ಮಂಗಳೂರು
Mangalore-ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆಗೈದ ಆರೋಪಿಗೆ ಮರಣದಂಡನೆ – ನ್ಯಾಯ ದೊರಕಿಸಿ ಕೊಡಲು ನೆರವಾದ ಆ ಎರಡು ಸಾಕ್ಷಿಗಳು
ಉಡುಪಿ ಜಿಲ್ಲೆಯ ಕೋಣಾಜೆಯಲ್ಲಿ 2024ರ ಆಗಸ್ಟ್ 6ರಂದು ನಡೆದ ಭಯಾನಕ ಘಟನೆಯಲ್ಲಿ, ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಫ್‌ಸಿ-2 (ಪೊಕ್ಸೊ) ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ.
ಮಂಗಳೂರು, ಸೆ.135: ಉಡುಪಿ ಜಿಲ್ಲೆಯ ಕೋಣಾಜೆಯಲ್ಲಿ 2024ರ ಆಗಸ್ಟ್ 6ರಂದು ನಡೆದ ಭಯಾನಕ ಘಟನೆಯಲ್ಲಿ, ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಫ್‌ಸಿ-2 (ಪೊಕ್ಸೊ) ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ನ್ಯಾಯಾಧೀಶ ಕೆ.ಎಸ್. ಮಾನು ಅವರಿಂದ ನೀಡಲಾದ ಈ ತೀರ್ಪು, ಬಾಲಕಿಯ ಸುರಕ್ಷತೆಗೆ ಸಂಬಂಧಿಸಿದ ಕಠಿಣ ನಡೆಯಾಗಿ ಗಮನ ಸೆಳೆದಿದೆ.
ಬೆಳಗಾವಿ ಸವದತ್ತಿ ತಾಲೂಕು ಹಂಚಿನಾಳ ಗ್ರಾಮ ಮಾದರ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ (58) ಶಿಕ್ಷೆಗೊಳಗಾದ ಅಪರಾಧಿ.
ಅಪ್ರಾಪ್ತ ಬಾಲಕಿ ಮೂಲತಃ ಬೆಳಗಾವಿ ಚುಂಚನೂರು ಗ್ರಾಮ ನಿವಾಸಿಯಾಗಿದ್ದು, ಕೋಣಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು.
ಆಕೆಯ ಹೆತ್ತವರು ತನ್ನ ಮಗಳನ್ನು ತನ್ನ ಸೋದರ ಸಂಬಂಧಿ ಮನೆಯಲ್ಲಿ ಬಿಟ್ಟು, ಅಲ್ಲಿಂದ ವಸತಿ ಶಾಲೆಗೆ ಬಿಟ್ಟು ಬರುವಂತೆ ಹೇಳಿ ಊರಿಗೆ ಹೋಗಿದ್ದರು.
2024ರ ಆ.6ರಂದು ಬೆಳಗ್ಗೆ ಬಾಲಕಿಯ ಮಾವ ಗಾರೆ ಕೆಲಸಕ್ಕೆ ಹೊರಟು ಹೋಗಿದ್ದರೆ, ಅವರ ಹೆಂಡತಿ ಊರಿಗೆ ಹೋಗಿದ್ದರು. ಬೆಳಗ್ಗೆ 9.00-9.15ರ ವೇಳೆಗೆ ಬಾಲಕಿ ಒಬ್ಬಳೇ ಮನೆಯಲ್ಲಿದ್ದು, ಈ ಸಂದರ್ಭ ಪಕ್ಕದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆರೋಪಿ ಫಕೀರಪ್ಪ ಹಣಮಪ್ಪ ಮಾದರ ಬಾಲಕಿ ಇದ್ದ ಮನೆಗೆ ಅಕ್ರಮ ಪ್ರವೇಶ ಮಾಡಿದ್ದನು. ಬಳಿಕ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿ, ಆಕೆಗೆ ಮುಖಕ್ಕೆ ಕಚ್ಚಿಗಾಯಗೊಳಿಸಿದ್ದನು. ಈ ಸಂದರ್ಭ ಬಾಲಕಿ ವಿರೋಧಿಸಿದಾಗ ಬಲವಂತವಾಗಿ ಲೈಂಗಿಕ ಕಿರುಕುಳ ನಡೆಸಿ ಹಲ್ಲೆ ಮಾಡಿದ್ದನು. ಇದಾದ ಬಳಿಕ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಉಸಿರುಗಟ್ಟಿಸಿ ಉದ್ದೇಶಪೂರ್ವಕವಾಗಿ ಕೊಲೆಮಾಡಿದ್ದನು. ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದನು.
ಅಪ್ರಾಪ್ತ ಬಾಲಕಿಯ ಕೊಲೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಪ್ರಕರಣ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಫ್‌ಸಿ-2 (ಪೋಕ್ಸ್) ನ್ಯಾಯಾಲಯದ ನ್ಯಾಯಾಧೀಶ ಕೆ.ಎಸ್.ಮಾನು ಅವರು ಆರೋಪಿಯ ಮೇಲಿನ ಅಪರಾಧ ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ.
ಅಪರಾಧಿಗೆ ಬಿಎನ್‌ಎಸ್ 103(1) ಕೊಲೆ ಪ್ರಕರಣಕ್ಕೆ ಮರಣದಂಡನೆ ಶಿಕ್ಷೆ, ಪೊಕ್ಕೋ 4(2) ರಡಿ ಪೋಕ್ಸೋ ಪ್ರಕರಣಕ್ಕೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರು. ದಂಡ, ದಂಡ ತೆರಲು ತಪ್ಪಿದಲ್ಲಿ 4 ತಿಂಗಳು ಸದಾ ಶಿಕ್ಷೆ, ಬಿಎನ್ಎಸ್ 332(ಎ) ಅಕ್ರಮ ಪ್ರವೇಶ ಅಪರಾಧದಡಿ ಜೀವಾವಧಿ ಶಿಕ್ಷೆ ಮತ್ತು 5 ಸಾವಿರ ರು. ದಂಡ, ದಂಡ ತೆರಲು ತಪ್ಪಿದಲ್ಲಿ 4 ತಿಂಗಳು ಸದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿ ಜೀವಾವಧಿ ಶಿಕ್ಷೆ ಏಕಕಾಲಕ್ಕೆ ಅನುಭವಿಸಬಹುದಾಗಿದೆ.
ದಂಡದ ಮೊತ್ತ 1 ಲಕ್ಷ ರೂ. ಬಾಲಕಿಯ ತಂದೆ-ತಾಯಿಗೆ ನೀಡಬೇಕು. ಇದು ಮಾತ್ರವಲ್ಲದೆ ತಂದೆ-ತಾಯಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲಾಗಿದೆ. ಪಣಂಬೂರು ಠಾಣಾ ಇನ್‌ಸ್ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ಜೀವಿ ಬೋಳೂರು ಸರ್ಕಾರದ ಪರವಾಗಿ ವಾದಿಸಿದ್ದರು.
ನೆರವಾದ ಪ್ರತ್ಯಕ್ಷ ಸಾಕ್ಷಿಗಳು
ಅಪ್ರಾಪ್ತ ಬಾಲಕಿ ಕೊಲೆಗೆ ಮುನ್ನ ದಿನ ನೆರೆಮನೆಯ ಮಹಿಳೆಯೊಬ್ಬರ ಫೋನ್ ಮೂಲಕ ತನ್ನ ತಾಯಿಗೆ ಕರೆ ಮಾಡಿ ಜ್ವರವಿರುವ ಬಗ್ಗೆ ಹೇಳಿದ್ದಳು. ಈ ಕಾರಣದಿಂದ ಮರುದಿನ ಅದೇ ಮಹಿಳೆಯ ಫೋನ್‌ಗೆ ಕರೆ ಮಾಡಿ ಬಾಲಕಿ ಜತೆ ಮಾತನಾಡಲು ಫೋನ್ ಕೊಡುವಂತೆ ಹೇಳಿದ್ದರು.
ಈ ಸಂದರ್ಭ ಪಕ್ಕದ ಮನೆಯ ಮಹಿಳೆ ಮತ್ತೊಬ್ಬ ಮಹಿಳೆ ಜತೆ ಬಾಲಕಿ ಇರುವ ಮನೆಗೆ ಬಂದಾಗ ಆರೋಪಿ ಫಕೀರಪ್ಪ ಬಾಲಕಿಯ ಮೇಲೆ ಕುಳಿತು ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ್ದನು. ಇದನ್ನು ನೋಡಿ ಮಹಿಳೆಯರು ಆತಂಕಿತರಾಗಿದ್ದು, ಕೂಡಲೇ ಆರೋಪಿ ಈ ವಿಷಯ ಯಾರಿಗೂ ಹೇಳದಂತೆ ಮಹಿಳೆಯರಿಗೆ ಬೆದರಿಸಿ ಅಲ್ಲಿಂದ ತೆರಳಿದ್ದನು. ಅಲ್ಲಿಂದ ತನ್ನ ಬಾಡಿಗೆ ಮನೆಗೆ ಹೋಗಿ ಬಟ್ಟೆ ಬದಲಾಯಿಸಿ ಪರಾರಿಯಾಗಿದ್ದನು. ಕೋರ್ಟ್ ವಿಚಾರಣೆ ವೇಳೆ ಇಬ್ಬರು ಮಹಿಳೆಯರು ಘಟನೆಯ ಪ್ರತ್ಯಕ್ಷ ಸಾಕ್ಷಿ ಹೇಳಿದರೆ, ಉಳಿದ 15 ಮಂದಿ ಮಂದಿ ಸಾಂದರ್ಭಿಕ ಸಾಕ್ಷಿಗಳನ್ನು ಹೇಳಿದ್ದರು. 38 ದಾಖಲೆಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
ಪ್ರತ್ಯಕ್ಷ ಸಾಕ್ಷಿ, ಸಾಂದರ್ಭಿಕ ಸಾಕ್ಷಿ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ ವರದಿ ಕಠಿಣ ಶಿಕ್ಷೆಗೆ ವಿಧಿಸಲು ಸಾಧ್ಯವಾಯಿತು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಮಂಗಳೂರು14 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್21 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ19 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ20 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ19 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ಅಂತರ ರಾಜ್ಯ13 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ20 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ19 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















