Connect with us

ಬಿಗ್ ನ್ಯೂಸ್

Lokayukta raid-ಪುತ್ತೂರು: ಲೋಕಾಯುಕ್ತ ದಾಳಿ ಬಳಿಕ ನಾಪತ್ತೆಯಾಗಿದ್ದ ತಹಸಿಲ್ದಾ‌ರ್ ಎಸ್.ಬಿ.ಕೂಡಲಗಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ತಾಲೂಕು ಕಚೇರಿಯ ಭೂಮಿ ಶಾಖೆಯ ಕೇಸ್ ವರ್ಕರ್ ಸುನೀಲ್ ಎಂಬಾತ ಅಕ್ರಮ ಸಕ್ರಮದಲ್ಲಿ ಮಂಜೂರಾದ ಜಮೀನು ಪರಭಾರೆಗೆ ನಿರಾಕ್ಷೇಪಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಸೇರಿದ ಬಳಿಕ ತಲೆ ಮರೆಸಿಕೊಂಡಿರುವ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರು ತಮ್ಮ ಮೇಲೂ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Ad Widget

Ad Widget

Ad Widget

Ad Widget

ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರು ತನ್ನ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿಕೊಂಡ ನಂತರ ಹಲವು ದಿನಗಳಿಂದ ಕಚೇರಿಗೆ ಹಾಜರಾಗದೇ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತರ ಕಚೇರಿಯ ವ್ಯವಸ್ಥಾಪಕರಾಗಿರುವ ಗಿರುವ ಗ್ರೇಡ್-2 ತಹಶೀಲ್ದಾರ್ ನಾಗರಾಜ್‌ ರವರಿಗೆ ತಹಶೀಲ್ದಾರ್ ಪ್ರಭಾರ ನೀಡಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.ಆದೇಶಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೇ 31ರಂದು ತಹಶೀಲ್ದಾರ್ ಆಗಿದ್ದ ಪುರಂದರ ಹೆಗ್ಡೆಯವರು ವಯೋನಿವೃತ್ತಿ ಹೊಂದಿದ ಬಳಿಕ ಸಹಾಯಕ ಆಯುಕ್ತರ ಕಚೇರಿಯಲ್ಲಿ ವ್ಯವಸ್ಥಾಪಕರಾಗಿದ್ದ ಗ್ರೇಡ್ -2 ತಹಶೀಲ್ದಾರ್ ನಾಗರಾಜ್ ಅವರನ್ನು ಪ್ರಭಾರ ತಹಸಿಲ್ದಾರ್ ಆಗಿ ನಿಯುಕ್ತಿಗೊಳಿಸಲಾಗಿತ್ತು. ಆ ಬಳಿಕ ಬಾಗಲಕೋಟೆ ಇಳಕಲ್ ಗ್ರೇಡ್-1 ತಹಸೀಲ್ದಾರ್ ಆಗಿದ್ದ ವಿಜಯಪುರ ಮೂಲದ ಎಸ್.ಬಿ.ಕೂಡಲಗಿ ಅವರು ಪುತ್ತೂರಿಗೆ ವರ್ಗಾವಣೆಗೊಂಡು ಆಗಮಿಸಿ ಜೂ.26ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.

Ad Widget

Ad Widget <> Ad Widget

ಆ.28ರಂದು ಸಂಜೆ ಲೋಕಾಯುಕ್ತ ಪೊಲೀಸರು ತಾಲೂಕು ಕಚೇರಿಯ ಭೂಮಿ ಶಾಖೆಗೆ ದಾಳಿ ನಡೆಸಿ ಅಕ್ರಮ ಸಕ್ರಮದಲ್ಲಿ ಮಂಜೂರಾದ ಜಮೀನು ಪರಭಾರೆಗೆ ನಿರಾಕ್ಷೇಪಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪದ ದೂರು ದಾಖಲಿಸಿಕೊಂಡಿದ್ದರಲ್ಲದೆ ಕೇಸ್ ವರ್ಕರ್ ಸುನಿಲ್ ಎಂಬವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.



