ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ ಚಿನ್ನಯ್ಯ, […]" /> ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ ಚಿನ್ನಯ್ಯ, […]"> INSIDE STORY | ಚಿನ್ನಯ್ಯ ತಂದ ಬುರುಡೆ ಬಂಗ್ಲೆಗುಡ್ಡೆದ್ದೆ..! ತಂದಿರೋದು ಚಿನ್ನಯ್ಯನೇ ?! ಬುರುಡೆ ತೆಗೆಯುವ ವಿಡಿಯೋ ಎಸ್ಐಟಿಗೆ ಹಸ್ತಾಂತರ..? ವಿಠಲ ಗೌಡರ ಪಾತ್ರವೇನೂ..?  ಬಂಧನ ಸಾಧ್ಯತೆ - Nikhara News | Kannada News Website
Connect with us

Uncategorized

INSIDE STORY | ಚಿನ್ನಯ್ಯ ತಂದ ಬುರುಡೆ ಬಂಗ್ಲೆಗುಡ್ಡೆದ್ದೆ..! ತಂದಿರೋದು ಚಿನ್ನಯ್ಯನೇ ?! ಬುರುಡೆ ತೆಗೆಯುವ ವಿಡಿಯೋ ಎಸ್ಐಟಿಗೆ ಹಸ್ತಾಂತರ..? ವಿಠಲ ಗೌಡರ ಪಾತ್ರವೇನೂ..?  ಬಂಧನ ಸಾಧ್ಯತೆ

Published

on

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನೂರಾರು ಶವಗಳನ್ನು ಹೂತಿಟ್ಟುರುವುದಾಗಿ ಅನಾಮಿಕ (ಚಿನ್ನಯ್ಯ) ವ್ಯಕ್ತಿಯೊಬ್ಬ ನೀಡಿದ ದೂರಿನ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಮಹತ್ವದ ಯಶಸ್ಸು ಸಾಧಿಸಿದೆ. ಈ ಪ್ರಕರಣದ ಪ್ರಮುಖ ಸಾಕ್ಷ್ಯವಾಗಿದ್ದ, ನ್ಯಾಯಾಲಯಕ್ಕೆ ಸಲ್ಲಿಸಿದ್ದ ತಲೆಬುರುಡೆಯ ಮೂಲವನ್ನು ಎಸ್ಐಟಿ ಭೇದಿಸಿದ್ದು, ಸೌಜನ್ಯಾ ಅವರ ಮಾವ ವಿಠಲಗೌಡರ ಪಾತ್ರವನ್ನು ಬಯಲಿಗೆಳೆದಿದೆ.

Ad Widget

Ad Widget

Ad Widget

Ad Widget
Ad Widget

Ad Widget alt="Ad Widget"/>

Ad Widget

ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ ಚಿನ್ನಯ್ಯ, ಬೆಳ್ತಂಗಡಿ ನ್ಯಾಯಾಲಯದಲ್ಲಿ ಸ್ವಇಚ್ಛಾ ಹೇಳಿಕೆ (BNSS 183ರಂತೆ) ನೀಡಿ, ಸಾಕ್ಷ್ಯವಾಗಿ ಒಂದು ತಲೆಬುರುಡೆಯನ್ನು ಸಲ್ಲಿಸಿದ್ದರ. ಈ ಬುರುಡೆ ತಂದ ಸ್ಥಳದ ಬಗ್ಗೆ ಎಸ್ಐಟಿ ವಿಚಾರಣೆ ನಡೆಸಿದಾಗ ಚಿನ್ನಯ್ಯ ಹಲವು ರೀತಿಯ ಗೊಂದಲಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಚಿನ್ನಯ್ಯ ಒಮ್ಮೆ ಲ್ಯಾಬ್ನಿಂದ, ಇನ್ನೊಮ್ಮೆ ಮಹೇಶ್ ಶೆಟ್ಟಿ ತಿಮರೋಡಿ ಅವರ ತೋಟದಿಂದ ತಂದಿರುವುದಾಗಿ ಹೇಳಿಕೆ ಬದಲಾಯಿಸಿದ್ದ. ತಾನು ನ್ಯಾಯಾಲಯದಲ್ಲಿ ನೀಡಿದ ಸ್ವಇಚ್ಛಾ ಹೇಳಿಕೆಗೆ ವಿರುದ್ಧವಾಗಿ ವಿಚಾರಣೆ ವೇಳೆ ಹೇಳಿಕೆಗಳನ್ನು ಬದಲಾಯಿಸಿದ್ದರಿಂದ ಅಲ್ಲಿಯವರೆಗೆ ಸಾಕ್ಷಿ ದೂರುದಾರನಾಗಿದ್ದ ಆತನನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿಸಿ 10ಕ್ಕೂ ಹೆಚ್ಚು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಅಲ್ಲದೆ, ತಿಮರೋಡಿ ಅವರ ತೋಟದಲ್ಲಿ ಶೋಧ ಕಾರ್ಯ ನಡೆಸಿ, ಮಣ್ಣಿನ ಮಾದರಿಗಳನ್ನು FSLಗೆ ಕಳುಹಿಸಲಾಗಿತ್ತು

Ad Widget

Ad Widget <> Ad Widget

ಈ ಬುರುಡೆಯೊಂದಿಗೆ ಚಿನ್ನಯ್ಯ ದೆಹಲಿಯಲ್ಲಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದ ವಿಚಾರ ತನಿಖೆಯಲ್ಲಿ ಬಹಿರಂಗವಾಗಿದೆ. ಈ ವೇಳೆ ಬೆಂಗಳೂರಿನಲ್ಲಿ ಹೋರಾಟಗಾರ ಜಯಂತ್ ಟಿ. ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ. ಎಸ್ಐಟಿ ಜಯಂತ್ ಅವರನ್ನು ವಿಚಾರಿಸಿದಾಗ, ಗಿರೀಶ್ ಮಟ್ಟಣನವರ್ ಚಿನ್ನಯ್ಯನನ್ನು ಪರಿಚಯಿಸಿದ್ದಾಗಿ ಮಾಹಿತಿ ನೀಡಿದ್ದರು ಎಂದು ಎಸ್ಐಟಿ ಮೂಲಗಳಿಂದ ತಿಳಿದುಬಂದಿದೆ.

Ad Widget

Ad Widget

ಮೂಲಗಳ ಪ್ರಕಾರ, ಇದಾದ ಬಳಿಕ ಎಸ್ಐಟಿ ಗಿರೀಶ್ ಮಟ್ಟಣನವರ್ ಅವರನ್ನು ವಿಚಾರಣೆಗೆ ಒಳಪಡಿಸಿತು. ಈ ವೇಳೆ, ಬುರುಡೆ ಲ್ಯಾಬ್ನಿಂದಾಗಲೀ, ಮಹೇಶ್ ಶೆಟ್ಟಿ ತಿಮರೋಡಿ ಅವರ ತೋಟದಿಂದಾಗಲೀ ಅಥವಾ ಬೇರೆ ಯಾವುದೇ ಮೂಲದಿಂದ ಬಂದಿದ್ದಲ್ಲ ಎಂಬುದು ಖಚಿತವಾಯಿತು. ಗಿರೀಶ್ ಮಟ್ಟಣನವರ್, ಬಂಗ್ಲಗುಡ್ಡ ಕಾಡಿನಿಂದ ಬುರುಡೆ ತರುವಾಗ ಚಿನ್ನಯ್ಯನಿಗೆ ಸೌಜನ್ಯಾ ಅವರ ಮಾವ ವಿಠಲಗೌಡ ಸಹಾಯ ಮಾಡಿದ್ದ ವಿಚಾರವನ್ನು ಎಸ್ಐಟಿಗೆ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಬುರುಡೆ ತೆಗೆಯುವ ವೇಳೆ ಮಾಡಿಕೊಂಡಿದ್ದ ತಾಂತ್ರಿಕ ಹಾಗೂ ವಿಡಿಯೋ ದಾಖಲೆಗಳನ್ನು ಕೂಡ ಎಸ್ಐಟಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಸ್ಐಟಿ ಮೂಲಗಳ ಪ್ರಕಾರ, ಮಟ್ಟಣನವರ್ ಅವರ ಮಾಹಿತಿಯ ಆಧಾರದಲ್ಲಿ, ಎಸ್ಐಟಿ ವಿಠಲಗೌಡ ಮತ್ತು ಚಿನ್ನಯ್ಯನನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ಈ ವೇಳೆ, 2014ರಲ್ಲಿ ಧರ್ಮಸ್ಥಳ ತೊರೆದ ನಂತರವೂ ಚಿನ್ನಯ್ಯ ಮತ್ತು ವಿಠಲಗೌಡರ ನಡುವೆ ಸಂಪರ್ಕವಿತ್ತು. ವಿಠಲಗೌಡರ ಹೋಟೆಲ್ಗೆ ಚಿನ್ನಯ್ಯ ನಿತ್ಯ ಗ್ರಾಹಕರಾಗಿದ್ದರು. ಬುರುಡೆ ಕಥೆ ಆರಂಭವಾಗಿದ್ದು ವಿಠಲಗೌಡರ ಸಮ್ಮುಖದಲ್ಲೇ ಎಂಬ ಸ್ಫೋಟಕ ಸತ್ಯವನ್ನು ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸುವ 2-3 ತಿಂಗಳ ಹಿಂದೆ ಕಾನೂನು ತಜ್ಞರ ಸಲಹೆಯ ಮೇರೆಗೆ ಚಿನ್ನಯ್ಯ ಬುರುಡೆ ತೆಗೆಯಲು ಬಂಗ್ಲಗುಡ್ಡೆ ಕಾಡಿಗೆ ಹೋಗಲು ಸಿದ್ಧವಾಗಿದ್ದು, ಈ ವೇಳೆ ವಿಠಲಗೌಡರವರನ್ನು ಆ ಜಾಗಕ್ಕೆ ಕರೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. “ನನ್ನ ಜೊತೆ ಇರಿ, ನಾನೇ ಬುರುಡೆ ತರುತ್ತೇನೆ” ಎಂದು ಚಿನ್ನಯ್ಯ ಹೇಳಿದ್ದು, ವಿಠಲಗೌಡರು ಕೇವಲ ಚಿನ್ನಯ್ಯನ ಜೊತೆ ಹೋಗಿದ್ದರೇ ವಿನಃ, ಬುರುಡೆಯನ್ನು ಮುಟ್ಟಿರಲಿಲ್ಲ ಎನ್ನಲಾಗಿದೆ. ಹೀಗಾಗಿ ವಿಠಲಗೌಡರವರು ಈ ಪ್ರಕರಣದಲ್ಲಿ ತಾವು ಸೇಫ್ ಅಂದುಕೊಂಡಿದ್ದರು. ಆದರೆ, ಬುರುಡೆ ತಂದ ರಹಸ್ಯವನ್ನು ಚಿನ್ನಯ್ಯ ಎಸ್ಐಟಿಯಿಂದ ಮುಚ್ಚಿಟ್ಟಿದ್ದರಿಂದ, ಎಸ್ಐಟಿ ಅದರ ಮೂಲವನ್ನು ಕೆದಕಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಹೋರಾಟಗಾರರ ವಿಚಾರಣೆ ನಡೆಸಿದಾಗ ವಿಠಲಗೌಡರು ಸಾಥ್ ನೀಡಿದ ವಿಚಾರ ಬೆಳಕಿಗೆ ಬಂದಿದ್ದು, ಇದೀಗ ಅವರಿಗೂ ಕಾನೂನಿನ ಸಂಕಷ್ಟ ಎದುರಾಗಿದೆ.

ವಿಠಲಗೌಡರ ಬಂಧನ ಸಾಧ್ಯತೆ?

ಶನಿವಾರ ರಾತ್ರಿ ಮಧ್ಯರಾತ್ರಿಯವರೆಗೂ ವಿಠಲಗೌಡರನ್ನು ಎಸ್ಐಟಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ಇಂದು ಕೂಡ ವಿಚಾರಣೆ ಮುಂದುವರಿಯಲಿದೆ. ವಿಠಲಗೌಡರ ಪಾತ್ರಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳು ದೊರೆತಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ಪ್ರಕರಣದ ಸಂಪೂರ್ಣ ಸತ್ಯ ಇನ್ನಷ್ಟೇ ಬಯಲಾಗಬೇಕಿದೆ. ಈ ಬುರುಡೆ ತೆಗೆಯುವ ವೇಳೆ ಚಿನ್ನಯ ಹಾಗೂ ವಿಠಲ ಗೌಡರ ಜತೆಗೆ ಇನ್ನೊರ್ವ ವಿಡಿಯೋಗ್ರಾಫರ್‌ ಕೂ ಇದ್ದರು ಎನ್ನಲಾಗುತ್ತಿದ್ದು, ಅವರನ್ನು ಕೂಡ ಎಸ್‌ ಐಟಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.

Ad Widget
Click to comment

Leave a Reply

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

Uncategorized

Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget <> Ad Widget

ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.

ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಈ ನಡುವೆ ತನಿಖಾಧಿಕಾರಿ ಲೋಕೇಶ್ ಹಾಗೂ ಸಹ ತನಿಖಾಧಿಕಾರಿ ಮನೋಜ್ ನಾಯ್ಕ್ ಅವರು ಕೂಡ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!