Connect with us

Uncategorized

ಬಿಜೆಪಿಯ ಬಣ ರಾಜಕೀಯಕ್ಕೆ ಸಾಕ್ಷಿಯಾದ ‘ಧರ್ಮಸ್ಥಳ ಚಲೋ’ – ದಿಢೀರ್ ಸೌಜನ್ಯ ಮನೆ ಭೇಟಿ ಮಾಡಿದ ವಿಜಯೇಂದ್ರ ನಡೆಗೆ  ಸ್ವಪಕ್ಷೀಯರಿಂದಲೇ ಆಕ್ಷೇಪ;

Published

on

Ad Widget

Ad Widget

Ad Widget

Ad Widget

ಬೆಂಗಳೂರು, ಸೆಪ್ಟೆಂಬರ್ 3: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಜೆಪಿಯ ‘ಧರ್ಮಸ್ಥಳ ಚಲೋ’ ಕಾರ್ಯಕ್ರಮವು ರಾಜ್ಯ ಬಿಜೆಪಿಯ ಬಣ ರಾಜಕೀಯವನ್ನು ಅನಾವರಣಗೊಳಿಸಿದೆ.  ಕೊನೆಯ ಕ್ಷಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹತ್ಯೆಗೀಡಾಗಿದ್ದ ಸೌಜನ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಪಕ್ಷದೊಳಗೇ ತೀವ್ರ ಅಸಮಾಧಾನಕ್ಕೆ ಗುರಿಯಾಗಿದೆ. ಇದರ ಜೊತೆಗೆ, ಕಳೆದ 2 ತಿಂಗಳಿನಿಂದ ಧರ್ಮಸ್ಥಳದ ಪರವಾಗಿ ಬಿಜೆಪಿ ಪಕ್ಷದಿಂದ  ಮಾತನಾಡಿದವರಿಗೆ ಈ ಯಾತ್ರೆಯ  ವೇದಿಕೆಯಲ್ಲಿ ಮಾತನಾಡಲು ಅವಕಾಶ ಸಿಗಲಿಲ್ಲ. ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗದ ರಾಜಕಾರಣಿಗಳಿಗೆ ಮಾತನಾಡಲು ಅವಕಾಶ ಸಿಕ್ಕಿಲ್ಲ. ಇದು ಆ ನಾಯಕರನ್ನು ಕೆರಳಿಸಿತ್ತು ಮಾತ್ರವಲ್ಲದೆ, ಕೆಲವರು ಕಾರ್ಯಕ್ರಮದಿಂದ ಅರ್ಧದಿಂದಲೇ ನಿರ್ಗಮಿಸಿದರು. ಈ ಮೂಲಕ ಬಿಜೆಪಿಯ ಬಣ ರಾಜಕೀಯ ಪ್ರದರ್ಶನಕ್ಕೆ ವೇದಿಕೆ ಸಾಕ್ಷಿಯಾಯಿತು.

Ad Widget

Ad Widget

Ad Widget

Ad Widget
Ad Widget

Ad Widget alt="Ad Widget"/>

Ad Widget

ಸೆಪ್ಟೆಂಬರ್ 3ರಂದು ನಡೆದ ‘ಧರ್ಮಸ್ಥಳ ಚಲೋ’ ಸಮಾವೇಶದ ನಂತರ, ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ ಅವರೊಂದಿಗೆ ವಿಜಯೇಂದ್ರ ಅವರು ಸೌಜನ್ಯ ಅವರ ತಾಯಿ ಕುಸುಮಾವತಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸೌಜನ್ಯ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾದರೆ ಅಗತ್ಯ ಕಾನೂನು ನೆರವು ನೀಡುವ ಭರವಸೆಯನ್ನೂ ನೀಡಿದರು. ಆದರೆ, ಈ ಭೇಟಿಯು ಪೂರ್ವನಿರ್ಧರಿತವಾಗಿರದೆ, ಕೊನೆಯ ಕ್ಷಣದಲ್ಲಿ ವಿಜಯೇಂದ್ರ ಅವರ ನಿರ್ಧಾರದಿಂದ ನಡೆದಿದ್ದು, ಪಕ್ಷದ ಅನೇಕ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.‌

Ad Widget

Ad Widget <> Ad Widget

  • ಕೊನೆಯ ಕ್ಷಣದ ನಿರ್ಧಾರ: ವಿಜಯೇಂದ್ರ ಅವರು ಸೌಜನ್ಯ ನಿವಾಸಕ್ಕೆ ಭೇಟಿ ನೀಡುವ ನಿರ್ಧಾರವನ್ನು ಭೇಟಿಗೆ ಕೇವಲ 15 ನಿಮಿಷಗಳ ಮೊದಲು ಪಕ್ಷದ ನಾಯಕರಿಗೆ ತಿಳಿಸಿದ್ದು, ಉಳಿದ ನಾಯಕರು ಧರ್ಮಸ್ಥಳದಿಂದ ಹೊರಟ ನಂತರ ಮಾಹಿತಿ ತಲುಪಿದೆ.
  • ಪ್ರವಾಸ ಯೋಜನೆಯಲ್ಲಿ ಬದಲಾವಣೆ: ಸಮಾವೇಶ ಮುಗಿಸಿ ಧರ್ಮಸ್ಥಳದಿಂದ ಶಿಕಾರಿಪುರಕ್ಕೆ ತೆರಳಲು ವಿಜಯೇಂದ್ರ ಅವರ ಟೂರ್ ಪ್ಲಾನ್ ನಿಗದಿಯಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸೌಜನ್ಯ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಲಾಯಿತು.
  • ಇತರ ನಾಯಕರ ಗೈರು: ವಿಜಯೇಂದ್ರ ಅವರ ನಿರ್ಧಾರದ ಬಗ್ಗೆ ಮಾಹಿತಿ ತಲುಪುವ ವೇಳೆಗೆ ಪ್ರಹ್ಲಾದ್ ಜೋಶಿ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ವಿ. ಸುನೀಲ್ ಕುಮಾರ್, ಡಿ.ವಿ. ಸದಾನಂದ ಗೌಡ ಬೆಂಗಳೂರಿನತ್ತ ಹೊರಟಿದ್ದರು. ನಳೀನ್ ಕುಮಾರ್ ಕಟೀಲ್ ಮಂಗಳೂರಿನತ್ತ ಪ್ರಯಾಣಿಸಿದ್ದರು. ಹೀಗಾಗಿ, ಪ್ರಮುಖ ನಾಯಕರು ವಿಜಯೇಂದ್ರ ಅವರ ಜೊತೆ ಭೇಟಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

“ಧಾರ್ಮಿಕ ಕೇಂದ್ರದ ಪರ ಸಮಾವೇಶದ ನಂತರ ಸೌಜನ್ಯ ನಿವಾಸಕ್ಕೆ ಯಾಕೆ ಭೇಟಿ?” ಎಂಬ ಪ್ರಶ್ನೆ ಪಕ್ಷದಲ್ಲಿ ಆಂತರಿಕವಾಗಿ ಎದ್ದಿದೆ.

Ad Widget

Ad Widget

ಕರಾವಳಿ ನಾಯಕರಿಗೆ ಭಾಷಣಕ್ಕೆ ಅವಕಾಶವಿಲ್ಲದೆ ಕಡೆಗಣನೆ:

ಇದೇ ಸಮಾವೇಶದಲ್ಲಿ ಮತ್ತೊಂದು ವಿಚಾರ ಗಮನ ಸೆಳೆದಿದೆ. ಕರಾವಳಿ ಮೂಲದ ಬಿಜೆಪಿ ನಾಯಕರಿಗೇ ಭಾಷಣಕ್ಕೆ ಅವಕಾಶ ದೊರೆಯದಿರುವುದು ಚರ್ಚೆಗೆ ಗ್ರಾಸವಾಗಿದೆ. ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶಾಸಕ ಸುನೀಲ್ ಕುಮಾರ್ ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಮೂಲದ ನಾಯಕರು ವೇದಿಕೆ ಮೇಲೆ ಕುಳಿತು ಎದ್ದು ಹೋಗುವುದಕ್ಕಷ್ಟೇ ಸೀಮಿತವಾದರು. ಅದರಲ್ಲೂ ವಿಧಾನಸಭೆಯಲ್ಲಿ ಧರ್ಮಸ್ಥಳ ಪ್ರಕರಣವನ್ನು ಪ್ರಸ್ತಾಪಿಸಿದ್ದ ಶಾಸಕ ಸುನೀಲ್ ಕುಮಾರ್ ಅವರಿಗೂ ಭಾಷಣಕ್ಕೆ ಅವಕಾಶ ನೀಡದಿರುವುದು ಗಮನಾರ್ಹ. ಇದಕ್ಕೆ “ಸಮಯಾವಕಾಶದ ಕೊರತೆ” ಎಂಬ ಸಮಜಾಯಿಷಿಯನ್ನು ಬಿಜೆಪಿ ನೀಡಿದೆ.

ಇನ್ನು ಬಿಜೆಪಿಯು ಈ ಕಾರ್ಯಕ್ರಮದಲ್ಲಿ 50 ರಿಂದ ಒಂದು ಲಕ್ಷ ಜನ ಸೇರಬಹುದೆಂದು ನಿರೀಕ್ಷಿಸಿತ್ತು. ಕರಾವಳಿ ಕರ್ನಾಟಕ ಬಿಜೆಪಿಯ ಭದ್ರಕೋಟೆಯಾಗಿರುವುದರಿಂದ ತುಂಬಾ ಸುಲಭದಲ್ಲಿ ಈ ಸಂಖ್ಯೆಯನ್ನು ಮುಟ್ಟುವ ನಿರೀಕ್ಷೆ ಬಿಜೆಪಿ ಮುಖಂಡರಿಗಿತ್ತು. ಆದರೆ, ಸಭೆಯಲ್ಲಿ 15 ರಿಂದ 25 ಸಾವಿರದಷ್ಟು ಮಾತ್ರ ಸೇರಿದ್ದು ಕೂಡ ಬಿಜೆಪಿಗೆ ಈ ಯಾತ್ರೆಯಲ್ಲಾದ ದೊಡ್ಡ ಹಿನ್ನಡೆ. ಇದಕ್ಕೆ ಪ್ರಮುಖ ಕಾರಣ ಹಿಂದೂ ಸಂಘಟನೆಯ ಹಾಗೂ ಬಿಜೆಪಿಯ ಯುವ ಕಾರ್ಯಕರ್ತರು ಈ ಕಾರ್ಯಕ್ರಮದಿಂದ ದೂರ ಉಳಿದಿರುವುದು ಎನ್ನುವುದು ಪಕ್ಷದ ಮೂಲಗಳ ಮಾಹಿತಿ . ವಿಜಯೇಂದ್ರರವರು ಪಕ್ಷಕ್ಕೆ ಈ ಯಾತ್ರೆ ಬೂಮರಾಂಗ್ ಆಗುವ ಅಪಾಯವನ್ನು ಅರಿತು ಕೊನೆ ಕ್ಷಣದಲ್ಲಿ ಸೌಜನ್ಯ ಮನೆಗೆ ಭೇಟಿ ನೀಡುವ ಕಾರ್ಯಕ್ರಮ ಹಾಕಿಕೊಂಡರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಒಟ್ಟಾರೆಯಾಗಿ, ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕೆಂಬ ವಿಪಕ್ಷ ಬಿಜೆಪಿಯ ಆಗ್ರಹಕ್ಕೆ ರಾಜ್ಯ ಸರ್ಕಾರ ಸೊಪ್ಪು ಹಾಕಿಲ್ಲ. ಇದರ ಮಧ್ಯೆ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಕೊಟ್ಟಿದ್ದು, “ಪಕ್ಷದ ನಡೆ ಸಕಾಲಿಕ” ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ. ಆದರೆ, ಇದು “ಬಿಜೆಪಿ ಯಾರ ಪರ?” ಎಂದು ಕಾಂಗ್ರೆಸ್ ಪ್ರಶ್ನೆ ಎತ್ತುವಂತೆ ಮಾಡಿದೆ. ಇದರ ಜೊತೆಗೆ, ಸ್ವಪಕ್ಷೀಯರೇ ವಿಜಯೇಂದ್ರ ಅವರ ನಿರ್ಧಾರದ ಬಗ್ಗೆ ಆಕ್ಷೇಪ ಎತ್ತುವಂತಾಗಿರುವುದು ಬಿಜೆಪಿಯೊಳಗೆ ಆಂತರಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!