ಕಾರ್ಯಕ್ರಮಗಳು
Dharmasthala-ಧರ್ಮಸ್ಥಳದಲ್ಲಿ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮಜಾಗೃತಿ ಸಮಾವೇಶ; ದೇವರ ಅನುಗ್ರಹ, ಧರ್ಮದೇವತೆಗಳ ಅಭಯ ಹಾಗೂ ಅಣ್ಣಪ್ಪಸ್ವಾಮಿಯ ರಕ್ಷಣೆಯಿಂದ ಸಮಸ್ಯೆಗಳು ನಿವಾರಣೆಯಾಗಿವೆ. ಸತ್ಯದ ಸಾಕ್ಷಾತ್ಕಾರವಾಗಿದೆ-ಡಿ. ವೀರೇಂದ್ರ ಹೆಗ್ಗಡೆ
ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮಜಾಗೃತಿ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿದರು.
ಉಜಿರೆ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ, ಧರ್ಮದೇವತೆಗಳ ಅಭಯ ಮತ್ತು ಅಣ್ಣಪ್ಪ ಸ್ವಾಮಿ ರಕ್ಷಣೆಯಿಂದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತಿವೆ. ಸತ್ಯದ ಸಾಕ್ಷಾತ್ಕಾರವಾಗುತ್ತಿದೆ. ಜೊತೆಗೆ ಶಾಂತಿ, ನೆಮ್ಮದಿಯೂ ದೊರಕಿದೆ. ಅಲ್ಲದೆ ಧರ್ಮಸ್ಥಳದ ಭಕ್ತರು ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ ಮತ್ತು ಗೌರವದಿಂದ ನಮಗೆ ಎಲ್ಲಾ ಸೇವಾಕಾರ್ಯಗಳನ್ನು ಮುಂದುವರಿಸಲು ನವಚೈತನ್ಯ ಮತ್ತು ಉತ್ಸಾಹ ಮೂಡಿಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮಜಾಗೃತಿ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಸಮಾವೇಶದಲ್ಲಿ ಭಾಗವಹಿಸಿದ ಎಲ್ಲರಿಗೂ ಹೆಗ್ಗಡೆಯವರು ಧನ್ಯತೆಯಿಂದ ಕೃತಜ್ಞತೆ ಮತ್ತು ಸಂತೋಷ ವ್ಯಕ್ತಪಡಿಸಿದರು. ಇದೀಗ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಪ್ರಕಟವಾಗಿ ಎಲ್ಲರಿಗೂ ಪರಿಚಿತವಾಗಿದೆ.
ನಾನು ಧರ್ಮಾಧಿಕಾರಿಯಾಗಿ “ಹೆಗ್ಗಡೆ” ಪೀಠವನ್ನು ಬಯಸಿದವನಲ್ಲ. ಆದರೆ ಅನಿರೀಕ್ಷಿತವಾಗಿ ತೀರ್ಥರೂಪರ ನಿಧನದಿಂದ ನಾನು ಪಟ್ಟವನ್ನು ಸ್ವೀಕರಿಸಬೇಕಾಯಿತು. ಇಲ್ಲಿ ನಾನು “ನೆಪ” ಮಾತ್ರ. ಎಲ್ಲಾ ಕಾರ್ಯಗಳೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರದೊಂದಿಗೆ, ಧರ್ಮದೇವತೆಗಳ ಆಶಯದಂತೆ ಹಾಗೂ ಅಣ್ಣಪ್ಪ ಸ್ವಾಮಿಯ ರಕ್ಷಣೆಯಿಂದ ಸುಗಮವಾಗಿ ನಡೆಯುತ್ತವೆ. ಪ್ರತೀ ಸಂಕ್ರಮಣದ ದಿನ ನಾನು ಧರ್ಮದೇವತೆಗಳಿಗೆ ವರದಿ ಒಪ್ಪಿಸಬೇಕು. ಆಗ ಅವರು, ತಿಳುವಳಿಕೆ ಇಲ್ಲದೆ ಮಾಡಿದ ತಪ್ಪಿಗೆ ಕ್ಷಮೆ ಇದೆ. ಏನೇ ಆಪತ್ತು, ವಿಪತ್ತು ಬಂದರೂ ಹೆತ್ತ ತಾಯಿಯಂತೆ ನಾವು ರಕ್ಷಣೆ ನೀಡುತ್ತೇವೆ ಎಂದು ಅವರು ಅಭಯ ನೀಡುತ್ತಾರೆ. ಏನಾದರು ತಪ್ಪಾದಲ್ಲಿ ಕೈಯ ಎಣ್ಣೆ ಕಣ್ಣಿಗೆ ತಾಗಿದಂತೆ ಆಗಬಹುದು ಎಂದು ಎಚ್ಚರಿಕೆಯನ್ನೂ ನೀಡುತ್ತಾರೆ ಎಂದು ಹೆಗ್ಗಡೆಯವರು ತಿಳಿಸಿದರು.
