ಬಿಗ್ ನ್ಯೂಸ್
Belthangadi-ಬೆಳ್ತಂಗಡಿ: ಧರ್ಮಸ್ಥಳ ತಲೆಬುರುಡೆ ಪ್ರಕರಣ; ಇಂದು ಎಸ್ಐಟಿ ವಿಚಾರಣೆಗೆ ಆರು ಜನ ಹಾಜರು
ಧರ್ಮಸ್ಥಳದ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಕೇರಳದ ಯೂಟ್ಯೂಬರ್ ಮನಾಫ್, ಅಭಿಷೇಕ್, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ ಮತ್ತು ಪ್ರದೀಪ್ ಅವರು ಮಂಗಳವಾರ ಬೆಳಗ್ಗೆ ವಿಶೇಷ ತನಿಖಾ ತಂಡದ (ಎಸ್ಐಟಿ) ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳ್ತಂಗಡಿ: ಧರ್ಮಸ್ಥಳದ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಕೇರಳದ ಯೂಟ್ಯೂಬರ್ ಮನಾಫ್, ಅಭಿಷೇಕ್, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ ಮತ್ತು ಪ್ರದೀಪ್ ಅವರು ಮಂಗಳವಾರ ಬೆಳಗ್ಗೆ ವಿಶೇಷ ತನಿಖಾ ತಂಡದ (ಎಸ್ಐಟಿ) ವಿಚಾರಣೆಗೆ ಹಾಜರಾಗಿದ್ದಾರೆ.
ಈ ಆರು ಮಂದಿಯನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಆರನೇ ದಿನದ ವಿಚಾರಣೆಗೆ ಎಸ್ಐಟಿ ಕರೆಸಿತ್ತು. ಸೋಮವಾರ ಹಿಂಬಾಗಿಲಿನಿಂದ ಕಚೇರಿಗೆ ಬಂದಿದ್ದ ಜಯಂತ್ ಟಿ, ಇಂದು ಮುಂಭಾಗದಿಂದಲೇ ಆಗಮಿಸಿದ್ದಾರೆ.
ಆದರೆ, ಮಾಧ್ಯಮಗಳ ಮುಂದೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಜಯಂತ್ ಟಿ ಜೊತೆಗೆ ಸಂಬಂಧಿಯಾದ ಸಿಂಧೂದೇವಿ ಕೂಡ ಎಸ್ಐಟಿ ಕಚೇರಿಗೆ ಬಂದು ನಂತರ ವಾಪಸಾಗಿದ್ದಾರೆ.
ಕೇರಳದ ಯೂಟ್ಯೂಬರ್ ಮನಾಫ್ ಮತ್ತು ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆಗೆ ಹಾಜರಾಗಿದ್ದಾರೆ. ಕೆಲವು ಮಾಧ್ಯಮಗಳು ಮನಾಫ್ ತಮ್ಮ ರಕ್ಷಣೆಗಾಗಿ ಕೇರಳದಿಂದ ಜನರನ್ನು ಕರೆತಂದಿದ್ದಾರೆ ಎಂದು ವರದಿ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮನಾಫ್, “ನಾನು ಯಾರನ್ನೂ ಕರೆತಂದಿಲ್ಲ. ನನಗೆ ಯಾವುದೇ ಭಯವಿಲ್ಲ. ನಾನು ಸತ್ಯಕ್ಕಾಗಿ ಹೋರಾಡುತ್ತಿದ್ದೇನೆ. ಎಸ್ಐಟಿಯ ಎಲ್ಲ ವಿಚಾರಣೆಗೂ ಸಹಕರಿಸುತ್ತೇನೆ,” ಎಂದು ಸ್ಪಷ್ಟಪಡಿಸಿದ್ದಾರೆ.
ಅಂತರ ರಾಜ್ಯ
L.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ದಿಲ್ಲಿಯ ಜಸೋಲಾ ವಿಹಾರ್ನಲ್ಲಿರುವ ಆಸ್ಪತ್ರೆಗೆ ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ. ಅಡ್ವಾಣಿ ಅವರು 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.
ಮಂಗಳೂರು
MRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳ ಪೈಕಿ ಒಬ್ಬರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಅ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಎಂಆರ್ಪಿಎಲ್ನ ಫೇಸ್-3ರ ಸಿಎಚ್ಟಿಯು (Coker Hydro Treating Unit) ಪ್ಲಾಂಟ್ನಲ್ಲಿ ಕಳೆದ ಸೆಪ್ಟೆಂಬರ್ 30ರಂದು ಭಾರೀ ಸ್ಫೋಟ ಸಂಭವಿಸಿತ್ತು. ಅಂದು ಸಂಭವಿಸಿದ ದುರಂತದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು.
ಅದೇ ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯು (ICU) ಘಟಕದಲ್ಲಿ ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರ ದೇಹವನ್ನು ಇಂದು ಸಂಜೆಯ ವೇಳೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ (Post-mortem) ನಡೆಸಲಾಗುವುದು. ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳೀಯ
Kumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಚಾರಣಕ್ಕೆ ಆಗಮಿಸುವವರು ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಚಾರಣದ ವೇಳೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ.
ಚಾರಣಿಗರು ನಿಗದಿತ ಸಮಯಕ್ಕೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದಲ್ಲಿರುವ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಪ್ರಕೃತಿಯ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಚಾರಣದ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.
ಇನ್ನೊಂದೆಡೆ, ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ಮೂಲಕ ಕುಮಾರ ಪರ್ವತ ಚಾರಣ ಆರಂಭಿಸಲು ಈವರೆಗೆ ದಿನಾಂಕ ನಿಗದಿಯಾಗಿಲ್ಲ.
-
ಮೈಸೂರು22 hours agoMysuru-ಮೈಸೂರು ದಸರಾ ವೇಳೆ 10 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ
-
ಅಪರಾಧ21 hours agoPuttur-ಪುತ್ತೂರು: ಮಹಿಳೆಯ ಮೇಲೆ ಹಲ್ಲೆ, ಮಾನಭಂಗ ಪ್ರಕರಣ; ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
-
ಮಂಗಳೂರು22 hours agoMRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
-
ಅಪರಾಧ20 hours agoUppinangadi-ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ ನಗದು, ಮೊಬೈಲ್ ದರೋಡೆ; ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
-
ಅಪರಾಧ22 hours agoMangalore:-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ
-
ಅಂತರ ರಾಜ್ಯ22 hours agoL.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
-
ಕಾರ್ಯಕ್ರಮಗಳು20 hours agoPraveen Capital-ಪ್ರವೀಣ್ ಕ್ಯಾಪಿಟಲ್ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ: 2030ರ ವೇಳೆಗೆ 100 ಶಾಖೆ ಸ್ಥಾಪನೆಯ ಗುರಿ; ಸತ್ಯ ಶಂಕರ್ ಅವರ ಸಾಧನೆಯನ್ನು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ ಉಲ್ಲೇಖಿಸುತ್ತೇನೆ – ಅಶೋಕ್ ರೈ
-
ಸ್ಥಳೀಯ20 hours agoYouth Congress-ನಾವೂರು ಪ್ರಕರಣ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್ ನಿಂದ ಪೊಲೀಸ್ ಠಾಣೆಗೆ ದೂರು




