Ad Widget

ತಹಸಿಲ್ದಾರ್ ಎಸ್ .ಬಿ.ಕೂಡಲಗಿ ಅವರ ವಿರುದ್ಧವೂ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಈ ಪ್ರಕರಣದಲ್ಲಿ ತಹಸಿಲ್ದಾ‌ರ್ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುವುದು.ಆದರೆ, ಸದ್ಯ ತಹಸಿಲ್ದಾ‌ರ್ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿಸಿದ್ದರು.

Ad Widget

Ad Widget

ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡ ನಂತರದಿಂದ ತಹಸಿಲ್ದಾರ್ ಎಸ್.ಬಿ.ಕೂಡಲಗಿ ಅವರು ಕಚೇರಿಗೆ ಬಾರದೆ ನಾಪತ್ತೆಯಾಗಿದ್ದಾರೆ. ತನ್ನ ಚಿಕ್ಕಪ್ಪನಿಗೆ ಅಕ್ರಮ ಸಕ್ರಮದಲ್ಲಿ ಮಂಜೂರಾದ ಜಮೀನನ್ನು ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿರುವ ಬಗ್ಗೆ ಈಶ್ವರಮಂಗಲದ ಅಜಿತ್ ಎಂಬವರು ನೀಡಿದ್ದ ದೂರಿನ ಮೇರೆಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ವರ್ಕರ್ ಸುನೀಲ್ ಮತ್ತು ತಹಶೀಲ್ದಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಆ.28ರಂದು ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು ತಾಲೂಕು ಕಚೇರಿಯ ಭೂಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನೀಲ್ ದೂರುದಾರ ಅಜಿತ್ ಅವರಿಂದ ರೂ.12 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು. ಆ ಬಳಿಕ ನಾಪತ್ತೆಯಾಗಿರುವ ತಹಶೀಲ್ದಾರ್ ಎಸ್.ಬಿ ಕೂಡಲಗಿ ಈ ತನಕ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗದೇ ನಾಪತ್ತೆಯಾಗಿದ್ದಾರೆ. ಇದೀಗ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರು ನಿರೀಕ್ಷಣಾ ಜಾಮೀನು ಕೋರಿ ಮಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದರೊಂದಿಗೆ ಬಂಧಿತನಾಗಿ ಜೈಲಿನಲ್ಲಿರುವ ಕೇಸ್ ವರ್ಕರ್ ಸುನೀಲ್ ಅವರು ಜಾಮೀನಿನಲ್ಲಿ ಬಿಡುಗಡೆ ಕೋರಿ ನ್ಯಾಯಾಲಯಕ್ಕೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.

ತಹಶೀಲ್ದಾರ್ ಎಸ್.ಬಿ.ಕೂಡಲಗಿ ಮತ್ತು ಕೇಸ್ ವರ್ಕರ್ ಸುನೀಲ್ ಪರ ಮಂಗಳೂರಿನ ವಕೀಲ ಅರುಣ್ ಬಂಗೇರ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಸೆ.15ರಂದು ಅರ್ಜಿಯ ವಿಚಾರಣೆ ನಡೆಯಲಿದೆ. ಲೋಕಾಯುಕ್ತ ಪರ ಹಿರಿಯ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ ವಾದಿಸುತ್ತಿದ್ದಾರೆ.

Ad Widget
Click to comment

Leave a Reply

ಅಂತರ ರಾಜ್ಯ

ID-ಪ್ರತಿಭಟನೆ ವರದಿ ಮಾಡುವ ಪತ್ರಕರ್ತರಿಗೆ ಐಡಿ ಕಡ್ಡಾಯ; ಮಹಿಳಾ ಪತ್ರಕರ್ತರ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೇ ದಿಲ್ಲಿ ಪೊಲೀಸರ ಹೊಸ ಮಾರ್ಗಸೂಚಿ

Published

on



Ad Widget

Ad Widget

Ad Widget

Ad Widget

ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ.

