ಬಿಗ್ ನ್ಯೂಸ್
Enquiry-ಯೂಟ್ಯೂಬರ್ ಎಂ.ಡಿ. ಸಮೀರ್ ಮನೆಯಲ್ಲಿ ಶೋಧ, ಕಂಪ್ಯೂಟರ್-ಮೊಬೈಲ್ ಜಪ್ತಿ; ನಿರಂತರ 3 ದಿನಗಳಿಂದ ಎಸ್ ಐಟಿಯಿಂದ ಯೂಟ್ಯೂಬರ್ ಅಭಿಷೇಕ್ ಆಹೋರಾತ್ರಿ ವಿಚಾರಣೆ ; ಇಂದು ಮುಂದುವರಿಯಲಿದೆ ಜಯಂತ್ ಟಿ. ವಿಚಾರಣೆ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು, ಬೆಂಗಳೂರಿನ ಬನ್ನೇರುಘಟ್ಟದ ಹುಲ್ಲಹಳ್ಳಿಯಲ್ಲಿರುವ ಯೂಟ್ಯೂಬರ್ ಎಂ.ಡಿ. ಸಮೀರ್ ಅವರ ಬಾಡಿಗೆ ಮನೆಯ ಮೇಲೆ ಗುರುವಾರ ಆಗಮಿಸಿ ಶೋಧ ಕಾರ್ಯ ನಡೆಸಿದ್ದು , ಕಂಪ್ಯೂಟರ್, ಮೊಬೈಲ್ ಸಹಿತ ಕೆಲವು ಉಪಕರಣಗಳು ಮತ್ತು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು, ಬೆಂಗಳೂರಿನ ಬನ್ನೇರುಘಟ್ಟದ ಹುಲ್ಲಹಳ್ಳಿಯಲ್ಲಿರುವ ಯೂಟ್ಯೂಬರ್ ಎಂ.ಡಿ. ಸಮೀರ್ ಅವರ ಬಾಡಿಗೆ ಮನೆಯ ಮೇಲೆ ಗುರುವಾರ ಆಗಮಿಸಿ ಶೋಧ ಕಾರ್ಯ ನಡೆಸಿದ್ದು , ಕಂಪ್ಯೂಟರ್, ಮೊಬೈಲ್ ಸಹಿತ ಕೆಲವು ಉಪಕರಣಗಳು ಮತ್ತು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆದು, ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಸಿಬ್ಬಂದಿ ಮತ್ತು ಪೊಲೀಸರು ಈ ಕಾರ್ಯಾಚರಣೆ ನಡೆಸಿದರು.
ವಿಚಾರಣೆಗೆ ಅಸಹಕಾರ: ಎಐ ವಿಡಿಯೋ ಪ್ರಕರಣದ ಹಿನ್ನೆಲೆ
ಮೂಲಗಳ ಪ್ರಕಾರ, ಯೂಟ್ಯೂಬರ್ ಪ್ರಸಾರ ಮಾಡಿದ ವಿಡಿಯೋ ಒಂದಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಸಮೀರ್ ಅವರನ್ನು ಎರಡು ಬಾರಿ ವಿಚಾರಣೆಗೆ ಒಳಪಡಿಸಿದ್ದರು. ಆದರೆ, ಸಮೀರ್ ವಿಚಾರಣೆಗೆ ಸಹಕರಿಸಿರಲಿಲ್ಲ ಮತ್ತು ಕಂಪ್ಯೂಟರ್ ಸೇರಿದಂತೆ ಯಾವುದೇ ಉಪಕರಣಗಳನ್ನು ಒದಗಿಸಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ, ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆದು ಪೊಲೀಸರು ಮನೆಯಲ್ಲಿ ತಪಾಸಣೆ ನಡೆಸಿ, ವಿಡಿಯೋ ಎಡಿಟಿಂಗ್ಗೆ ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಹಿಂದೆ ಆಗಸ್ಟ್ 22 ರಂದು ಪೊಲೀಸರು ಸಮೀರ್ ಅವರ ಮನೆಗೆ ಬಂದಿದ್ದರಾದರೂ, ಅವರು ಮನೆಯಲ್ಲಿ ಇಲ್ಲದ ಕಾರಣ ವಾಪಸ್ ಹೋಗಿದ್ದರು ಎಂದು ಮೂಲಗಳು ತಿಳಿಸಿವೆ.
‘ಸೇಡಿನ ಕ್ರಮ’: ಸಮೀರ್ ಆಪ್ತನ ಆರೋಪ
ಆದರೆ, ಮಹಜರು ಪ್ರಕ್ರಿಯೆ ನಡೆದ ಬಳಿಕ ಸಮೀರ್ ಮನೆಯಲ್ಲಿದ್ದ ಮಟ್ಟಣ್ಣನವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, “ಸಮೀರ್ ಮನೆಯ ಮೇಲೆ ಯಾವುದೇ ರೀತಿಯ ದಾಳಿ ನಡೆದಿಲ್ಲ. ಇದು ಧರ್ಮಸ್ಥಳಕ್ಕೆ ಅಪಪ್ರಚಾರ ನಡೆಸಿದ್ದಕ್ಕೆ ದಾಖಲಾದ ಕೇಸ್ ಅಲ್ಲ. ಧರ್ಮಸ್ಥಳ ಠಾಣೆಯಲ್ಲಿ ಸಮೀರ್ ಮೇಲೆ ಒಂದು ಕೇಸ್ ದಾಖಲಾಗಿತ್ತು. ಸಮೀರ್ ತಮ್ಮ ವಿಡಿಯೋದಲ್ಲಿ ಬೆಳ್ತಂಗಡಿ ಪೊಲೀಸರನ್ನು ‘ಧಣಿಗಳ ಚಾಟು’ ಎಂದು ಹೇಳಿದ್ದರು. ಈ ಪದ ಬಳಕೆ ಮಾಡಿದ್ದಕ್ಕೆ ಪೊಲೀಸರು ಸೇಡಿನಿಂದ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, ಸ್ಥಳ ಮಹಜರು ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.
‘ಎಫ್ಎಸ್ಎಲ್ ಕೆಲಸ ಶ್ಲಾಘನೀಯ’
ಮಟ್ಟಣ್ಣನವರ್ ಅವರು ವಿಧಿವಿಜ್ಞಾನ ಪ್ರಾಯೋಗಾಲಯದ ಕೆಲಸವನ್ನು ಶ್ಲಾಘಿಸಿದ್ದು, “ಎಫ್ಎಸ್ಎಲ್ನವರು ಬಹಳ ಚೆನ್ನಾಗಿ ಕೆಲಸ ಮಾಡಿದ್ದಾರೆ. ಈ ಹಿಂದೆ ಆನೆ ಮಾವುತನ ಕೊಲೆಯಾದಾಗ, ಸೌಜನ್ಯ ಕೊಲೆಯಾದಾಗ ಈ ರೀತಿಯ ಯಾವುದೇ ಪ್ರಕ್ರಿಯೆ ನಡೆದಿರಲಿಲ್ಲ. ಪೊಲೀಸರು ಪ್ರಕರಣಕ್ಕೆ ಬೇಕಾದ ಎಲ್ಲಾ ಪ್ರಕ್ರಿಯೆಗಳನ್ನು ಸರಿಯಾಗಿ ಮಾಡಿ ಹೋಗಿದ್ದಾರೆ” ಎಂದು ತಿಳಿಸಿದರು.
“ಇಂದು ಸಮೀರ್ ಅವರ ಮೊಬೈಲ್, ಕ್ಯಾಮೆರಾ, ಕಂಪ್ಯೂಟರ್ ಜಪ್ತಿ ಮಾಡಿದ್ದಾರೆ. ಸಮೀರ್ ಎಂಡಿ ಮೇಲೆ ಸುಳ್ಳು ಕೇಸ್ ದಾಖಲಾಗಿದ್ದು ಅವರು ಸಹಕಾರ ನೀಡಿದ್ದಾರೆ. ಎಐ ವೀಡಿಯೋದಲ್ಲಿ ಬಂದಿರುವುದು ಸತ್ಯದ ಮಾಹಿತಿ, ಯಾವುದೂ ಸುಳ್ಳಿಲ್ಲ. ಸಮೀರ್ ನನ್ನ ಸ್ನೇಹಿತನಾಗಿದ್ದು ಪಂಚನಾಮೆಗೆ ಅವಶ್ಯಕತೆ ಇರಬಹುದು ಎಂಬ ಕಾರಣಕ್ಕೆ ನಾನು ಬಂದಿದ್ದೇನೆ. ಸಮೀರ್ ಜೊತೆ ನಾವು ಯಾವಾಗಲೂ ಇರುತ್ತೇವೆ” ಎಂದು ಮಟ್ಟಣ್ಣನವರ್ ಹೇಳಿದರು.
ಸಾಮಾಜಿಕ ಕಾರ್ಯಕರ್ತ ಜಯಂತ್ ಟಿ ಹಾಗೂ ಯೂಟ್ಯೂಬರ್ ಅಭಿಷೇಕ್ ವಿಚಾರಣೆ
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಗುರುವಾರ ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಜಯಂತ್ ಟಿ. ಹಾಗೂ ಆತನ ಹೇಳಿಕೆಯ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್ ಅಭಿಷೇಕ್ನನ್ನು ವಿಚಾರಣೆಗೆ ಒಳಪಡಿಸಿತು.
ಸಾಕ್ಷಿ ದೂರುದಾರನು ಕೆಲ ದಿನಗಳ ಕಾಲ ಬೆಂಗಳೂರಿನ ಪೀಣ್ಯದಲ್ಲಿರುವ ಜಯಂತ್ ಟಿ. ಅವರ ಬಾಡಿಗೆ ಮನೆಯಲ್ಲಿ ಉಳಿದುಕೊಂಡಿದ್ದ. ಇತ್ತೀಚೆಗೆ ಎಸ್ಐಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಆ ಮನೆಗೆ ಕರೆದೊಯ್ದು ಮಹಜರು ನಡೆಸಿದ್ದರು. ಜಯಂತ್ ಟಿ. ಅವರನ್ನು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಕರೆಸಿಕೊಂಡು ಆಶ್ರಯ ನೀಡಿದ ಕುರಿತು ಹೇಳಿಕೆ ದಾಖಲಿಸಿಕೊಳ್ಳಲಾಯಿತು. ಜಯಂತ್ ಗುರುವಾರ ಮಧ್ಯಾಹ್ನ 3 ಗಂಟೆಗೆ ಕಚೇರಿಗೆ ತೆರಳಿದ್ದು, ತಡ ರಾತ್ರಿ 2.30ರ ಸುಮಾರಿಗೆ ಅಲ್ಲಿಂದ ತೆರಳಿದ್ದು , ಇಂದು ಮತ್ತೆ ತನಿಖೆಗೆ ಆಗಮಿಸುವಂತೆ ಎಸ್ ಐಟಿ ಸೂಚಿಸಿದೆ ಎಂದು ತಿಳಿದು ಬಂದಿದೆ.
‘ಯುನೈಟೆಡ್ ಮೀಡಿಯಾ ಯೂಟ್ಯೂಬ್’ ಚಾನೆಲ್ನ ಅಭಿಷೇಕ್ನನ್ನು ಬುಧವಾರ ತಡರಾತ್ರಿಯವರೆಗೆ ವಿಚಾರಣೆಗೆ ಒಳಪಡಿಸಿದ್ದ ಎಸ್ಐಟಿ, ಗುರುವಾರ ಮತ್ತೆ ಕರೆಸಿತು. ಅಭಿಷೇಕ್ ಕಚೇರಿಗೆ ತೆರಳಿದ್ದು, ಇಂದಿನ ಬೆಳಗ್ಗಿನ ಜಾವದವರೆಗೂ ಹೊರಗೆ ಬಂದಿರಲಿಲ್ಲ. ಕಳೆದ 3 ದಿನಗಳಿಂದಲೂ ಆತ ಎಸ್ ಐಟಿ ಪೊಲೀಸರ ವಶದಲ್ಲೇ ಇದ್ದಾನೆ. ಸಾಕ್ಷಿ ದೂರುದಾರನ ಬಂಧನದ ನಂತರ ಆತನ ಸಂದರ್ಶನಗಳು ಕೆಲವು ಯೂಟ್ಯೂಬ್ ಚಾನೆಲ್ಗಳಲ್ಲಿ ಪ್ರಸಾರವಾಗಿದ್ದವು. ಆತನ ಹೇಳಿಕೆಯ ವಿಡಿಯೋವನ್ನು ಅಭಿಷೇಕ್ ಚಿತ್ರೀಕರಿಸಿದ್ದ ಎಂದು ಮೂಲಗಳು ತಿಳಿಸಿವೆ.
ಕಳೆದ 2-3 ದಿನಗಳಿಂದ ಉದಯ್ ಜೈನ್ ಸೇರಿದಂತೆ ಧರ್ಮಸ್ಥಳದ 30ಕ್ಕೂ ಹೆಚ್ಚು ಸ್ಥಳೀಯರು ಎಸ್ಐಟಿ ಕಚೇರಿಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ. ಸಾಕ್ಷಿ ದೂರುದಾರನು ಕೆಲವು ಸ್ಥಳೀಯರ ಹೆಸರುಗಳನ್ನು ಉಲ್ಲೇಖಿಸಿದ್ದು, ಅವರನ್ನು ಕರೆಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ನಿಧನ ವಾರ್ತೆ9 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು7 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ9 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ8 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ8 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಮಂಗಳೂರು5 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ10 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
Uncategorized10 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP


















