Connect with us

ವೈರಲ್‌ ನ್ಯೂಸ್‌

36ರ ಹರೆಯದ ಯುವಕ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆಗೆ ಇಳಿದಾಗ ಸೋಷಿಯಲ್ ಮೀಡಿಯಾ ಬ್ಯಾನ್ : ಕೆರಳಿದ ಯುವ ಜನತೆಯಿಂದ ನೇಪಾಳ ಪ್ರಧಾನಿ ನಿವಾಸಕ್ಕೆ ಬೆಂಕಿ – ಈ ಯುವಕನ ಒಂದು ಪೋಸ್ಟ್ ಗೆ ಸೇರುತ್ತಿದ್ದರು ಲಕ್ಷ ಲಕ್ಷ ಜನ – ನೇಪಾಳದ ಸರ್ಕಾರವನ್ನೇ ಅಳುಗಾಡಿಸಿದ ಸುದಾನ್ ಗುರುಂಗ್ ಎಷ್ಟು ಪವರ್ ಪುಲ್ ಗೊತ್ತಾ..?

Published

on



Ad Widget

Ad Widget

Ad Widget

Ad Widget

ಕಠ್ಮಂಡು: ನೇಪಾಳದ ಓಲಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭ ಸೋಷಿಯಲ್ ಮೀಡಿಯಾ ನಿಷೇಧಿಸಿದ ಪರಿಣಾಮ ಸರ್ಕಾರವೇ ಬಿದ್ದು ಹೋಗುವ ಮಟ್ಟಕ್ಕೆ ಪ್ರತಿಭಟನೆ ಎದ್ದಿದೆ. ನೇಪಾಳದಲ್ಲಿ ಯುವಜನರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಿಂದ ಅಲ್ಲಿನ ನೇಪಾಳ ಸರ್ಕಾರ ಅಕ್ಷರಶಃ ಕಂಗಾಲಾಗಿದೆ. ಅಲ್ಲಿನ ಪ್ರಧಾನಿ ಕೆಪಿ ಓಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಅಲ್ಲಿನ ಯುವಜನರು ಅಲ್ಲಿನ ಸರ್ಕಾರವನ್ನೇ ಅಲುಗಾಡಿಸಿದೆ. ಪೊಲೀಸ್, ಮಿಲಿಟರಿಯಂಥ ದೊಡ್ಡ ದೊಡ್ಡ ಪಡೆಗಳೇ ಇದ್ದರೂ ಆ ದೇಶದ ಆಡಳಿತಗಾರರು ಕೈ ಕಟ್ಟಿಕೊಳ್ಳುವಂತೆ ಕೂರುವಂಥ ಪರಿಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget

Ad Widget

Ad Widget

ಇಷ್ಟೆಲ್ಲಾ ಬೆಳವಣಿಗೆಗೆ ಕಾರಣವಾಗಿದ್ದು ಅಲ್ಲಿನ ಕೇಂದ್ರ ಸರ್ಕಾರ, ಸಾಮಾಜಿಕ ಜಾಲತಾಣವನ್ನು ಬ್ಯಾನ್ ಮಾಡಲು ನಿರ್ಧರಿಸಿತ್ತು. ಇದು ಪ್ರತಿಭಟನೆಗೆ ಮೂಲ ಕಾರಣ. ಆದರೆ, ಈ ಪ್ರತಿಭಟನೆಗೆ ಪುಷ್ಟಿ ನೀಡಿದ್ದು ಆ 36 ವರ್ಷದ ವ್ಯಕ್ತಿ ನೀಡಿದ ಕರೆ.

Ad Widget

Ad Widget

Ad Widget alt="Ad Widget"/>

Ad Widget

ಆತ ನೀಡಿದ ಪ್ರತಿಭಟನೆಯ ಒಂದೇ ಒಂದು ಕರೆಗೆ ಓಗೊಟ್ಟ ನೇಪಾಳದ ಕೋಟ್ಯಂತರ ಯುವಜನರು, ತಮ್ಮ ಶಾಲಾಕಾಲೇಜುಗಳನ್ನು ತೊರೆದು, ತಮ್ಮ ಉದ್ಯೋಗ, ಮನೆ-ಮಠಗಳನ್ನು ಬಿಟ್ಟು ಬಂದು ಹೋರಾಟದಲ್ಲಿ ಸಕ್ರಿಯರಾಗಿ ಭಾಗವಹಿಸಿದರು. ಅದೀಗ, ಪ್ರಧಾನಿಯೇ ರಾಜೀನಾಮೆ ಕೊಡುವಷ್ಟರ ಮಟ್ಟಿಗೆ ಬೆಳೆದು ನಿಂತಿದೆಯೆಂದರೆ, ತನ್ನ ಒಂದೇ ಒಂದು ಕರೆಯಿಂದ ಲಕ್ಷಾಂತರ ಯುವಜನರನ್ನು ಹೋರಾಟಕ್ಕೆ ಅಣಿಗೊಳಿಸಿದ ಆ ವ್ಯಕ್ತಿಯ ಇಮೇಜ್ ಹೇಗಿರಬೇಡ ನೀವೇ ಯೋಚಿಸಿ. ಸೆ. 9ರಂದು ಆ ಪ್ರತಿಭಟನಾಕಾರರು ಪ್ರಧಾನಿ ನಿವಾಸಕ್ಕೇ ಬೆಂಕಿ ಹಚ್ಚಿದ್ದಾರೆ. ರಾಷ್ಟ್ರಾಧ್ಯಕ್ಷ ಮನೆಯಲ್ಲೂ ದಾಂಧಲೆ ಮಾಡಿದ್ದಾರೆ.

Ad Widget

Ad Widget <> Ad Widget

ಯಾರು ಸುದಾನ್ ಗುರುಂಗ್..?
ಆತನ ಹೆಸರು, ಸುದಾನ್ ಗುರುಂಗ್. ವಯಸ್ಸು 36 ವರ್ಷ. ಆತ ಒಂದು ಸರ್ಕಾರೇತರ ಸಂಘಟನೆಯನ್ನು ನಡೆಸುತ್ತಿದ್ದಾನೆ. ಆ ಸಂಘಟನೆಯ ಹೆಸರು ಹಮಿ ನೇಪಾಳ್. ಆರಂಭದಲ್ಲಿ ಸಣ್ಣ ಸಂಘಟನೆಯಾಗಿದ್ದು ಆನಂತರದಲ್ಲಿ ಇದು ಸಾಮಾಜಿಕ ಹೋರಾಟಗಳನ್ನು ಮಾಡುತ್ತಾ ಜನರ ಗಮನ ಸೆಳೆದಿದೆ. ಆತ ಈಗ ನೇಪಾಳದಲ್ಲಿ ಯೂತ್ ಐಕಾನ್.



Ad Widget

ಸುಮಾರು 10 ವರ್ಷಗಳಿಂದ ನೇಪಾಳದಲ್ಲಿ ಆತ ಪ್ರಮುಖ ಹೋರಾಟಗಾರನಾಗಿ ಗುರುತಿಸಿಕೊಂಡಿದ್ದಾನೆ. ತನ್ನ ಹಮಿ ನೇಪಾಳ್ ಎಂಬ ಸಂಘಟನೆಯ ಸೋಷಿಯಲ್ ಮೀಡಿಯಾ ಪೇಜ್ ಗಳಲ್ಲಿ ಈತ ಒಂದು ಕರೆ ಕೊಟ್ಟರೆ ಸಾಕು ವಿದ್ಯಾರ್ಥಿಗಳು, ಯುವಜನರು ತಮ್ಮೆಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು ಬೀದಿಯಲ್ಲಿ ಪ್ರತಿಭಟನೆಗೆ ಇಳಿಯುತ್ತಾರೆ.

Ad Widget

Ad Widget

ಈಗ ನೇಪಾಳದಲ್ಲಿ ನಡೆಯುತ್ತಿರುವ ಸಾಮಾಜಿಕ ಜಾಲತಾಣಗಳ ಬ್ಯಾನ್ ವಿರುದ್ಧದ ಹೋರಾಟಕ್ಕೂ ಮುನ್ನ ಈತ, ತನ್ನ ಎನ್.ಜಿ.ಓ. ಮೂಲಕ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳೂ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು. ಎಲ್ಲರೂ ಯುನಿಫಾರ್ಮ್ ಧರಿಸಿರಬೇಕು ಹಾಗೂ ಶಾಲಾ ಕಾಲೇಜುಗಳ ಬ್ಯಾಗನ್ನು ತಮ್ಮ ಜೊತೆಯಲ್ಲಿಟ್ಟುಕೊಂಡು ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ಇದು ಶಾಂತಿಯುತ ಪ್ರತಿಭಟನೆಯಾಗಿರಬೇಕು ಎಂದು ಆತ ಕರೆ ಕೊಟ್ಟಿದ್ದಷ್ಟೆ. ಆತನ ಮಾತು ಕೇಳಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡಿದರು.

“ದೇಶದಲ್ಲಿ ದೀರ್ಘಾವಧಿಯ ಭ್ರಷ್ಟಾಚಾರದಿಂದ ನಮ್ಮ ಭವಿಷ್ಯ ವನ್ನೇ ಕಸಿದುಕೊಂಡಿದೆ. ನಮ್ಮ ಕನಸುಗಳನ್ನು ಕಸಿದುಕೊಂಡಿದೆ, ನಮ್ಮ ದೇಶದ ಗೌರವವನ್ನು ಕಸಿದುಕೊಂಡಿದೆ. ಇದರ ಜತೆಗೆ ನಾವು ದೇಶದ ಮುಖಂಡರನ್ನು ಗಮನಿಸುತ್ತಾ ಬೆಳೆದಿದ್ದೇವೆ… ನೇಪಾಳದ ರಾಜಕೀಯ ಮುಖಂಡರು ಶ್ರೀಮಂತರಾಗುತ್ತಲೇ ಇದ್ದಾರೆ, ಜನಸಾಮಾನ್ಯರು ಮಾತ್ರ ಬದುಕಲು ಹೆಣಗಾಡುತ್ತಿದ್ದಾರೆ. ದೇಶದಲ್ಲಿ ಅನ್ಯಾಯ ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಆದರೆ ಇ ನ್ನು ಹೆಚ್ಚು ದಿನಗಳ ಕಾಲ ಇದು ಮುಂದುವರಿಯಲು ಬಿಡುವುದಿಲ್ಲ. ಅದಕ್ಕಾಗಿಯೇ ಹಮಿ ನೇಪಾಳ್‌ ಶೀಘ್ರದಲ್ಲೇ ಭ್ರ ಷ್ಟಾಚಾರದ ವಿರುದ್ಧ ಯುವ ಸಮೂಹದ ಹೋರಾಟದ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ತಿಳಿಸಿತ್ತು. ಅದರಂತೆ ಸೂಡಾನ್ ಗುರುಂಗ್ ನೆರೆದಿದ್ದ ಜನಸ್ತೋಮಕ್ಕೆ ಹೇಗೆ ಪ್ರತಿಭಟ ನೆ ನಡೆಸಬೇಕು, ಏನು ಮಾಡಬೇಕು ಹಾಗೂ ಏನನ್ನು ಮಾಡ ಬಾರದು ಎಂಬುದಾಗಿ ವಿವರಿಸಿದ್ದರು. ಅಲ್ಲದೇ ಒಂದು ವೇಳೆ ಪೊಲೀಸ್ ಗೋಲಿಬಾರ್ ನಲ್ಲಿ ಜನರು ಸಾವನ್ನಪ್ಪಿದರೆ ಹಮಿ ನೇಪಾಳ್ ಸ್ವಯಂ ಸೇವಕರು ಕೂಡಲೇ ಅವರ ನೆರವಿಗೆ ಧಾವಿಸುಂತೆ ಕರೆ ನೀಡಿದ್ದರು.

ಅಷ್ಟಕ್ಕೂ ಈ ಸುದಾನ್ ಗುರುಂಗ್ ಯಾರು?
ಈತ, ನೇಪಾಳದ ಒಬ್ಬ ಪದವೀಧರ. ಇವೆಂಟ್ ಮ್ಯಾನೇಜರ್ ಆಗಿ ತನ್ನದೇ ಒಂದು ಸ್ವಂತ ಕಂಪನಿಯನ್ನು ನಡೆಸಿಕೊಂಡಿದ್ದು. ಪತ್ನಿ ಮಗಳೊಂದಿಗೆ ಆರಾಮಾಗಿ ಜೀವನ ಸಾಗಿಸುತ್ತಿದ್ದ. ಆದರೆ, 2015ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭೂಕಂಪ ಈತನ ಜೀವನವನ್ನೇ ಬದಲಿಸಿತು. ಆ ಭೂಕಂಪದಲ್ಲಿ ಆತ ತನ್ನ ಪುತ್ರಿಯನ್ನು ಕಳೆದುಕೊಂಡ.
ಆ ದುಃಖದಿಂದ ಚೇತರಿಸಿಕೊಂಡಾದ ನಂತರ ಆತ ಭೂಕಂಪಕ್ಕೆ ಬಲಿಯಾದವರ ಕುಟುಂಬಸ್ಥರಿಗೆ ಸರ್ಕಾರದಿಂದ ನೆರವು ಒದಗಿಸಿಕೊಡುವ ಸಾಮಾಜಿಕ ಕಾರ್ಯಕ್ಕೆ ಕೈ ಹಾಕಿದ. ಅದೇ ಕಾರಣಕ್ಕಾಗಿಯೇ ಹಮಿ ನೇಪಾಳ್ ಎಂಬ ಸರ್ಕಾರೇತರ ಸಂಸ್ಥೆಯನ್ನು ಹುಟ್ಟುಹಾಕಿದ. ಈಗಲೂ ಆತನೇ ಆ ಸರ್ಕಾರೇತರ ಸಂಸ್ಥೆಯ ಅಧ್ಯಕ್ಷ.

ದೊಡ್ಡ ಹೆಸರು ತಂದುಕೊಟ್ಟ ‘ಸೇವ್ ಘೊಪಾ’ ಪ್ರತಿಭಟನೆ
ಕ್ರಮೇಣ ಈತನ ಸರ್ಕಾರೇತರ ಸಂಸ್ಥೆಯು ಜನವಿರೋಧಿ ಧೋರಣೆಗಳನ್ನು ಖಂಡಿಸುವ ಹಾಗೂ ಅವುಗಳ ವಿರುದ್ಧ ಹೋರಾಟ ಮಾಡಿ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಿಕೊಡುವ ಕೆಲಸಕ್ಕೆ ಕೈ ಹಾಕಿತು. ಆ ನಿಟ್ಟಿನಲ್ಲಿ ಈ ಸಂಸ್ಥೆ ಮಾಡಿದ್ದ ದೊಡ್ಡ ಹೋರಾಟವೆಂದರೆ, ಅದು 2022ರಲ್ಲಿ ನಡೆದಿದ್ದ ಬಿ.ಪಿ. ಕೊಯಿರಾಲಾ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ (ಬಿಪಿಕೆಐಎಚ್ಎಸ್) ಹೆಸರಿನ ವೈದ್ಯಕೀಯ ಕಾಲೇಜಿನಲ್ಲಿ ಇದ್ದ ಅವ್ಯವಸ್ಥೆಗಳ ವಿರುದ್ಧದ ಹೋರಾಟ.

ಅಲ್ಲಿನ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಎಂಟ್ರಿಯಾದ ಈತನ ಸಂಘಟನೆ ಬರೋಬ್ಬರಿ 138 ದಿನಗಳವರೆಗೆ ಪ್ರತಿಭಟನೆ ನಡೆಸಿತು. ಸಾವಿರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಈತನ ನೇತೃತ್ವದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದ 32 ಡಿಮ್ಯಾಂಡ್ ಗಳಲ್ಲಿ ಹಲವನ್ನು ಈಡೇರಿಸಲು ಸರ್ಕಾರ ಒಪ್ಪಿಕೊಂಡಿತು. ಇನ್ನೂ ಕೆಲವು ಡಿಮ್ಯಾಂಡ್ ಗಳನ್ನು ಈಡೇರಿಸಲು ಸ್ವಲ್ಪ ಸಮಯ ಬೇಕು ಎಂದು ಕೇಳಿಕೊಂಡಿತು. ಅಲ್ಲಿಗೆ, ಗುರುಂಗ್ ನಡೆಸಿದ್ದ ಹೋರಾಟಕ್ಕೆ ಜಯ ಸಿಕ್ಕಂತಾಯಿತು.

ವಿದ್ಯಾರ್ಥಿಗಳು ಈ ಮುಷ್ಕರಕ್ಕೆ ಗುರುಂಗ್ ಅವರ ಹಮಿ ನೇಪಾಳ್ ಸಂಸ್ಥೆ ಎಂಟ್ರಿ ಕೊಟ್ಟಿದ್ದಕ್ಕೆ ಯಶಸ್ವಿಯಾಗಿದ್ದೆಂದು ಕೊಂಡಾಡಿದರು. ಇಂಥ ಅನೇಕ ವಿದ್ಯಾರ್ಥಿಪರ ಮುಷ್ಕರಗಳಲ್ಲಿ ಗುರುಂಗ್ ಹಾಗೂ ಆತನ ಎನ್.ಜಿ.ಒ ಭಾಗಿಯಾಗಲು ಇದು ಪ್ರೇರಣೆ ನೀಡಿತು.

ಯೂತ್ ಐಕಾನ್
ಮೇಲೆ ತಿಳಿಸಲಾದ ಹೋರಾಟಗಳಿಂದ ಇಂದು ಗುರುಂಗ್, ನೇಪಾಳದ ದೊಡ್ಡ ಯೂತ್ ಐಕಾನ್ ಎಂಬಂತಾಗಿದ್ದಾನೆ. ಆತ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಒಂದು ಕರೆ ಕೊಟ್ಟರೂ ಸಾಕು, ಲಕ್ಷಾಂತರ ವಿದ್ಯಾರ್ಥಿಗಳು ಸೇರುತ್ತಾರೆ. ಅಷ್ಟರ ಮಟ್ಟಿಗೆ ಯುವ ಶಕ್ತಿಯಾಗಿ ಆತ ಬೆಳೆದು ನಿಂತಿದ್ದಾನೆ. ಈಗ ನೇಪಾಳದಲ್ಲಿ ನಡೆಯುತ್ತಿರುವ ಯುವಜನರ ಭಾರೀ ಪ್ರತಿಭಟನೆಗೂ ಈತ ಕರೆ ಕೊಟ್ಟಿದ್ದು ಅದು ಖುದ್ದು ನೇಪಾಳ ಪ್ರಧಾನಿ ಕೆ.ಪಿ. ಓಲಿಯವರೇ ದೇಶ ಬಿಟ್ಟು ಓಡಿ ಹೋಗುವಂಥ ಪರಿಸ್ಥಿತಿಯನ್ನು ತಂದೊಡ್ಡಿದೆ.

Ad Widget
Click to comment

Leave a Reply

ವೈರಲ್‌ ನ್ಯೂಸ್‌

ಸಿಎಂ ಪುಟದಲ್ಲಿ ಮೊಳಗಿದ ಪುತ್ತೂರಿನ ಕಂಠ – ತುಳುನಾಡಿನ ಸಂಸ್ಕೃತಿ – ಭಾಷಾ ಸೊಗಡಿಗೆ ಧ್ವನಿಯಾದ ದಿವ್ಯಶ್ರೀ ರೈ ವಜ್ರದುಂಬಿ

Published

on



Ad Widget

Ad Widget

Ad Widget

Ad Widget

ಪುತ್ತೂರು: ತುಳುವಿಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ದೊರೆತ ಸಂಭ್ರಮದ ನಡುವೆಯೇ, ತುಳುನಾಡಿನ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸೊಬಗನ್ನು ಪರಿಚಯಿಸುವ ವಿಡಿಯೋವೊಂದಕ್ಕೆ ಪುತ್ತೂರಿನ ಕುಂಬ್ರದ ದಿವ್ಯಶ್ರೀ ರೈ ವಜ್ರದುಂಬಿ ಅವರು ನೀಡಿರುವ ಹಿನ್ನಲೆ ಧ್ವನಿ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.

Ad Widget

Ad Widget

Ad Widget

Ad Widget


ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಗುರುತಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ಇನ್‌ಸ್ಟಾಗ್ರಾಂ ಪುಟದಲ್ಲಿ ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಆಚಾರ ವಿಚಾರವನ್ನು ಬಿಂಬಿಸುವ ವಿಡಿಯೋ ಹಂಚಿಕೊಳ್ಳಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಕಂಠಸಿರಿ ಹಿನ್ನಲೆ ಧ್ವನಿಯಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget


ವಿಡಿಯೋದಲ್ಲಿ ತುಳುನಾಡಿನ ಪ್ರಕೃತಿ ಸೌಂದರ್ಯ, ಸಾಹಿತ್ಯ , ಸಂಸ್ಕೃತಿ, ಸಂಪ್ರದಾಯ, ಬದುಕಿನ ವೈವಿಧ್ಯ ಹಾಗೂ ತುಳು ಭಾಷೆಯ ಸೊಗಡನ್ನು ಮನಮುಟ್ಟುವ ರೀತಿಯಲ್ಲಿ ಕಟ್ಟಿಕೊಡಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಧ್ವನಿ ಮತ್ತಷ್ಟು ಜೀವ ತುಂಬಿದೆ. ಮಾತುಗಳನ್ನು ಕೇವಲ ಕೇಳಿಸುವುದಕ್ಕಿಂತ, ಅವುಗಳ ಭಾವವನ್ನು ಕೇಳುಗರ ಮನಸ್ಸಿಗೆ ತಲುಪಿಸುವ ರೀತಿಯ ಅವರ ಧ್ವನಿ ನಿರೂಪಣೆ ವಿಡಿಯೋಗೆ ವಿಶೇಷ ಮೆರುಗು ನೀಡಿದೆ.

Ad Widget

Ad Widget <> Ad Widget


ಮುಖ್ಯಮಂತ್ರಿಗಳ ಅಧಿಕೃತ ಪುಟದಲ್ಲಿ ಪ್ರಸಾರವಾದ ಈ ವಿಡಿಯೋಗೆ ಅಲ್ಪಾವಧಿಯಲ್ಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ ಎರಡು ದಿನಗಳಲ್ಲಿ ಸುಮಾರು 5 ಲಕ್ಷ ವೀಕ್ಷಣೆ ಪಡೆದುಕೊಂಡಿದೆ. ತುಳುವಿನ ಬಗ್ಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಕರಾವಳಿಯ ಜನರ ನಡುವೆ ಈ ವಿಡಿಯೋ ವಿಶೇಷ ಗಮನ ಸೆಳೆದಿದ್ದು, ದಿವ್ಯಶ್ರೀ ಅವರ ಕಂಠಸಿರಿಯೂ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.



Ad Widget


ನಿರೂಪಕಿ ಹಾಗೂ ವಾಯ್ಸ್‌ಓವರ್ ಆರ್ಟಿಸ್ಟ್ ಆಗಿರುವ ದಿವ್ಯಶ್ರೀ, ತಮ್ಮ ಧ್ವನಿಯ ಏರಿಳಿತ, ಉಚ್ಚಾರಣೆಯ ಸ್ಪಷ್ಟತೆ ಹಾಗೂ ಭಾವಪೂರ್ಣ ನಿರೂಪಣೆಯ ಮೂಲಕ ತುಳುನಾಡಿನ ಮಣ್ಣಿನ ಸೊಗಡನ್ನು ಧ್ವನಿಯಲ್ಲೇ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ತುಳು ಭಾಷೆಯ ಬಗ್ಗೆ ಹೆಮ್ಮೆ, ಕರಾವಳಿಯ ಸಂಸ್ಕೃತಿಯ ಬಗ್ಗೆ ಅಭಿಮಾನ ಹಾಗೂ ವಿಡಿಯೋದಲ್ಲಿನ ದೃಶ್ಯಗಳಿಗೆ ಹೊಂದಿಕೊಳ್ಳುವ ಧ್ವನಿ ನಿರೂಪಣೆ ಅವರ ವಾಯ್ಸ್‌ಓವರ್‌ನ ವಿಶೇಷತೆಯಾಗಿದೆ.

Ad Widget

Ad Widget


ಪ್ರಸ್ತುತ ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಶ್ರೀ, ಇದಕ್ಕೂ ಮೊದಲು ಹಲವು ಸುದ್ದಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪತ್ರಿಕೋದ್ಯಮದ ಅನುಭವದ ಜತೆಗೆ ಡಾಕ್ಯುಮೆಂಟರಿ, ವಿಶೇಷ ವರದಿ ಹಾಗೂ ಜಾಹೀರಾತುಗಳಿಗೆ ಧ್ವನಿ ನೀಡಿರುವ ಅವರು ವಾಯ್ಸ್‌ಓವರ್ ಕ್ಷೇತ್ರದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. “ನಿಖರ ನ್ಯೂಸ್”ನ ಹಲವಾರು ವಿಡಿಯೋಗಳಲ್ಲೂ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.


2023ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುವ ದಿವ್ಯಶ್ರೀ, ಅಧ್ಯಯನ ಹಾಗೂ ವೃತ್ತಿ ಎರಡೂ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.


ಅರಿಯಡ್ಕ ಗ್ರಾಮದ ತ್ಯಾಗರಾಜನಗರ ನಿವಾಸಿ ವಿಠಲ ರೈ ಹಾಗೂ ಶಾಲಿನಿ ರೈ ದಂಪತಿಯ ಪುತ್ರಿಯಾಗಿರುವ ದಿವ್ಯಶ್ರೀ ಅವರ ವೃತ್ತಿ ಬದುಕಿನ ಹೆಜ್ಜೆಗಳಿಗೆ ಸಹೋದರಿ ಮಧುಶ್ರೀ ರೈ ಅವರೂ ಪ್ರೋತ್ಸಾಹ ನೀಡುತ್ತಿದ್ದಾರೆ.
ತುಳುವಿಗೆ ಅಧಿಕೃತ ಮಾನ್ಯತೆ ದೊರೆತ ಸಂಭ್ರಮದ ಕ್ಷಣದಲ್ಲಿ, ತುಳುನಾಡಿನ ಕಥೆಯನ್ನು ತಮ್ಮ ಕಂಠದ ಮೂಲಕ ಸಾವಿರಾರು ಜನರಿಗೆ ತಲುಪಿಸಿದ ದಿವ್ಯಶ್ರೀ ರೈ ವಜ್ರದುಂಬಿ ಅವರ ಧ್ವನಿ ಈಗ ಪುತ್ತೂರಿನಿಂದ ತುಳುನಾಡಿನಾಚೆಗೂ ಕೇಳಿಸುತ್ತಿದೆ.

Ad Widget
Continue Reading

ಅಂತರ ರಾಜ್ಯ

Punjab-ಪಂಜಾಬ್ ವಿವಾಹದಲ್ಲಿ ವಧುವಿನ ಮೇಲೆ 8 ಕೋಟಿ ರೂ. ನೋಟುಗಳ ಮಳೆ: ಹಬ್ಬಿದ್ದ ವದಂತಿಗೆ ಬಿತ್ತು ಬ್ರೇಕ್; ಅಸಲಿ ಮೊತ್ತ ಎಷ್ಟು ಗೊತ್ತೇ?

Published

on



Ad Widget

Ad Widget

Ad Widget

Ad Widget

ಪಂಜಾಬ್‌ನ ತರಣ್ ತರಣ್‌ನಲ್ಲಿ ಇತ್ತೀಚೆಗೆ ನಡೆದ ಅದ್ಧೂರಿ ವಿವಾಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮದುವೆಯ ಸಂಭ್ರಮದಲ್ಲಿ ವರ ಮತ್ತು ವಧುವಿನ ಮೇಲೆ ಬರೋಬ್ಬರಿ 8 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸುರಿಮಳೆಗೈಯಲಾಗಿದೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹರಡಿತ್ತು.

Ad Widget

Ad Widget

Ad Widget

Ad Widget

ಅಮೃತಸರ, ಫೆ.19: ಪಂಜಾಬ್‌ನ ತರಣ್ ತರಣ್‌ನಲ್ಲಿ ಇತ್ತೀಚೆಗೆ ನಡೆದ ಅದ್ಧೂರಿ ವಿವಾಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮದುವೆಯ ಸಂಭ್ರಮದಲ್ಲಿ ವರ ಮತ್ತು ವಧುವಿನ ಮೇಲೆ ಬರೋಬ್ಬರಿ 8 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸುರಿಮಳೆಗೈಯಲಾಗಿದೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹರಡಿತ್ತು.

Ad Widget

Ad Widget

Ad Widget alt="Ad Widget"/>

Ad Widget

ಘಟನೆಯ ಹಿನ್ನೆಲೆ:
ರಾಜಮನೆತನದ ಶೈಲಿಯಲ್ಲಿ ನಡೆದ ಈ ವಿವಾಹದಲ್ಲಿ, ಸಂಭ್ರಮಾಚರಣೆಯ ಭಾಗವಾಗಿ ನೋಟುಗಳನ್ನು ಗಾಳಿಯಲ್ಲಿ ತೂರಿ ಸುರಿಮಳೆಗೈಯಲಾಗಿತ್ತು. ಅತಿಥಿಗಳು ಈ ದೃಶ್ಯವನ್ನು ಕಂಡು ಆಶ್ಚರ್ಯಚಕಿತರಾಗಿದ್ದರು. ಈ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದಂತೆ, ಕೆಲವರು ಇದನ್ನು ಶ್ರೀಮಂತಿಕೆಯ ಪ್ರದರ್ಶನ ಎಂದು ಟೀಕಿಸಿದರೆ, ಇನ್ನು ಕೆಲವರು ಇದು ಅಲ್ಲಿನ ಸಂಪ್ರದಾಯ ಎಂದು ಅಭಿಪ್ರಾಯಪಟ್ಟಿದ್ದರು. ಕೋಟ್ಯಂತರ ರೂಪಾಯಿ ಹಣವನ್ನು ಹೀಗೆ ಪೋಲು ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ಆರಂಭವಾಗಿದ್ದವು.

Ad Widget

Ad Widget <> Ad Widget

ಅಸಲಿ ಸತ್ಯ ಬಹಿರಂಗ:
ಆದರೆ, ಈ ಹರಡಿದ್ದ ಸುದ್ದಿಯಲ್ಲಿ ಸತ್ಯಾಂಶವಿಲ್ಲ ಎಂಬುದು ಈಗ ತಿಳಿದುಬಂದಿದೆ. ಮದುವೆಯ ಕಾರ್ಯಕ್ರಮದಲ್ಲಿದ್ದ ಡಿಜೆ ಆಪರೇಟರ್ ಈ ಕುರಿತು ಅಸಲಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ವಾಸ್ತವವಾಗಿ ಅಲ್ಲಿ ಸುರಿಸಿದ್ದು 8 ಕೋಟಿ ರೂಪಾಯಿಗಳನ್ನಲ್ಲ, ಬದಲಿಗೆ ಕೇವಲ 3 ಲಕ್ಷ ರೂಪಾಯಿಗಳನ್ನು ಮಾತ್ರ!



Ad Widget

ಹಣದ ರಾಶಿ ದೊಡ್ಡದಾಗಿ ಕಾಣಲು ಕಾರಣವೆಂದರೆ, ಅಲ್ಲಿ ಬಳಸಲಾದ ಬಹುಪಾಲು ನೋಟುಗಳು 10 ರೂಪಾಯಿ ಮುಖಬೆಲೆಯದ್ದಾಗಿದ್ದವು. ಕಡಿಮೆ ಮುಖಬೆಲೆಯ ನೋಟುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ, ನೋಡುವವರಿಗೆ ಅದು ಕೋಟ್ಯಂತರ ರೂಪಾಯಿಯಂತೆ ಭಾಸವಾಗಿತ್ತು. “ಇದು ಕುಟುಂಬದ ಸಂತೋಷವನ್ನು ವ್ಯಕ್ತಪಡಿಸುವ ಒಂದು ವಿಧಾನ ಮತ್ತು ಸ್ಥಳೀಯ ಆಚರಣೆಯ ಭಾಗವಾಗಿದೆ” ಎಂದು ಸ್ಪಷ್ಟಪಡಿಸಲಾಗಿದೆ.

Ad Widget

Ad Widget

ಒಟ್ಟಿನಲ್ಲಿ, 8 ಕೋಟಿ ರೂಪಾಯಿ ಎಂದು ಹಬ್ಬಿದ್ದ ಸುದ್ದಿ ಕೇವಲ ಅತಿಶಯೋಕ್ತಿಯಾಗಿದ್ದು, ಸತ್ಯ ತಿಳಿಯುತ್ತಿದ್ದಂತೆ ವಿವಾದಕ್ಕೆ ತೆರೆ ಬಿದ್ದಿದೆ.

Ad Widget
Continue Reading

ವೈರಲ್‌ ನ್ಯೂಸ್‌

ಚೀನಾದಲ್ಲಿ ಇತಿಹಾಸ ನಿರ್ಮಾಣ : ಗಂಟೆಗೆ 700ಕಿಮೀ ವೇಗದಲ್ಲಿ ಸಂಚರಿಸುವ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

Published

on



Ad Widget

Ad Widget

Ad Widget

Ad Widget

ಬೀಜಿಂಗ್‌: ನವೀನ ತಂತ್ರಜ್ಞಾನಗಳಿಂದ ಜಗತ್ತನ್ನು ನಿಬ್ಬೆರಗುಗೊಳಿಸುವ ಚೀನಾ ಇದೀಗ ಮತ್ತೊಂದು ಇತಿಹಾಸ ನಿರ್ಮಿಸಿದೆ. ಗಂಟೆಗೆ 700 ಕಿ.ಮೀ ಸಂಚರಿಸುವ ಸೂಪರ್‌ ಕಂಡಕ್ಟಿವ್‌ ಮ್ಯಾಗ್ಲೆವ್‌ ರೈಲಿನ ಮಾದರಿಯ ಪ್ರಾಯೋಗಿಕ ಪರೀಕ್ಷೆಯನ್ನು ಚೀನಾ ಯಶಸ್ವಿಯಾಗಿ ನಡೆಸಿದೆ. ಈ ವೇಗ ನೂತನ ವಿಶ್ವದಾಖಲೆಯಾಗಿದೆ. ಒಂದು ವೇಳೆ ಈ ರೈಲು ನಿಜರೂಪ ಪಡೆದು ಹಳಿ ಮೇಲೆ ಓಡಿದರೆ ಅದು ವಿಶ್ವದ ಅತ್ಯಂತ ವೇಗದ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

Ad Widget

Ad Widget

Ad Widget

Ad Widget

ಹಾಲಿ ಚೀನಾದಲ್ಲಿ ಇರುವ ಶಾಂಘೈ ಮ್ಲಾಗ್ಲೇವ್‌ ಗಂಟೆಗೆ 460 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ವಿಶ್ವದ ಅತಿವೇಗದ ರೈಲು ಎಂಬ ಹಿರಿಮೆ ಹೊಂದಿದೆ. ಪರೀಕ್ಷಿಸಿದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾನಿಲಯ
ಚೀನಾದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾನಿಲಯವು 700 ಕಿ.ಮೀ/ ಗಂಟೆಗೆ ಸಂಚರಿಸುವ ರೈಲಿನ ಮಾದರಿಯನ್ನು ಪರೀಕ್ಷಿಸಿದೆ. 400 ಮೀ.ಉದ್ದ ಮ್ಯಾಗ್ಲೆವ್‌ ಹಳಿಯ ಮೇಲೆ 1000 ಕೆಜಿ ತೂಕದ ರೈಲಿನ ಮಾದರಿಯನ್ನು ಪರೀಕ್ಷಿಸಲಾಗಿದೆ. ಈ ಪರೀಕ್ಷೆ ವೇಳೆ ಗಂಟೆಗೆ 700 ಕಿ.ಮೀ ದೂರ ಸಂಚರಿಸಬೇಕಾದ ವೇಗವನ್ನು ರೈಲು ಕೇವಲ 2 ಸೆಕೆಂಡ್‌ಗಳಲ್ಲೇ ಸಾಧಿಸುವ ಮೂಲಕ, ಯೋಜನೆಯ ಕಾರ್ಯಸಾಧು ಬಗ್ಗೆ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಇದು ಇದುವರೆಗೆ ಪರೀಕ್ಷಿಸಲ್ಪಟ್ಟ ಅತ್ಯಂತ ವೇಗದ ಸೂಪರ್‌ ಕಂಡಕ್ಟಿಂಗ್‌ ಮ್ಯಾಗ್ಲೆವ್‌ ರೈಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಂಶೋಧನಾ ತಂಡವು ಒಂದು ದಶಕದಿಂದ ಈ ಯೋಜನೆಗಾಗಿ ಶ್ರಮಿಸುತ್ತಿತ್ತು
ಸಂಶೋಧನಾ ತಂಡವು ಒಂದು ದಶಕದಿಂದ ಈ ಯೋಜನೆಗಾಗಿ ಶ್ರಮಿಸುತ್ತಿತ್ತು, ಇದೇ ವರ್ಷದ ಜನವರಿಯಲ್ಲಿ ಇದೇ ಹಳಿ ಮೇಲೆ 648 ಕಿ.ಮೀ/ ಗಂಟೆ ಸಂಚಾರದ ಪರೀಕ್ಷೆ ನಡೆಸಿತ್ತು. ಇದೀಗ ಆ ವೇಗ 700 ಕಿ.ಮೀಗೆ ಹೆಚ್ಚಿದೆ. ಮ್ಯಾಗ್ಲೇವ್‌ ತಂತ್ರಜ್ಞಾನದ ರೈಲುಗಳಿಗೆ ಚಕ್ರ ಇರುವುದಿಲ್ಲ. ಬದಲಾಗಿ ಅವು ಹಳಿ ಮತ್ತು ರೈಲಿನ ನಡುವೆ ಉತ್ಪತ್ತಿಯಾಗುವ ಅಯಂಸ್ಕಾತೀಯ ವಲಯದಲ್ಲಿ ಗಾಳಿಯಲ್ಲೇ ತೇಲಿಕೊಂಡು ಮುಂದೆ ಸಾಗುತ್ತದೆ.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading