Connect with us

Uncategorized

ಪುತ್ತೂರು : ಗಾಂಜಾ ಸಾಗಾಟ ಮೂವರ ಬಂಧನ | ಬಂಧಿತರು ಬಾಯ್ಬಿಟ್ಟ ಮಾಹಿತಿ ಆಧರಿಸಿ ಗಾಂಜಾ ಸಪ್ಲೈಯರ್‌ ಗೆ ಪೊಲೀಸರಿಂದ ಗಾಳ – ಖತರ್ನಾಕ್‌ ಆರೋಪಿ ಬಳಿ ಇತ್ತು ಪಿಸ್ತೂಲ್‌ ಸಜೀವ ಗುಂಡು…!  

Published

on

Ad Widget

Ad Widget

Ad Widget

Ad Widget

ಪುತ್ತೂರು: ತನಿಖೆ ವೇಳೆ ಬಂಧಿತ ಆರೋಪಿಗಳು ನೀಡಿದ ಮಾಹಿತಿಯನುಸಾರ, ಗಾಂಜಾ ಸರಬರಾಜುದಾರನೊಬ್ಬನನ್ನು ಪುತ್ತೂರು ನಗರ ಠಾಣೆ ಪೊಲೀಸರು ಬೆನ್ನಟ್ಟಿ  ಮಾಲು ಸಹಿತ ಬಂಧಿಸಿದ್ದು ಈ ವೇಳೆ ಆರೋಪಿ ಬಳಿ ಪಿಸ್ತೂಲ್ ಹಾಗೂ ಸಜೀವ ಗುಂಡು ಪತ್ತೆಯಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ ಕುಂಡಡ್ಕ ನಿವಾಸಿ ಇಬ್ರಾಹಿಂ ಅವರ ಪುತ್ರ ಮಹಮ್ಮದ ಮುವಾಝ್ ಬಂಧಿತ ಆರೋಪಿ. ಈತನನ್ನು ಮೇ 22 ರಂದು ಸಂಜೆ ವೇಳೆ ಕೆದಿಲ ಗ್ರಾಮದ ಪೇರಮೊಗ್ರು ಎಂಬಲ್ಲಿ ಬಂಧಿಸಲಾಗಿದೆ. ಬಂಧಿತನಿಂದ ಕಾರು, ಗಾಂಜಾ ಸೇರಿದಂತೆ ಸುಮಾರು ರೂ. 5.86 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ

Ad Widget

Ad Widget alt="Ad Widget"/>

Ad Widget

ಅದಕ್ಕೂ ಮೊದಲು ಮೇ 22 ರಂದು ಪುತ್ತೂರು ತಾಲೂಕಿನ  ಶಾಂತಿಗೋಡು ಗ್ರಾಮದ ವೀರಮಂಗಲ ಬಳಿ ಪುತ್ತೂರು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂದಿಸಿದ್ದರು. ಕಡಬ ತಾಲೂಕಿನ ಕುಂತೂರು ಪೆರಾಬೆ ಗ್ರಾಮದ ಕೋಚಕಟ್ಟೆ ಉಮ್ಮರಬ್ಬ ಎಂಬವರ ಪುತ್ರ ಶಫೀಕ್ ಕೆ.ವಿ(24 ವ) ಮತ್ತು ಕುಂತೂರು ಎರ್ಮಲ ನಿವಾಸಿ ಅಬ್ದುಲ್ಲ ಎಂಬವರ ಪುತ್ರ ರಾಝೀಕ್(28ವ) ಬಂಧನಕ್ಕೆ ಒಳಗಾದವರು.

Ad Widget

Ad Widget <> Ad Widget

ಶಫೀಕ್ ಹಾಗೂ ರಾಝೀಕ್ ರವರು ವೀರಮಂಗಲ  ರೈಲ್ವೇ ಹಳಿ ಬಳಿ   ಗಾಂಜಾ ಇರುವ  ಬ್ಯಾಗ್  ಹಿಡಿದು  ನಿಂತಿದ್ದು ಈ ಬಗ್ಗೆ ಖಚಿತ ಮಾಹಿತಿ ದೊರೆತಿದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಇವರ ವಿಚಾರಣೆ ವೇಳೆ  ಇವರ ಸ್ನೇಹಿತನಾದ   ಮಹಮ್ಮದ್ ಮುವಾಝ್(೩೦ವ) ಎಂಬಾತ ಇವರಿಗೆ  ಗಾಂಜಾ ಸರಬರಾಜು ಮಾಡುವ ಮಾಹಿತಿ ದೊರೆತಿದೆ.

ಮಹಮ್ಮದ್ ಮುವಾಝ್  ಮಂಗಳೂರಿನಿಂದ ಗಾಂಜಾ ಖರೀದಿಸಿ ಆರೋಪಿಗಳಿಗೆ ಮಾರಲು  ಕಾರಿನಲ್ಲಿ ವೀರಮಂಗಲಕ್ಕೆ ಬರುತ್ತಿದ್ದ  ಮಾಹಿತಿ ಪಡೆದ ಪೊಲೀಸರು, ಆರೋಪಿಗಳ ಮೂಲಕ   ಕೆದಿಲ ಗ್ರಾಮದ ಪೇರಮೊಗ್ರು ಸಮೀಪ ಆತನನ್ನು ಬರುವಂತೆ ಮಾಡಿ ಅಲ್ಲಿ ತಡೆದಿದ್ದಾರೆ. ಈ ವೇಳೆ ಮುವಾಝ್ ಕಾರು ನಿಲ್ಲಿಸಿ  ಪರಾರಿಯಾಗುತ್ತಿದ್ದಂತೆ ಬೆನ್ನಟ್ಟಿದ ಪೊಲೀಸರು  ವಶಕ್ಕೆ ಪಡೆದಿದ್ದಾರೆ.

Ad Widget

Ad Widget

ಬಂಧನದ ಬಳಿಕ ಪರಿಶೀಲನೆ ವೇಳೆ ಆರೋಪಿ ಮಹಮ್ಮದ್ ಮುವಾಝ್  ನ ಪ್ಯಾಂಟ್ ಕಿಸೆಯಲ್ಲಿ ಪರವಾನಿಗೆ ರಹಿತ ರೂ 50  ಸಾವಿರ ಮೌಲ್ಯದ ಪಿಸ್ತೂಲ್ ಮತ್ತು ಎರಡು ಸಜೀವ ಗುಂಡುಗಳು ಪತ್ತೆಯಾಗಿವೆ. ಕಾರಿನ ಡಿಕ್ಕಿಯಯಲ್ಲಿ  ಸುಮಾರು 2 ಕೆ.ಜಿ ಗಾಂಜಾ, ಗಾಂಜಾ ತುಂಬಿದ 50ಗ್ರಾಂ ತೂಕದ ೫ ಪ್ಯಾಕೆಟ್,  ರೂ. 330 ನಗದು, ಪಾನ್ ಕಾರ್ಡ್,  11 ಎಟಿಎಂ ಕಾರ್ಡ್‌ ಗಳು,  ಮೊಬೈಲ್ ಪೋನ್‌ , ಪಿಸ್ತೂಲ್ ಮಾದರಿಯ ಸಿಗರ್ ಲೈಟ್, ಮಾತ್ರೆಗಳು ಸಿಕ್ಕಿವೆ .  ಕೃತ್ಯಕ್ಕೆ ಉಪಯೋಗಿಸಿದ ಹುಂಡೈ ಐ 20 ಕಾರು ಸೇರಿದಂತೆ ಒಟ್ಟು ರೂ. 5,86,530 ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮತ್ತು ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ಅವರ ನಿರ್ದೇಶನದಂತೆ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ಅವರ ಮಾರ್ಗದರ್ಶನದಂತೆ ಎಸ್.ಐ ನಸ್ರೀನ್ ತಾಜ್ ಚಟ್ಟರಕಿ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪುತ್ತೂರು ನಗರ ಠಾಣೆ ಪೊಲೀಸರು 2 ವರ್ಷದ ಹಿಂದೆ (2020ರಲ್ಲಿ) ಅಂತರಾಜ್ಯ ಡ್ರಗ್ಸ್‌ ಮಾರಾಟ ಜಾಲವನ್ನು ಬೇಧಿಸಿ  175 ಕೆಜಿ ತೂಕದ ಗಾಂಜಾವನ್ನು ಬಂಟ್ವಾಳ ತಾಲೂಕಿನ ಪೆರಮೊಗರು ಎಂಬಲ್ಲಿ ವಶಕ್ಕೆ ಪಡೆದಿದ್ದರು. ಈ ವೇಳೆ ಮಾಲು ಜತೆಯಿದ್ದ ನಾಲ್ವರನ್ನು ಬಂದಿಸಿದ್ದರು, ಇದು ಮಾತ್ರವಲ್ಲದೆ, ಇಂತಹ ಹತ್ತು ಹಲವು ಮಾದಕ ದ್ರವ್ಯ ಮಾರಾಟದ ಜಾಲವನ್ನು ಇಲ್ಲಿನ ಪೊಲೀಸರು ಬೇಧಿಸಿದ್ದರೂ , ಕೈ ಗೆ ಸಿಕ್ಕ ಆರೋಪಿಯನ್ನಷ್ಟೇ ಬಂಧಿಸುತ್ತಿದ್ದರೇ ಹೊರತು, ಇದರ ಮೂಲ ಸಾಗಾಟಗಾರರ ಪತ್ತೆ ಮಾಡುವ ಸಾಹಸಕ್ಕೆ ಹೋಗಿರಲಿಲ್ಲ.

ಆದರೇ ಈ ಬಾರಿ ಬಂಧಿತ ಆರೋಪಿಗಳಿಗೆ ಗಾಂಜಾ ಸಾಗಾಟ  ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಬೆನ್ನಟ್ಟಿ ಬಂಧಿಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ

Ad Widget
Click to comment

Leave a Reply

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!