Uncategorized
ಕೇರಳದಲ್ಲಿ ಸಂಚಲನ ಮೂಡಿಸಿದ್ದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯ ಆತ್ಮಹತ್ಯೆ ಪ್ರಕರಣ -11 ತಿಂಗಳೊಳಗಡೆ ತೀರ್ಪು ಪ್ರಕಟಿಸಿದ ನ್ಯಾಯಾಯಯ – ವರದಕ್ಷಿಣೆ ಕಿರುಕುಳ ನೀಡಿದ ಪತಿ ತಪಿತಸ್ಥ

ವಿಸ್ಮಯಳ ತವರು ಮನೆಯಿಂದ ವರದಕ್ಷಿಣೆಯಾಗಿ ನೀಡಲಾದ ಕಾರು ಸಮಾಜದಲ್ಲಿನ ತನ್ನ ಘನಸ್ತಿಕೆಗಿಂತ ಕಡಿಮೆ ಮೌಲ್ಯದ್ದು ಎಂದು ಭಾವಿಸಿದ್ದ ಆಕೆಯ ಪತಿಯು ಅವಳ ಮೇಲೆ ನಿರಂತರ ಹಲ್ಲೆ ನಡೆಸುತ್ತಿದ್ದ. ಈ ಬಗ್ಗೆ ವಿಸ್ಮಯ ತನ್ನ ಸೋದರ ಸಂಬಂಧಿಗೆ ಆಡಿಯೋ ಸಂದೇಶ ಕಳುಹಿಸಿದ್ದು ಅದಾದ ಎರಡು ದಿನಗಳ ನಂತರ ಆಕೆ ಸಾವನ್ನಪ್ಪಿದ್ದಳು. ಈ ಆಡಿಯೋ ನ್ಯಾಯಾಲಯದಲ್ಲಿ ಪ್ರಮುಖ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿತ್ತು.
ತಿರುವನಂತಪುರಂ(ಕೇರಳ),ಮೇ.23- ಕೇರಳದಲ್ಲಿ ಭಾರೀ ಸಂಚಲನ ಮೂಡಿಸಿದ ವರದಕ್ಷಿಣೆ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ವಿಸ್ಮಯ ನಾಯರ್ ಸಾವಿನ ಪ್ರಕರಣದ ತೀರ್ಪನ್ನು ಆಕೆಯ ಮೃತಪಟ್ಟ 11 ತಿಂಗಳ ಒಳಗಡೆ ಕೇರಳದ ಕೊಲ್ಲಂನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಪ್ರಕಟಿಸಿದೆ. ವಿಸ್ಮಯಳ ಪತಿ ಸಹಾಯಕ ಮೋಟಾರು ವಾಹನ ನಿರೀಕ್ಷಕರಾಗಿದ್ದ ಹಾಗೂ ಈ ಪ್ರಕರಣದ ಬಳಿಕ ಹುದ್ದೆಯಿಂದ ವಜಾಗೊಂಡಿರುವ ಕಿರಣ್ ಕುಮಾರ್ ಅವರನ್ನು ದೋಷಿ ಎಂದು ಇಂದು ಪ್ರಕಟವಾದ ತೀರ್ಪಿನಲ್ಲಿ ಅದು ಘೋಷಿಸಿದೆ. ಶಿಕ್ಷೆಯ ಪ್ರಮಾಣವನ್ನು ಮಂಗಳವಾರ ಪ್ರಕಟಿಸಲಾಗುವುದು
ಮೇ 17ರಂದು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಲಯವು ತೀರ್ಪನ್ನು ಇಂದಿಗೆ ಕಾದಿರಿಸಿತ್ತು. ಸೋಮವಾರ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ಮೋಹನರಾಜ್ ಅವರು ಅಪರಾಧಿ ಕುಮಾರ್ಗೆ ಗರಿಷ್ಠ ಶಿಕ್ಷೆಯನ್ನು ವಿಧಿಸುವಂತೆ ಪ್ರಾಸಿಕ್ಯೂಷನ್ ಪರವಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದರು. ಬಳಿಕ ತೀರ್ಪು ಉಚ್ಚರಿಸಿದ ನ್ಯಾಯಾದೀಶರು ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ), 498-ಎ (ಮಹಿಳೆಯನ್ನು ಆತ್ಮಹತ್ಯೆಗೆ ಪ್ರೇರೇಪಿಸುವಂತಹ ಸ್ವಭಾವದ ಯಾವುದೇ ಉದ್ದೇಶಪೂರ್ವಕ ನಡವಳಿಕೆ) ಮತ್ತು ಭಾರತೀಯ ದಂಡ ಸಂಹಿತೆಯ 304-ಬಿ (ವರದಕ್ಷಿಣೆ ಸಾವು) ಪ್ರಕರಣಗಳಡಿಯಲ್ಲಿ ಅಪರಾಧಿ ಎಂದು ಘೋಷಿಸಿದರು.
43 ಸಾಕ್ಷಿಗಳು, 102 ದಾಖಲೆಗಳು ಮತ್ತು ಹಲವಾರು ಕರೆ ದಾಖಲೆಗಳನ್ನು ವಿಚಾರಣೆ ವೇಳೆ ಪರಿಶೀಲಿಸಿದ ನ್ಯಾಯಾಲಯವು ಈ ತೀರ್ಪು ನೀಡಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಹೇಳಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ವಿಸ್ಮಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕೇರಳ ಪೊಲೀಸರು 500 ಪುಟಗಳ ಚಾರ್ಜ್ಶೀಟ್ನಲ್ಲಿ ಹೇಳಿದ್ದರು. ವಿಸ್ಮಯ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾಳೆ, ಆದರೆ ಪತಿ ಕಿರಣ್ ಕುಮಾರ್ ಅವರ ನಿರಂತರ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಚಾರ್ಜ್ ಶೀಟ್ ನಲ್ಲಿ ತಿಳಿಸಲಾಗಿತ್ತು. ತನಿಖೆಯ ನೇತೃತ್ವ ವಹಿಸಿದ್ದ ಪೊಲೀಸ್ ಉಪಾಧೀಕ್ಷಕ ಶಾಸ್ತಕೋಟಾ, ರಾಜಕುಮಾರ್ ಅವರು, ಕಿರಣ್ ಅಪರಾಧವನ್ನು ಸಾಬೀತುಪಡಿಸುವ ಹಲವಾರು ಸ್ವತಂತ್ರ ಸಾಕ್ಷಿಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು
ಸಂತ್ರಸ್ತೆಯ ಪತಿ ಸಹಾಯಕ ಮೋಟಾರು ವಾಹನ ನಿರೀಕ್ಷಕರಾಗಿದ್ದ ಎಸ್ ಕಿರಣ್ ಕುಮಾರ್(30)ವಿರುದ್ಧ ವರದಕ್ಷಿಣೆ ಸಾವು, ವರದಕ್ಷಿಣೆ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ, ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು ಮತ್ತು ಕ್ರಿಮಿನಲ್ ಬೆದರಿಕೆಯ ಅಪರಾಧಗಳಡಿ ಪ್ರಕರಣ ದಾಖಲಾಗಿತ್ತು.

ಕೊಲ್ಲಂ ಜಿಲ್ಲೆಯ ಕಡಕ್ಕಲ್ ಬಳಿಯ ನಿಲಮೇಲ ಮೂಲದವರಾಗಿದ್ದ ಹಾಗೂ ಆಯುರ್ವೇದ ವೈದ್ಯ ವಿದ್ಯಾರ್ಥಿನಿಯಾಗಿದ್ದ ವಿಸ್ಮಯಾ(23 ) ಜೂನ್ 21, 221 ರಂದು ಕೊಲ್ಲಂ ಜಿಲ್ಲೆಯ ಸಾಸ್ತಮಕೋಟಾದಲ್ಲಿ ತನ್ನ ಪತಿಯ ಮನೆಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ವರದಕ್ಷಿಣೆ ಕಿರುಕುಳ ನೀಡುವ ಮೂಲಕ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಮೃತಳ ತಂದೆ ನೀಡಿದ ದೂರಿನಂತೆ ಕಿರಣ್ ಕುಮಾರ್ʼನನ್ನು ಪೊಲೀಸರು ಬಂಧಿಸಿದ್ದರು. ಅದಾದ ಬಳಿಕ ಅತನನ್ನು ರಾಜ್ಯ ಸರ್ಕಾರ ಸೇವೆಯಿಂದ ವಜಾಗೊಳಿಸಿತ್ತು. ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಕೇರಳದಲ್ಲಿ ಸರಕಾರಿ ಸೇವೆಯಿಂದ ವಜಾಗೊಳಿಸಿದ ಪ್ರಥಮ ಪ್ರಕರಣ ಇದಾಗಿತ್ತು
ವಿಸ್ಮಾಯಳ ತವರು ಮನೆಯಿಂದ ವರದಕ್ಷಿಣೆಯಾಗಿ ನೀಡಲಾದ ಕಾರು ಸಮಾಜದಲ್ಲಿನ ತನ್ನ ಘನಸ್ತಿಕೆಗಿಂತ ಕಡಿಮೆ ಮೌಲ್ಯದ್ದು ಎಂದು ಭಾವಿಸಿದ್ದ ಆಕೆಯ ಪತಿಯು ಅವಳ ಮೇಲೆ ನಿರಂತರ ಹಲ್ಲೆ ನಡೆಸುತ್ತಿದ್ದ. ಈ ಬಗ್ಗೆ ವಿಸ್ಮಯ ತನ್ನ ಸೋದರ ಸಂಬಂಧಿಗೆ ಆಡಿಯೋ ಸಂದೇಶ ಕಳುಹಿಸಿದ್ದು ಅದಾದ ಎರಡು ದಿನಗಳ ನಂತರ ಆಕೆ ಸಾವನ್ನಪ್ಪಿದ್ದಳು. ಈ ಆಡಿಯೋ ನ್ಯಾಯಾಲಯದಲ್ಲಿ ಪ್ರಮುಖ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿತ್ತು
ಕಿರಣ್ ಕೈಯಿಂದ ಎದುರಿಸುತ್ತಿರುವ ಕಿರುಕುಳ ಬಗ್ಗೆ ಮಾಹಿತಿ
ವಿಸ್ಮಯ ತನ್ನ ತಂದೆಗೆ ಕಳುಹಿಸಿದ್ದ ಧ್ವನಿ ರೆಕಾರ್ಡಿಂಗ್ನಲ್ಲಿ ಕಿರಣ್ ಕೈಯಿಂದ ತಾನು ಎದುರಿಸುತ್ತಿರುವ ಕಿರುಕುಳದ ವಿವರ ಇತ್ತು. ಅದರಲ್ಲಿ ವಿಸ್ಮಯ ಆಳುತ್ತಾ ಮಾತನಾಡಿದ್ದು “ನನ್ನನ್ನು ಇನ್ನೂ ಪತಿಯ ಮನೆಯಲ್ಲಿಯೇ ಇರುವಂತೆ ಹೇಳಿದರೇ, ನೀವು ನನ್ನನ್ನು ಮತ್ತೆ ನೋಡುವುದಿಲ್ಲ. ನಾನು ಏನನ್ನಾದರೂ ಮಾಡುತ್ತೇನೆ, ಆದರೆ, ಇನ್ನು ಮುಂದೆ ಸಹಿಸಲಾರೆ. ಅಚಾ (ತಂದೆ), ನಾನು ತವರು ಮನೆಗೆ ಬರಲು ಬಯಸುತ್ತೇನೆ. ನನಗೆ ಭಯವಾಗಿದೆ, ಈತ ನನಗೆ ಹೊಡೆಯುತ್ತೇನೆ”ಎಂದು ವಿಸ್ಮಯ ಕಣ್ಣೀರು ಹಾಕುತ್ತಾ ಹೇಳಿದ್ದರು.
2021 ರಲ್ಲಿ ತನ್ನ ಸಾವಿಗೆ ಕೆಲವು ದಿನಗಳ ಮೊದಲು ವಿಸ್ಮಯಾ ತನ್ನ ಸೋದರ ಸಂಬಂಧಿಗೆ ಕೆಲವು ವಾಟ್ಸಾಪ್ ಸಂದೇಶಗಳನ್ನು ಕಳುಹಿಸಿದ್ದಳು. ಅದರಲ್ಲಿ ತಾನು ಪತಿಯ ಕೈಯಿಂದ ತೀವ್ರವಾಗಿ ಹಲ್ಲೆಗೊಳಗಾಗುತ್ತಿರುವುದನ್ನು ವಿವರಿಸಿದ್ದಳು. ಹಲ್ಲೆ ನಡೆಸಿದ ನಂತರ ಪತಿ ತನ್ನ ಕೂದಲನ್ನು ಹಿಡಿದುಕೊಂಡು ಮುಖದ ಮೇಲೆ ಹೇಗೆ ಹೊಡೆದಿದ್ದನು ಎನ್ನುವುದನ್ನು ಸಂದೇಶದಲ್ಲಿ ವಿವರಿಸಿ ಬರೆಯಲಾಗಿತ್ತು. ತನ್ನ ಮೇಲೆಯಾಗುತ್ತಿರುವ ಪತಿಯ ದೌರ್ಜನ್ಯದ ಬಗ್ಗೆ ತಾನು ಯಾರಿಗೂ ಹೇಳಿಲ್ಲ ಎಂದು ತಿಳಿಸಿದ ಆಕೆ ತನ್ನ ಮೇಲೆ ಪತಿ ಮೆರೆದ ಕ್ರೌರ್ಯದ ಪೋಟೊಗಳನ್ನು ಹಂಚಿಕೊಂಡಿದ್ದಳು. ಅದರಲ್ಲಿ ಮುಖ, ಭುಜ ಮತ್ತು ಕೈಗಳ ಮೇಲಾದ ಗಾಯಗಳನ್ನು ಕಾಣಬಹುದು. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಾಥಮಿಕ ಸಾಕ್ಷ್ಯಗಳಲ್ಲಿ ಇದೂ ಕೂಡ ಒಂದಾಗಿತ್ತು.
ವಿಸ್ಮಯಾ ಅವರ ತವರು ಮನೆಯವರು ವರದಕ್ಷಿಣೆಯಾಗಿ 100 ಸವರಿನ್ ಚಿನ್ನ, ಒಂದು ಎಕರೆ ಜಮೀನು ಮತ್ತು ಟೊಯೊಟಾ ಯಾರಿಸ್ ಕಾರನ್ನು ನೀಡಿದ್ದರು. ಆದರೆ ಕಿರಣ್ ಬೇರೆ ಮಾದರಿಯ ಕಾರು ಮತ್ತು ಹೆಚ್ಚಿನ ಹಣವನ್ನು ಬಯಸಿದ್ದರು. ಕಿರಣ್ ವಿಸ್ಮಯಾ ಮೇಲೆ ಹಲ್ಲೆ ನಡೆಸಿರುವುದು ಕುಟುಂಬಕ್ಕೆ ತಿಳಿದಿತ್ತು ಎಂದು ಆಕೆಯ ತಂದೆ ತ್ರಿವೃಕಮನ್ ನಾಯರ್ ಆಕೆಯ ಸಾವಿನ ನಂತರ ತಿಳಿಸಿದ್ದರು.
ನನ್ನ ಮಗಳಿಗೆ ನ್ಯಾಯ ಸಿಕ್ಕಿದೆ. ಪ್ರಾಸಿಕ್ಯೂಷನ್ ಮತ್ತು ತನಿಖಾ ತಂಡದ ಪ್ರಯತ್ನಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ನನ್ನ ಬಳಿ ಪದಗಳಿಲ್ಲ
ತಂದೆ ತ್ರಿವಿಕ್ರಮನ್ ನಾಯರ್
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಸ್ಥಳೀಯ3 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್2 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ4 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ4 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ















