ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 […]" /> ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 […]"> Hassan-ಹಾಸನ ಅಪಘಾತ ಪ್ರಕರಣ; ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ: ಸಾಂತ್ವನ ಹೇಳಲು ನೀಡುವುದು: ಸಿದ್ದರಾಮಯ್ಯ; ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ವಿಳಂಬವಾಗುತ್ತಿದೆಯೇ ಪ್ರಶ್ನೆಗೆ ಸಿಎಂ ಹೇಳಿದ್ದೇನೂ..? - Nikhara News | Kannada News Website
Connect with us

ಮೈಸೂರು

Hassan-ಹಾಸನ ಅಪಘಾತ ಪ್ರಕರಣ; ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ: ಸಾಂತ್ವನ ಹೇಳಲು ನೀಡುವುದು: ಸಿದ್ದರಾಮಯ್ಯ; ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ವಿಳಂಬವಾಗುತ್ತಿದೆಯೇ ಪ್ರಶ್ನೆಗೆ ಸಿಎಂ ಹೇಳಿದ್ದೇನೂ..?

Published

on

Ad Widget

Ad Widget

Ad Widget

Ad Widget

ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Ad Widget

Ad Widget

Ad Widget

Ad Widget

ಮೈಸೂರು : ಸೆಪ್ಟೆಂಬರ್ -13: ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

Ad Widget

Ad Widget <> Ad Widget

ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದರು. ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಹಾಸನ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದರು.

ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ
ಸತ್ತವರು ಹೆಚ್ಚಾಗಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳಿದ್ದರು ಹಾಗಾಗಿ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸರ್ಕಾರ ಐದು ಲಕ್ಷ ಪರಿಹಾರ ನೀಡಿದೆ. ಮೃತರ ಕುಟುಂಬದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ ಎಂದರು.

Ad Widget

Ad Widget

ವಿರೋಧಪಕ್ಷದವರ ಒತ್ತಡದಿಂದ ಪ್ರಧಾನಿಗಳು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ
ಮೂರು ವರ್ಷಗಳ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿ, ಗಲಾಟೆ ಆಗುವಾಗ ಭೇಟಿ ನೀಡದೇ, ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಷ್ಟು ವರ್ಷ ಆಯ್ಕೆ ಹೋಗಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ವಿರೋಧಪಕ್ಷದವರ ಒತ್ತಡದಿಂದ ಈಗ ಭೇಟಿ ನೀಡುತ್ತಿದ್ದಾರೆ ಎಂದರು.

ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ವಿಳಂಬವಾಗುತ್ತಿಲ್ಲ :
ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ವಿಳಂಬವಾಗುತ್ತಿಲ್ಲ. ಎಸ್ ಐ ಟಿ ತನಿಖೆ ಮಾಡುತ್ತಿದ್ದು ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಾಗೆಂದು ಅನಗತ್ಯವಾಗಿ ವಿಳಂಬ ಮಾಡುವಂತಿಲ್ಲ. ನನಗೆ ತಿಳಿದಂತೆ ವಿಳಂಬವಾಗುತ್ತಿಲ್ಲ ಎಂದು ಹೇಳಿದರು.

ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ
ದಸರಾ ಉದ್ಘಾಟಕರ ವಿಚಾರದಲ್ಲಿ ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಬಗ್ಗೆ ಮಾತನಾಡಿ ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದರು.

ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೋಲಿಸಿನವರು ಕ್ರಮ ಕೈಗೊಳ್ಳುತ್ತಾರೆ ಎಂದರು.

ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ
ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ ಎಂದರು. ಇದು ಹಿಂದೂಗಳನ್ನೇ ಗುರಿಯಾಗಿಸಿ ಮಾಡಿರುವ ಕೃತ್ಯ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದರು.

ರಾಜಕಾರಣಕ್ಕಾಗಿ ಆಕ್ಷೇಪ
ಮಹಾರಾಷ್ಟ್ರ ಮುಖ್ಯಮಂತ್ರಿಗಳು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಮಂಡಳಿಯೇ ಅಣೆಕಟ್ಟನ್ನು 519 ಮೀ.ಗಳಿಂದ 524 ಮೀ.ವರೆಗೆ ಏರಿಸಲು 2010 ರಲ್ಲಿ ಹೇಳಿದೆ. 15 ವರ್ಷಗಳಾಗಿದ್ದು ರಾಜಕಾರಣಕ್ಕಾಗಿ ಆಕ್ಷೇಪ ತೆಗೆದಿದ್ದಾರೆ ಎಂದರು.

ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು
ಗೋವಾ ಮಹದಾಯಿ ಯೋಜನೆಯನ್ನು ಹಾಗೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು ಎಂದರು.

ಜಾತಿ ಗಣತಿ: ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು

ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಹೊಸ ಜಾತಿಗಳನ್ನು ಸರಕಾರ ಸೇರ್ಪಡೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು. ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಮತಾಂತರಗೊಳ್ಳುತ್ತಾರೆ. ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಸಮಾನ ಅವಕಾಶಗಳಿದ್ದರೆ, ಏಕೆ ಮತಾಂತರಗೊಳ್ಳುತ್ತಾರೆ? ಅಸ್ಪೃಶ್ಯತೆ ಏಕೆ ಬಂತು, ಅದನ್ನು ನಾವು ಹುಟ್ಟುಹಾಕಿದ್ದೇವೆಯೇ? ಎಂದರು. ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಧರ್ಮದಲ್ಲಿ ಇದ್ದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದರು.

Ad Widget
Click to comment

Leave a Reply

ಮೈಸೂರು

H. Vishwanath-ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ಸಂಚಲನ: ಎಚ್‌. ವಿಶ್ವನಾಥ್

Published

on

Ad Widget

Ad Widget

Ad Widget

Ad Widget

ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್‌. ವಿಶ್ವನಾಥ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮೈಸೂರು: ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್‌. ವಿಶ್ವನಾಥ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಜನರು ರಾಜಕೀಯದ ಬಗ್ಗೆ ಸಾಕಷ್ಟು ಅಸಹ್ಯಪಟ್ಟುಕೊಂಡಿದ್ದಾರೆ. ನನ್ನ ಪುಸ್ತಕ ಬಿಡುಗಡೆಯಾದರೆ ರಾಜಕೀಯದ ಬಗ್ಗೆ ಜನರಲ್ಲಿ ಮತ್ತಷ್ಟು ಅಸಹ್ಯ ಮೂಡುವ ಸಾಧ್ಯತೆಯಿದೆ” ಎಂದು ಹೇಳಿದರು.

Ad Widget

Ad Widget <> Ad Widget

ಯತೀಂದ್ರ ಇತಿಹಾಸ ತಿಳಿದು ಮಾತನಾಡಲಿ
ರಾಜವಂಶಸ್ಥರ ಕುರಿತು ಸಚಿವ ಡಾ. ಯತೀಂದ್ರ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವನಾಥ್, “ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ರಾಜವಂಶಸ್ಥರ ಕುರಿತು ಯತೀಂದ್ರ ಮಾತನಾಡಿರುವ ಹಗುರವಾದ ಹೇಳಿಕೆಯೇ ಸಾಕ್ಷಿ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರು ರಾಜಮನೆತನದ ಇತಿಹಾಸ ಹಾಗೂ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.

“ಚಾಮುಂಡೇಶ್ವರಿ ಉಪಚುನಾವಣೆಯ ಪ್ರಚಾರಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಆಗಮಿಸದೇ ಇದ್ದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ” ಎಂದು ಎಚ್‌. ವಿಶ್ವನಾಥ್ ಟೀಕಿಸಿದರು.

Continue Reading

ಮೈಸೂರು

Siddaramaiah–Vijayendra-ಸ್ಟಿಂಗ್ ಮತ್ತು ಪರಿಷತ್ ಫಲಿತಾಂಶ ನಡುವೆಯೇ ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ–ವಿಜಯೇಂದ್ರ; ಗಮನ ಸೆಳೆದ ಗೌರವ ವಿನಿಮಯ

Published

on

Ad Widget

Ad Widget

Ad Widget

Ad Widget

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಮೈಸೂರು, ಅ.28: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೈಸೂರಿನ ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ವಿಜಯೇಂದ್ರ ಅವರ ಬೆನ್ನು ತಟ್ಟಿದರು.

Ad Widget

Ad Widget <> Ad Widget

ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ವೇದಿಕೆಯಲ್ಲಿ ಪರಸ್ಪರ ಗೌರವ ವಿನಿಮಯ ಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.

