Uncategorized
28 ವರ್ಷಗಳ ಸುದೀರ್ಘ ಅವಧಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮುನ್ನಡೆಸುತ್ತಿರುವ ‘ಸಹಕಾರ ರತ್ನ’ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಅಸ್ಸಾಂ ರಾಜ್ಯಪಾಲರಿಂದ ಪ್ರತಿಷ್ಠಿತ ’ ಔಟ್ ಸ್ಟಾಂಡಿಂಗ್ ಲೀಡರ್ ಶಿಪ್ ಅವಾರ್ಡ್’ ಪ್ರಧಾನ
ಮಂಗಳೂರು : ಇನ್‌ಸ್ಟಿಟ್ಯೂಟ್ ಅಫ್ ಇಕನಾಮಿಕ್ ಸ್ಟಡೀಸ್ ಹೊಸದಿಲ್ಲಿ ಇದರ ವತಿಯಿಂದ ಹೊಸದಿಲ್ಲಿಯಲ್ಲಿ ಗುರುವಾರ ನಡೆದ ’ ನೆಟ್ ವರ್ಕಿಂಗ್ ನೆಕ್ಸ್ಟ್ – ಇಂಡಸ್ಟ್ರಿ ಇನ್ ಸಿಗ್ನಿಯಾ ಕಾನ್ಫರೆನ್ಸ್’ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ, ’ಸಹಕಾರ ರತ್ನ’ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಪ್ರತಿಷ್ಠಿತ ’ ಔಟ್ ಸ್ಟಾಂಡಿಂಗ್ ಲೀಡರ್ ಶಿಪ್ ಅವಾರ್ಡ್’ನ್ನು ಪ್ರಧಾನ ಮಾಡಲಾಯಿತು.
ಹೊಸದಿಲ್ಲಿಯ ಇಂಡಿಯಾ ಹಬಿಟಾಟ್ ಸೆಂಟರ್ ಸಿಲ್ವರ್ ಓಕ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸ್ಸಾಂ ರಾಜ್ಯಪಾಲ ಪ್ರೊ. ಎಚ್.ಇ.ಜಗದೀಶ್ ಮುಖಿ ಪ್ರಶಸ್ತಿ ಪ್ರದಾನ ಮಾಡಿದರು.
ಮುಖ್ಯ ಅತಿಥಿಗಳಾಗಿ ಇಂಡಿಯನ್ ಪೊಡಿಯಾಟ್ರಿ ಅಸೋಸಿಯೇಶನ್ ಅಧ್ಯಕ್ಷ ಡಾ.ಎ.ಪಿ.ಎಸ್.ಸುರಿ, ಸಾರ್ವಜನಿಕ ಉದ್ಯಮಗಳ ಸ್ಥಾಯಿ ಸಮ್ಮೇಳನದ ಡೈರೆಕ್ಟರ್ ಜನರಲ್ ಡಾ.ಅತುಲ್ ಸೊಬಟಿ , ಇಂಡಿಯನ್ ಇಂಧನ ಅಭಿವೃದ್ಧಿ ಏಜೆನ್ಸಿಸ್ ಅಧ್ಯಕ್ಷ ಕೆ.ಎಸ್.ಪೋಪ್ಲಿ, ಹಿಟಾಚಿ ರೈಲ್ ಎಸ್‌ಟಿಎಸ್ ಇಂಡಿಯಾದ ನಿರ್ದೇಶಕ ಡಾ.ಮನೋಜ್ ಕುಮಾರ್, ಅಹ್ಲುವಾಲಿಯಾ ಕಂಟ್ರಾಕ್ಟ್ ಇಂಡಿಯಾ ಇದರ ಅಧ್ಯಕ್ಷ ಬಿಕ್ರಮ್ ಜಿತ್ ಅಹ್ಲುವಾಲಿಯಾ ಹೊಸದಿಲ್ಲಿಯ ಇನ್‌ಸ್ಟಿಟ್ಯೂಟ್ ಅಫ್ ಇಕನಾಮಿಕ್ ಸ್ಟಡೀಸ್ ಸಂಸ್ಥೆಯ ಅಧ್ಯಕ್ಷೆ, ಕಾರ್ಯ ನಿರ್ವಾಹಕ ನಿರ್ದೇಶಕಿ ಸಂಗೀತಾ ಸಿಂಗ್ ಭಾಗವಹಿಸಿದ್ದರು.
ಈ ಸಂದರ್ಭ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಜಯಪ್ರಕಾಶ್ ಉಪಸ್ಥಿತರಿದ್ದರು.
ಬ್ಯಾಂಕಿನ ಪ್ರಗತಿಯ ರೂವಾರಿ
ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೈಯಕ್ತಿಕ ಸಾಧನೆಗಾಗಿ ನೀಡುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿಕೊಂಡಿರುವ ಡಾ.ಎಂ.ಎನ್ . ರಾಜೇಂದ್ರ ಕುಮಾರ್ ಜಿಲ್ಲೆಯ ಸಹಕಾರ ರಂಗದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆಯನ್ನು ತರುವುದರ ಜೊತೆಗೆ ಎಸ್ ಸಿಡಿಸಿಸಿ ಬ್ಯಾಂಕಿನ ಸರ್ವಾಂಗೀಣ ಪ್ರಗತಿಯ ರೂವಾರಿ ಆಗಿದ್ದಾರೆ. 1994ರಿಂದ ಎಸ್‌ಸಿಡಿಸಿಸಿ ಬ್ಯಾಂಕ್‌ನ್ನು ಸತತ 28 ವರ್ಷಗಳ ಸುದೀರ್ಘ ಅವಧಿಯಲ್ಲಿ ಮುನ್ನಡೆಸುತ್ತಿರುವ ಇವರು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಉತ್ಕೃಷ್ಟ ಬ್ಯಾಂಕಿಂಗ್ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಅತ್ಯಂತ ಪ್ರಾಮಾಣಿಕ ರೀತಿಯಲ್ಲಿ ಶ್ರಮ ವಹಿಸಿದ್ದಾರೆ.
ಬ್ಯಾಂಕಿಂಗ್ ಸೇವೆಯಲ್ಲಿ ಹೊಸ ಆವಿಷ್ಕಾರ
ಹಲವಾರು ವಿನೂತನ ಯೋಜನೆಗಳ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕ್‌ನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಶ್ರೇಯಸ್ಸು ರಾಜೇಂದ್ರ ಕುಮಾರ್ ಅವರದ್ದಾಗಿದೆ. ಸಹಕಾರಿ ರಂಗದಲ್ಲಿ ಹೊಸ ಹೊಸ ಅವಿಷ್ಕಾರ ದೊಂದಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ , ಎಸ್‌ಸಿಡಿಸಿಸಿ ಬ್ಯಾಂಕ್‌ನ್ನು ಜನಸಾಮಾನ್ಯರ ಬ್ಯಾಂಕನ್ನಾಗಿ ರೂಪಿಸುವ ಮೂಲಕ ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟಿದ್ದಾರೆ. ಕೋರ್ ಬ್ಯಾಂಕಿಂಗ್ ನಂತಹ ಉತ್ಕೃಷ್ಟ ತಂತ್ರಜ್ಞಾನವನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಿದ ಶ್ರೇಯಸ್ಸು ಇವರದ್ದಾಗಿದೆ. ಮೊಬೈಲ್ ಬ್ಯಾಂಕ್‌ನ್ನು ರಾಜ್ಯದ ಸಹಕಾರಿ ರಂಗದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಹೆಗ್ಗಳಿಕೆ ಕೂಡ ಇವರದ್ದು.
ಪ್ರಶಸ್ತಿಗಳ ಸರಮಾಲೆ
ರಾಜೇಂದ್ರ ಕುಮಾರ್ ಅಧ್ಯಕ್ಷ ಬಳಿಕ ಎಸ್‌ಸಿಡಿಸಿಸಿ ಬ್ಯಾಂಕಿಗೆ 19ನೆ ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 18 ಬಾರಿ ನಬಾರ್ಡ್ ಪ್ರಶಸ್ತಿ, 2 ಬಾರಿ ಬ್ಯಾಂಕಿಂಗ್ ಪ್ರೊಂಟಿಯರ್ಸ್ ಪ್ರಶಸ್ತಿ ಹಾಗೂ 2 ಬಾರಿ ಬ್ಯಾಂಕೊ ಬ್ಲೂ ರಿಬ್ಬನ್ ಪ್ರಶಸ್ತಿ ಕೂಡ ಲಭಿಸಿದೆ. ಮಾತ್ರವಲ್ಲ ಇವರ ಸಾಮಾಜಿಕ ಸ್ಪಂದನೆಯ ಕಾರ್ಯಗಳನ್ನು ಪರಿಗಣಿಸಿ ಇವರಿಗೆ ಹಲವಾರು ರಾಷ್ಟ್ರೀಯ – ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.
ಮುಖ್ಯವಾಗಿ ಶ್ರೀಲಂಕಾದ ಕೊಲಂಬೊ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್’ ಪದವಿ, ಕರ್ನಾಟಕ ಸರಕಾರದಿಂದ ಸಹಕಾರ ರತ್ನ’ ಪ್ರಶಸ್ತಿಯೂ ಲಭಿಸಿದೆ.
ಅಲ್ಲದೆ ʼಸಹಕಾರ ವಿಶ್ವ ಬಂಧುಶ್ರೀ’, ’ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ’, ’ಮಹಾತ್ಮಾ ಗಾಂಧಿ ಸಮ್ಮಾನ್ ಪ್ರಶಸ್ತಿ’, ಬೆಸ್ಟ್ ಚೇರ್ ಮೆನ್ ನ್ಯಾಷನಲ್ ಅವಾರ್ಡ್’, ’ನ್ಯಾಷನಲ್ ಎಕ್ಸ್‌ಲೆನ್ಸ್ ಅವಾರ್ಡ್’, ’ ಔಟ್ ಸ್ಟೆಂಡಿಂಗ್ ಗ್ಲೋಬಲ್ ಲೀಡರ್ ಶಿಪ್ ಅವಾರ್ಡ್ -2019 ’ , ’ ಬಹು ಪ್ರಭಾವಶಾಲಿ ಸಹಕಾರ ನಾಯಕ -2019ರ ಪ್ರಶಸ್ತಿ ಇಂಟರ್ ನ್ಯಾಷನಲ್ ಐಕಾನ್ ಅವಾರ್ಡ್ – 2021’ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ನೀಡಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹೀಗೆ ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಇವರಿಗೆ ಸಂದಿವೆ.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಮಂಗಳೂರು20 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ19 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು20 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ14 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ19 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
Uncategorized21 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ21 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು15 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