Ad Widget

Ad Widget <> Ad Widget

‘ಸುದ್ದಿ ಮುಖ್ಯ, ಅದನ್ನು ಹೇಗೆ ಪಡೆಯುತ್ತೀರಿ ಎಂಬುದೂ ಮುಖ್ಯ’ ಎಂಬ ಸಂದೇಶದೊಂದಿಗೆ ದಿಲ್ಲಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪತ್ರಕರ್ತರು ಕರ್ತವ್ಯ ನಿರ್ವಹಿಸುವ ವೇಳೆ ಪಾಲಿಸಬೇಕಾದ ನಾಲ್ಕು ಪ್ರಮುಖ ನಿರ್ದೇಶನಗಳನ್ನು ಹಂಚಿಕೊಂಡಿದ್ದಾರೆ.



Ad Widget

ಪ್ರತಿಭಟನೆಗಳನ್ನು ವರದಿ ಮಾಡಲು ನಿಯೋಜಿಸಲ್ಪಟ್ಟಿರುವ ಎಲ್ಲ ಪತ್ರಕರ್ತರು ತಮ್ಮ ಸಂಸ್ಥೆಗಳು ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ ಮಾನ್ಯ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕೊಂಡೊಯ್ಯಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

Ad Widget

Ad Widget

ಸ್ಥಳದಲ್ಲಿರುವ ಕಾನೂನು ಜಾರಿ ಸಿಬ್ಬಂದಿಗೆ ಪತ್ರಕರ್ತರ ಗುರುತು ಸುಲಭವಾಗಿ ತಿಳಿಯುವಂತೆ ಗುರುತಿನ ಚೀಟಿಗಳನ್ನು ಸದಾ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ತಿಳಿಸಿದ್ದಾರೆ.

ಅದೇ ರೀತಿ, ಪತ್ರಕರ್ತರ ಉಪಸ್ಥಿತಿ ಅಥವಾ ಚಟುವಟಿಕೆಗಳು ಪೊಲೀಸ್ ಕಾರ್ಯಾಚರಣೆಗಳಿಗೆ ಹಾಗೂ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಉದ್ವಿಗ್ನ ಪರಿಸ್ಥಿತಿಗಳಲ್ಲಿ ಘಟನೆಗಳನ್ನು ವರದಿ ಮಾಡುವಾಗ ಹಾಗೂ ದೃಶ್ಯಗಳನ್ನು ದಾಖಲಿಸುವಾಗ ಪತ್ರಕರ್ತರು ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಪ್ರತಿಭಟನಾಕಾರರಿಂದ ತಮ್ಮನ್ನು ಸ್ಪಷ್ಟವಾಗಿ ಪ್ರತ್ಯೇಕಿಸುವ ರೀತಿಯಲ್ಲಿ ಅಂತರ ಕಾಯ್ದುಕೊಂಡು ವರದಿ ಮಾಡಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

#EthicsofJournalism ಹ್ಯಾಶ್‌ಟ್ಯಾಗ್‌ನೊಂದಿಗೆ ದಿಲ್ಲಿ ಪೊಲೀಸರು ಈ ನಾಲ್ಕು ನಿರ್ದೇಶನಗಳನ್ನು ಪ್ರಕಟಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ವಿರುದ್ಧ ಮೂವರು ಮಹಿಳಾ ಪತ್ರಕರ್ತರಿಂದ ಲೈಂಗಿಕ ಕಿರುಕುಳ ಆರೋಪ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಶನಿವಾರ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ದಿಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಈ ಸಂಬಂಧ ದಿಲ್ಲಿ ಪೊಲೀಸರು ದೂರುಗಳನ್ನು ಸ್ವೀಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಿದ್ದಾರೆ.

ಅಕ್ಟೋಬರ್ 3ರಂದು ಹೊಸದಿಲ್ಲಿ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ‘ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ’ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಎಂದು ದಿಲ್ಲಿ ಪೊಲೀಸರು ರವಿವಾರ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದರು.

ಮೂವರು ಮಹಿಳಾ ಪತ್ರಕರ್ತರಿಂದ ಬಂದ ದೂರುಗಳನ್ನು ಹೊಸದಿಲ್ಲಿ ಜಿಲ್ಲೆ ಸ್ವೀಕರಿಸಿದ್ದು, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಆರೋಪಗಳ ಬಳಿಕ ಹಲವು ಸ್ವತಂತ್ರ ಪತ್ರಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅವರು ಒತ್ತಾಯಿಸಿದರು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ

Published

on



Ad Widget

Ad Widget

Ad Widget

Ad Widget

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.6: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣಪ್ರಸನ್ನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಸಮಸ್ತ ಹಿಂದೂ ಸಮಾಜಕ್ಕೆ ಸೇರಿದ್ದಾಗಿದ್ದು, ದೇವಸ್ಥಾನದ ಪ್ರಮುಖ ವಿಚಾರಗಳಲ್ಲಿ ಭಕ್ತರ ವಿಶ್ವಾಸ ಪಡೆದುಕೊಳ್ಳುವುದು ಅಗತ್ಯ ಎಂದರು.

Ad Widget

Ad Widget <> Ad Widget

ಭಕ್ತರ ಸಭೆ ನಡೆಸದೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಸಮಿತಿ ರಚಿಸದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.



Ad Widget

ದೇವಸ್ಥಾನದ ಐತಿಹಾಸಿಕ ಪವಿತ್ರ ಪುಷ್ಕರಿಣಿಯ ಅಭಿವೃದ್ಧಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ಅಪೂರ್ಣವಾಗಿರುವ ನಡುವೆಯೇ ಜಾತ್ರಾ ಸಂದರ್ಭದಲ್ಲಿ ದೇವರಿಗೆ ಕೆರೆ ಉತ್ಸವ ನಡೆಸಿರುವುದು ಆಗಮ ಶಾಸ್ತ್ರಕ್ಕೆ ವಿರುದ್ಧವಾಗಿದೆ ಎಂದು ಕೃಷ್ಣಪ್ರಸನ್ನ ಆಕ್ಷೇಪಿಸಿದರು. ಪುಷ್ಕರಿಣಿಯ ಕಾಮಗಾರಿಯನ್ನು ವ್ಯವಸ್ಥಾಪನಾ ಸಮಿತಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

Ad Widget

Ad Widget

ದೇವಸ್ಥಾನದ ಆಡಳಿತದ ಕಾರ್ಯವೈಖರಿಯಿಂದ ಭಕ್ತರ ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳಿಗೆ ಧಕ್ಕೆ ಉಂಟಾಗುವ ಸಂದರ್ಭಗಳಲ್ಲಿ ವಿಶ್ವಹಿಂದು ಪರಿಷತ್ ಧ್ವನಿ ಎತ್ತಲಿದೆ. ಅಗತ್ಯ ಬಿದ್ದರೆ ಹಿಂದೂ ಸಮಾಜವನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲೂ ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಉಪಾಧ್ಯಕ್ಷ ಸತೀಶ್ ಬಿ.ಎಸ್., ನಗರ ಸಂಚಾಲಕ ಚೇತನ್ ಹಾಗೂ ಸೇವಾ ಪ್ರಮುಖ್ ಹರೀಶ್ ದೋಳ್ಪಾಡಿ ಉಪಸ್ಥಿತರಿದ್ದರು.

Ad Widget
Continue Reading

ಬಿಗ್ ನ್ಯೂಸ್

Athletes-ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ; ಸರ್ಕಾರದಿಂದ ಅಧಿಸೂಚನೆ

Published

on



Ad Widget

Ad Widget

Ad Widget

Ad Widget

ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ರಾಜ್ಯ ಸಿವಿಲ್‌ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ನೀಡುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮ’ಗಳಿಗೆ ಸಚಿವ ಸಂಪುಟ ಈಗಾಗಲೇ ಅನುಮೋದನೆ ನೀಡಿತ್ತು. 2022ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದ್ದರು.

