ರಾಜಕೀಯ
Vijayendra-ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರ ಮಧ್ಯೆ ಭಿನ್ನಮತ, ಸೌಜನ್ಯ ಮನೆ ಭೇಟಿ ಗೊಂದಲದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು ?
ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಬಿಜಪಿ ನಾಯಕರ ಮಧ್ಯೆ ಎಲ್ಲವು ಸರಿ ಇರಲಿಲ್ಲ ಹಾಗೂ ಸೌಜನ್ಯಳ ಮನೆಗೆ ಭೇಟಿ ನೀಡಿದರಿಂದ ಹಲವು ಬಿಜೆಪಿ ನಾಯಕರಿಗೆ ಇರಿಸು ಮುರಿಸು ಉಂಟಾಗಿದೆ ಎಂಬ ಮಾಧ್ಯಮ ವರದಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದು, ಈ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಬಿಜಪಿ ನಾಯಕರ ಮಧ್ಯೆ ಎಲ್ಲವು ಸರಿ ಇರಲಿಲ್ಲ ಹಾಗೂ ಸೌಜನ್ಯಳ ಮನೆಗೆ ಭೇಟಿ ನೀಡಿದರಿಂದ ಹಲವು ಬಿಜೆಪಿ ನಾಯಕರಿಗೆ ಇರಿಸು ಮುರಿಸು ಉಂಟಾಗಿದೆ ಎಂಬ ಮಾಧ್ಯಮ ವರದಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದು, ಈ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ ಎಂದು ತಿಳಿಸಿದ್ದಾರೆ.
“ಕೋಟ್ಯಾಂತರ ಮಂಜುನಾಥನ ಭಕ್ತರಿಗೆ ಅಪಪ್ರಚಾರದಿಂದ ನೋವಾಗುತ್ತಿದ್ದರೆ, ರಾಜ್ಯ ಸರ್ಕಾರದ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವುದು ಭಕ್ತರ ಬೇಸರಕ್ಕೆ ಕಾರಣವಾಗಿತ್ತು. ಹೀಗಾಗಿ ನಾವು ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು,” ಎಂದು ಅವರು ಸ್ಪಷ್ಟಪಡಿಸಿದರು.
ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದು ವಿಜಯೇಂದ್ರ ತಿಳಿಸಿದ್ದಾರೆ. “ಪ್ರತಿಯೊಂದು ವಿಧಾನಸಭೆಯಿಂದಲೂ ನಮ್ಮ ಹಿಂದೂ ಕಾರ್ಯಕರ್ತರು ಆಗಮಿಸಿದ್ದರು. ಬಂದ ಕಾರ್ಯಕರ್ತರು ಯಾವುದೇ ಸಮಸ್ಯೆ ಇಲ್ಲದೆ ಸುರಕ್ಷಿತವಾಗಿ ಹಿಂದಿರುಗಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು. ಲಕ್ಷಾಂತರ ಜನ ಸೇರಿದ್ದ ಸಂದರ್ಭದಲ್ಲಿ ಎಷ್ಟು ಜನರಿಗೆ ಮಾತನಾಡಲು ಅವಕಾಶ ಸಿಗುತ್ತದೆ ಎಂಬುದು ನಿಮಗೆಲ್ಲಾ ಗೊತ್ತಿರಬಹುದು,” ಎಂದು ಅವರು ಹೇಳಿದರು.
ನಾಯಕರ ಭಾಷಣ ಮತ್ತು ಮಳೆಯ ಪರಿಣಾಮ:
ಕಾರ್ಯಕ್ರಮದಲ್ಲಿ ಹಿರಿಯ ಶಾಸಕ ಸುನೀಲ್ ಕುಮಾರ್ ಅವರ ಸಲಹೆಯಂತೆ ನಾಲ್ಕೈದು ನಾಯಕರಿಗೆ ಮಾತ್ರ ಭಾಷಣ ಮಾಡಲು ಅವಕಾಶ ನೀಡಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಸಲಹೆ ಮೇರೆಗೆ ಜೋಶಿ ನಂತರ ಅಶೋಕ್ ಮಾತನಾಡಿದರು. ವಿಜಯೇಂದ್ರ, ಸಿ.ಟಿ. ರವಿ, ಶ್ರೀರಾಮ್, ನಾರಾಯಣ ಸ್ವಾಮಿ, ಜಗದೀಶ್ ಶೆಟ್ಟರ್ ಅವರೂ ಭಾಷಣ ಮಾಡಿದರು. “ನಳೀನ್ ಕುಮಾರ್ ಕಟೀಲ್ ಅವರೂ ಮಾತನಾಡಿದರು. ಆದರೂ ಜನ ಯಾರೂ ಎದ್ದು ಹೋಗಿರಲಿಲ್ಲ. ಬಳಿಕ ತೇಜಸ್ವಿ ಸೂರ್ಯ, ಕೋಟ ಶ್ರೀನಿವಾಸ ಪೂಜಾರಿ, ಕ್ಯಾ. ಬ್ರಿಜೇಶ್ ಚೌಟ ಅವರನ್ನೂ ಮಾತನಾಡಲು ವಿನಂತಿಸಲಾಗಿತ್ತು. ಆದರೆ ಮಳೆ ಬಂದ ಹಿನ್ನೆಲೆಯಲ್ಲಿ ಜನರಿಗೆ ತೊಂದರೆಯಾಗಬಾರದೆಂದು ಅವರಾಗಿಯೇ ಮಾತನಾಡುವುದಿಲ್ಲ ಎಂದು ತಿಳಿಸಿದರು. ಈ ಬಗ್ಗೆ ಅಪಪ್ರಚಾರ ಸರಿಯಲ್ಲ,” ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಗಳ ಪ್ರಶ್ನೆಗೆ ವಿಜಯೇಂದ್ರ ಉತ್ತರ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಬಿಜೆಪಿಯವರು ಧರ್ಮಸ್ಥಳದ ಪರವೋ ಅಥವಾ ಸೌಜನ್ಯ ಪರವೋ?” ಎಂದು ಕೇಳಿದ ಪ್ರಶ್ನೆಗೆ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. “ಭಾರತೀಯ ಜನತಾ ಪಾರ್ಟಿ ಮಂಜುನಾಥನ ಭಕ್ತರ ಪರವಾಗಿ ಪಕ್ಷಾತೀತವಾಗಿ ಧರ್ಮಸ್ಥಳ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು,” ಎಂದು ಅವರು ಹೇಳಿದರು.
ಸೌಜನ್ಯ ಪ್ರಕರಣದ ಕುರಿತು ಮಾತನಾಡಿ, “ರಾಜ್ಯಾಧ್ಯಕ್ಷನಾಗಿ ಅಲ್ಲಿಗೆ ಹೋದ ಮೇಲೆ ನನಗೆ ಅನಿಸಿತು ಆ ತಾಯಿಯನ್ನು ಭೇಟಿ ಆಗಬೇಕು. ಅದು ನನ್ನ ತೀರ್ಮಾನವಾಗಿತ್ತು. ಸೌಜನ್ಯ ಮೃತಪಟ್ಟು 12 ವರ್ಷ ಕಳೆದರೂ ಸಹ, ಅವರ ತಾಯಿಯನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಬೇಕು ಅನಿಸಿತು. ಹಾಗಾಗಿ ಮರು ತನಿಖೆ ಮಾಡುವುದಿದ್ದರೆ ವೆಚ್ಚ ಭರಿಸುತ್ತೇನೆ ಅಂತ ಹೇಳಿದ್ದೇನೆ,” ಎಂದು ಅವರು ತಿಳಿಸಿದರು.
“ಮುಖ್ಯಮಂತ್ರಿಗಳಿಗೆ ನಾನು ಹೇಳುವುದಿಷ್ಟೇ, ನೀವು ಪ್ರಾಮಾಣಿಕರಾಗಿದ್ದರೆ ಸಮೀರ್ ನ ಬೇಲ್ ಕ್ಯಾನ್ಸಲ್ ಮಾಡಿ, ಸಮೀರ್ ನ ಒದ್ದು ಒಳಗೆ ಹಾಕಿ,” ಎಂದು ವಿಜಯೇಂದ್ರ ಸವಾಲು ಹಾಕಿದರು.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
-
ಪುತ್ತೂರು18 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್21 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು21 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್20 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ21 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ24 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ20 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ21 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ


















