Connect with us

ಸ್ಥಳೀಯ

Monti festival-ಬೆಳ್ಳಾರೆ ಹೊಲಿ ಕ್ರಾಸ್ ಚರ್ಚ್‌ನಲ್ಲಿ ಮೊಂತಿ ಹಬ್ಬದ ಸಂಭ್ರಮ

Published

on

Ad Widget

Ad Widget

Ad Widget

Ad Widget

ಬೆಳ್ಳಾರೆ ಹೋಲಿ ಕ್ರಾಸ್ ಚರ್ಚ್‌ನಲ್ಲಿ ಸೆಪ್ಟೆಂಬರ್ 8, 2025 ರಂದು ಮೊಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8.30ಕ್ಕೆ ಪವಿತ್ರ ಪ್ರಾರ್ಥನೆಯ ನಂತರ, ಹೊಸ ತೆನೆಯನ್ನು ವಿತರಿಸಲಾಯಿತು.

Ad Widget

Ad Widget

Ad Widget

Ad Widget

ಬೆಳ್ಳಾರೆ, ಸೆ. 8: ಬೆಳ್ಳಾರೆ ಹೋಲಿ ಕ್ರಾಸ್ ಚರ್ಚ್‌ನಲ್ಲಿ ಸೆಪ್ಟೆಂಬರ್ 8, 2025 ರಂದು ಮೊಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8.30ಕ್ಕೆ ಪವಿತ್ರ ಪ್ರಾರ್ಥನೆಯ ನಂತರ, ಹೊಸ ತೆನೆಯನ್ನು ವಿತರಿಸಲಾಯಿತು. ಮುಖ್ಯ ಧಾರ್ಮಿಕ ಆಚರಣೆಯನ್ನು ನೆರವೇರಿಸಿದ ಧರ್ಮಗುರು ಡಾ. ಆಂಟನಿ ಪ್ರಕಾಶ್ ಮೊಂತಿರೊ ಅವರು ತಮ್ಮ ಪ್ರವಚನದಲ್ಲಿ ಪ್ರಾರ್ಥನೆ, ಕೃತಜ್ಞತೆ ಮತ್ತು ಸಮುದಾಯದ ಮಹತ್ವವನ್ನು ಒತ್ತಿ ಹೇಳಿದರು.

Ad Widget

Ad Widget alt="Ad Widget"/>

Ad Widget

ಮಾತೆ ಮರಿಯಮ್ಮನ ಜನ್ಮದಿನವನ್ನು ಗೌರವಿಸುವ ಸುಂದರ ಸಂಪ್ರದಾಯವಾದ ಮೊಂತಿ ಹಬ್ಬವನ್ನು ಆಚರಿಸಲು ನಾವು ಇಂದು ಇಲ್ಲಿ ಸೇರಿದ್ದೇವೆ ಎಂಬುದು ಅಪಾರ ಸಂತೋಷದ ವಿಷಯ. ನಾವು ನಮ್ಮ ಹೊಲಗಳಿಂದ ಬಂದಿರುವ ಹೊಸ ಬೆಳೆಯನ್ನು ನೋಡಿದಾಗ, ಭೂಮಿಯ ಉದಾರತೆ ಮತ್ತು ಹೊಸ ಜೀವನದ ಭರವಸೆಯನ್ನು ನೆನಪಿಸಿಕೊಳ್ಳುತ್ತೇವೆ. ಈ ಹೊಸ ಕದಿರು ಸಮೃದ್ಧಿಯ ಸಂಕೇತವಾಗಿದೆ, ಮತ್ತು ಇದು ನಮ್ಮ ಜೀವನವನ್ನು ಪೋಷಿಸುವ ದೇವರ ಕೊಡುಗೆಯಾಗಿದೆ,” ಎಂದು ಅವರು ಹೇಳಿದರು.

Ad Widget

Ad Widget <> Ad Widget

ಅವರು ಮುಂದುವರೆದು, “ಮಾತೆ ಮರಿಯಮ್ಮನ ಉದಾಹರಣೆಯಿಂದ ನಾವು ಪಾಠ ಕಲಿಯೋಣ. ಇಂದು ಮಹಿಳೆಯರಿಗೆ ಸಂಬಂಧಿಸಿದ ಹಬ್ಬವಾದ್ದರಿಂದ, ನಾವು ಪ್ರತಿ ಮಹಿಳೆಯನ್ನು ಗೌರವದಿಂದ ಕಾಣೋಣ. ನಮ್ಮ ಕುಟುಂಬಗಳನ್ನು ಪ್ರೀತಿಯ ಸ್ಥಳಗಳನ್ನಾಗಿ ಮಾಡೋಣ, ಅಲ್ಲಿ ನಂಬಿಕೆಯನ್ನು ಗೌರವಿಸಲಾಗುತ್ತದೆ ಮತ್ತು ನಾವು ವಿಶೇಷವಾಗಿ ಇಂದು ಹೊಸ ಅಕ್ಕಿಯನ್ನು ಹಂಚಿಕೊಳ್ಳಲು ಒಟ್ಟಾಗಿ ಸೇರುತ್ತೇವೆ. ಇದು ನಮ್ಮ ನಂಬಿಕೆ ಮತ್ತು ಒಬ್ಬರಿಗೊಬ್ಬರು ಪ್ರೀತಿಯ ಮೂಲಕ ಬರುವ ಏಕತೆ ಮತ್ತು ಸಮೃದ್ಧಿಯನ್ನು ಸಂಕೇತಿಸುತ್ತದೆ. ಈ ಕುಟುಂಬ ಹಬ್ಬವು ನಮ್ಮ ಬಲ, ಏಕತೆ ಮತ್ತು ನಂಬಿಕೆಗೆ ಸಾಕ್ಷಿಯಾಗಿದೆ,” ಎಂದು ತಿಳಿಸಿದರು.

 ಗೋವಾ ನಿವಾಸಿಯಾಗಿರುವ ಬೆನ್ನರ್ ಮೇವಾಡ  ಇವರು ಬೆಳಗಿನ ಉಪಾಹಾರದ  ಪೋಷಕತ್ವ ವನ್ನು ವಹಿಸಿಕೊಂಡಿದ್ದರು. ಇವರು ಮಾತೇ ಮರಿಯಮ್ಮ ಅವರ ಕೃಪೆಯ ಸವಿನೆನಪಿಗಾಗಿ ಬಹು ವರ್ಷಗಳಿಂದ ಈ ಹಬ್ಬದ ಸಡಗರವನ್ನು ಪ್ರಾಯೋಜಕತ್ವದೊಂದಿಗೆ ಹಂಚಿಕೊಳ್ಳುವುದು ಇಲ್ಲಿಯ ವಿಶೇಷ. ಕಾರ್ಯದರ್ಶಿಗಳು,  ಗುರಿಕಾರರು  ಹಾಗೂ ಸಮಸ್ತ ಜನರು ಈ ಸಡಗರದಲ್ಲಿ ಭಕ್ತಿ ಮತ್ತು ಪ್ರೀತಿಯಿಂದ ಭಾಗವಹಿಸಿ ಆನಂದಿಸಿದರು.

Click to comment

Leave a Reply

ಶಿಕ್ಷಣ

Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Continue Reading

ಶಿಕ್ಷಣ

Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ

Published

on

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget alt="Ad Widget"/>

Ad Widget

ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.

Ad Widget

Ad Widget alt="Ad Widget"/>

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

Ad Widget

Ad Widget <> Ad Widget

ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.

ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.

Ad Widget

Ad Widget

ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ‍್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.

ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ‍್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!