ತಮಗೆ ಧರ್ಮಾಧಿಕಾರಿಯಾಗಿ ಪಟ್ಟಾಭಿಷೇಕ ಆದಾಗ ಆರಂಭದಲ್ಲಿಯೂ ಅನೇಕ ಪ್ರತಿಭಟನೆ, ವಿರೋಧಗಳು ವ್ಯಕ್ತವಾಗಿದ್ದವು. ಆದರೆ, ಕುಟುಂಬದ ಎಲ್ಲಾ ಸದಸ್ಯರ ಸಹಕಾರ, ನೌಕರವೃಂದದವರ ಕರ್ತವ್ಯ ನಿಷ್ಠೆ ಹಾಗೂ ಊರಿನ ನಾಗರಿಕರು ಮತ್ತು ಕ್ಷೇತ್ರದ ಅಭಿಮಾನಿಗಳ ಸಹಕಾರದಿಂದ ಎಲ್ಲಾ ಸಮಸ್ಯೆಗಳು ಸುಗಮವಾಗಿ ನಿವಾರಣೆಯಾಗಿವೆ. ಚತುರ್ದಾನ ಪರಂಪರೆಯೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಚಿತ ಸಾಮೂಹಿಕ ವಿವಾಹ, ಮದ್ಯವರ್ಜನ ಶಿಬಿರ, ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳು ಇತ್ಯಾದಿ ಹತ್ತು-ಹಲವು ಸೇವಾ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಯಿತು.
ಇತರ ಊರುಗಳಲ್ಲಿರುವ ಎಲ್ಲಾ ತೀರ್ಥಕ್ಷೇತ್ರಗಳು ಕೂಡಾ ಪವಿತ್ರವಾಗಿದ್ದು ನಿಮ್ಮ ಊರಿನ ಕ್ಷೇತ್ರವನ್ನು, ಅಲ್ಲಿನ ಸಂಪ್ರದಾಯ ಪರಂಪರೆಯ ರಕ್ಷಣೆಯೊಂದಿಗೆ ಪಾವಿತ್ರ ಮತ್ತು ಸ್ವಚ್ಛತೆಯನ್ನೂ ಕಾಪಾಡಿ ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಇಂದು ತಾನು ಸಭೆಗೆ ಬರುವಾಗ “ಹೆಗ್ಗಡೆ” ಯಾಗಿ ಬಂದಿಲ್ಲ. ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಬಂದೆ. ಎಲ್ಲರ ಮುಖದಲ್ಲಿ ಮಂದಹಾಸ ಕಂಡು ನನಗೂ ಸಂತೋಷವಾಗಿದೆ. ತೃಪ್ತಿ ಮತ್ತು ನೆಮ್ಮದಿ ದೊರಕಿದೆ ಎಂದು ಅವರು ಹೇಳಿದರು.
ಬಾರ್ಕೂರಿನ ಹಿರಿಯ ವಿದ್ವಾಂಸ ದಾಮೋದರ ಶರ್ಮಾ ಮಾತನಾಡಿ ಭಕ್ತರಲ್ಲಿಯೂ ಭಗವಂತನನ್ನು ಕಾಣುವ ಹೆಗ್ಗಡೆಯವರು, ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಎಂಬ ಚತುರ್ವಿಧ ದಾನ ಪರಂಪರೆಯನ್ನು ಮುಂದುವರಿಸಿ ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಅನ್ನದಾನದಿಂದ ಕ್ಷೇತ್ರ ಬೆಳಗುತ್ತದೆ, ಬೆಳೆಯುತ್ತದೆ ಎಂದು ತೋರಿಸಿಕೊಟ್ಟಿದ್ದಾರೆ. ಸ್ವಚ್ಛತೆಯಿಂದ ಸಾನ್ನಿಧ್ಯ ವೃದ್ಧಿಯಾಗುತ್ತದೆ ಎಂದೂ ಸಾಧಿಸಿ ತೋರಿಸಿದ್ದಾರೆ.
ಧರ್ಮಸ್ಥಳದ ದಾನ ಪರಂಪರೆ, ಸಮಾಜಮುಖಿ ಸೇವಾ ಕಾರ್ಯಗಳು ವಿಶ್ವಮಾನ್ಯವಾಗಿವೆ. ಹಾಗಾಗಿ ಹೆಗ್ಗಡೆಯವರು ದೇವರು ಮತ್ತು ಮನುಷ್ಯರ ಸೇವೆ ಮಾಡಿ “ದೇವಮಾನವ” ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಯಕ್ಷಗಾನ ಬಯಲಾಟ ಪ್ರದರ್ಶನದ ಮೂಲಕ ಧರ್ಮಜಾಗೃತಿಯನ್ನೂ ಮಾಡುತ್ತಿದ್ದಾರೆ. ಇಲ್ಲಿನ ಸೇವಾಕಾರ್ಯಗಳು ನಮಗೆಲ್ಲರಿಗೂ ಆದರ್ಶ ಹಾಗೂ ಅನುಕರಣೀಯವಾಗಿವೆ. ಧರ್ಮದೇವತೆಗಳು ಹಾಗೂ ಶ್ರೀ ಮಂಜುನಾಥ ಸ್ವಾಮಿಯ ವರ್ಚಸ್ಸನ್ನು ಸಮಾಜನುಖಿ ಸೇವಾಕಾರ್ಯಗಳಲ್ಲಿ ಬಳಸಿ ಎಲ್ಲಾ ಕಾರ್ಯಗಳನ್ನು ಯಶಸ್ವಿಯಾಗಿ ಮಾಡಿದ್ದಾರೆ ಎಂದು ಹೆಗ್ಗಡೆಯವರನ್ನು ಅವರು ಅಭಿನಂದಿಸಿದರು.
ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ಟ ಮಾತನಾಡಿ, ಮುನಿಗಳಂತೆ ಮೌನದಿಂದ ಹೆಗ್ಗಡೆಯವರು ಎಲ್ಲವನ್ನೂ ಜಯಿಸಿದ್ದಾರೆ. ಮೌನದಿಂದ ತನ್ನನ್ನು ತಾನು ತಿಳಿದುಕೊಳ್ಳುವವರಿಗೆ “ಮುನಿ” ಎನ್ನುತ್ತಾರೆ. ಹೆಗ್ಗಡೆಯವರು ಮುನಿಯಂತೆ ಎಲ್ಲವನ್ನೂ ಹಾಗೂ ಎಲ್ಲರನ್ನೂ ಗೆದ್ದಿದ್ದಾರೆ.
ಅವರ ಭಾಷಣ ಮತ್ತು ಲೇಖನವೂ ಅಚ್ಚುಕಟ್ಟಾಗಿದ್ದು ಭೋದಪ್ರದವಾಗಿದೆ. ಧರ್ಮಜಾಗೃತಿಯೊಂದಿಗೆ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೂ ಪ್ರೇರಕವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಒಂದು ದೇವಸ್ಥಾನ ಜೀರ್ಣೋದ್ಧಾರಗೊಳಿಸಿದರೆ ಒಂದು ಅಶ್ವಮೇಧ ಯಾಗ ಮಾಡಿದ ಪುಣ್ಯ ಬರುತ್ತದೆ. ಎಂಬ ನಂಬಿಕೆಯಿದೆ. ಹೆಗ್ಗಡೆಯವರು 350 ಪ್ರಾಚೀನ ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿರುವುದರಿಂದ ಅವರಿಗೆ ೩೫೦ ಅಶ್ವಮೇಧ ಯಾಗ ಮಾಡಿದ ಪುಣ್ಯಸಂಚಯವಾಗಿದೆ ಎಂದು ಹೇಳಿದರು.
ಹೆಗ್ಗಡೆಯವರೊಂದಿಗೆ ಧರ್ಮಸ್ಥಳದ ಪಾವಿತ್ರ ರಕ್ಷಣೆಗೆ ತಾವೆಲ್ಲರೂ ಸದಾ ಬದ್ಧರು ಹಾಗೂ ಸಿದ್ಧರು ಎಂದು ಅವರು ಭರವಸೆ ನೀಡಿದರು.
ವಿದ್ವಾನ್ ನಾಗೇಂದ್ರ ಭಾರದ್ವಾಜ ಮಾತನಾಡಿ ಯಾವುದನ್ನೂ ಕಳೆದುಕೊಳ್ಳುವುದು ಸುಲಭ. ಆದರೆ, ಅದನ್ನು ಪಡೆಯುವುದು ಕಷ್ಟ. ಎಲ್ಲಾ ಕ್ಷೇತ್ರಗಳ ಜೀರ್ಣೋದ್ಧಾರಕ್ಕೆ ಹೆಗ್ಗಡೆಯವರು ಪ್ರಸಾದರೂಪವಾಗಿ ಧರ್ಮಸ್ಥಳದಿಂದ ಪ್ರಥಮ ದಾನವನ್ನು ನೀಡಿ ಪೋತ್ಸಾಹಿಸುತ್ತಾರೆ. ಹಾಗಾಗಿ ನಮ್ಮ ಎಲ್ಲಾ ಕ್ಷೇತ್ರಗಳೂ ಶಕ್ತಿಕೇಂದ್ರಗಳಾಗಿ ಧರ್ಮಸ್ಥಳದ ಜೊತೆಗೆ ಸದಾ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಅವರು ಭರವಸೆ ನೀಡಿದರು.
ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಮಾತನಾಡಿ, ದೇವಸ್ಥಾನದ ರಕ್ಷಣೆ ಕೂಡಾ ಎಲ್ಲರ ಸಾಂವಿಧಾನಿಕ ಹಕ್ಕು ಆಗಿದೆ. ಸತ್ಯಕ್ಕೆ ಸದಾ ಜಯವಿದೆ ಎಂಬುದು ನಮಗೆ ಈಗ ಅನುಭವಕ್ಕೆ ಬಂದಿದೆ. ಹಿಂದೂಗಳ ಸಾಮೂಹಿಕ ಮೌನದಿಂದಲೇ ಅಪಪ್ರಚಾರ ಮಾಡುವವರಿಗೆ ನಾವು ಎಚ್ಚರಿಕೆಯನ್ನು ಕೊಡುತ್ತೇವೆ. ಇಲ್ಲವಾದಲ್ಲಿ ಮುಂದಿನ ಸಮಸ್ಯೆಗಳನ್ನು ಅವರು ಎದುರಿಸಬೇಕಾಗುತ್ತದೆ.
“ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ನೆನಪಿರಲಿ ಎಂದು ಅವರು ಸೂಚ್ಯವಾಗಿ ತಿಳಿಸಿದರು.
ಕಟೀಲು ದೇವಸ್ಥಾನದ ಲಕ್ಷ್ಮೀನಾರಾಯಣ ಅಸ್ರಣ್ಣರು ಮಾತನಾಡಿ, ನಾವು ದೇವರನ್ನು ದೃಢಭಕ್ತಿಯಿಂದ ಆರಾಧಿಸಿದರೆ ದೇವರು ನಮ್ಮನ್ನು ಸದಾ ರಕ್ಷಣೆ ಮಾಡುತ್ತಾರೆ. ದೇವಿಮಹಾತ್ಮೆ ಪಸ್ರಂಗದಂತೆ ಸಾಮೂಹಿಕ ಪ್ರಾರ್ಥನೆಗೆ ಹೆಚ್ಚಿನ ಶಕ್ತಿ ಇರುತ್ತದೆ. ಧರ್ಮಕ್ಕೆ ಚ್ಯುತಿ ಬಂದಾಗ ಪರಮಾತ್ಮ ಪ್ರತ್ಯಕ್ಷನಾಗಿ ಭಕ್ತರನ್ನು ಎಚ್ಚರಿಸುತ್ತಾನೆ. ನಾವೆಲ್ಲರೂ ಸಂಘಟಿತರಾಗಿ ಧರ್ಮಸ್ಥಳದ ರಕ್ಷಣೆಗೆ ಸಹಕರಿಸಬೇಕು ಎಂದು ಅವರು ಸಲಹೆ ನೀಡಿದರು. ಹಿಂದೂಧರ್ಮ, ಜೈನಧರ್ಮ ಮತ್ತು ಬೌದ್ಧಧರ್ಮ ಎಲ್ಲವೂ ಪರಸ್ಪರ ಪೂರಕವಾಗಿದ್ದು ಅವುಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ ಅಂದು ಅವರು ಅಭಿಪ್ರಾಯಪಟ್ಟರು.

ಹೇಮಾವತಿ ವಿ. ಹೆಗ್ಗಡೆ, ಶ್ರದ್ಧಾಅಮಿತ್, ಡಿ. ಹರ್ಷೇಂದ್ರ ಕುಮಾರ್, ಸೋನಿಯಾವರ್ಮ ಉಪಸ್ಥಿತರಿದ್ದರು. ಉಡುಪಿ, ದಕ್ಷಿಣಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಎಲ್ಲಾ ಧಾರ್ಮಿ ಕ್ಷೇತ್ರಗಳು, ದೈವಸ್ಥಾನಗಳು ಮತ್ತು ಶ್ರದ್ಧಾಕೇಂದ್ರಗಳ ಮುಖಂಡರು ಹಾಗೂ ಧಾರ್ಮಿಕ ಪರಿಷತ್ತಿನ ಸದಸ್ಯರು ಸೇರಿದಂತೆ ಸುಮಾರು ಆರು ಸಾವಿರ ಮಂದಿ ಸಭಾಸದರು ಉಪಸ್ಥಿತರಿದ್ದರು. ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ಮೊದಲಾದವರು ಇದ್ದರು. ಪ್ರೊ. ಸುವೀರ್ ಕುಮಾರ್ ಸಭೆಯಲ್ಲಿ ತೆಗೆದುಕೊಂಡ ಠರಾವನ್ನು ಮಂಡಿಸಿದರು. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಎಸ್.ಡಿ.ಎಮ್. ಕಾಲೇಜಿನ ಉಪನ್ಯಾಸಕ ಡಾ. ಶ್ರೀಧರ ಭಟ್ ಕೊನೆಯಲ್ಲಿ ಧನ್ಯವಾದವಿತ್ತರು.

ಧರ್ಮಜಾಗೃತಿ ಸಮಾವೇಶದಲ್ಲಿ ಮಂಡಿಸಿದ ಠರಾವುಗಳು:
- ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಹಾಗೂ ಹೆಗ್ಗಡೆಯವರ ತೆಜೋವಧೆ ಬಗ್ಗೆ ರೂಪಿಸಿದ ಷಡ್ಯಂತ್ರಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ನ್ಯಾಯಯುತ ತನಿಖೆಗೆ ಅನುಕೂಲ ಮಾಡಿಕೊಟ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹಸಚಿವರು ಹಾಗೂ ಎಸ್.ಐ.ಟಿ. ತಂಡದ ಎಲ್ಲಾ ಆಧಿಕಾರಿಗಳಿಗೆ ಧನ್ಯವಾದ ಸಲ್ಲಿಸಲು ನಿರ್ಧರಿಸಲಾಯಿತು.
- ಸಾಮಾಜಿಕ ಜಾಲತಾಣಗಳು ಹಾಗು ದೃಶ್ಯಮಾಧ್ಯಮಗಲ್ಲಿ ಆಗುತ್ತಿರುವ ಸುಳ್ಳುಸುದ್ದಿಯ ಪ್ರಸಾರವನ್ನು ತಡೆಗಟ್ಟಿ ಸರ್ಕಾರ ಕಠಿನ ಕ್ರಮ ಕೈಗೊಳ್ಳಬೇಕು.
- ಶ್ರದ್ಧಾಕೇಂದ್ರಗಳು ಹಾಗೂ ಧಾರ್ಮಿಕ ನಂಬಿಕೆಗಳ ವಿರುದ್ಧ ಹೇಳಿಕೆ ನೀಡಿ ಶಾಂತಿಭಂಗ ಮಾಡುತ್ತಿರುವ ಸಂಘ-ಸಂಸ್ಥೆಗಳ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು.
- ಮುಂದೆ ಇಂತಹ ವ್ಯವಸ್ಥಿತ ಷಡ್ಯಂತ್ರಗಳು ನಡೆದರೆ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಸಂಘಟಿತ ಹೋರಾಟ ನಡೆಸಲಾಗುವುದು.
- ಇಂತಹ ಸಂಚುಗಳು ಆಗಾಗ ನಡೆಯುತ್ತಿರುವುದರಿಂದ ಧರ್ಮಸಂರಕ್ಷಣಾ ಸಮಿತಿಯನ್ನು ಬಲಪಡಿಸಿ ವರ್ಷಕ್ಕೆ ಒಂದು ಬಾರಿ ಇಂತಹ ಸಮಾವೇಶವನ್ನು ಅಲ್ಲಲ್ಲಿ ಆಯೋಜಿಸಬೇಕು.
- ಎಲ್ಲರೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ ದೃಢಸಂಕಲ್ಪದಿಂದ ನಿಂತು ಧರ್ಮ ಸಂರಕ್ಷಣೆಯನ್ನು ಮಾಡಲು ಕಟಿಬದ್ಧರಾಗಿರುತ್ತೇವೆ ಎಂದು ನಿರ್ಧರಿಸಲಾಯಿತು.
- ಠರಾವಿನ ಪ್ರತಿಯನ್ನು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ, ಗೃಹಸಚಿವರು ಮತ್ತು ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರಿಗೆ ಕಳುಹಿಸಲು ನಿರ್ಧರಿಸಲಾಯಿತು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
-
ಬಿಗ್ ನ್ಯೂಸ್10 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ8 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ9 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ9 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಸಿನೆಮಾ8 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ8 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಮಂಗಳೂರು3 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸ್ಥಳೀಯ9 hours agoBail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು















