ಬಿಗ್ ನ್ಯೂಸ್
BIG BREAKING: ಬಿಜೆಪಿ ವಿರುದ್ಧ ಮತ್ತೆ ಸಿಡಿದೆದ್ದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ – ಭರವಸೆ ಈಡೇರಿಸದಿರುವ ಬಗ್ಗೆ ಅಸಮಾಧಾನ, ಮುಂದಿನ ನಡೆ ಬಗ್ಗೆ ಚರ್ಚೆ
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಬಿಜೆಪಿ ಪದಾಧಿಕಾರಿಗಳ ಮಹತ್ವದ ಸಭೆಯು ಸೆಪ್ಟೆಂಬರ್ 10 ರಂದು ಟ್ರಸ್ಟ್ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ, ಪುತ್ತಿಲ ಪರಿವಾರವು ಭಾರತೀಯ ಜನತಾ ಪಕ್ಷದೊಂದಿಗೆ ವಿಲೀನಗೊಂಡ ಸಂದರ್ಭದಲ್ಲಿ ಪಕ್ಷದ ಮತ್ತು ಸಂಘದ ಪ್ರಮುಖ ನಾಯಕರು ಅರುಣ್ ಪುತ್ತಿಲ ಅವರಿಗೆ ನೀಡಿದ್ದ ಭರವಸೆಗಳು ಈಡೇರದ ಬಗ್ಗೆ ಪದಾದೀಕಾರಿಗಳು ಹಾಗೂ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಹಾಗೂ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸಿರುವುದಾಗಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮಾಧ್ಯಮ ಪ್ರತಿನಿಧಿಗಳ ವಾಟ್ಸ್ಯಾಪ್ ಗ್ರೂಪ್ನಲ್ಲಿ ಪ್ರಕಟಣೆ ಮೂಲಕ ತಿಳಿಸಿದೆ.
ಪ್ರಕಟಣೆಯಲ್ಲಿ ಏನಿದೆ?
ಕಳೆದ ಲೋಕಸಭಾ ಚುನಾವಣೆಯ ವೇಳೆ ಸಂಸದರು, ರಾಜ್ಯಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರು ನೀಡಿದ್ದ ಭರವಸೆಗಳು ಈಡೇರದಿರುವುದು ಬೂತ್ ಮಟ್ಟದ ಕಾರ್ಯಕರ್ತರಲ್ಲಿ ಆಕ್ರೋಶವನ್ನುಂಟು ಮಾಡಿದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. “ಕೇಸರಿ ಶಾಲನ್ನು ಹಾಕುವ ದೇವದುರ್ಲಭ ಕಾರ್ಯಕರ್ತರನ್ನು ಅವಮಾನಿಸಿ ಹೇಳಿಕೆ ನೀಡುವ ಸಂಘ ಮತ್ತು ಪಕ್ಷದ ನಾಯಕರ ನಡೆಗೆ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು.
ಸಮಸ್ಯೆಯನ್ನು ಬಗೆಹರಿಸಲು ಪಕ್ಷದ ಮತ್ತು ಸಂಘದ ಹಿರಿಯರು ತಕ್ಷಣವೇ ಸಮನ್ವಯ ಸಾಧಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಈ ಸಭೆಯಲ್ಲಿ ನಿರ್ಣಯಿಸಲಾಯಿತು. ಮುಂದಿನ ಕೆಲಸ ಕಾರ್ಯಗಳ ಬಗ್ಗೆ ವ್ಯಾಪಕ ಚರ್ಚೆಗಳು ನಡೆದು, ಟ್ರಸ್ಟ್ನ ಅಧ್ಯಕ್ಷರು ಮತ್ತು ಅವರ ತಂಡ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಪದಾಧಿಕಾರಿಗಳು ಸರ್ವಾನುಮತದಿಂದ ತಿಳಿಸಿದರು.
ಇದೇ ವೇಳೆ, ಸಂಘ ಶತಾಬ್ದಿಯ ನಿಮಿತ್ತ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಯಶಸ್ಸಿಗೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕೆಂದು ನಿರ್ಣಯಿಸಲಾಯಿತು.
ಯಾರೆಲ್ಲ ಇದ್ರು ?
ಅರುಣ್ ಪುತ್ತಿಲರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲ್ ಹಾಗೂ ಪ್ರಶಾಂತ್ ನೆಕ್ಕಿಲಾಡಿ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ತೆಂಕಿಲ ಸಹಿತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನಲ್ಲಿ ಗುರುತಿಸಿಕೊಂಡಿರುವ ಬಹುತೇಕ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದರು. ಆದರೆ, ಈ ಹಿಂದೆ ಪುತ್ತಿಲ ಪರಿವಾರದ ಅಧ್ಯಕ್ಷರಾಗಿದ್ದ ಪ್ರಸ್ತುತ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿರುವ ಪ್ರಸನ್ನ ಮಾರ್ತಾ ಭಾಗವಹಿಸಿರಲಿಲ್ಲ
.
ಹಿನ್ನಲೆ
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಪುತ್ತಿಲರವರು ಬಿಜೆಪಿ ಟಿಕೆಟ್ ಸಿಗದಿದ್ದಾಗ ಪಕ್ಷೇತರರಾಗಿ ಸ್ಪರ್ಧಿಸಿ ವಿರೋಚಿತ ಸೋಲು ಅನುಭವಿಸಿದ್ದರು. ಇದಾದ ಬಳಿಕ ಅವರು ಪುತ್ತಿಲ ಪರಿವಾರ ಎಂಬ ಸಂಘಟನೆಯನ್ನು ಕಟ್ಟಿಕೊಂಡು ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳ ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಸ್ಪರ್ಧಿಸಿದ್ದರು. ಆದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಬ್ರಿಜೇಶ್ ಚೌಟರವರಿಗೆ ದಕ್ಷಿಣ ಕನ್ನಡ ಕ್ಷೇತ್ರದ ಟಿಕೆಟ್ ನೀಡಿದ್ದು, ಇದರ ಮರುದಿನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.
ಈ ವೇಳೆ ಅರುಣ್ ಪುತ್ತಿಲರಿಗೆ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಲಾಗಿತ್ತು ಎನ್ನಲಾಗಿದೆ. ಇದಾಗಿ 15 ತಿಂಗಳು ಕಳೆದರೂ ಯಾವುದೇ ಸ್ಥಾನಮಾನ ನೀಡದಿರುವುದರಿಂದ ಪುತ್ತಿಲ ಪರಿವಾರದ ಸಂಘಟನೆಯೊಳಗೆ ಅಸಮಾಧಾನ ಆರಂಭವಾಗಿತ್ತು.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
-
Uncategorized16 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized18 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು21 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ20 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ22 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್21 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ21 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್21 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















