ಮಂಗಳೂರು
Mangalore-Big Breaking: ಮಂಗಳೂರು: ಮಹಿಳೆ ಬಲಿಯಾದ ತಕ್ಷಣ ಎಚ್ಚೆತ್ತ ಅಧಿಕಾರಿಗಳು – ಕೂಳೂರಿನಲ್ಲಿ ಹೆದ್ದಾರಿ ಗುಂಡಿಗೆ ತೇಪೆ – ಅಮಾಯಕರ ಪ್ರಾಣ ಬಲಿಯಾಗಿ ಜನತೆ ಆಕ್ರೋಶಗೊಂಡರೇ ಮಾತ್ರ ಗುಂಡಿಗೆ ತೇಪೆ..?
ನಗರದ ಕೂಳೂರಿನಲ್ಲಿ ರಸ್ತೆ ಗುಂಡಿಗೆ ದ್ವಿಚಕ್ರ ಸವಾರೆಯೋರ್ವರು ಬಿದ್ದು ಲಾರಿ ಹರಿದು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತ ಎನ್ಎಚ್ ಅಧಿಕಾರಿಗಳು ರಸ್ತೆ ಗುಂಡಿಯನ್ನು ಮುಚ್ಚಿ ತೇಪೆ ಹಚ್ಚುತ್ತಿದ್ದಾರೆ.
ಮಂಗಳೂರು: ನಗರದ ಕೂಳೂರಿನಲ್ಲಿ ರಸ್ತೆ ಗುಂಡಿಗೆ ದ್ವಿಚಕ್ರ ಸವಾರೆಯೋರ್ವರು ಬಿದ್ದು ಲಾರಿ ಹರಿದು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತ ಎನ್ಎಚ್ ಅಧಿಕಾರಿಗಳು ರಸ್ತೆ ಗುಂಡಿಯನ್ನು ಮುಚ್ಚಿ ತೇಪೆ ಹಚ್ಚುತ್ತಿದ್ದಾರೆ.
ಎನ್ಎಚ್ 66 ಸುರತ್ಕಲ್ನಿಂದ ಕೆಪಿಟಿವರೆಗೆ ಅಲ್ಲಲ್ಲಿ ಸಂಪೂರ್ಣ ಹೊಂಡಗುಂಡಿ ಬಿದ್ದಿದೆ. ಇತ್ತೀಚೆಗೆ ಜನರ ಆಕ್ರೋಶದಿಂದ ಕೂಳೂರು ಬ್ರಿಡ್ಜ್ ಬಳಿ ಹೆದ್ದಾರಿ ಪ್ರಾಧಿಕಾರ ಗುಂಡಿ ಮುಚ್ಚುವ ಕಾರ್ಯ ಮಾಡಿತ್ತು. ಬೇರೆ ಗುಂಡಿಗಳು ಮುಚ್ಚುವ ಗೋಜಿಗೆ ಹೋಗದ ಪರಿಣಾಮ ದ್ವಿಚಕ್ರ ಸವಾರರು ಈ ರಸ್ತೆಯಲ್ಲಿ ಹರಸಾಹಸಪಟ್ಟು ಸಂಚಾರ ನಡೆಸುತ್ತಿದ್ದಾರೆ. ಮಳೆಗಾಲಕ್ಕೆ ಮುನ್ನ ರಸ್ತೆಗಳ ಗುಂಡಿಗಳನ್ನು ಮುಚ್ಚಿ ನಿರ್ವಹಣೆ ಮಾಡಬೇಕಿದ್ದ ಎನ್ಎಚ್ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಆದ್ದರಿಂದ ಮಳೆಗಾಲದಲ್ಲಿ ದೊಡ್ಡದೊಡ್ಡ ಹೊಂಡಗಳು ಸೃಷ್ಟಿಯಾಗುತ್ತಿದೆ.
ಒಂದೆರಡು ಸವಾರರು ರಸ್ತೆ ಗುಂಡಿಗೆ ಬಲಿಯಾದ ಬಳಿಕವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರೆ ಎಂಬುದನ್ನು ಅಧಿಕಾರಿಗಳು ಇದೀಗ ಮತ್ತೆ ಸಾಬೀತು ಮಾಡಿದ್ದಾರೆ. ಮಂಗಳವಾರ ಬೆಳಗ್ಗೆ ಎ.ಜೆ.ಆಸ್ಪತ್ರೆ ಸಿಬ್ಬಂದಿ ಮಹಿಳೆಯೋರ್ವರು ಮೃತಪಟ್ಟ ಕೆಲವೇ ಕ್ಷಣಗಳಲ್ಲಿ ಕೂಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳು ಧಾವಿಸುತ್ತಿದ್ದಾರೆ. ಈ ಕೆಲಸ ಮೊದಲೇ ಆಗುತ್ತಿದ್ದರೆ, ಒಂದು ಪ್ರಾಣವಾದರೂ ಉಳಿಯುತ್ತಿತ್ತು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಡಿಸಿಪಿ ರವಿಶಂಕರ್ ಅವರು, ‘ನಾವು ಎರಡೆರಡು ಬಾರಿ ಗುಂಡಿ ಮುಚ್ಚುವಂತೆ ಹೆದ್ದಾರಿ ಇಲಾಖೆಗೆ ನೋಟಿಸ್ ನೀಡಿದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಅಸಹಾಯಕತೆ ತೋರಿದ್ದಾರೆ. ಅಧಿಕಾರಿಗಳೇ ಇನ್ನಾದರೂ ಮೊದಲೇ ಎಚ್ಚೆತ್ತುಕೊಳ್ಳಿ. ಪ್ರಾಣಬಲಿಗಾಗಿ ಕಾಯದಿರಿ ಎಂಬುದೇ ನಮ್ಮ ಆಶಯ.
ಅಪರಾಧ
Mangalore:-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ
ಅಪ್ರಾಪ್ತ ಬಾಲಕನಿಗೆ ದೀರ್ಘಕಾಲ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯನ್ನು ಫಾದರ್ ಸಿಪ್ರಿಯನ್ ಪಿಂಟೋ ಎಂದು ಗುರುತಿಸಲಾಗಿದೆ.
ಮಂಗಳೂರು: ಅಪ್ರಾಪ್ತ ಬಾಲಕನಿಗೆ ದೀರ್ಘಕಾಲ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಆರೋಪಿಯನ್ನು ಫಾದರ್ ಸಿಪ್ರಿಯನ್ ಪಿಂಟೋ ಎಂದು ಗುರುತಿಸಲಾಗಿದೆ.
ಎಫ್ಐಆರ್ನಲ್ಲಿರುವ ಮಾಹಿತಿಯ ಪ್ರಕಾರ, ಪ್ರಾರ್ಥನೆಗಾಗಿ ನಿಯಮಿತವಾಗಿ ಚರ್ಚ್ಗೆ ಬರುತ್ತಿದ್ದ ಅಪ್ರಾಪ್ತ ಬಾಲಕನಿಗೆ ಆಮಿಷವೊಡ್ಡಿ, ಖಾಸಗಿ ಪ್ರಾರ್ಥನಾ ಕೊಠಡಿ ಹಾಗೂ ತಮ್ಮ ವಸತಿ ಕೊಠಡಿಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
2026ರ ಆಗಸ್ಟ್ 14ರಂದು ಸಂಜೆ ಪ್ರಾರ್ಥನೆಯ ಸಮಯದಲ್ಲಿಯೂ ಬಾಲಕನಿಗೆ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ. ಇದರಿಂದ ಭಯಭೀತನಾದ ಬಾಲಕ ಈ ವಿಚಾರವನ್ನು ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾನೆ. ಈ ವೇಳೆ ಇತರ ಕೆಲವು ಬಾಲಕರಿಗೂ ಇದೇ ರೀತಿಯ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.
ಬಳಿಕ ಸಂತ್ರಸ್ತ ಬಾಲಕ ತನ್ನ ಕುಟುಂಬದ ಸದಸ್ಯರಿಗೆ ಘಟನೆಯ ಬಗ್ಗೆ ತಿಳಿಸಿದ್ದಾನೆ. ಪೋಷಕರು ಈ ವಿಚಾರವನ್ನು ಬಿಷಪ್ ಅವರ ಗಮನಕ್ಕೆ ತಂದಿದ್ದು, ಅವರ ಸಲಹೆಯಂತೆ ಪೊಲೀಸರನ್ನು ಸಂಪರ್ಕಿಸಿ ಅಧಿಕೃತ ದೂರು ನೀಡಿದ್ದಾರೆ. ಈ ಮಧ್ಯೆ ಸಮಾಲೋಚನೆ ಪ್ರಕ್ರಿಯೆಯಿಂದಾಗಿ ದೂರು ನೀಡುವುದು ವಿಳಂಬವಾಯಿತು ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಪೋಕ್ಸೋ ಕಾಯ್ದೆಯ ಮಾರ್ಗಸೂಚಿಗಳ ಪ್ರಕಾರ ಸಂತ್ರಸ್ತರು ಹಾಗೂ ದೂರುದಾರರ ಗುರುತನ್ನು ಗೌಪ್ಯವಾಗಿಡಲಾಗಿದೆ. ಪ್ರಕರಣದ ಕುರಿತು ಮಂಗಳೂರು ದಕ್ಷಿಣ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮಂಗಳೂರು
MRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳ ಪೈಕಿ ಒಬ್ಬರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಅ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಎಂಆರ್ಪಿಎಲ್ನ ಫೇಸ್-3ರ ಸಿಎಚ್ಟಿಯು (Coker Hydro Treating Unit) ಪ್ಲಾಂಟ್ನಲ್ಲಿ ಕಳೆದ ಸೆಪ್ಟೆಂಬರ್ 30ರಂದು ಭಾರೀ ಸ್ಫೋಟ ಸಂಭವಿಸಿತ್ತು. ಅಂದು ಸಂಭವಿಸಿದ ದುರಂತದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು.
ಅದೇ ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯು (ICU) ಘಟಕದಲ್ಲಿ ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರ ದೇಹವನ್ನು ಇಂದು ಸಂಜೆಯ ವೇಳೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ (Post-mortem) ನಡೆಸಲಾಗುವುದು. ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿಕ್ಷಣ
Sahyadri-ವಿಟಿಯು ಮಂಗಳೂರು ವಿಭಾಗದ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಪುರುಷರ ತಂಡಕ್ಕೆ ರನ್ನರ್-ಅಪ್ ಪ್ರಶಸ್ತಿ
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ನ ಪುರುಷರ ಹ್ಯಾಂಡ್ಬಾಲ್ ತಂಡವು ಅಕ್ಟೋಬರ್ 15, 2026 ರಂದು ಮಂಗಳೂರಿನ ಬಿಐಟಿ (BIT) ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಮಂಗಳೂರು ವಿಭಾಗದ ಪುರುಷರ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ರನ್ನರ್-ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಮಂಗಳೂರು, ಅ.16: ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ನ ಪುರುಷರ ಹ್ಯಾಂಡ್ಬಾಲ್ ತಂಡವು ಅಕ್ಟೋಬರ್ 15, 2026 ರಂದು ಮಂಗಳೂರಿನ ಬಿಐಟಿ (BIT) ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಮಂಗಳೂರು ವಿಭಾಗದ ಪುರುಷರ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ರನ್ನರ್-ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಪಂದ್ಯಾವಳಿಯುದ್ದಕ್ಕೂ ತಂಡದ ಆಟಗಾರರು ಉತ್ತಮ ಸಂಘಟಿತ ಆಟ, ದೃಢಸಂಕಲ್ಪ ಮತ್ತು ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ತಂಡದ ಆಟಗಾರರ ವಿವರ:
- ಅಭಯ್ – 7ನೇ ಸೆಮಿಸ್ಟರ್, CSE
- ಹೃತಿಕ್ ಕೆ. ಸಿ. – 5ನೇ ಸೆಮಿಸ್ಟರ್, CSE
- ಕೆ. ಪಂಪಾಪತಿ – 5ನೇ ಸೆಮಿಸ್ಟರ್, CSE
- ವಿಕಾಸ್ – 3ನೇ ಸೆಮಿಸ್ಟರ್, ISE
- ಜಸ್ವಿತ್ ಎನ್. ಪೂಜಾರಿ – 3ನೇ ಸೆಮಿಸ್ಟರ್, AIML
- ಶಮಿತ್ ಜೆ. – 5ನೇ ಸೆಮಿಸ್ಟರ್, E&C (ತಂಡದ ನಾಯಕ)
- ಪ್ರಥೀಕ್ ಎನ್. ಕೊಟ್ಟಾರಿ – 3ನೇ ಸೆಮಿಸ್ಟರ್, E&C
- ರಿತೇಶ್ ಶೆಟ್ಟಿ – 3ನೇ ಸೆಮಿಸ್ಟರ್, E&C
- ಜ್ಯೇಷ್ಣ್ ಯು. ಕುಂದರ್ – 1ನೇ ಸೆಮಿಸ್ಟರ್, AIML
- ಮಿಲನ್ ಎನ್. ಬಿ. – 1ನೇ ಸೆಮಿಸ್ಟರ್, CSE
- ಪೃಥ್ವಿಕ್ – 1ನೇ ಸೆಮಿಸ್ಟರ್, ECE
- ಆಟಗಾರರ ಪರಿಶ್ರಮ, ಸಮರ್ಪಣೆ ಮತ್ತು ತಂಡದ ಸಂಘಟಿತ ಪ್ರಯತ್ನವೇ ಈ ಸಾಧನೆಗೆ ಕಾರಣವಾಗಿದೆ. ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಸಂಸ್ಥೆಯು ನೀಡುತ್ತಿರುವ ನಿರಂತರ ಪ್ರೋತ್ಸಾಹವು ಇಂತಹ ಸಾಧನೆಗಳಿಗೆ ಪ್ರೇರಣೆಯಾಗಿದೆ.
- ಈ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ವರ್ಗ ಹಾಗೂ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದವರು ತಂಡದ ಎಲ್ಲಾ ಆಟಗಾರರನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದ್ದಾರೆ.
-
ಮೈಸೂರು22 hours agoMysuru-ಮೈಸೂರು ದಸರಾ ವೇಳೆ 10 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ
-
ಅಪರಾಧ22 hours agoPuttur-ಪುತ್ತೂರು: ಮಹಿಳೆಯ ಮೇಲೆ ಹಲ್ಲೆ, ಮಾನಭಂಗ ಪ್ರಕರಣ; ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
-
ಮಂಗಳೂರು23 hours agoMRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
-
ಅಪರಾಧ21 hours agoUppinangadi-ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ ನಗದು, ಮೊಬೈಲ್ ದರೋಡೆ; ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
-
ಅಪರಾಧ23 hours agoMangalore:-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ
-
ಅಂತರ ರಾಜ್ಯ22 hours agoL.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
-
ಕಾರ್ಯಕ್ರಮಗಳು21 hours agoPraveen Capital-ಪ್ರವೀಣ್ ಕ್ಯಾಪಿಟಲ್ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ: 2030ರ ವೇಳೆಗೆ 100 ಶಾಖೆ ಸ್ಥಾಪನೆಯ ಗುರಿ; ಸತ್ಯ ಶಂಕರ್ ಅವರ ಸಾಧನೆಯನ್ನು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ ಉಲ್ಲೇಖಿಸುತ್ತೇನೆ – ಅಶೋಕ್ ರೈ
-
ಸ್ಥಳೀಯ21 hours agoYouth Congress-ನಾವೂರು ಪ್ರಕರಣ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್ ನಿಂದ ಪೊಲೀಸ್ ಠಾಣೆಗೆ ದೂರು


