Ad Widget

Ad Widget <> Ad Widget

ಎಲ್ಲ ವರ್ಗಗಳಿಗೂ ಅನ್ವಯ
ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಲ್ಲೂ ಶೇ.2ರಷ್ಟು ಮೀಸಲಾತಿ ಅನ್ವಯವಾಗಲಿದೆ.



Ad Widget

ಮೀಸಲಾತಿ ಪಡೆಯಲು ಅರ್ಹರಾಗುವ ಕ್ರೀಡಾಪಟುಗಳು ನಿರ್ದಿಷ್ಟ ಕ್ರೀಡೆ ಅಥವಾ ಸ್ಪರ್ಧೆಯಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ವೈಯಕ್ತಿಕವಾಗಿ ಅಥವಾ ತಂಡದ ಸದಸ್ಯರಾಗಿ ಭಾಗವಹಿಸಿರಬೇಕು. ಇತರ ರಾಜ್ಯಗಳು ಅಥವಾ ಭಾರತೀಯ ರೈಲ್ವೆಯಂತಹ ಸಂಸ್ಥೆಗಳನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು ಕನಿಷ್ಠ ಒಂದು ರಾಷ್ಟ್ರೀಯ ಚಾಂಪಿಯನ್‌ಷಿಪ್‌ ಅಥವಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪರ್ಧಿಸಿರುವುದು ಅಗತ್ಯವಾಗಿರುತ್ತದೆ.

Ad Widget

Ad Widget

ಅರ್ಹ ಕ್ರೀಡಾಪಟುಗಳಿಗೆ ಅವರ ಕ್ರೀಡಾ ಸಾಧನೆಗೆ ಅನುಗುಣವಾಗಿ ಕೃಪಾಂಕಗಳನ್ನು ನೀಡಲಾಗುತ್ತದೆ. ಒಲಿಂಪಿಕ್ಸ್‌ ಅಥವಾ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದವರಿಗೆ 50, ಬೆಳ್ಳಿ ಪದಕ ಪಡೆದವರಿಗೆ 49 ಹಾಗೂ ಕಂಚಿನ ಪದಕ ವಿಜೇತರಿಗೆ 48 ಕೃಪಾಂಕಗಳನ್ನು ನಿಗದಿಪಡಿಸಲಾಗಿದೆ. ಇದೇ ರೀತಿ ಅಧಿಸೂಚಿತ 34 ಕ್ರೀಡೆಗಳಲ್ಲಿ ಸಾಧನೆಗೆ ಅನುಗುಣವಾಗಿ ಕೃಪಾಂಕ ನೀಡಲಾಗುತ್ತದೆ.

‘ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಬೆಂಬಲ’
ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಜಿ. ಪರಮೇಶ್ವರ, “ಕ್ರೀಡಾಪಟುಗಳು ಪದಕ ಗೆಲ್ಲುವ ಕ್ಷಣದಲ್ಲಿ ಮಾತ್ರವಲ್ಲ, ಅವರ ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಅವರ ಜೊತೆಗೆ ನಿಲ್ಲಲಿದೆ. ಪ್ರತಿಭೆಗೆ ಅವಕಾಶ, ಸಾಧನೆಗೆ ಗೌರವ ಮತ್ತು ಭವಿಷ್ಯಕ್ಕೆ ಭದ್ರತೆ ನೀಡುವುದು ನಮ್ಮ ಕರ್ತವ್ಯ” ಎಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಬಹುಮಾನದ ಮೊತ್ತವನ್ನು ಇತರ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಮೊತ್ತಕ್ಕೆ ಹೋಲಿಕೆ ಮಾಡಿ ಪರಿಷ್ಕರಿಸಲಾಗುವುದು ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading