Connect with us

ಬಿಗ್ ನ್ಯೂಸ್

Bengaluru-ಬೆಂಗಳೂರಿನಲ್ಲಿ ಭಾರೀ ಮಳೆ: ಸಂಚಾರ-ಜನಜೀವನ ಅಸ್ತವ್ಯಸ್ತ

Published

on



Ad Widget

Ad Widget

Ad Widget

Ad Widget

ಕಳೆದ ಕೆಲವು ದಿನಗಳಿಂದ ವಿರಾಮಗೊಂಡಿದ್ದ ಮಳೆ ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಮತ್ತೆ ಜೋರಾಗಿ ಸುರಿಯಿತು. ರಾತ್ರಿ 9 ಗಂಟೆ ಸುಮಾರಿಗೆ ಗುಡುಗು-ಮಿಂಚಿನೊಂದಿಗೆ ಆರಂಭವಾದ ಮಳೆಯಿಂದ ನಗರದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು.

Ad Widget

Ad Widget

Ad Widget

Ad Widget

ಬೆಂಗಳೂರು: ಕಳೆದ ಕೆಲವು ದಿನಗಳಿಂದ ವಿರಾಮಗೊಂಡಿದ್ದ ಮಳೆ ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಮತ್ತೆ ಜೋರಾಗಿ ಸುರಿಯಿತು. ರಾತ್ರಿ 9 ಗಂಟೆ ಸುಮಾರಿಗೆ ಗುಡುಗು-ಮಿಂಚಿನೊಂದಿಗೆ ಆರಂಭವಾದ ಮಳೆಯಿಂದ ನಗರದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು.

Ad Widget

Ad Widget

Ad Widget alt="Ad Widget"/>

Ad Widget

ಕಚೇರಿಯಿಂದ ಮನೆಗೆ ತೆರಳುತ್ತಿದ್ದವರು ಮತ್ತು ವಾಹನ ಸವಾರರು ಮಳೆಯಲ್ಲಿ ಸಿಲುಕಿ ಪರದಾಡಿದರು. ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ದಟ್ಟಣೆ ಉಂಟಾಯಿತು. ಪಾದಾಚಾರಿಗಳು ಅಂಗಡಿಗಳ ಮುಂಗಟ್ಟುಗಳಲ್ಲಿ ಆಶ್ರಯ ಪಡೆದರು.

Ad Widget

Ad Widget <> Ad Widget

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆ
ಎಂಜಿ ರಸ್ತೆ, ಕಬ್ಬನ್ ರಸ್ತೆ, ಇಂದಿರಾನಗರ, ಕೋರಮಂಗಲ, ಬಿಟಿಎಂ ಲೇಔಟ್, ಬನಶಂಕರಿ, ಜಯನಗರ, ಜೆಪಿ ನಗರ, ಹೆಬ್ಬಾಳ, ರಾಜಾಜಿನಗರ, ಮೈಸೂರು ರಸ್ತೆ, ವಿಮಾನ ನಿಲ್ದಾಣ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಯಿತು.



Ad Widget

ಹಾಸನದಲ್ಲಿ ಗಾಳಿಮಳೆ:
ಹಾಸನ ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ಗುಡುಗು-ಗಾಳಿಯೊಂದಿಗೆ ಎರಡು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ವಿದ್ಯಾನಗರದಲ್ಲಿ ಮರ ಬಿದ್ದು, ವಿದ್ಯುತ್ ತಂತಿಗಳು ತುಂಡಾಗಿ ವಿದ್ಯುತ್ ವ್ಯತ್ಯಯ ಉಂಟಾಯಿತು. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ, ರಸ್ತೆಬದಿಯ ವ್ಯಾಪಾರಿಗಳಿಗೆ ತೊಂದರೆಯಾಯಿತು. ಶಾಲೆ-ಕಾಲೇಜು ಬಿಡುವ ಸಮಯದಲ್ಲಿ ಮಳೆ ಸುರಿದಿದ್ದರಿಂದ ವಿದ್ಯಾರ್ಥಿಗಳು ಮನೆಗೆ ತಲುಪಲಾಗದೆ ಕಾಯಬೇಕಾಯಿತು.

Ad Widget

Ad Widget

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ
ಚಿಕ್ಕಮಗಳೂರಿನಲ್ಲಿ ಬುಧವಾರ ಮಧ್ಯಾಹ್ನ 1:30ರಿಂದ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯಾಯಿತು. ರಸ್ತೆಗಳು ಮತ್ತು ಚರಂಡಿಗಳು ಉಕ್ಕಿ ಹರಿದವು. ಛತ್ರಿಯಿಲ್ಲದ ವಿದ್ಯಾರ್ಥಿಗಳು, ಪಾದಾಚಾರಿಗಳು ಮತ್ತು ದ್ವಿಚಕ್ರವಾಹನ ಸವಾರರು ಮಳೆಯಲ್ಲಿ ನೆನೆದರು. ಆದರೆ, ಮಳೆಯಿಂದ ಬೆಳೆಗಳಿಗೆ ಅನುಕೂಲವಾಗಲಿದೆ ಎಂದು ರೈತರು ಸಂತಸ ವ್ಯಕ್ತಪಡಿಸಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಮಂಗಳೂರು

Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್‌: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್‌ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್‌ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್‌ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.



Ad Widget

ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.

Ad Widget

Ad Widget

ಹೊಸ ದರ ಹೀಗಿದೆ

ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.

  • ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
  • ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
  • 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
  • ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
  • ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.

ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.

Ad Widget
Continue Reading

ಬಿಗ್ ನ್ಯೂಸ್

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.

Ad Widget

Ad Widget <> Ad Widget

ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.



Ad Widget

ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading