ಬಿಗ್ ನ್ಯೂಸ್
Puttur-15000ದ ಟಿವಿ ಖರೀದಿಸಿದ ಗ್ರಾಹಕರಿಗೆ ಒಲಿದ 1 ಲಕ್ಷದ ಚಿನ್ನದ ನಾಣ್ಯ..! ಪುತ್ತೂರಿನ ನ್ಯೂ ಮಂಗಳೂರು ಇಲೆಕ್ಟೋನಿಕ್ಸ್ನ ಬಿಗ್ ಸೇಲ್ ಇನ್ನು 2 ದಿನ ಮಾತ್ರ
ನ್ಯೂ ಮಂಗಳೂರು ಇಲೆಕ್ಟೋನಿಕ್ಸ್ನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಸೆ.8ರಿಂದ ನಡೆಯುತ್ತಿರುವ ಬಿಗ್ಸೇಲ್ಗೆ ವರ್ಷಂಪ್ರತಿಯಂತೆ ಈ ಬಾರಿಯೂ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಟಿ.ವಿ., ಫ್ರಿಡ್ಜ್, ವಾಷಿಂಗ್ ಮೆಷಿನ್ ಇತ್ಯಾದಿ ಖರೀದಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ, ಪ್ರತೀ ಖರೀದಿಗೆ ಹಲವು ಆಕರ್ಷಕ ಉಡುಗೊರೆಗಳು ಮತ್ತು ಗಿಫ್ಟ್ ವೋಚರ್ ಪಡೆಯುವ ಸುವರ್ಣಾವಕಾಶವಿದೆ. ಈ ಆಫರ್ ಇನ್ನು ಕೇವಲ 2 ದಿನಗಳು ಮಾತ್ರ ಲಭ್ಯವಿದ್ದು ಗ್ರಾಹಕರು ಇದರ ಸದುಪಯೋಗವನ್ನು ಪಡೆಯುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಪುತ್ತೂರು: ಪುತ್ತೂರಿನಲ್ಲಿ ಸುಮಾರು 46 ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ನ್ಯೂ ಮಂಗಳೂರು ಫರ್ನಿಚರ್ಸ್ ಸಹ ಸಂಸ್ಥೆ, ದರ್ಬೆ ಬುಶ್ರಾ ಟವರ್ನಲ್ಲಿ ವ್ಯವಹರಿಸುತ್ತಿರುವ ನ್ಯೂ ಮಂಗಳೂರು ಇಲೆಕ್ಟೋನಿಕ್ಸ್ನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಸೆ.8ರಿಂದ ನಡೆಯುತ್ತಿರುವ ಬಿಗ್ಸೇಲ್ಗೆ ವರ್ಷಂಪ್ರತಿಯಂತೆ ಈ ಬಾರಿಯೂ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಟಿ.ವಿ., ಫ್ರಿಡ್ಜ್, ವಾಷಿಂಗ್ ಮೆಷಿನ್ ಇತ್ಯಾದಿ ಖರೀದಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ, ಪ್ರತೀ ಖರೀದಿಗೆ ಹಲವು ಆಕರ್ಷಕ ಉಡುಗೊರೆಗಳು ಮತ್ತು ಗಿಫ್ಟ್ ವೋಚರ್ ಪಡೆಯುವ ಸುವರ್ಣಾವಕಾಶವಿದೆ.
ಈ ಆಫರ್ ಇನ್ನು ಕೇವಲ 2 ದಿನಗಳು ಮಾತ್ರ ಲಭ್ಯವಿದ್ದು ಗ್ರಾಹಕರು ಇದರ ಸದುಪಯೋಗವನ್ನು ಪಡೆಯುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪ್ರತಿ ರೂ.3000ದ ಖರೀದಿಗೆ ಕೂಪನ್ ಪಡೆದು ಸೈಡ್ ಬೈ ಸೈಡ್ ರೆಫ್ರಿಜರೇಟರ್ ಹಾಗೂ ಒಟ್ಟು 50 ಬಹುಮಾನಗಳನ್ನು ಖಚಿತವಾಗಿ ಪಡೆಯುವ ಅವಕಾಶವಿರುತ್ತದೆ.
ಸ್ಕ್ರ್ಯಾಚ್ ಕಾರ್ಡ್ ನಲ್ಲಿ 10 ಗ್ರಾಂ.ಚಿನ್ನ, ರೆಫ್ರಿಜರೇಟರ್, ಎ.ಸಿ., 3 ಡೋರ್ ವಾರ್ಡ್ರೋಬ್ , ಎಲ್ಇಡಿ ಟಿವಿ ಹಾಗೂ ಹಲವು ಖಚಿತ ಬಹುಮಾನಗಳು ಲಭ್ಯವಿರುತ್ತದೆ.
ಎಲ್ಲಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೇಲೆ ಶೇ.26 ಕ್ಯಾಶ್ಬ್ಯಾಕ್ ಸೌಲಭ್ಯ ಮತ್ತು ಗೋದ್ರೇಜ್ ಉತ್ಪನ್ನಗಳ ಮೇಲೆ 1 ವರ್ಷ ಹೆಚ್ಚುವರಿ ವಾರಂಟಿ ಇದೆ. ಈ ಎಲ್ಲಾ ಆಫರ್ಗಳು ಪುತ್ತೂರಿನ ದರ್ಬೆಯಲ್ಲಿರುವ ಐಕೆ ಮಾಲ್ ನಲ್ಲೂ ಲಭ್ಯವಿರುತ್ತದೆ.

ಜಗತ್ ಪ್ರಸಿದ್ದ ಎಲ್ಲಾ ಬ್ರಾಂಡ್ ಗಳ ಉತ್ಪನ್ನಗಳು, 100ಕ್ಕೂ ಹೆಚ್ಚು ಮಾಡೆಲ್ನ ಫ್ಯಾನ್ಗಳು, 75ಕ್ಕೂ ಹೆಚ್ಚು ಮಾಡೆಲ್ನ ಮಿಕ್ಸಿಗಳು, 40ಕ್ಕೂ ಹೆಚ್ಚು ಮಾಡೆಲ್ನ ಗ್ಯಾಸ್ ಸ್ಟವ್ಗಳು, 40ಕ್ಕೂ ಹೆಚ್ಚು ಮಾಡೆಲ್ನ ಎಲ್.ಇ.ಡಿ.ಟಿವಿಗಳು, 75ಕ್ಕೂ ಹೆಚ್ಚು ಮಾಡೆಲ್ನ ವಾಷಿಂಗ್ ಮೆಷಿನ್, 25ಕ್ಕೂ ಹೆಚ್ಚು ಮಾಡೆಲ್ನ ಸೈಂಡರ್ಗಳು, 100ಕ್ಕೂ ಹೆಚ್ಚು ಮಾಡೆಲ್ನ ರೆಫ್ರಿಜರೇಟರ್ ಶೇ.40ರವರೆಗೆ ರಿಯಾಯಿತಿಯಲ್ಲಿ ದೊರೆಯುತ್ತದೆ.

10 ಗ್ರಾಂ. ಚಿನ್ನ ಡ್ರಾ ವಿಜೇತರು
ಸೆ.11ರಂದು ನಡೆದ ಡ್ರಾದಲ್ಲಿ 15000 ರೂ ಬೆಲೆಯ ಟಿವಿ ಖರೀದಿಸಿದ ಬ್ಯಾಂಕ್ ಉದ್ಯೋಗಿ ಶಕೀಲ್ ಕುಂಬ್ರ 10 ಗ್ರಾಂ ಚಿನ್ನದ ನಾಣ್ಯ ವಿಜೇತರಾಗಿದ್ದಾರೆ.
ಜೊತೆಗೆ ಗ್ರಾಹಕರು ವಾರ್ಡ್ ರೋಬ್, ಟಿವಿ, ಗ್ರೈಂಡರ್, ಮಿಕ್ಸಿ ಗಳನ್ನು ಬಹುಮಾನವಾಗಿ ವಿಜೇತರಾಗುತ್ತಿದ್ದಾರೆ.
ಅಂತರ ರಾಜ್ಯ
L.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ದಿಲ್ಲಿಯ ಜಸೋಲಾ ವಿಹಾರ್ನಲ್ಲಿರುವ ಆಸ್ಪತ್ರೆಗೆ ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ. ಅಡ್ವಾಣಿ ಅವರು 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.
ಮಂಗಳೂರು
MRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳ ಪೈಕಿ ಒಬ್ಬರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಅ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಎಂಆರ್ಪಿಎಲ್ನ ಫೇಸ್-3ರ ಸಿಎಚ್ಟಿಯು (Coker Hydro Treating Unit) ಪ್ಲಾಂಟ್ನಲ್ಲಿ ಕಳೆದ ಸೆಪ್ಟೆಂಬರ್ 30ರಂದು ಭಾರೀ ಸ್ಫೋಟ ಸಂಭವಿಸಿತ್ತು. ಅಂದು ಸಂಭವಿಸಿದ ದುರಂತದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು.
ಅದೇ ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯು (ICU) ಘಟಕದಲ್ಲಿ ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರ ದೇಹವನ್ನು ಇಂದು ಸಂಜೆಯ ವೇಳೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ (Post-mortem) ನಡೆಸಲಾಗುವುದು. ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳೀಯ
Kumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಚಾರಣಕ್ಕೆ ಆಗಮಿಸುವವರು ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಚಾರಣದ ವೇಳೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ.
ಚಾರಣಿಗರು ನಿಗದಿತ ಸಮಯಕ್ಕೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದಲ್ಲಿರುವ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಪ್ರಕೃತಿಯ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಚಾರಣದ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.
ಇನ್ನೊಂದೆಡೆ, ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ಮೂಲಕ ಕುಮಾರ ಪರ್ವತ ಚಾರಣ ಆರಂಭಿಸಲು ಈವರೆಗೆ ದಿನಾಂಕ ನಿಗದಿಯಾಗಿಲ್ಲ.
-
ನಿಧನ ವಾರ್ತೆ23 hours agoPuttur-ಮುಕ್ರಂಪಾಡಿಯಲ್ಲಿ ಸ್ಕೂಟರ್–ರಿಕ್ಷಾ ಡಿಕ್ಕಿ: ಪುತ್ತೂರು ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು
-
ಸ್ಥಳೀಯ23 hours agoKumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
-
ಅಪರಾಧ23 hours agoHigh Court-ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಸೇರಿ 8 ಆರೋಪಿಗಳ ಜಾಮೀನಿಗೆ ಹೈಕೋರ್ಟ್ ತಡೆ
-
ಮೈಸೂರು17 hours agoMysuru-ಮೈಸೂರು ದಸರಾ ವೇಳೆ 10 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ
-
ಅಪರಾಧ16 hours agoPuttur-ಪುತ್ತೂರು: ಮಹಿಳೆಯ ಮೇಲೆ ಹಲ್ಲೆ, ಮಾನಭಂಗ ಪ್ರಕರಣ; ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
-
ಮಂಗಳೂರು17 hours agoMRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
-
ಅಪರಾಧ17 hours agoMangalore:-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ
-
ಅಪರಾಧ15 hours agoUppinangadi-ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ ನಗದು, ಮೊಬೈಲ್ ದರೋಡೆ; ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು


















