್ತಿಗೆಯನ್ನು ಪಡೆದುಕೊಂಡಿದೆ.
8 ಲೇನ್ಗಳಲ್ಲಿ ಸಂಚಾರ ವ್ಯವಸ್ಥೆ
ಚತುಷ್ಪಥ ಹೆದ್ದಾರಿಯಲ್ಲಿ ಒಟ್ಟು 8 ಲೇನ್ಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎರಡೂ ಬದಿಗಳಲ್ಲಿ ತಲಾ ನಾಲ್ಕು ಲೇನ್ಗಳಿದ್ದು, ಅವುಗಳಲ್ಲಿ 6 ಲೇನ್ಗಳು ಡೆಡಿಕೇಟೆಡ್ ಲೇನ್ಗಳಾಗಿರಲಿವೆ. ಈ ಲೇನ್ಗಳಲ್ಲಿ ಫಾಸ್ಟ್ಟ್ಯಾಗ್ ಹೊಂದಿರುವ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿರಲಿದೆ.
ಉಳಿದ ಎರಡು ಲೇನ್ಗಳಲ್ಲಿ ಫಾಸ್ಟ್ಟ್ಯಾಗ್ ಮೂಲಕ ಪಾವತಿಗೆ ಅವಕಾಶವಿದ್ದರೂ, ನಗದು ಪಾವತಿಗೆ ಅವಕಾಶ ಇರುವುದಿಲ್ಲ. ಬದಲಾಗಿ ಯುಪಿಐ ಅಥವಾ ಸ್ಕ್ಯಾನ್ ಮೂಲಕ ಡಿಜಿಟಲ್ ಪಾವತಿ ಮಾಡಬೇಕಾಗುತ್ತದೆ. ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸುಗಮ ಸಂಚಾರಕ್ಕಾಗಿ ಎರಡೂ ಬದಿಗಳಲ್ಲಿ ಪ್ರತ್ಯೇಕ ಲೇನ್ಗಳನ್ನು ವ್ಯವಸ್ಥೆ ಮಾಡಲಾಗಿದೆ.
ಟೋಲ್ ಶುಲ್ಕ ವಸೂಲಾತಿ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಯಾಗಿರುವ ವಾಹನಗಳಿಗೆ ಶೇ.50ರಷ್ಟು ಶುಲ್ಕ ವಿನಾಯಿತಿ ನಿಗದಿಪಡಿಸಲಾಗಿದೆ ಎಂದು ಮಂಗಳೂರಿನ ಕೋರಲ್ ಸಂಸ್ಥೆಯ ಆಡಳಿತ ಪಾಲುದಾರ ಯಜೇಶ್ ತಿಳಿಸಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ನಿಂದ 38 ಕಿ.ಮೀ. ಅಂತರ..!
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಒಟ್ಟು 7 ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರಿನ ನೆಲಮಂಗಲದಿಂದ ಸಕಲೇಶಪುರದವರೆಗೆ 5 ಟೋಲ್ ಪ್ಲಾಜಾಗಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಮಂಗಳೂರಿನ ಪಂಪ್ವೆಲ್ ನಡುವಿನ ಮಾರ್ಗದಲ್ಲಿ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಇದೀಗ ವಳಾಲು ಟೋಲ್ ಸೇರ್ಪಡೆಯಾದರೆ ಈ ಭಾಗದಲ್ಲಿ ಶುಲ್ಕ ಸಂಗ್ರಹಿಸುವ ಟೋಲ್ ಪ್ಲಾಜಾಗಳ ಸಂಖ್ಯೆ ಎರಡಕ್ಕೇರಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳ ಪ್ರಕಾರ ಒಂದು ಟೋಲ್ ಪ್ಲಾಜಾದಿಂದ ಮತ್ತೊಂದು ಟೋಲ್ ಪ್ಲಾಜಾಕ್ಕೆ ಕನಿಷ್ಠ 60 ಕಿ.ಮೀ. ಅಂತರ ಇರಬೇಕಿದೆ. ಆದರೆ, ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಿಂದ ಬಜತ್ತೂರು ವಳಾಲು ಟೋಲ್ ಪ್ಲಾಜಾಕ್ಕೆ ಇರುವ ಅಂತರ ಕೇವಲ 38 ಕಿ.ಮೀ. ಮಾತ್ರ. ಹೀಗಾಗಿ, ವಳಾಲು ಟೋಲ್ನಲ್ಲಿ ಶುಲ್ಕ ಸಂಗ್ರಹ ಆರಂಭವಾದರೆ ಸ್ಥಳೀಯರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಬೀರ್ ಅಹ್ಮದ್ ನೆಕ್ಕಿಲಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಹೋರಾಟ ತೀವ್ರಗೊಳ್ಳುವ ಸಾಧ್ಯತೆ
ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ಅನಧಿಕೃತವಾಗಿದ್ದು, ನಿಗದಿತ ಅವಧಿ ಮುಗಿದಿದ್ದರೂ ಶುಲ್ಕ ಸಂಗ್ರಹ ಮುಂದುವರಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಟೋಲ್ ಪ್ಲಾಜಾವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಈಗಾಗಲೇ ನಿರಂತರ ಹೋರಾಟ ನಡೆಸುತ್ತಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ಪ್ಲಾಜಾವನ್ನು ತೆರವುಗೊಳಿಸದೆ ವಳಾಲು ಟೋಲ್ ಪ್ಲಾಜಾದಲ್ಲಿ ಶುಲ್ಕ ಸಂಗ್ರಹ ಆರಂಭಿಸಿದರೆ ವಾಹನ ಸವಾರರಿಗೆ ಒಂದೇ ಮಾರ್ಗದಲ್ಲಿ ಎರಡು ಬಾರಿ ಟೋಲ್ ಪಾವತಿಸುವ ಪರಿಸ್ಥಿತಿ ಎದುರಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಕೂಟ್ಲು ಟೋಲ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹೋರಾಟಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಬಿಗ್ ನ್ಯೂಸ್
Heavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!
ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡ ಗಂಜೂರಿನಲ್ಲಿ ಗರಿಷ್ಠ 54 ಮಿ.ಮೀ. ಮಳೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 51 ಮಿ.ಮೀ. ಹಾಗೂ ಚಿಂತಾಮಣಿ ತಾಲ್ಲೂಕಿನ ಮುಂಗನಹಳ್ಳಿಯಲ್ಲಿ 47.5 ಮಿ.ಮೀ. ಮಳೆ ದಾಖಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬಿಸ್ಕೂರಿನಲ್ಲಿ 47 ಮಿ.ಮೀ., ಹುಲ್ಲೇನಹಳ್ಳಿಯಲ್ಲಿ 46 ಮಿ.ಮೀ. ಹಾಗೂ ಅದರಂಗಿಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಪಶ್ಚಿಮ ಭಾಗದ ಕೋನೇನ ಅಗ್ರಹಾರ ಮತ್ತು ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರದಲ್ಲಿ ತಲಾ 40 ಮಿ.ಮೀ. ಮಳೆ ಸುರಿದಿದೆ.
ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹಾಗೂ ಚಿಂತಾಮಣಿ ತಾಲ್ಲೂಕಿನ ಪೆರಮಂಚನಹಳ್ಳಿಯಲ್ಲಿ ತಲಾ 35.5 ಮಿ.ಮೀ., ಸಂಕಿಘಟ್ಟದಲ್ಲಿ 35 ಮಿ.ಮೀ. ಮಳೆಯಾಗಿದೆ. ಆನೇಕಲ್ ತಾಲ್ಲೂಕಿನ ನೇರಿಗದಲ್ಲಿ 33.5 ಮಿ.ಮೀ., ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ 33 ಮಿ.ಮೀ. ಹಾಗೂ ಚಿಂತಾಮಣಿಯಲ್ಲಿ 32.8 ಮಿ.ಮೀ. ಮಳೆ ದಾಖಲಾಗಿದೆ.
ಬೆಂಗಳೂರು ನಗರದ ದಾಸನಪುರದಲ್ಲಿ 29 ಮಿ.ಮೀ., ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ.ತಿಮ್ಮಸಂದ್ರದಲ್ಲಿ 28.5 ಮಿ.ಮೀ., ಅರಿಕುಂಟೆಯಲ್ಲಿ 27.5 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ 27.25 ಮಿ.ಮೀ. ಮಳೆಯಾಗಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವಿರುಪಸಮುದ್ರದಲ್ಲಿ 26 ಮಿ.ಮೀ. ಹಾಗೂ ಮಧುಗಿರಿ ತಾಲ್ಲೂಕಿನ ಬೇಡತೂರಿನಲ್ಲಿ 25.5 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಮತ್ತು ಚಿಂತಾಮಣಿ ತಾಲ್ಲೂಕಿನ ಮಾಸ್ತೇನಹಳ್ಳಿಯಲ್ಲಿ ತಲಾ 24.5 ಮಿ.ಮೀ. ಮಳೆಯಾಗಿದೆ.
ಇನ್ನು ಚಿಂತಾಮಣಿ ತಾಲ್ಲೂಕಿನ ತಳಗವಾರದಲ್ಲಿ 23.5 ಮಿ.ಮೀ., ಮುರುಗಮಲೆಯಲ್ಲಿ 23.25 ಮಿ.ಮೀ. ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೆಂಕಟಾಪುರದಲ್ಲಿ 23 ಮಿ.ಮೀ. ಮಳೆಯಾಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಳಗುರುಕೋಟೆ ಹಾಗೂ ಗೌರಿಬಿದನೂರು ತಾಲ್ಲೂಕಿನ ಮೆಲ್ಯಾದಲ್ಲಿ ತಲಾ 22.75 ಮಿ.ಮೀ. ಮಳೆ ಸುರಿದಿದೆ. ಬೆಂಗಳೂರಿನ ಚಿಕ್ಕಬಾಣಾವರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ತಲಾ 22.5 ಮಿ.ಮೀ. ಮಳೆಯಾಗಿದೆ.
ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಮತ್ತು ಶಿಡ್ಲಘಟ್ಟದಲ್ಲಿ ತಲಾ 22 ಮಿ.ಮೀ., ಬೆಂಗಳೂರಿನ ಲಕ್ಕಸಂದ್ರ, ವನ್ನಾರಪೇಟೆ ಹಾಗೂ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದಲ್ಲಿ ತಲಾ 21.5 ಮಿ.ಮೀ. ಮಳೆಯಾಗಿದೆ.
ಆನೇಕಲ್ ತಾಲ್ಲೂಕಿನ ಮುಗಳೂರು ಮತ್ತು ನೆಲಮಂಗಲ ತಾಲ್ಲೂಕಿನ ವಿಶ್ವೇಶ್ವರಪುರದಲ್ಲಿ ತಲಾ 21 ಮಿ.ಮೀ. ಮಳೆಯಾಗಿದ್ದರೆ, ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ 20.75 ಮಿ.ಮೀ. ಮಳೆ ದಾಖಲಾಗಿದೆ.
ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಹಾಗೂ ಚಿಂತಾಮಣಿ ತಾಲ್ಲೂಕಿನ ಬುರುದಗುಂಟೆಯಲ್ಲಿ ತಲಾ 20.5 ಮಿ.ಮೀ., ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಪೈಲಗುರ್ಕಿಯಲ್ಲಿ 20 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಬಾಣವಾಡಿಯಲ್ಲಿ 19.5 ಮಿ.ಮೀ. ಮಳೆಯಾಗಿದೆ.
-
ಕ್ರೈಂ18 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ18 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು16 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಸ್ಥಳೀಯ11 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ16 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಬಿಗ್ ನ್ಯೂಸ್18 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ12 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ16 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















