ಮಂಗಳೂರು
B.Y. Vijayendra-ಯಕ್ಷಗಾನ ಪ್ರದರ್ಶನ ತಡೆದ ಪೊಲೀಸರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿ ಆಕ್ರೋಶ
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ಪೊಲೀಸರು ಯಕ್ಷಗಾನ ಪ್ರದರ್ಶನವನ್ನು ನಿಗದಿತ ಸಮಯಕ್ಕೂ ಮುನ್ನ ನಿಲ್ಲಿಸಿದ್ದು, ಹಿಂದೂ ಧಾರ್ಮಿಕ ಶ್ರದ್ಧೆ ಮತ್ತು ಸಂಸ್ಕೃತಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ಪೊಲೀಸರು ಯಕ್ಷಗಾನ ಪ್ರದರ್ಶನವನ್ನು ನಿಗದಿತ ಸಮಯಕ್ಕೂ ಮುನ್ನ ನಿಲ್ಲಿಸಿದ್ದು, ಹಿಂದೂ ಧಾರ್ಮಿಕ ಶ್ರದ್ಧೆ ಮತ್ತು ಸಂಸ್ಕೃತಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವರು, “ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣವಾಗಿ ದಿಕ್ಕುತಪ್ಪಿದೆ. ಹಿಂದೂ ಉತ್ಸವಗಳು ಮತ್ತು ಧಾರ್ಮಿಕ ಆಚರಣೆಗಳನ್ನು ಅವಮಾನಿಸುವ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ. ಗಣೇಶೋತ್ಸವದಲ್ಲಿ ಡಿಜೆ ನಿಷೇಧಿಸಿದ ಸರ್ಕಾರ, ಈಗ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹತ್ತಿಕ್ಕುತ್ತಿದೆ,” ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ.
ಗಣೇಶೋತ್ಸವದ ಮೇಲೆ ಏಕೆ ದ್ವೇಷ?
“ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಹಿಂದೂ ಧಾರ್ಮಿಕ ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಅವಮಾನಿಸುವುದು ಸಾಮಾನ್ಯವಾಗಿದೆ. ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚುವರಿ ಸಮಯ ವಿಸ್ತರಣೆಗೆ ಕಳೆದ ವಿಧಾನಸಭೆಯಲ್ಲಿ ಚರ್ಚೆಯಾಗಿ ಸರ್ಕಾರ ಸಮ್ಮತಿ ಸೂಚಿಸಿತ್ತು. ಆದರೂ, ಪೊಲೀಸರು ಗಣೇಶೋತ್ಸವದ ಮೇಲೆ ಏಕೆ ಕೆಂಗಣ್ಣು ಬೀರುತ್ತಿದ್ದಾರೆ?” ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.
“ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೀಮಿತವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಆದರೆ, ಮೈಸೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಉದ್ಯಮಿ ದಂಪತಿಗೆ ರೀಲ್ಸ್ ಮಾಡಲು ಅವಕಾಶ ನೀಡಿ ಸಾಂಸ್ಕೃತಿಕ ಘನತೆಗೆ ಧಕ್ಕೆ ತಂದಿದ್ದಾರೆ,” ಎಂದು ಆರೋಪಿಸಿದ್ದಾರೆ.
ಮಂಗಳೂರಿನ ಗಣೇಶೋತ್ಸವದಲ್ಲಿ ವಿಜಯೇಂದ್ರ ಭಾಗಿ
ಮಂಗಳೂರಿನ ಸಂಘನಿಕೇತನದಲ್ಲಿ ನಡೆದ 78ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಲ್ಲಿ ಭಾಗವಹಿಸಿದ ವಿಜಯೇಂದ್ರ, “ಮಂಗಳೂರು ಮತ್ತು ಉಡುಪಿಯ ಗಣೇಶೋತ್ಸವ ಆಚರಣೆಗಳು ವಿಶಿಷ್ಟವಾಗಿದ್ದು, ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಾದರಿಯಾಗಿವೆ. ಚಂಡೆ ವಾದ್ಯದ ಲಯಬದ್ಧ ನಾದ ಮತ್ತು ಯಕ್ಷಗಾನದ ಕಲಾತ್ಮಕತೆ ಈ ಉತ್ಸವದಲ್ಲಿ ರೋಮಾಂಚಕ ಅನುಭವ ನೀಡುತ್ತದೆ. ಕರಾವಳಿ ಕರ್ನಾಟಕದ ಧಾರ್ಮಿಕ ಶ್ರದ್ಧೆ ಮತ್ತು ಸಾಂಸ್ಕೃತಿಕ ಆಚರಣೆಗಳು ವಿಭಿನ್ನವಾಗಿದ್ದು, ಸಂಘದ ಚಟುವಟಿಕೆಗಳು ಎಲ್ಲರಿಗೂ ಮಾದರಿಯಾಗಿವೆ,” ಎಂದು ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಸ್ಥಳೀಯ30 minutes agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ1 hour agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಶಿಕ್ಷಣ2 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















