Connect with us

Uncategorized

Bantwal illegal religious building loudspeaker Azan fake news case ಬಂಟ್ವಾಳ: ಅನಧಿಕೃತ ಧಾರ್ಮಿಕ ಕಟ್ಟಡದಲ್ಲಿ ಪರವಾನಗಿ ರಹಿತವಾಗಿ ಧ್ವನಿವರ್ಧಕ ಬಳಸಿ ಅಜಾನ್ ಕೂಗಿದ ಆರೋಪ; ಪ್ರಕರಣ ದಾಖಲು; ಪೊಲೀಸರ ಕಾರ್ಯಾಚರಣೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧವೂ ಕೇಸ್

Published

on

Ad Widget

Ad Widget

Ad Widget

Ad Widget

Bantwal illegal religious building loudspeaker Azan fake news case ಬಂಟ್ವಾಳ : ಸೆ 8 : ಇಲ್ಲಿನ  ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡದಲ್ಲಿ ಧ್ವನಿವರ್ಧಕಗಳ ದುರ್ಬಳಕೆ ಹಾಗೂ ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ನಿರ್ದಿಷ್ಟ ಪ್ರಮಾಣಕ್ಕಿಂತ ಹೆಚ್ಚು ಶಬ್ದದಲ್ಲಿ ದಿನಕ್ಕೆ ಐದು ಬಾರಿ ಅಜಾನ್ ಕೂಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ದೂರಿನನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಪುಂಚಮೆಯಲ್ಲಿ ಇಸಾಕ್ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ, ಇತ್ತೀಚೆಗೆ ಅನಧಿಕೃತ ಧಾರ್ಮಿಕ ಕೇಂದ್ರವೊಂದು ನಿರ್ಮಾಣವಾಗಿದೆ.  ಇಲ್ಲಿ  ಯಾವುದೇ ಪರವಾನಿಗೆಯನ್ನು ಪಡೆಯದೇ ಧ್ವನಿವರ್ಧಕವನ್ನು ಅಳವಡಿಸಿಕೊಂಡು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ 05 ಬಾರಿಯಂತೆ  ಅಜಾನ್ ಕೂಗುವುದರಿಂದ ಸುತ್ತಮುತ್ತಲಿನ ಪರಿಸರದಲ್ಲಿರುವ ಜನರಿಗೆ ತೊಂದರೆಯಾಗುತ್ತಿದ್ದು, ಈ ಮೂಲಕ ಧ್ವನಿವರ್ಧಕಗಳ ಬಳಕೆಯ ಬಗೆಗಿನ ಕಾನೂನನ್ನು ಉಲ್ಲಂಘಿಸಿರುತ್ತಾರೆ. ಇದರಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿರುವುದಾಗಿ  ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಕೆಯಾಗಿತ್ತು.

Ad Widget

Ad Widget alt="Ad Widget"/>

Ad Widget

ದೂರಿನನ್ವಯ, ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು, ಸೆಪ್ಟೆಂಬರ್ 6ರಂದು ಕಲಂ 37, 92(ಐ), 109 ಕೆಪಿ ಕಾಯ್ದೆ ಹಾಗೂ 292 ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget <> Ad Widget

ಧ್ವನಿವರ್ಧಕ ಬಳಸಲು 2 ವರ್ಷಗಳ ಪರವಾನಗಿ ನೀಡಿದರೂ ಹಿಂದೂ ಪರ ಸಂಘಟನೆಗಳ ಒತ್ತಡಕ್ಕೆ ಮಣಿದು ಪರವಾನಗಿಯನ್ನು ರದ್ದುಪಡಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಅವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗುವುದಕ್ಕೆ ಮೊದಲು ಸೂಕ್ತ ನಿಯಮಾವಳಿಗಳನ್ನು ಬಳಸಿರುವ ಬಗ್ಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕಟನೆಯಲ್ಲಿ ಏನಿದೆ ?

Ad Widget

Ad Widget
  • ಜುಲೈ 31: ಅಕ್ರಮ ಕಟ್ಟಡ ನಿರ್ಮಾಣ ಮತ್ತು ಧ್ವನಿವರ್ಧಕದ ದುರುಪಯೋಗಕ್ಕಾಗಿ ಗ್ರಾಮ ಪಂಚಾಯಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಅದೇ ದಿನ, ಅಕ್ರಮ ಕಟ್ಟಡಕ್ಕೆ ನೀಡಿರುವ ಧ್ವನಿವರ್ಧಕ ಪರವಾನಗಿಯನ್ನು ರದ್ದುಗೊಳಿಸುವಂತೆ ಗ್ರಾಮ ಪಂಚಾಯಿತಿಯಿಂದ ಪೊಲೀಸರಿಗೆ ಪತ್ರ ರವಾನಿಸಲಾಗಿತ್ತು.
  • ಆಗಸ್ಟ್ 13: ಪೊಲೀಸರಿಗೆ ತಪ್ಪು ಮಾಹಿತಿ ನೀಡಿರುವುದು ಮತ್ತು ಪರವಾನಗಿ ನೀಡಲಾದ ಉದ್ದೇಶಗಳನ್ನು ಹೊರತುಪಡಿಸಿ ಬೇರೆ ಉದ್ದೇಶಗಳಿಗಾಗಿ ಧ್ವನಿವರ್ಧಕವನ್ನು ಬಳಸಿದ ಹಿನ್ನೆಲೆಯಲ್ಲಿ ಬಂಟ್ವಾಳ ಉಪಾಧೀಕ್ಷಕರು ಧ್ವನಿವರ್ಧಕ ಬಳಕೆಯ ಪರವಾನಗಿಯನ್ನು ರದ್ದುಗೊಳಿಸಿದರು.
  • ಸೆಪ್ಟೆಂಬರ್ 6: ಧ್ವನಿವರ್ಧಕದ ಅಕ್ರಮ ಬಳಕೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
  • ಸೆಪ್ಟೆಂಬರ್ 7: ಈ ಘಟನೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಮತ್ತೊಂದು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Ad Widget
Click to comment

Leave a Reply

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

Uncategorized

Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget <> Ad Widget

ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.

ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಈ ನಡುವೆ ತನಿಖಾಧಿಕಾರಿ ಲೋಕೇಶ್ ಹಾಗೂ ಸಹ ತನಿಖಾಧಿಕಾರಿ ಮನೋಜ್ ನಾಯ್ಕ್ ಅವರು ಕೂಡ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!