Connect with us

ಮಂಗಳೂರು

Mangalore-ಮಂಗಳೂರು: ಸೆ.14ಕ್ಕೆ ಸಹಕಾರಿ ಸಂಘಗಳಿಂದ ಉಜಿರೆಯಿಂದ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆʼ

Published

on

Ad Widget

Ad Widget

Ad Widget

Ad Widget

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷೆ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸೆಪ್ಟೆಂಬರ್ 14ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸಹಕಾರಿ ಸಂಘಗಳಿಂದ ‘ಧರ್ಮ ಜಾಗೃತಿ ಯಾತ್ರೆ’ ಉಜಿರೆಯಿಂದ ಧರ್ಮಸ್ಥಳಕ್ಕೆ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷೆ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸೆಪ್ಟೆಂಬರ್ 14ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸಹಕಾರಿ ಸಂಘಗಳಿಂದ ‘ಧರ್ಮ ಜಾಗೃತಿ ಯಾತ್ರೆ’ ಉಜಿರೆಯಿಂದ ಧರ್ಮಸ್ಥಳಕ್ಕೆ ನಡೆಯಲಿದೆ. ಈ ಯಾತ್ರೆಯಲ್ಲಿ 1,500ಕ್ಕೂ ಹೆಚ್ಚು ಸಹಕಾರಿ ಸಂಘಗಳು ಮತ್ತು 5,000ಕ್ಕೂ ಹೆಚ್ಚು ವಾಹನಗಳು ಭಾಗವಹಿಸಲಿದ್ದು, ಮಧ್ಯಾಹ್ನ 12 ಗಂಟೆಗೆ ಉಜಿರೆಯಿಂದ ಆರಂಭವಾಗುತ್ತದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸಹಕಾರಿ ಧುರೀಣ ಶಶಿಕುಮಾರ್ ರೈ ಬ್ಯಾಲೊಟ್ಟು ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಶುಕ್ರವಾರ ಇಲ್ಲಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಜಿರೆಯಿಂದ ಹೊರಟು ಧರ್ಮಸ್ಥಳ ತಲುಪಿದ ಯಾತ್ರೆಯ ನಂತರ ಮಧ್ಯಾಹ್ನ ಅಮೃತ ವರ್ಷಿಣಿ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯುತ್ತದೆ ಎಂದರು. ಈ ಸಭೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಶೀರ್ವಚನ ನೀಡುತ್ತಾರೆ ಎಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಭಿನಂದನೆ ಸಲ್ಲಿಸುತ್ತಾರೆ ಎಂದು ಹೇಳಿದರು.

Ad Widget

Ad Widget <> Ad Widget

ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಸಹಕಾರಿ ಸಂಘಗಳ ಐಕ್ಯ
ಸಹಬಾಳ್ವೆಯ ಪ್ರತೀಕವಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪಾರಂಪರ್ಯ ಹೊಂದಿರುವ ಪವಿತ್ರ ಕ್ಷೇತ್ರವಾಗಿದ್ದು, ಇಂತಹ ಕ್ಷೇತ್ರಕ್ಕೆ ಕಳಂಕ ತರುವ ದುಷ್ಟಶಕ್ತಿಗಳ ಷಡ್ಯಂತ್ರಗಳನ್ನು ವಿರೋಧಿಸಲು ಅವಿಭಜಿತ ಜಿಲ್ಲೆಯ ಸಹಕಾರಿಗಳು ಈ ಧರ್ಮ ಜಾಗೃತಿ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಶಶಿಕುಮಾರ್ ರೈ ಬ್ಯಾಲೊಟ್ಟು ವಿವರಿಸಿದರು.

ಇದು ಧರ್ಮಸಂರಕ್ಷಣೆಯ ಯಾತ್ರೆಯಾಗಿದ್ದು, ಧಾರ್ಮಿಕ ಕ್ಷೇತ್ರಗಳ ಮೇಲೆ ಅಪಪ್ರಚಾರ ಮಾಡುವ ಷಡ್ಯಂತರಿಗಳ ವಿರುದ್ಧ ನಡೆಸುವ ಚಟುವಟಿಕೆಯಾಗಿದೆ. ಅವಿಭಜಿತ ಜಿಲ್ಲೆಯ ಸಹಕಾರಿ ಸಂಘಗಳು ಯಾವಾಗಲೂ ಸೌಹಾರ್ದ ಮತ್ತು ಸಹಬಾಳ್ವೆಯ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿವೆ. ಪವಿತ್ರ ಧರ್ಮಸ್ಥಳ ಕ್ಷೇತ್ರಕ್ಕೆ ಸಹಕಾರ ಕ್ಷೇತ್ರದಿಂದ ವಿಶೇಷ ಗೌರವ, ಶ್ರದ್ಧೆ ಮತ್ತು ಭಕ್ತಿ ಇದೆ. ಹಾಗಾಗಿ, ಈ ಕ್ಷೇತ್ರಕ್ಕೆ ಅಪಚಾರ ಎಸಗುವ ಷಡ್ಯಂತರಗಳಿಗೆ ಸ್ಪಷ್ಟ ಸಂದೇಶ ನೀಡುವ ಚಾರಿತ್ರಿಕ ಯಾತ್ರೆಯಾಗಿ ಇದು ನಡೆಯಲಿದೆ ಎಂದರು.

Ad Widget

Ad Widget

ಶ್ರೀಕ್ಷೇತ್ರ ಧರ್ಮಸ್ಥಳ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಮತ್ತು ಸಹಕಾರ ಕ್ಷೇತ್ರಗಳಿಗೆ ವಿಶೇಷ ಕೊಡುಗೆ ನೀಡಿದೆ. ಇಂತಹ ಸಾಮಾಜಿಕ ಸ್ಪಂದನೆಯ ಧಾರ್ಮಿಕ ಕ್ಷೇತ್ರವನ್ನು ಅಪಪ್ರಚಾರ ಮಾಡುವ ಷಡ್ಯಂತರಿಗಳು ಭಾವನೆಯನ್ನು ದುರ್ಬಲಗೊಳಿಸುತ್ತಿರುವುದು ಖಂಡನೀಯ. ಯಾವುದೇ ಧರ್ಮ ಕ್ಷೇತ್ರಗಳಿಗೆ ಅಥವಾ ಧರ್ಮಗಳಿಗೆ ಇಂತಹ ಅಪಚಾರ ಆಗಬಾರದು. ಸಹಕಾರ ಕ್ಷೇತ್ರ ಸರ್ವಧರ್ಮಗಳಿಗೂ ಗೌರವ ನೀಡುವ ಕ್ಷೇತ್ರವಾಗಿರುವುದರಿಂದ, ಸರ್ವಧರ್ಮ ಸಂರಕ್ಷಣೆಯ ದೃಷ್ಟಿಯಿಂದ ಈ ಯಾತ್ರೆ ಯಶಸ್ವಿಯಾಗಿ ನಡೆಯಲಿದೆ ಎಂದು ಒತ್ತಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳವು, ಜಯರಾಜ್ ಶೆಟ್ಟಿ, ವಾದಿರಾಜ್ ಶೆಟ್ಟಿ, ಎಸ್.ಬಿ. ಜಯರಾಮ್ ರೈ, ಮನ್ಮಥ ಮತ್ತು ಇತರರು ಉಪಸ್ಥಿತರಿದ್ದರು.

12 ಗಂಟೆಗೆ ಧರ್ಮ ಜಾಗೃತಿ ಯಾತ್ರೆಗೆ ಚಾಲನೆ
ಉಡುಪಿ ಜಿಲ್ಲೆಯ ಬೈಂದೂರು, ಉಡುಪಿ, ಕಾರ್ಕಳ, ಮೂಡುಬಿದಿರೆ ಕಡೆಯಿಂದ ತೆರಳುವ ಮಂದಿ ವಾಹನಗಳಲ್ಲಿ ನೇರವಾಗಿ ಬೆಳಗ್ಗೆ 10.30ಕ್ಕೆ ಉಜಿರೆ ತಲುಪಬೇಕು. ಮಂಗಳೂರು, ಸುಳ್ಯ, ಪುತ್ತೂರು, ಬಂಟ್ವಾಳ, ಕಡಬ ತಾಲೂಕುಗಳಿಂದ ಆಗಮಿಸುವವರು ಬೆಳಗ್ಗೆ 11.30ಕ್ಕೆ ಉಜಿರೆ ತಲುಪಬೇಕು. ಅಲ್ಲಿ 12 ಗಂಟೆಗೆ ಧರ್ಮಜಾಗೃತಿ ಯಾತ್ರೆಗೆ ಡಾ.ಎ.ಎನ್.ರಾಜೇಂದ್ರ ಕುಮಾ‌ರ್ ಚಾಲನೆ ನೀಡಲಿದ್ದಾರೆ. 12.30ಕ್ಕೆ ತಲಪುವ ಯಾತ್ರೆಯ ವಾಹನಗಳಿಗೆ ಅಮೃತ ವರ್ಷಿಣಿ ಸಭಾಂಗಣ ಹಿಂಭಾಗದ ವಿಶಾಲ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 10 ನಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಲ್ಲಿ ಸಭಾ ಕಾರ್ಯಕ್ರಮ, ಭೋಜನ ಬಳಿಕ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಶಿಕುಮಾರ್‌ರೈ ಬ್ಯಾಲೊಟ್ಟು ತಿಳಿಸಿದರು.

Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!