Ad Widget
Continue Reading

ಮೈಸೂರು

Mysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್‌ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

Published

on

Ad Widget

Ad Widget

Ad Widget

Ad Widget

ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Ad Widget

Ad Widget

Ad Widget

Ad Widget

ಮೈಸೂರು: ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Ad Widget

Ad Widget alt="Ad Widget"/>

Ad Widget

‘ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೆ’ ಎಂದು ಸಚಿವರು ಹೇಳಿದ್ದು, ಈ ಹೇಳಿಕೆ ರಾಜಮನೆತನ ಮತ್ತು ಸರಕಾರದ ನಡುವಿನ ಚರ್ಚೆಗೆ ಹೊಸ ತಿರುವು ನೀಡಿದೆ.

Ad Widget

Ad Widget <> Ad Widget

ರವಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಮೋದಾದೇವಿ ಒಡೆಯರ್, ದಸರಾ ಸಂದರ್ಭದಲ್ಲಿ ರಾಜಮನೆತನ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಆದರೆ, ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಲು ಸಾಧ್ಯವಿಲ್ಲ ಎಂದರು.

‘ಸರಕಾರದ ದಸರಾಕ್ಕೂ ಇತಿಹಾಸವಿದೆ’
‘ಅವರು ಹೇಳಿದಂತೆ ಏಳು ದಿನ ದಸರಾ ಆಚರಿಸಲು ಸಾಧ್ಯವಿಲ್ಲ. ಸರಕಾರದ ದಸರಾ ಅಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.

Ad Widget

Ad Widget

ಅಂಬಾರಿಯನ್ನು ಸರಕಾರ ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರಕಾರ ಹಣ ಪಾವತಿಸುತ್ತದೆ ಎಂದು ತಿಳಿಸಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರಕಾರದ ಗಮನಕ್ಕೆ ತರಬಹುದಿತ್ತು ಎಂದರು.

‘ನಾವು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದೆವು. ಆದರೆ, ನಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತಂದಿರಲಿಲ್ಲ. ಸರಕಾರಕ್ಕೆ ಪತ್ರ ಬರೆಯದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದರೆ ಹೇಗೆ?’ ಎಂದು ಪ್ರಶ್ನಿಸಿದರು.

ಅಗತ್ಯವಿದ್ದರೆ ಸರಕಾರದ ವತಿಯಿಂದ ಪ್ರತಿನಿಧಿಗಳನ್ನು ರಾಜಮನೆತನದವರ ಬಳಿಗೆ ಕಳುಹಿಸಲಾಗುವುದು. ಮುಖ್ಯಮಂತ್ರಿ ಅವರು ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.

ಅಂಬಾರಿ ಆನೆ ಆಯ್ಕೆಯಲ್ಲಿ ಗೊಂದಲ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾವ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ರಾಜಮನೆತನಕ್ಕೆ ತಿಳಿಸುವ ಕಾನೂನುಬದ್ಧ ಅಗತ್ಯವಿಲ್ಲ ಎಂದು ಹೇಳಿದರು.

ಆರಂಭದಲ್ಲಿ ಮಹೇಂದ್ರ, ಬಳಿಕ ಧನಂಜಯ ಹಾಗೂ ನಂತರ ಪ್ರಶಾಂತ್ ಆನೆಯ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಅಂಬಾರಿ ಆನೆಯ ಆಯ್ಕೆ ವಿಳಂಬವಾಯಿತು ಎಂದು ಅವರು ವಿವರಿಸಿದರು.

ಜೆಟ್ಟಿ ಕಾಳಗ ರದ್ದತಿ ವಿಚಾರ ಪರಿಶೀಲನೆ
ದಸರಾ ಸಂದರ್ಭದಲ್ಲಿ ಜೆಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರಮೋದಾದೇವಿ ಒಡೆಯರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ, ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಸಚಿವರು ಹೇಳಿದರು.

ಜೆಟ್ಟಿಗಳು ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆ ತೊಂದರೆಯಾಯಿತು; ಪೊಲೀಸರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂಬುದು ಪೊಲೀಸರ ಹೇಳಿಕೆಯಾಗಿದೆ. ಈ ಕುರಿತು ಸರಕಾರ ಪರಿಶೀಲನೆ ನಡೆಸುತ್ತಿದ್ದು, ಎಲ್ಲಿ ತಪ್ಪಾಗಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!