Connect with us

ಅಪರಾಧ

ಪುತ್ತೂರು :ವಿದ್ಯಾರ್ಥಿಗೆ ಬೈಕ್ ಡಿಕ್ಕಿ ಹೊಡೆದು ಹಲ್ಲೆ ಪ್ರಕರಣ – ಇಬ್ಬರು ಪೊಲೀಸ್ ವಶಕ್ಕೆ

Published

on



Ad Widget

Ad Widget

Ad Widget

Ad Widget

ಪುತ್ತೂರು: ಆ.21ರಂದು ಸಂಜೆ ಕಾಲೇಜ್‌ ವಿದ್ಯಾರ್ಥಿ ಹಾಗೂ ಇನ್ನೊರ್ವರಿಗೆ ಬೈಕ್‌ ಸವಾರರು ಹಲ್ಲೆ ನಡೆಸಿದ ಪ್ರಕರಣದಡಿ ಇಬ್ಬರನ್ನು ಪುತ್ತೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬನ್ನೂರು ನೆಕ್ಕಿಲ ನಿವಾಸಿ ಪ್ರತಾಪ್ ಮತ್ತು ಅಪ್ರಾಪ್ತನೊರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ

Ad Widget

Ad Widget

Ad Widget

Ad Widget

ತಾರಿಗುಡ್ಡ ಅಬ್ದುಲ್ ರಜಾಕ್ ರವರ ಪುತ್ರ, ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮಹಮ್ಮದ್ ಜಿಯಾದ್ (16.ವ.)ಹಾಗೂ   ಜಿಡೆಕಲ್ಲು ಇಬ್ರಾಹಿರವರ ಪುತ್ರ ಮಹಮ್ಮದ್ ಇಜಾಜ್ (232)ಹಲ್ಲೆಗೊಳಗಾದವರು. ಗಾಯಾಳುಗಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ

Ad Widget

Ad Widget

Ad Widget alt="Ad Widget"/>

Ad Widget

ದೂರಿನಲ್ಲಿ ಏನಿದೆ?

ಅ 21 ರಂದು ಸಂಜೆ 4 ಗಂಟೆ ಸುಮಾರಿಗೆ ಜಿಯಾದ್ ಕಾಲೇಜ್‌ ಬಿಟ್ಟು ಮನೆಗೆ ನಡೆದುಕೊಂಡು  ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ FZ ಬೈಕ್‌ ( KA 19 – EG 7087) ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ನಾನು ಈ ಬಗ್ಗೆ ಬೈಕ್‌ ಸವಾರರಲ್ಲಿ ಪ್ರಶ್ನಿಸಿದ್ದು, ಆಗ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿ ಜಿಯಾದ್ ಆರೋಪಿಸಿದ್ದಾರೆ. ಅಲ್ಲದೇ ಈ ವೇಳೆ ಆಕ್ಟಿವಾದಲ್ಲಿ ಬಂದ ಮಹಮ್ಮದ್ ಇಜಾಜ್‌ರವರು ನನ್ನ ರಕ್ಷಣೆಗೆ ಬಂದಿದ್ದು ಅವರ ಮೇಲೂ ಈ ಅಪರಿಚಿತ ಬೈಕ್‌ ಸವಾರರು ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.

Ad Widget

Ad Widget <> Ad Widget

 ಜಿಯಾದ್‌ ನೀಡಿದ ದೂರನ್ನು ದಾಖಲಿಸಿಕೊಂಡು ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.



Ad Widget

ಆರೋಪಿಗಳ ಶೀಘ್ರ ಬಂಧನಕ್ಕೆ ಅಗ್ರಹ

Ad Widget

Ad Widget

ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ವಿದ್ಯಾರ್ಥಿ ಸಂಘಟನೆ  ಎನ್‌ಎಸ್‌ಯುಐ ಹಾಗೂ ಪಾಪ್ಯುಲರ್‌ ಫ್ರಂಟ್‌ ಅಪ್‌ ಇಂಡಿಯಾ ಆಗ್ರಹಿಸಿದೆ. ಆರೋಪಿಗಳ ಬಂಧನವಾಗದಿದ್ದಲ್ಲಿ  ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಪಿಎಫ್‌ಐ ಜಿಲ್ಲಾಧ್ಯಕ್ಷ ಜಾಬೀರ್‌ ಅರಿಯಡ್ಕ ತಿಳಿಸಿದ್ದಾರೆ

Ad Widget
Click to comment

Leave a Reply

ಅಪರಾಧ

Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.



Ad Widget

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.

ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Ad Widget
Continue Reading

ಅಪರಾಧ

Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ

Published

on



Ad Widget

Ad Widget

Ad Widget

Ad Widget

ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.

Ad Widget

Ad Widget <> Ad Widget

ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.



Ad Widget

ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್‌ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.

Ad Widget

Ad Widget

ತೋಟದ ಕೆಲಸಗಾರರ ಕೊರತೆಯನ್ನು ಬಳಸಿಕೊಂಡು ಇಂತಹ ರೀತಿಯಲ್ಲಿ ಕೃಷಿಕರನ್ನು ವಂಚಿಸುವ ಸಾಧ್ಯತೆಯಿದ್ದು, ಇದೇ ವ್ಯಕ್ತಿ ಇತರ ಕೃಷಿಕರನ್ನೂ ಸಂಪರ್ಕಿಸಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಹೀಗಾಗಿ ಅಪರಿಚಿತ ವ್ಯಕ್ತಿಗಳ ಮಾತನ್ನು ನಂಬಿ ಹಣ ನೀಡುವ ಮುನ್ನ ಕೃಷಿಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

Ad Widget
Continue Reading

ಅಂತರ ರಾಜ್ಯ

Blackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!

Published

on



Ad Widget

Ad Widget

Ad Widget

Ad Widget

ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಮುಂಬೈ: ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.24ರಂದು ಮಾನ್ಸಿ ಎಂಬ ಮಹಿಳೆ ತನ್ನ ಮಗುವಿನೊಂದಿಗೆ ಇಬ್ಬರು ಪುರುಷರ ಜತೆ ಬೊರಿವಲಿಯ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಮೈಸೂರು ಮಸಾಲೆ ದೋಸೆ ಆರ್ಡರ್ ಮಾಡಿದ್ದರು. ದೋಸೆ ತಿನ್ನುವ ಸಂದರ್ಭದಲ್ಲಿ ಅದರೊಳಗೆ ಸತ್ತ ಸಣ್ಣ ಇಲಿ ಪತ್ತೆಯಾಗಿದೆ ಎಂದು ಅವರು ಆರೋಪಿಸಿದ್ದರು.

Ad Widget

Ad Widget <> Ad Widget

ಮಾನ್ಸಿ ಅವರ ಹೇಳಿಕೆಯಂತೆ, ಅವರ ಸಹೋದರ ದೋಸೆಯ ಕೆಲವು ಭಾಗಗಳನ್ನು ಸೇವಿಸಿದ ಬಳಿಕ ಅದರೊಳಗೆ ಸತ್ತ ಇಲಿ ಇರುವುದನ್ನು ಗಮನಿಸಿದ್ದರು. ಇದರಿಂದ ಆಘಾತಗೊಂಡ ಅವರು ವಾಂತಿ ಮಾಡಿಕೊಂಡಿದ್ದರು. ಬಳಿಕ ಮಾನ್ಸಿ ಬೊರಿವಲಿ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆ ಕುರಿತು ದೂರು ನೀಡಿದ್ದರು.



Ad Widget

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಸೆ.28ರಂದು ಹೋಟೆಲ್‌ನ ಪರವಾನಗಿಯನ್ನು ಅಮಾನತುಗೊಳಿಸಿತ್ತು. ಇದರಿಂದ ಹೋಟೆಲ್ ಮುಚ್ಚುವ ಪರಿಸ್ಥಿತಿ ಎದುರಾಗಿತ್ತು.

Ad Widget

Ad Widget

₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್
ವಿಡಿಯೋ ವೈರಲ್ ಆದ ಬಳಿಕ ಹೋಟೆಲ್ ಮಾಲೀಕರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದ್ದವು. ವಿಡಿಯೋವನ್ನು ಮತ್ತಷ್ಟು ವೈರಲ್ ಮಾಡುವುದಾಗಿ ಹಾಗೂ ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಸಿ ₹25 ಲಕ್ಷ ನೀಡುವಂತೆ ಒತ್ತಾಯಿಸಲಾಗಿತ್ತು ಎನ್ನಲಾಗಿದೆ.

ನಿರಂತರ ಬೆದರಿಕೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರು ₹6 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ₹1 ಲಕ್ಷವನ್ನು ಮುಂಗಡವಾಗಿ ನಗದು ರೂಪದಲ್ಲಿ ನೀಡಿದ್ದರು.

ಹಣ ಪಡೆಯುವ ವೇಳೆ ರೆಡ್‌ಹ್ಯಾಂಡ್ ಆಗಿ ಬಂಧನ
ಸೆ.29ರಂದು ಹೋಟೆಲ್ ಮಾಲೀಕರು ಬೊರಿವಲಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಬಲೆ ಬೀಸಿ, ಮತ್ತಷ್ಟು ಹಣ ಪಡೆಯಲು ಮಹಿಳೆಯನ್ನು ಕರೆಸಿಕೊಂಡಿದ್ದರು. ಹಣ ಸ್ವೀಕರಿಸುತ್ತಿದ್ದ ವೇಳೆ ಪೊಲೀಸರು ಆಕೆಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ತನಿಖೆ ವೇಳೆ ಬಂಧಿತ ಮಹಿಳೆ ಬೇರೆ ಯಾರೂ ಅಲ್ಲ, ದೋಸೆಯಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ದೂರು ನೀಡಿದ್ದ ಮಾನ್ಸಿ ಅಮಿತ್ ಎಂಬುದು ಬೆಳಕಿಗೆ ಬಂದಿದೆ. ಅವರು ಬೊರಿವಲಿಯ ಗೋರೆಗಾಂವ್ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಬ್ಲ್ಯಾಕ್‌ಮೇಲ್‌ನಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading