ಬಿಗ್ ನ್ಯೂಸ್
Sasikanth Senthil | ‘ನಾನು ಹಿಂದೂ ಕುಟುಂಬದಲ್ಲಿಯೇ ಹುಟ್ಟಿದವ – ನನ್ನ ಮನೆಯ ಆಚರಣೆಗಳು ಹಿಂದೂ ಧರ್ಮದ್ದೇ’ : ನಿಜಾಂಶ ಗೊತ್ತಾಗಬೇಕು ಇಲ್ಲದಿದ್ದರೆ ಸಿರಿಯಲ್ ನ್ನು ಸಿನಿಮಾ ಮಾಡಿ ಆಸ್ಕರ್ ಗೆ ಕೊಂಡೋಗ್ತಾರೆ..! – ನನ್ನ ವಿರುದ್ಧ ಮಾತನಾಡಿದವರ ಎಲ್ಲರ ಮೇಲೂ ಕಾನೂನು ಕ್ರಮ ಕೈಗೊಳ್ಳುತ್ತೇನೆ : ಧರ್ಮಸ್ಥಳ ಪ್ರಕರಣದ ಆರೋಪದ ಬಗ್ಗೆ ಸಂಸದ ಸಸಿಕಾಂತ್ ಸೆಂಥಿಲ್ ಎಚ್ಚರಿಕೆ
ಬೆಂಗಳೂರು: ‘ನಾನು ಹಿಂದೂ ಕುಟುಂಬದಲ್ಲಿಯೇ ಹುಟ್ಟಿದವ ನನ್ನ ಮನೆಯ ಆಚರಣೆಗಳು ಹಿಂದೂ ಧರ್ಮದ್ದೇ’. ಧರ್ಮಸ್ಥಳದ ಪ್ರಕರಣದಲ್ಲಿ ಯಾರೆಲ್ಲ ನನ್ನ ವಿರುದ್ಧ ಮಾತನಾಡಿದ್ದಾರ ಎಲ್ಲರ ಮೇಲೂ ಕೇಸ್ ಹಾಕ್ತೇನೆ. ನಾನು ಸುಮ್ಮನೆ ಇದ್ದರೆ ಮುಂದೇ ಇದೇ ರೀತಿ ಎಲ್ಲರ ಬಗ್ಗೆಯೂ ಹೀಗೆ ಆರೋಪ ಮಾಡ್ತಾರೆ ಎಂದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ (Sasikanth Senthil) ಅವರ ವಿರುದ್ಧ ಬಿಜೆಪಿ ನಾಯಕರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಗಂಭೀರ ಆರೋಪಗಳಿಗೆ ಸೆಂಥಿಲ್ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ತಮಿಳುನಾಡಿನ ಸಂಸದ ಸೆಂಥಿಲ್, ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಹಲವು ಬಿಜೆಪಿ ನಾಯಕರು, “ಧರ್ಮಸ್ಥಳ ಪ್ರಕರಣದ ಸಂಚು ರೂಪಿಸಿರುವ ಪ್ರಮುಖ ಮಾಸ್ಟರ್‌ಮೈಂಡ್ ಸಸಿಕಾಂತ್ ಸೆಂಥಿಲ್’ ಎಂದು ಆರೋಪಿಸಿದ್ದರು.
“ಇದು ಸಂಪೂರ್ಣ ಆಧಾರರಹಿತ ಮತ್ತು ರಾಜಕೀಯ ಪ್ರೇರಿತ. ಇದೊಂದು ಮಕ್ಕಳಾಟಿಕೆ ಆರೋಪ. ಯಾವುದೇ ಆಧಾರವಿಲ್ಲದ ಸುಳ್ಳು ಆರೋಪಗಳ ವಿರುದ್ಧ ನಾನು ಕಾನೂನು ಹೋರಾಟ ನಡೆಸಲು ಸಜ್ಜಾಗಿದ್ದೇನೆ” ಎಂದು ಸೆಂಥಿಲ್ ಅವರು ಹೇಳಿದ್ದಾರೆ.
“ನಾನು ಕರ್ನಾಟಕದಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ಮಂಗಳೂರು ಸೇರಿ ಹಲವೆಡೆ ಕೆಲಸ ಮಾಡಿದ್ದೇನೆ. ನನ್ನ ಕೆಲಸವನ್ನು ಜನರು ನೋಡಿದ್ದಾರೆ. ಆದರೆ ಈಗ ಸುಳ್ಳು ಕಥೆಗಳನ್ನು ರಚಿಸಿ ಜನರ ಮನಸ್ಸುಗಳನ್ನು ತಿರುಗಿಸಲು ಪ್ರಯತ್ನಿಸಲಾಗುತ್ತಿದೆ. ಇದು ಸಂಪೂರ್ಣ ಕೋಆರ್ಡಿನೇಟೆಡ್ ಪ್ರಪಗಾಂಡಾ” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
“ಕರ್ನಾಟಕದ ಸಂಪತ್ತನ್ನು ಲೂಟಿ ಹೊಡೆದ ವ್ಯಕ್ತಿ, 2011ರ ಲೋಕಾಯುಕ್ತ ವರದಿಯಲ್ಲಿ ಮೈನಿಂಗ್ ಮಾಫಿಯಾ ಎಂದು ಉಲ್ಲೇಖಿಸಲ್ಪಟ್ಟ ವ್ಯಕ್ತಿ, 500 ಕೋಟಿ ರೂಪಾಯಿ ವೆಚ್ಚದ ಮದುವೆ ಮಾಡಿದ ವ್ಯಕ್ತಿ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಎಸಿ ಆಗಿ ಎಂಟ್ರಿ ಕೊಟ್ಟ ದಿನವೇ ಅವರ ಬಂಧನವಾಗಿತ್ತು. ಅದೇ ನಾನು ಅವರನ್ನು ಕೊನೆಯ ಬಾರಿಗೆ ನೋಡಿದ್ದು. ಅವರ ವಿರುದ್ಧದ ತನಿಖೆಗಳಲ್ಲಿ ನಾನು ಕೆಲಸ ಮಾಡಿದ್ದೇನೆ. ಅವರ ಅಕ್ರಮ ಗಣಿಗಳ ಅಳತೆ ನನ್ನ ಮುಂದಾಳತ್ವದಲ್ಲೇ ಆಗಿದೆ. ಅದನ್ನೇ ವೈಯಕ್ತಿಕವಾಗಿ ತೆಗೆದುಕೊಂಡ ಕಾಣುತ್ತಿದೆ. ಅವರ ಮಾತುಗಳಿಗೆ ಬೆಲೆ ಕೊಡಬೇಕೇ.? ಇದು ಜನರನ್ನು ತಪ್ಪು ದಾರಿಗೆಳೆದು ರಾಜಕೀಯ ಲಾಭ ಪಡೆಯುವ ಪ್ರಯತ್ನ”, ಎಂದು ಸೆಂಥಿಲ್ ಹೇಳಿದ್ದಾರೆ.
ಜನರಿಗೆ ನಿಜಾಂಶ ಗೊತ್ತಾಗಬೇಕು. ಇಲ್ಲದಿದ್ದರೆ ಹೀಗೆ ಬಿಟ್ಟರೆ ಇವರು ಸುಳ್ಳಿನ ಮೇಲೆ ಸ್ಟೋರಿ ಮಾಡ್ತಾರೆ, ಸ್ಟೋರಿ ಮೇಲೆ ಸೀರಿಯಲ್ ಮಾಡ್ತಾರೆ, ಸೀರಿಯಲ್ ಅನ್ನು ಮೂವಿ ಮಾಡ್ತಾರೆ, ಮೂವಿಯನ್ನು ಆಸ್ಕರ್ ಗೆ ತೆಗೆದುಕೊಂಡು ಹೋಗ್ತಾರೆ ಎಂದು ತಮ್ಮ ವಿರುದ್ಧದ ಆರೋಪಗಳಿಗೆ ಅವರು ತಿರುಗೇಟು ನೀಡಿದ್ದಾರೆ.
“ಯಾವ ಧರ್ಮಕ್ಕೂ ನನ್ನ ವಿರೋಧವಿಲ್ಲ. ಆದರೆ ಧರ್ಮವನ್ನು ರಾಜಕೀಯಕ್ಕಾಗಿ ಬಳಸುವುದು, ಜನರನ್ನು ಒಬ್ಬರ ವಿರುದ್ಧ ಒಬ್ಬರನ್ನು ಎತ್ತಿ ಕಟ್ಟಿ ಮಾಡುವ ಕೆಲಸ ನನಗೆ ಒಪ್ಪಲಾರದ ರಾಜಕೀಯ. ಇದು ಸಮಾಜವನ್ನು ವಿಭಜಿಸುವ ಅಪಾಯಕಾರಿ ಪ್ರಕ್ರಿಯೆ”, ಎಂದು ಸೆಂಥಿಲ್ ಅವರು ಅಭಿಪ್ರಾಯಪಟ್ಟಿದ್ದಾರೆ.
“ಸಸಿಕಾಂತ್ ಸೆಂಥಿಲ್ ಅವರಿಗೆ ಎಸ್‌ಐಟಿ ನೋಟಿಸ್” ಸುದ್ದಿಗಳಿಗೆ ಸೆಂಥಿಲ್ ಪ್ರತಿಕ್ರಿಯಿಸಿದ ಅವರು,“ನನಗೆ ದೆಹಲಿಯಲ್ಲಿ ಇನ್ನೂ ಮನೆ ಸಿಕ್ಕಿಲ್ಲ. ದೆಹಲಿ ಮನೆಯಲ್ಲಿ ಕೂತು ತಂತ್ರ ಹಣೆದ ಅನ್ನಲು ನನಗೆ ದೆಹಲಿಯಲ್ಲಿ ಇನ್ನೂ ಮನೆಯೇ ಸಿಕ್ಕಿಲ್ಲ. ನಾನು ತಮಿಳುನಾಡು ಭವನದಲ್ಲಿ ಇರೋದು. ಧರ್ಮಸ್ಥಳದ ಪ್ರಕರಣ ಕ್ರಿಮಿನಲ್ ಪ್ರಕರಣ ಪಾಸಿಟಿವ್ ಇದ್ದರೆ ಪಾಸಿಟಿವ್ ಬರ್ತದೆ ನೆಗೆಟಿವ್ ಇದ್ದರೆ ನೆಗೆಟಿವ್ ಬರ್ತದೆ. ಅದರಲ್ಲಿ ನನ್ನ ಪಾತ್ರ 0.00001% ಕೂಡ ಇಲ್ಲ. ಎಸ್ಐಟಿಯಿಂದ ಯಾವುದೇ ನೋಟಿಸ್ ನನ್ನ ಕೈಗೆ ಬಂದಿಲ್ಲ. ಪ್ರತಿದಿನ ಹೊಸ ಸ್ಕ್ರಿಪ್ಟ್ ಬರೆಯುತ್ತಿರುವವರು ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ. ನಾನು ಸುಮ್ಮನೆ ಕುಳಿತರೆ, ನಾಳೆ ಈ ಸುಳ್ಳುಗಳು ಸತ್ಯವಾಗಿಬಿಡುತ್ತವೆ. ಆದ್ದರಿಂದಲೇ ನಾನು ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದೇನೆ”, ಎಂದು ಸೆಂಥಿಲ್ ಪ್ರತಿಕ್ರಿಯೆ ನೀಡಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
-
ಬಿಗ್ ನ್ಯೂಸ್20 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್12 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ17 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು20 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized19 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್20 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ18 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್19 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















