Uncategorized
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸೌಜನ್ಯಳ ಮಾವ ವಿಠಲಗೌಡ ಬಂಗ್ಲಗುಡ್ಡ ಕಾಡಿಗೆ ಕರೆದೊಯ್ದ SIT – ಕಾರಣವೇನು ಗೊತ್ತೇ ?

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳು ಕಂಡುಬಂದಿದ್ದು, ರಾಜ್ಯ ವಿಶೇಷ ತನಿಖಾ ದಳ (SIT) ತನಿಖೆಯನ್ನು ತೀವ್ರಗೊಳಿಸಿದೆ. ಈ ಹಿಂದೆ ಚಿನ್ನಯ್ಯನನ್ನು ಬಂಧಿಸಿದ್ದ SIT, ಇದೀಗ ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿದೆ.
ಬಂಗ್ಲಗುಡ್ಡೆ ಕಾಡಿನಲ್ಲಿ ಮತ್ತೊಮ್ಮೆ ಸ್ಥಳ ಪರಿಶೀಲನೆ
SIT ತಂಡವು ಮತ್ತೆ ಬಂಗ್ಲಗುಡ್ಡೆ ಕಾಡಿನ ಬಳಿ ಸ್ಥಳ ಪರಿಶೀಲನೆ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ, ಬಂಗ್ಲಗುಡ್ಡೆ ಕಾಡಿನಲ್ಲೇ ಬುರುಡೆ ತೆಗೆದಿದ್ದಾಗಿ ತಿಳಿದುಬಂದಿದೆ. ಆದರೆ, ಈ ಕಾರ್ಯದಲ್ಲಿ ಚಿನ್ನಯ್ಯನ ಜೊತೆ ಸೌಜನ್ಯ ಅವರ ಮಾವ ವಿಠಲಗೌಡ ಕೂಡ ಇದ್ದ ಎಂಬ ಮಾಹಿತಿ ಲಭ್ಯವಾಗಿದೆ.ಹೀಗಾಗಿ ಅವರನ್ನು ಕೂಡ ಎಸ್ ಐಟಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಠಲಗೌಡನ ತೀವ್ರ ವಿಚಾರಣೆ
SIT ತಂಡವು ವಿಠಲಗೌಡನನ್ನು ಬಂಗ್ಲಗುಡ್ಡೆ ಕಾಡಿನ ಬಳಿಗೆ ಕರೆತಂದು ತೀವ್ರ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ, ತಾನು ಚಿನ್ನಯ್ಯನ ಜೊತೆ ಕಾಡಿಗೆ ಬಂದಿದ್ದನ್ನು ಮತ್ತು ಬುರುಡೆಯನ್ನು ಚಿನ್ನಯ್ಯನೇ ತೆಗೆದಿದ್ದನ್ನು ವಿಠಲಗೌಡ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಚಿನ್ನಯ ಗುರುತಿಸಿದ ಸ್ನಾನಘಟ್ಟ, ಉತ್ಖನನ ನಡೆಸಿದ ಪಾಯಿಂಟ್ ಗಳಾದ 9, 10, 11, 12 ನೇ ಪಾಯಿಂಟ್ ನ ಆಸುಪಾಸಿನಲ್ಲಿ ವಿಠಲ ಗೌಡರವರನ್ನು ಎಸ್ ಐಟಿ ಪೊಲೀಸರು ಕರೆದುಕೊಂಡು ಹೋಗಿದ್ದಾರೆ
ಪ್ರಕರಣದ ಹಿನ್ನೆಲೆ
ಧರ್ಮಸ್ಥಳದಲ್ಲಿ ಪತ್ತೆಯಾದ ಬುರುಡೆ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿತ್ತು. ಈ ಪ್ರಕರಣವನ್ನು ಭೇದಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳವನ್ನು ರಚಿಸಿತ್ತು. SIT ತಂಡ ಈ ಹಿಂದೆ ಚಿನ್ನಯ್ಯನನ್ನು ಬಂಧಿಸಿತ್ತು. ಈಗ ವಿಠಲಗೌಡನ ವಿಚಾರಣೆಯೊಂದಿಗೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಮುಂದಿನ ಹೆಜ್ಜೆ
SIT ತಂಡ ವಿಠಲಗೌಡನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಹಿಂದಿರುವ ಇನ್ನಷ್ಟು ಸತ್ಯಗಳನ್ನು ಹೊರತೆಗೆಯಲು ಪ್ರಯತ್ನಿಸುತ್ತಿದೆ. ಮತ್ತೊಬ್ಬ ಆರೋಪಿಯ ಬಂಧನಕ್ಕಾಗಿ SIT ಕಾರ್ಯಾಚರಣೆ ಮುಂದುವರಿಸಿದೆ. ಈ ಪ್ರಕರಣದ ಸಂಪೂರ್ಣ ಸತ್ಯ ಹೊರಬರಲು ಇನ್ನಷ್ಟು ಸಮಯ ಬೇಕಾಗಬಹುದು
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.
ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.
ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.
-
ಬಿಗ್ ನ್ಯೂಸ್20 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ22 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ4 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ3 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ3 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ3 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ3 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized6 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















