ಬಿಗ್ ನ್ಯೂಸ್
Dharmasthala-ಮತ್ತೆ ಮುನ್ನಲೆಗೆ ಬಂದ ಧರ್ಮಸ್ಥಳದ ಆನೆ ಮಾವುತ ಜೋಡಿ ಮರ್ಡರ್ : 13 ವರ್ಷ ಕಳೆದರೂ ಪತ್ತೆಯಾಗದ ಅಪರಾಧಿಗಳು – ಹೈಕೋರ್ಟ್ ರಿಟ್ ಹಿಂಪಡೆದು ಎಸ್ಐಟಿ ಗೆ ಹಸ್ತಾಂತರ
2012ರಲ್ಲಿ ನಡೆದ ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಅವರ ತಂಗಿ ಯಮುನಾ ಅವರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಮಕ್ಕಳು ಎಸ್ಐಟಿ (ವಿಶೇಷ ತನಿಖಾ ದಳ) ಗೆ ಮರುತನಿಖೆಗೆ ಮನವಿ ಸಲ್ಲಿಸಿದ್ದಾರೆ. ಹೋರಾಟಗಾರ ದಿನೇಶ್ ಗಾಣಿಗ ಅವರೊಂದಿಗೆ ಆಗಮಿಸಿದ ನಾರಾಯಣ ಅವರ ಪುತ್ರ ಗಣೇಶ್ ಮತ್ತು ಪುತ್ರಿ ಭಾರತಿ, ಇಂದು ಎಸ್ಐಟಿ ಅಧಿಕಾರಿಗಳಿಗೆ ದೂರು ನೀಡಿದರು.
ಮಂಗಳೂರು: 2012ರಲ್ಲಿ ನಡೆದ ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಅವರ ತಂಗಿ ಯಮುನಾ ಅವರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಮಕ್ಕಳು ಎಸ್ಐಟಿ (ವಿಶೇಷ ತನಿಖಾ ದಳ) ಗೆ ಮರುತನಿಖೆಗೆ ಮನವಿ ಸಲ್ಲಿಸಿದ್ದಾರೆ. ಹೋರಾಟಗಾರ ದಿನೇಶ್ ಗಾಣಿಗ ಅವರೊಂದಿಗೆ ಆಗಮಿಸಿದ ನಾರಾಯಣ ಅವರ ಪುತ್ರ ಗಣೇಶ್ ಮತ್ತು ಪುತ್ರಿ ಭಾರತಿ, ಇಂದು ಎಸ್ಐಟಿ ಅಧಿಕಾರಿಗಳಿಗೆ ದೂರು ನೀಡಿದರು.
ಈ ಹಿಂದೆ, ಗಣೇಶ್ ಮತ್ತು ಭಾರತಿ ಅವರು ಎಸ್ಐಟಿಗೆ ದೂರು ನೀಡಲು ಮುಂದಾಗಿದ್ದಾಗ, ಪ್ರಕರಣವು ಹೈಕೋರ್ಟ್ನಲ್ಲಿ ವಿಚಾರಣೆಯಲ್ಲಿದ್ದ ಕಾರಣ ಎಸ್ಐಟಿ ದೂರು ಸ್ವೀಕರಿಸಲು ನಿರಾಕರಿಸಿತ್ತು. ಸದ್ಯ, ಅವರು ಹೈಕೋರ್ಟ್ನಿಂದ ದೂರು ಹಿಂಪಡೆದಿದ್ದು, ಮರುತನಿಖೆಗೆ ಒತ್ತಾಯಿಸಿ ಎಸ್ಐಟಿಗೆ ಹೊಸದಾಗಿ ದೂರು ಸಲ್ಲಿಸಿದ್ದಾರೆ.
ಹೋರಾಟಗಾರ ದಿನೇಶ್ ಗಾಣಿಗ ಹೇಳಿಕೆ:
ಹೋರಾಟಗಾರ ದಿನೇಶ್ ಗಾಣಿಗ ಅವರು ಮಾತನಾಡಿ, “2012ರಲ್ಲಿ ನಾರಾಯಣ ಮತ್ತು ಯಮುನಾ ಅವರ ಜೋಡಿ ಕೊಲೆಯಾಗಿತ್ತು. ಹಲವು ವರ್ಷಗಳ ನಂತರ ಪೊಲೀಸರು ಸಿ-ರಿಪೋರ್ಟ್ ಸಲ್ಲಿಸಿದ್ದರು. ಆನೆ ಮಾವುತನ ಮಕ್ಕಳು ತಮ್ಮ ತಂದೆಯ ಸಾವಿಗೆ ನ್ಯಾಯ ಕೋರಿ ಎಸ್ಐಟಿಗೆ ಮನವಿ ಮಾಡಿದ್ದರು. ಆಗ, ತನಿಖೆಗೆ ನ್ಯಾಯ ಕೋರಿ ಕೋರ್ಟ್ಗೆ ರಿಟ್ ಹಾಕಿದ್ದರಿಂದ ಎಸ್ಐಟಿ ತನಿಖೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿತ್ತು.” ಎಂದು ವಿವರಿಸಿದರು.
“ರಿಟ್ ಅರ್ಜಿ ಹಿಂಪಡೆದರೆ ಎಸ್ಐಟಿ ತನಿಖೆ ಮಾಡುವುದಾಗಿ ಹೇಳಿತ್ತು. ಅದರಂತೆ, ನಾವು ರಿಟ್ ಅರ್ಜಿಯನ್ನು ವಾಪಸ್ ಪಡೆದು, ಅದರ ಪ್ರತಿಯನ್ನು ಎಸ್ಐಟಿಗೆ ಸಲ್ಲಿಸಿದ್ದೇವೆ. ನಾವು ಸಿಬಿಐ ತನಿಖೆಗೆ ಒತ್ತಾಯಿಸಿಲ್ಲ. ಈಗ ಎಸ್ಐಟಿ ತನಿಖೆ ಮಾಡುವುದಾಗಿ ಹೇಳಿರುವುದರಿಂದ, ನಾವು ರಿಟ್ ಅರ್ಜಿಯನ್ನು ವಾಪಸ್ ಪಡೆದು ಎಸ್ಐಟಿಗೆ ತನಿಖೆಗೆ ಮನವಿ ಮಾಡಿದ್ದೇವೆ.” ಎಂದು ಗಾಣಿಗ ಸ್ಪಷ್ಟಪಡಿಸಿದರು.
“ಗಣೇಶ್ ಅವರ ತಂದೆಯನ್ನು ಕೊಂದ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಯಾರು ಕೊಲೆ ಮಾಡಿದ್ದರು ಎಂದು ತಿಳಿದಿದ್ದರೆ, ಅವರನ್ನು ಹಿಡಿಯುತ್ತಿದ್ದರು. ಹಾಗಾದರೆ, ಸಿ-ರಿಪೋರ್ಟ್ ಏಕೆ ಸಲ್ಲಿಸುತ್ತಿದ್ದರು? ಅದಕ್ಕಾಗಿಯೇ ನಾವು ಮರುತನಿಖೆಗೆ ಮನವಿ ಸಲ್ಲಿಸಿದ್ದೇವೆ.” ಎಂದು ಅವರು ಹೇಳಿದರು. ಎಸ್ಐಟಿ ಅಧಿಕಾರಿಗಳು ದೂರು ಸ್ವೀಕರಿಸಿದ್ದು, ಈ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿರುವುದಾಗಿ ಗಾಣಿಗರು ತಿಳಿಸಿದ್ದರು.
ದೂರಿನಲ್ಲಿ ಏನಿದೆ ?
ಧರ್ಮಸ್ಥಳದಲ್ಲಿ ಆನೆ ಮಾವುತನಾಗಿ ಕೆಲಸ ಮಾಡಿ ನಿವೃತ್ತರಾಗಿದ್ದ ನಮ್ಮ ತಂದೆ ನಾರಾಯಣ ಸಫಲ್ಯ ಮತ್ತು ಅತ್ತೆ ಯಮುನಾರನ್ನು 2012ರ ಸೆಪ್ಟಂಬರ್ 21ರಂದು ಬೂರ್ಜೆಯಲ್ಲಿರುವ ಮನೆಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ನ್ಯಾಯ ಒದಗಿಸಿ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ನಮ್ಮ ತಂದೆ ನಾರಾಯಣ ಅವರ ಹಿರಿಯರ ಕಾಲದಿಂದಲೂ ಧರ್ಮಸ್ಥಳ ಗ್ರಾಮದ ಬೂರ್ಜೆ ಎಂಬಲ್ಲಿರುವ ತನ್ನ ಮನೆಯಲ್ಲಿ ತನ್ನ ಸಹೋದರಿ ಯಮುನಾ ಎಂಬವರೊಂದಿಗೆ ವಾಸ ಮಾಡಿಕೊಂಡಿದ್ದರು. ನಮ್ಮ ತಂದೆ ವಾಸ ಮಾಡಿಕೊಂಡಿದ್ದ ಮನೆಯನ್ನು ತೆರವುಗೊಳಿಸುವಂತೆ ಇಬ್ಬರು ಪ್ರಭಾವಿಗಳು ( ದೂರಿನಲ್ಲಿ ಹೆಸರಿದ್ದರೂ ಉಲ್ಲೇಖಿಸಿಲ್ಲ ) ಸುಮಾರು 5 ವರ್ಷಗಳಿಂದ ತಂದೆಗೆ ಜೀವ ಬೆದರಿಕೆ ಹಾಕುತ್ತಿದ್ದರು. ನಮ್ಮ ತಂದೆಯ ಮೇಲೆ ಅವರ ಮನೆಯ ಅಂಗಳದಲ್ಲೇ ಎರಡು ಸಲ ಹಲ್ಲೆ ಕೂಡಾ ಮಾಡಿರುತ್ತಾರೆ. ದಿನಾಂಕ 20-09-2012ರಂದು ಸಂಜೆ ಪ್ರಭಾವಿಗಳ ಪೈಕಿ ಓರ್ವ ( ಕಿರಿಯ ಸಹೋದರ) ನಮ್ಮ ತಂದೆ ವಾಸವಿದ್ದ ಮನೆಗೆ ಭೇಟಿ ನೀಡಿ ಮನೆಯನ್ನು ಕೂಡಲೇ ತೆರವುಗೊಳಿಸುವಂತೆಯೂ, ತಪ್ಪಿದಲ್ಲಿ ಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದರು.
ದಿನಾಂಕ 21.09.2012ರಂದು ರಾತ್ರಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಗಣೇಶೋತ್ಸವದ ಪ್ರಯುಕ್ತ ಆಯೋಜಿಸಿದ್ದ ನಾಟಕ ವೀಕ್ಷಣೆಗೆ ತೆರಳಿದ್ದ ನಮ್ಮ ತಂದೆ ಮತ್ತು ಅತ್ತೆ ಯಮುನಾ ರಾತ್ರಿ 10 ಗಂಟೆ ಸುಮಾರಿಗೆ ತಮ್ಮ ಮನೆಗೆ ಬಂದಿರುತ್ತಾರೆ ಎಂಬ ಮಾಹಿತಿ ಇದೆ. ಮಾರನೇ ದಿನ ಮಧ್ಯಾಹ್ನ 12 ಗಂಟೆಯ ಸಮಯವಾದರೂ ಮನೆಯ ಬಾಗಿಲು ತೆರೆಯದಿರುವುದನ್ನು ಅರಿತ ಸ್ಥಳೀಯರು, ಮನೆ ಬಾಗಿಲು ತೆಗೆದು ನೋಡಿದಾಗ ನಮ್ಮ ತಂದೆಯ ತಲೆಗೆ ಸೈಝ್ ಕಲ್ಲು ಮತ್ತು ನಮ್ಮ ಅತ್ತೆ ಯಮುನಾರ ತಲೆಗೆ ರುಬ್ಬುವ ಕಲ್ಲನ್ನು ಎತ್ತು ಹಾಕಿ ಕೊಲೆ ಮಾಡಿರುವುದು ತಿಳಿದು ಬಂದಿತ್ತು.
ನಮ್ಮ ತಂದೆಯ ಬಳಿ ಯಾವುದೇ ಸಂಪತ್ತು, ಹಣ ಆಭರಣಗಳು ಇದ್ದಿರಲಿಲ್ಲ ಮತ್ತು ಇದ್ದಂತಹ ಅಲ್ಪಸ್ವಲ್ಪ ಹಣ ಮತ್ತು ಆಭರಣಗಳನ್ನು ಸಹ ಕೊಲೆಗಟುಕರು ದೋಚಿರುವುದಿಲ್ಲ. ನಮ್ಮ ತಂದೆಗೆ ಯಾರೂ ವಿರೋಧಿಗಳಿರಲಿಲ್ಲ. ಪೂರ್ವಜರಿಂದ ನಮ್ಮ ತಂದೆ ವಾಸವಾಗಿದ್ದ ಮನೆ ಮತ್ತು ಅಡಿ ಸ್ಥಳವನ್ನು ಸ್ವಾಧೀನ ಪಡಿಸುವ ಉದ್ದೇಶಕ್ಕಾಗಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
-
ಬಿಗ್ ನ್ಯೂಸ್11 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized10 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಮಂಗಳೂರು11 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಬಿಗ್ ನ್ಯೂಸ್11 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಅಂತರ ರಾಜ್ಯ9 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ9 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್10 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಬಿಗ್ ನ್ಯೂಸ್3 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ















