ಬಿಗ್ ನ್ಯೂಸ್
ಪುತ್ತೂರು ರೈಲ್ವೆ ಅಂಡರ್ʼ ಪಾಸ್ʼಗೆ ಶಿಲಾನ್ಯಾಸ – 4 ತಿಂಗಳಲ್ಲಿ ಪೂರ್ಣಗೊಳ್ಳುವ ಭರವಸೆ
ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ ಖಾತೆ ಸಚಿವ ಎಸ್ ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ರೈಲ್ವೆ ಲೆವಲ್ ಕ್ರಾಸಿಂಗ್ ಸಮೀಪ ಗುದ್ದಲಿ ಪೂಜೆ ನೆರವೇರಿಸಲಾಯಿತು
ಪುತ್ತೂರು : ಮೇ 23: ನಾನು ಕೇಂದ್ರ ರೈಲ್ವೆ ಖಾತೆ ಸಚಿವನಾಗಿದ್ದ ಸಂದರ್ಭ ದೇಶದ ಮೂಲೆ ಮೂಲೆ ರೈಲ್ವೆ ಗೇಟ್ಗಳ ಬಗ್ಗೆ ಮಾಹಿತಿ ಪಡೆದು ಅಗತ್ಯವಿರುವ ಸ್ಥಳಗಳಲ್ಲಿ ರೈಲ್ವೆ ಅಂಡರ್ಪಾಸ್ ನಿರ್ಮಾಣ ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಮ ಸಹಭಾಗಿತ್ವದಲ್ಲಿ ಯೋಜನೆ ರೂಪಿಸಲಾಗಿದ್ದು, ರೈಲ್ಚೆ ಗೇಟ್ ಮುಕ್ತ ಸಂಚಾರಕ್ಕೆ ಆಧ್ಯತೆ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ಮಾಜಿ ಸಚಿವ ಡಿ.ವಿ ಸದಾನಂದ ಗೌಡ ಹೇಳಿದರು.
ಕಳೆದ 15 ವರ್ಷಗಳಿಂದ ಪುತ್ತೂರು ನಗರದ ಬಹು ಮುಖ್ಯ ಬೇಡಿಕೆ ಎಂದೆ ಪರಿಗಣಿತವಾಗಿದ್ದ ಪುತ್ತೂರು ಹಾಗೂ ಎಪಿಎಂಸಿ ಸಂಪರ್ಕ ರಸ್ತೆಯಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ನಲ್ಲಿ ಅಂಡರ್ ಪಾಸ್ ಯೋಜನೆಗೆ ಮೇ 21 ರಂದು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ನೈಋತ್ಯ ರೈಲ್ವೆಯ ಮೈಸೂರು ವಿಭಾಗ, ಪುತ್ತೂರು ಎಪಿಎಂಸಿ ಜಂಟಿ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮ ಇದಾಗಿದ್ದು, 11.56 ಕೋಟಿ ರೂ.ಗಳ ಈ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳ 50- 50 ಅನುಪಾತದಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಅಂಡರ್ಪಾಸ್ ನಿರ್ಮಿಸಬೇಕೆಂಬ ಬೇಡಿಕೆ 15 ವರ್ಷಗಳ ಹಿಂದಿನಿಂದಲೇ ಇದ್ದು, ಈಗ ಕೈಗೂಡುತ್ತಿದೆ.

“ ರೈಲ್ವೆ 50 ಶೇ. ಹಣ ಭರಿಸುತ್ತದೆ. ಉಳಿದರ್ಧವನ್ನು ರಾಜ್ಯ ಮೂಲಭೂತ ಸೌಕರ್ಯ ಇಲಾಖೆ ನೀಡಲಿದೆ. ರಾಜ್ಯದ ಪಾಲನ್ನು ರೈಲ್ವೆಗೆ ನೀಡಲಿದೆ. ಕಾಮಗಾರಿಯನ್ನು ರೈಲ್ವೆಯೇ ನಡೆಸಲಿದೆ. 4 ತಿಂಗಳಲ್ಲಿ ಕೆಲಸ ಮುಗಿಯುವ ಗುರಿ ಹೊಂದಲಾಗಿದೆ. ಅಗತ್ಯ ಬಿದ್ದರೆ ಕಾಮಗಾರಿ ಸಂದರ್ಭ ರಸ್ತೆ ಸಂಚಾರ ನಿರ್ಭಂಧಿಸಲು ಅನುಮತಿ ಪಡೆಯಲಾಗಿದೆ ಎಂದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ 157 ಎಪಿಎಂಸಿಗಳಿದ್ದು, ಕಳೆದ ವರ್ಷ ಸಬಾರ್ಡ್ ಮೂಲಕ 200ಕೋ.ರೂಗಳನ್ನು ಸಾಲವಾಗಿ ಪಡೆದು ಮೂಲಭೂತ ಸೌಕರ್ಯ ವೃದ್ಧಿಸಲಾಗಿದೆ. ಪ್ರಸ್ಥುತ 300ಕೋಟಿ ರೂ. ಬೇಡಿಕೆಯಿಡಲಾಗಿದ್ದು, ಈಬಾರಿ ಹೆಚ್ಚಿನ ಎಪಿಎಂಸಿಗಳು ಅಭಿವೃದ್ಧಿ ಕಾಣಲಿದೆ ಎಂದರು.

ಮೀನುಗಾರಿಕೆ ಸಚಿವ ಎಸ್. ಅಂಗಾರ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು.ಪದ್ಮಶ್ರೀ ಪುರಸ್ಕತರಾದ ಮಹಾಲಿಂಗ ನಾಯ್ಕ್ ಅಮೈ, ಹರೇಕಳ ಹಾಜಬ್ಬ, ಸಹಕಾರ ರತ್ನ ಪ್ರಶಸ್ತಿ ಪುರಸ್ಕತರಾದ ಕೆ. ಸವಣೂರು ಸೀತಾರಾಮ ರೈ, ಕೃಷಿ ಸಾಹಸಿ ಲಕ್ಷ್ಮೀ ಎರ್ಕಮನೆ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸನ್ಮಾನಿಸಿದರು.

ಕೇಂದ್ರದ ಮಾಜಿ ಸಚಿವರು, ಸಂಸದರು, ಸಚಿವರು ಶಾಸಕರನ್ನುಗೌರವಿಸಲಾಯಿತು. ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರನ್ನು ಅಡಕೆ ವರ್ತಕರ ಸಂಘ, ಎಪಿಎಂಸಿ ನಿರ್ದೇಶಕರ ಪರವಾಗಿ ವಿಶೇಷವಾಗಿ ಸನ್ಮಾನಿಸಲಾಯಿತು.
ಪುತ್ತೂರು ಎ.ಸಿ ಗಿಶೀಶ್ ನಂದನ್, ಎಂಎಲ್ಸಿ ಪ್ರತಾಪಸಿಂಹ ನಾಯಕ್, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಎಪಿಎಂಸಿ ಅಡಿಕೆ ವರ್ತಕರ ಸಂಘದ ಅಧ್ಯಕ್ಷ ರವೀಂದ್ರನಾಥ ರೈ ಬಳ್ಳಮಜಲು ಸೇರಿದಂತೆ ಹಲವರು ಇದ್ದರು. ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಕೇಶ್ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮಕ್ಕೆ ಗಣ್ಯರನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು.

ಹಾರಾಡಿ ಸಮೀಪ ರೈಲ್ವೆ ಗೇಟ್ ನಿರ್ಮಾಣ ಹಾಗೂ ರಸ್ತೆ ಸಂಚಾರಕ್ಕೆ ಕೇಂದ್ರ ರೈಲ್ವೆ ಇಲಾಖೆ ಅನುಮತಿ ನೀಡಿದ್ದು, ನಗರಸಭೆಗೆ ರಸ್ತೆ ಕಾಮಗಾರಿ ಅವಕಾಶ ನೀಡಲಾಗಿದೆ. ವಿವೇಕಾನಂದ ಕಾಲೇಜು ರೈಲ್ವೇ ಮೇಲ್ಸೇತುವೆ ಅಗಲೀಕರಣ ಯೋಜನೆ ಪ್ರಸ್ತಾವಣಾ ಹಂತದಲ್ಲಿದ್ದು, ಮುಂದಿನದಿನಗಳಲ್ಲಿ ಯೋಜನೆ ಕಾರ್ಯಗತವಾಗಲಿದೆ.
ಡಿ.ವಿ ಸದಾನಂದ ಗೌಡ,
ಕೇಂದ್ರ ರೈಲ್ವೆ ಖಾತೆ ಮಾಜಿ ಸಚಿವ

ರಾಜ್ಯದಲ್ಲಿ ಎಪಿಎಂಸಿಗಳು ಸಂಕಷ್ಟದಲ್ಲಿದ್ದು, ಅವುಗಳ ಅಭಿವೃದ್ದಿಗೆ ನಬಾರ್ಡ್ ನೆರವಿನಿಂದ 200 ಕೋ ರೂ ಗಳನ್ನು ಸರಕಾರ ಒದಗಿಸಲಿದೆ. ಅಗತ್ಯಬಿದ್ದಲ್ಲಿ ಇನ್ನು 300 ಕೋ ನೀಡಲು ತಯಾರಿದೆ
ಕೋಟ ಶ್ರೀನಿವಾಸ ಪೂಜಾರಿ
ರಾಜ್ಯ ಹಿಂದುಳೀದ ವರ್ಗಗಳ ಕಲ್ಯಾಣ ಖಾತೆಯ ಸಚಿವ

ರೈಲ್ವೆ ಯೋಜನೆ ಮಂಜೂರು ಮಾಡುವುದು ಭಾರಿ ತ್ರಾಸದ ಕೆಲಸ . ಆದರೇ ನಕ್ಷತ್ರಿಕನಂತೆ ಬೆನ್ನು ಬಿಡದೆ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಈ ಕಾರ್ಯ ನಮ್ಮಿಂದ ಮಾಡಿಸಿದರು. ಮೋದಿ ಸರಕಾರದ ಎರಡನೇ ಅವಧಿಯಲ್ಲಿ ನನ್ನ ಕ್ಷೇತ್ರಕ್ಕೆ ಕೇವಲ 3 ವರ್ಷದಲ್ಲಿ 20ಸಾವಿರ ಕೋಟಿ ಅನುದಾನ ಬಂದಿದೆ. ಆದೇ ಸಂಸದನಾಗಿ ನನ್ನ ಮೊದಲ ಅವಧಿಯಲ್ಲಿ ಮನಮೋಹನ್ ಸಿಂಗ್ ಸರಕಾರವಿದ್ದಾಗ 5 ವರ್ಷದಲ್ಲಿ 9000 ಕೋ ರೂ ಅನುದಾನ ಸಿಕ್ಕಿತ್ತು.
ನಳಿನ್ ಕುಮಾರ್ ಕಟೀಲ್
ಮಂಗಳೂರು ಸಂಸದ

ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
-
ದಕ್ಷಿಣ ಕನ್ನಡ21 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು22 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















