[…]" /> […]"> Brahmavara-ಪತಿಯ ಬಂಧನ ಭೀತಿ: ಮಗುವಿಗೆ ನೇಣುಹಾಕಿ ತಾಯಿ ಆತ್ಮಹತ್ಯೆ - ಬ್ರಹ್ಮಾವರದಲ್ಲಿ ಹೃದಯ ವಿದ್ರಾವಕ ಘಟನೆ - Nikhara News | Kannada News Website
Connect with us

ನಿಧನ ವಾರ್ತೆ

Brahmavara-ಪತಿಯ ಬಂಧನ ಭೀತಿ: ಮಗುವಿಗೆ ನೇಣುಹಾಕಿ ತಾಯಿ ಆತ್ಮಹತ್ಯೆ – ಬ್ರಹ್ಮಾವರದಲ್ಲಿ ಹೃದಯ ವಿದ್ರಾವಕ ಘಟನೆ

Published

on

Ad Widget

Ad Widget

Ad Widget

Ad Widget

ಪತಿಯ ಬಂಧನದ ಭೀತಿಯಿಂದ ಮನನೊಂದ 23 ವರ್ಷದ ಮಹಿಳೆಯೊಬ್ಬರು ತಮ್ಮ ಒಂದೂವರೆ ವರ್ಷದ ಮಗುವಿಗೆ ನೇಣುಹಾಕಿ ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಬ್ರಹ್ಮಾವರ ತಾಲೂಕಿನ ಹೆರಂಜೆ ಆರೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

Ad Widget

Ad Widget

Ad Widget

Ad Widget

ಬ್ರಹ್ಮಾವರ: ಪತಿಯ ಬಂಧನದ ಭೀತಿಯಿಂದ ಮನನೊಂದ 23 ವರ್ಷದ ಮಹಿಳೆಯೊಬ್ಬರು ತಮ್ಮ ಒಂದೂವರೆ ವರ್ಷದ ಮಗುವಿಗೆ ನೇಣುಹಾಕಿ ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಬ್ರಹ್ಮಾವರ ತಾಲೂಕಿನ ಹೆರಂಜೆ ಆರೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

Ad Widget

Ad Widget alt="Ad Widget"/>

Ad Widget

ಸುಶ್ಮಿತಾ (23) ಮತ್ತು ಅವರ ಮಗಳು ಶ್ರೇಷ್ಠಾ (1.5) ಮೃತರು.

Ad Widget

Ad Widget <> Ad Widget

ಘಟನೆಯ ವಿವರ:

ಪೊಲೀಸರು ಸುಶ್ಮಿತಾ ಅವರ ಪತಿ ಸುಭಾಷ್ ನಾಯ್ಕ ಅವರ ಬಂಧನಕ್ಕೆ ಬೆದರಿಕೆ ಹಾಕಿದ ನಂತರ, ಸುಶ್ಮಿತಾ ಅವರು ಮನೆಯ ಚಾವಡಿಯಲ್ಲಿ ಮೊದಲು ಮಗುವಿಗೆ ನೇಣು ಬಿಗಿದು, ನಂತರ ತಾವೂ ನೇಣು ಬಿಗಿದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಹಿನ್ನೆಲೆ:ಸುಭಾಷ್ ನಾಯ್ಕ ಮತ್ತು ಅವರ ಆರು ಕುಟುಂಬ ಸದಸ್ಯರ ಬಂಧನಕ್ಕೆ 16 ವರ್ಷಗಳ ಹಿಂದಿನ ಹಳೆಯ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯ ಆದೇಶಿಸಿತ್ತು. ಇತ್ತೀಚೆಗೆ, ಪೊಲೀಸರು ಪದೇ ಪದೇ ಮನೆಗೆ ಭೇಟಿ ನೀಡಿ ಸುಭಾಷ್ ಅವರನ್ನು ಬೆದರಿಸುತ್ತಿದ್ದರು ಮತ್ತು ನೋಟಿಸ್ ನೀಡುತ್ತಿದ್ದರು ಎಂದು ವರದಿಯಾಗಿದೆ. ಘಟನೆ ನಡೆದ ದಿನವೂ ಪೊಲೀಸರು ಅವರ ಮನೆಗೆ ಬಂದು ಸುಭಾಷ್ ಎಲ್ಲಿದ್ದಾರೆ ಎಂದು ವಿಚಾರಿಸಿದ್ದರು. ಆ ಸಮಯದಲ್ಲಿ, ಸುಭಾಷ್ ಬೆಂಗಳೂರಿಗೆ ಮೇಲ್ಮನವಿ ಸಲ್ಲಿಸಲು ಹೋಗಿದ್ದರು. ಈ ಒತ್ತಡದಿಂದ ಮನನೊಂದು ಸುಶ್ಮಿತಾ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.

Ad Widget

Ad Widget

ಮನಕಲಕಿದ ದೃಶ್ಯ:ಚಿಕ್ಕ ಮಗುವಿನೊಂದಿಗೆ ತಾಯಿ ನೇಣು ಬಿಗಿದುಕೊಂಡಿದ್ದ ಹೃದಯ ವಿದ್ರಾವಕ ದೃಶ್ಯ ಮನ ಕಲಕುವಂತಿತ್ತು. ಮೃತ ದೇಹಗಳನ್ನು ಕುಣಿಕೆಯಿಂದ ಕೆಳಗಿಳಿಸುವಾಗ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿಷಾದಕ್ಕೆ ಕಾರಣವಾಗಿದೆ.ಸ್ಥಳಕ್ಕೆ ಎಸ್‌ಪಿ ಹರಿರಾಂ ಶಂಕರ್, ಡಿವೈಎಸ್‌ಪಿ ಪ್ರಭು ಡಿ.ಟಿ., ವೃತ್ತ ನಿರೀಕ್ಷಕ ಗೋಪಿಕೃಷ್ಣ, ಠಾಣಾಧಿಕಾರಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಡೆತ್‌ ನೋಟ್ ಪತ್ತೆ:ಉಡುಪಿ ಎಸ್‌ಪಿ ಹರಿರಾಂ ಶಂಕರ್ ಅವರ ಪ್ರಕಾರ, 2009ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪತಿ ಹಾಗೂ ಮನೆಯವರು ತಪ್ಪಿತಸ್ಥರು ಎಂದು ಇತ್ತೀಚೆಗೆ ಹೈಕೋರ್ಟ್‌ನಲ್ಲಿ ದೃಢೀಕರಣಗೊಂಡಿದೆ. ಇದೇ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಥಳದಲ್ಲಿ ಡೆತ್‌ ನೋಟ್ ದೊರಕಿದ್ದು, “ಘಟನೆಗೆ ನಾನೇ ಹೊಣೆಗಾರರಾಗಿದ್ದೇವೆ” ಎಂದು ಬರೆದಿದ್ದಾರೆ.

ಬೇರೆ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತನಿಖೆಯಿಂದ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು

Published

on

Ad Widget

Ad Widget

Ad Widget

Ad Widget

ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.

Ad Widget

Ad Widget <> Ad Widget

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.

ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.

ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.

ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!