Connect with us

ಕಾರ್ಯಕ್ರಮಗಳು

Puttur-ಪುತ್ತೂರು: ಜಿ.ಎಲ್ ವನ್ ಮಾಲ್ ನಲ್ಲಿ ‘ತುಳು ಕಬಿಕೂಟ-2025’

Published

on

Ad Widget

Ad Widget

Ad Widget

Ad Widget

ಪುತ್ತೂರು ತುಳುಕೂಟ ಮತ್ತು ಚಿಗುರೆಲೆ ಸಾಹಿತ್ಯ ಬಳಗದ ಸಹಯೋಗದಲ್ಲಿ ಜಿಎಲ್ ವನ್ ಮಾಲ್ ನಲ್ಲಿ ಆಯೋಜಿಸಲಾದ ‘ತುಳು ಕಬಿಕೂಟ-2025’ ಕಾರ್ಯಕ್ರಮವನ್ನು ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್‌ರವರ ತುಳು ಗೀತೆಯನ್ನು ವಾಚಿಸುವ ಮೂಲಕ ಬಲರಾಮ ಆಚಾರ್ಯ ಉದ್ಘಾಟಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ತುಳು ಸಂಸ್ಕೃತಿ ಮತ್ತು ಪರಂಪರೆಯನ್ನು ಇಂದಿನ ಪೀಳಿಗೆಗೆ ತಿಳಿಸುವ ಕಾರ್ಯಕ್ರಮಗಳನ್ನು ಪುತ್ತೂರು ತುಳುಕೂಟವು ನಿರಂತರವಾಗಿ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಜಿ.ಎಲ್. ಸಮೂಹ ಸಂಸ್ಥೆಗಳ ಮುಖ್ಯಸ್ಥ ಬಲರಾಮ ಆಚಾರ್ಯ ಹೇಳಿದರು. ಪುತ್ತೂರು ತುಳುಕೂಟ ಮತ್ತು ಚಿಗುರೆಲೆ ಸಾಹಿತ್ಯ ಬಳಗದ ಸಹಯೋಗದಲ್ಲಿ ಜಿಎಲ್ ವನ್ ಮಾಲ್ ನಲ್ಲಿ ಆಯೋಜಿಸಲಾದ ‘ತುಳು ಕಬಿಕೂಟ-2025’ ಕಾರ್ಯಕ್ರಮವನ್ನು ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್‌ರವರ ತುಳು ಗೀತೆಯನ್ನು ವಾಚಿಸುವ ಮೂಲಕ ಬಲರಾಮ ಆಚಾರ್ಯ ಉದ್ಘಾಟಿಸಿದರು.

Ad Widget

Ad Widget alt="Ad Widget"/>

Ad Widget

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹಿತಿ, ಕವಯಿತ್ರಿ ಹಾಗೂ ಸುದಾನ ಶಾಲೆಯ ಅಧ್ಯಾಪಕಿ ಕವಿತಾ ಅಡೂರು, ಉದಯೋನ್ಮುಖ ಕವಿಗಳಿಗೆ ಕವಿತೆ ರಚನೆಯಲ್ಲಿ ಮಾರ್ಗದರ್ಶನ ನೀಡಿದರು.

Ad Widget

Ad Widget <> Ad Widget

ಕವಿತೆ ರಚನೆ ಕಾರ್ಯಾಗಾರದ ಸಲಹೆ ನೀಡಿದ ಅಕ್ಷತಾರಾಜ್ ಪೆರ್ಲ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ, ಕವಯಿತ್ರಿ ಮತ್ತು ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕಿ ಅಕ್ಷತಾರಾಜ್ ಪೆರ್ಲ, ತಮ್ಮ ಭಾಷಣದಲ್ಲಿ, ಸಾಹಿತ್ಯ ರಚನೆಯ ಆಸಕ್ತಿಯಿರುವ ಯುವಕರಿಗೆ ಕವಿತೆ ರಚನೆಯ ಕಾರ್ಯಾಗಾರಗಳನ್ನು ಆಯೋಜಿಸುವಂತೆ ತುಳುಕೂಟಕ್ಕೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ 33 ಕವಿಗಳು ತಾವೇ ರಚಿಸಿದ ತುಳು ಕವಿತೆಗಳನ್ನು ವಾಚಿಸಿದರು.

ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ನಿವೃತ್ತ ಪ್ರೊಫೆಸರ್ ದತ್ತಾತ್ರೇಯ ರಾವ್, ನಿವೃತ್ತ ಅಧ್ಯಾಪಕ ನಾರಾಯಣ ರೈ ಕುಕ್ಕುವಳ್ಳಿ ಸೇರಿದಂತೆ ಒಟ್ಟು 20 ಶಿಕ್ಷಕರನ್ನು ಗೌರವಿಸಲಾಯಿತು.

Ad Widget

Ad Widget

ತುಳುಕೂಟದ ಅಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನಸ್ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ತುಳುಕೂಟದ ಜತೆಕಾರ್ಯದರ್ಶಿ ನಯನಾ ರೈ ಮತ್ತು ಚಿಗುರೆಲೆ ಸಾಹಿತ್ಯ ಬಳಗದ ಸಂಚಾಲಕ ನಾರಾಯಣ ಕುಂಬ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ರವಿ ಪಾಂಬಾರ್ ‘ತುಳುನಾಡ ಪೊರ್ಲು ಸುಗಿವು’ ಗೀತೆಯನ್ನು ಹಾಡಿದರು.

ಜಗದೀಶ್ ಬಾರಿಕೆ, ಕಾವ್ಯಶ್ರೀ, ಶ್ರೀಶಾವಾಸವಿ ತುಳುನಾಡು, ಮತ್ತು ರಶ್ಮಿತಾ ಸುರೇಶ್ ಜೋಗಿಬೆಟ್ಟು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುಪ್ರೀತಾ ಚರಣ್ ಪಾಲಪ್ಪ ವಂದನಾರ್ಪಣೆ ಮಾಡಿದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ನಾಳೆ ದೇವಸ್ಥಾನ ವಠಾರದಲ್ಲಿ ಕಾರ್ಯಾಲಯ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕಟೀಲ್ ಲಾಜಿಸ್ಟಿಕ್ಸ್ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಲಿದ್ದು, ಉದ್ಯಮಿಗಳಾದ ರಾಧಾಸ್‌ನ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲುಗುತ್ತು ಹಾಗೂ ದರ್ಬೆ ಕಾರ್ತಿಕ್ ಮೆಡಿಕಲ್ಸ್‌ನ ವೇಣುಗೋಪಾಲ್ ಪಿ.ಎಲ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ವಿಜಯ ಬ್ಯಾಂಕ್‌ನ ನಿವೃತ್ತ ಎ.ಜಿ.ಎಂ. ಜಗಜೀವನದಾಸ್ ರೈ, ವಿಜಯ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಜೈರಾಜ್ ಭಂಡಾರಿ ನೋಣಾಲು ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಗೌರವ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸುವಂತೆ ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.

Continue Reading

ಕಾರ್ಯಕ್ರಮಗಳು

Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್

Published

on

Ad Widget

Ad Widget

Ad Widget

Ad Widget

ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget

Ad Widget

ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಮೈತ್ರೇಯಿ ಆಯುರ್ವೇದ ಗುರುಕುಲಂನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಸುಧಾರಾವ್ ಮಾತನಾಡಿ “1994ರಲ್ಲಿ ಸ್ಥಾಪನೆಯಾದ ಮೈತ್ರೇಯಿ ಗುರುಕುಲಂನ ಸುದೀರ್ಘ ಸೇವಾ ಪರಂಪರೆಯಿಂದ ಪ್ರೇರಣೆ ಪಡೆದು, ಅಜೇಯ ಟ್ರಸ್ಟ್‌ನ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೈತ್ರೇಯಿ ಆಯುರ್ವೇದ ಗುರುಕುಲಂರೂಪುಗೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಮೌಲ್ಯಾಧಾರಿತ ವಸತಿ ಸಹಿತ ಶಿಕ್ಷಣವನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಇದೀಗ ಆಯುರ್ವೇದ ಶಿಕ್ಷಣ ಕ್ಷೇತ್ರಕ್ಕೂತನ್ನ ಸೇವೆಯನ್ನು ವಿಸ್ತರಿಸುತ್ತಿದೆ.

Ad Widget

Ad Widget <> Ad Widget

ಮೈತ್ರೇಯಿ ಆಯುರ್ವೇದ ಗುರುಕುಲಂ ಮಹಿಳೆಯರಿಗಾಗಿ ಮೀಸಲಾದ ವಸತಿ ಸಹಿತ ಶಿಕ್ಷಣ ಸಂಸ್ಥೆಯಾಗಿದ್ದು, ಒಟ್ಟು 7½ ವರ್ಷಗಳ ಸಮಗ್ರ ಶಿಕ್ಷಣ ಕಾರ್ಯಕ್ರಮವನ್ನು ರೂಪಿಸಿದೆ. ಇದರಲ್ಲಿ 2 ವರ್ಷಗಳ ಪೂರ್ವ ಆಯುರ್ವೇದ ಶಿಕ್ಷಣ, 4½ ವರ್ಷಗಳ BAMS ಪದವಿ ಶಿಕ್ಷಣ ಹಾಗೂ 1 ವರ್ಷದ ಕಡ್ಡಾಯ ಇಂಟರ್ನ್‌ಶಿಪ್ ಒಳಗೊಂಡಿರುತ್ತದೆ. ಮೈತ್ರೇಯಿ ಆಯುರ್ವೇದ ಗುರುಕುಲಂ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ, ನವದೆಹಲಿ ಇದರ ಸಂಯೋಜನೆ ಹೊಂದಿದ್ದು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಹಾಗೂ ನವದೆಹಲಿಯ ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆ ಮತ್ತು ಅನ್ವಯಿಸುವ ನಿಯಂತ್ರಣಾತ್ಮಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ಈ ಶಿಕ್ಷಣ ಕಾರ್ಯಕ್ರಮವು ಸಂಸ್ಕೃತ, ಯೋಗ, ಭಾರತೀಯ ಜ್ಞಾನಪರಂಪರೆ, ಶಿಸ್ತು ಮತ್ತು ನೈತಿಕ ಮೌಲ್ಯಗಳೊಂದಿಗೆ ಆಯುರ್ವೇದ ಶಿಕ್ಷಣವನ್ನು ಸಂಯೋಜಿಸುವ ಉದ್ದೇಶವನ್ನು ಹೊಂದಿದೆ. ಆಯುರ್ವೇದದ ಶಾಸ್ತ್ರೀಯ ಗ್ರಂಥಗಳನ್ನು ಸಂಸ್ಕೃತ ಭಾಷೆಯಲ್ಲಿ ಅಧ್ಯಯನ ಮಾಡುವುದಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ, ಜ್ಞಾನವಂತ, ಕೌಶಲ್ಯ ಪೂರ್ಣ ಹಾಗೂ ಕರುಣಾಮಯಿ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ. ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಮಹಿಳೆಯರಿಗೆ ಗುಣಮಟ್ಟದ ವಸತಿ ಸಹಿತ ಶಿಕ್ಷಣವನ್ನು ಒದಗಿಸುವುದರ ಜೊತೆಗೆ, ಜನಸಾಮಾನ್ಯರಿಗೆ ಗುಣಮಟ್ಟದ ಆಯುರ್ವೇದ ಆರೋಗ್ಯ ಸೇವೆಗಳನ್ನು ನೀಡುವ ಆಶಯವನ್ನು ಸಂಸ್ಥೆ ಹೊಂದಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯಕ್ ವಹಿಸಲಿದ್ದಾರೆ.ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸೆಂಚುರಿ ಗ್ರೂಪ್ ಆಫ್ ಕಂಪನೀಸ್‌ನ ಅಧ್ಯಕ್ಷರು ಡಾ. ಪಿ. ದಯಾನಂದ ಪೈ, ಮೈಸೂರು ಮಂಗಳೂರು ಗಣೇಶ್ ಬೀಡಿ ವರ್ಕ್ಸ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಗನ್ನಾಥ ಶೆಣೈ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ ಶೆಟ್ಟಿ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಉಪಸ್ಥಿತರಿರಲಿದ್ದಾರೆ.

Ad Widget

Ad Widget

ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಸಂಸ್ಕೃತ ಭಾರತಿ ಸಂಘಟನೆಯ ದಿನೇಶ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಜೇಯ ಟ್ರಸ್ಟ್‌ನ ಅಧ್ಯಕ್ಷರಾದ ಸುಬ್ರಾಯ ಪೈ, ಮೈತ್ರೇಯಿ ಆಯುರ್ವೇದ ಗುರುಕುಲಂನ ಪ್ರಾಂಶುಪಾಲರಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.

Ad Widget
Continue Reading

ಸ್ಥಳೀಯ

Wedding-ಕ್ಯಾಸೆಟ್‌ಗಳ ಅಬ್ಬರವಿಲ್ಲ, ಡ್ಯಾನ್ಸ್‌ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!

Published

on

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget

Ad Widget

Ad Widget

ಉಜಿರೆ: ಕ್ಯಾಸೆಟ್‌ಗಳ ಅಬ್ಬರ, ಮೈಕಾಸುರನ ಹಾವಳಿಯಿಂದ ಶಬ್ದ ಮಾಲಿನ್ಯವಿಲ್ಲ. ಸಿನೆಮಾ ಹಾಡು, ಬ್ರೇಕ್‌ಡ್ಯಾನ್ಸ್ ಉಪಟಳವಿಲ್ಲ. ಅತ್ಯಂತ ಸರಳವಾಗಿ, ಶಿಸ್ತುಬದ್ಧವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget alt="Ad Widget"/>

Ad Widget

ಮದುಮಗ ಕೆ.ಜೆ. ಸುದರ್ಶನ್ ತಾಯಿ-ತಂದೆ ಬಗ್ಯೆ ಅಪಾರ ಗೌರವ, ಪ್ರೀತಿ-ವಿಶ್ವಾಸವನ್ನು ವ್ಯಕ್ತಪಡಿಸಿ ಅವರೇ ತನಗೆ ಪ್ರತ್ಯಕ್ಷ ದೇವರು ಎಂದು ಗೌರವ ಸಲ್ಲಿಸಿದರು.

Ad Widget

Ad Widget <> Ad Widget

ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ಭಾವುಕರಾಗಿ ಆನಂದಭಾಷ್ಪ ಸುರಿಸಿದರು. ಇಂತಹ ಮಗನನ್ನು ಪಡೆದ ತಾವೇ ಭಾಗ್ಯವಂತರು ಎಂದು ಸಂತಸವ್ಯಕ್ತಪಡಿಸಿದರು.

ಉಷಾಜನಾರ್ಧನ ಗಣೇಶನ ಸ್ತುತಿಯನ್ನು ಸುಶ್ರಾವ್ಯವಾಗಿ ಹಾಡಿದರು. ಸೊಸೆಯನ್ನು ಕೂಡಾ ಮಗಳಂತೆ ಪ್ರೀತಿಯಿಂದ ನೋಡಿಕೊಳ್ಳುವುದಾಗಿ ತಿಳಿಸಿದರು.

Ad Widget

Ad Widget

ಹಿರಿಯ ದಂಪತಿ ಮತ್ತು ನವದಂಪತಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿ, ಗೌರವಿಸಿದರು. ಎಲ್ಲರಿಗೂ ಸರಳ, ಶುದ್ಧ ಹಾಗೂ ಶುಚಿ-ರುಚಿಯಾದ ಶಾಕಾಹಾರ ಭೋಜನ ನೀಡಿದರು.
ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೇಟ್ನಾಯ, ಶಾಸಕ ಕೆ. ಹರೀಶ್‌ ಪೂಂಜ, ಮಾಜಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡಬಿದ್ರೆಯ ಎಕ್ಸಲೆಂಟ್‌ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್‌ ಜೈನ್‌ ಮತ್ತು ರಶ್ಮಿತಾ ಜೈನ್‌ ನಾರಾವಿ ಸೇರಿದಂತೆ ಅನೇಕ ಗಣ್ಯರು, ಹಿರಿಯರು ಆಗಮಿಸಿ ನೂತನ ದಂಪತಿಗೆ ಶುಭ ಹಾರೈಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!