Connect with us

ಕಾರ್ಯಕ್ರಮಗಳು

Bhajana Kammata-ಧರ್ಮಸ್ಥಳದಲ್ಲಿ 27 ನೇ ವರ್ಷದ ಭಜನಾ ಕಮ್ಮಟ: ಉದ್ಘಾಟನಾ ಸಮಾರಂಭ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಭಾನುವಾರದಂದು 27 ನೇ ವರ್ಷದ ಭಜನಾ ಕಮ್ಮಟವನ್ನು ಉದ್ಘಾಟಿಸಿ ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿದರು.

Ad Widget

Ad Widget

Ad Widget

Ad Widget

ಉಜಿರೆ: ಪಂಚೇಂದ್ರಿಯಗಳ  ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಭಾನುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ 27 ನೇ ವರ್ಷದ ಭಜನಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಭಜನೆಯಿಂದ ಸುಲಭದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು, ಭಜನೆಯಿಂದ ಜನಜಾಗೃತಿ ಉಂಟಾಗಿ ಎಲ್ಲರೂ ಸಮಾನರಾಗಿ, ಗುರು-ಹಿರಿಯರಿಂದ ಮಾರ್ಗದರ್ಶನ, ಪ್ರೇರಣೆ ಪಡೆದು ದೃಢಭಕ್ತಿ ಮತ್ತು ಪರಿಶುದ್ಧ ಮನಸಿನಿಂದ ಭಜನೆ ಮಾಡಿದಾಗ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ. ದಾಸರ ಪದಗಳು, ಭಾಗ್ಯದ ಲಕ್ಷ್ಮೀ ಬಾರಮ್ಮ ಮೊದಲಾದ ಭಜನೆಗಳು ನಮಗೆ ಸಾರ್ಥಕ ಜೀವನದ ಪಾಠವನ್ನು ಕಲಿಸುತ್ತವೆ ಎಂದು ಡಾ. ಮೋಹನ ಆಳ್ವ ಹೇಳಿದರು.



Ad Widget

ಮಾಣಿಲದ ಮೋಹನದಾಸ ಸ್ವಾಮೀಜಿ ಶುಭಶಂಸನೆ ಮಾಡಿ, ಭಜನಾ ತರಬೇತಿ ಪಡೆದವರು ತಮ್ಮ ಮಕ್ಕಳಿಗೂ ಭಜನೆಯ ಮೂಲಕ ಉತ್ತಮ ಸಂಸ್ಕಾರ ನೀಡಬೇಕು. ಭಜನೆ ಮಾಡುವಾಗ ನಿತ್ಯವೂ ಶಿವಪಂಚಾಕ್ಷರಿ ಪಠಣ ಮಾಡಬೇಕು ಎಂದು ಸಲಹೆ ನೀಡಿದರು.

Ad Widget

Ad Widget

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಜನಾ ತರಬೇತಿ ಪಡೆದವರು ಶಿಸ್ತು, ಸಮಯಪಾಲನೆ, ಸ್ವಚ್ಛತೆಯೊಂದಿಗೆ ನಾಯಕತ್ವಗುಣವನ್ನೂ ಬೆಳೆಸಿಕೊಂಡು ಪ್ರಗತಿಯ ರೂವಾರಿಗಳಾಗಬೇಕು. ಸಂಸ್ಕೃತಿ ಪ್ರಸಾರದ ರಾಯಭಾರಿಗಳಾಗಿ ಎಲ್ಲರನ್ನೂ ನಮ್ಮವರೇ ಎಂದು ಭಾವಿಸಿ ವಿಶ್ವಮಾನವರಾಗಿ ಸಮಾಜಸೇವೆ ಮಾಡಬೇಕು. ನೃತ್ಯ ಭಜನೆಗೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಭಜನಾ ಕಮ್ಮಟದ ಕಾಯದರ್ಶಿ ಎ.ವಿ. ಶೆಟ್ಟಿ ವರದಿ ಸಾದರ ಪಡಿಸಿದರು.

ಭಜನಾಕಮ್ಮಟದ ಸಂಚಾಲಕ ಸುಬ್ರಹ್ಮಣ್ಯಪ್ರಸಾದ್ ಪ್ರಾಸ್ತಾವಿಕವಾಗಿ ಮಾತುಗಳೊಂದಿಗೆ ಸ್ವಾಗತಿಸಸಿದರು. ನಿವೃತ್ತ ಮುಖ್ಯ ಶಿಕ್ಷಕ ಪದ್ಮರಾಜ್ ಧನ್ಯವಾದವಿತ್ತರು. ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪದ್ಮಶ್ರೀ ಕಾರ್ಯಕ್ರಮ ನಿರ್ವಹಿಸಿದರು. 111 ಪುರುಷರು ಹಾಗೂ 71 ಮಹಿಳೆಯರು ಸೇರಿದಂತೆ ಒಟ್ಟು 182 ಶಿಬಿರಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸುತ್ತಿದ್ದಾರೆ.

Ad Widget
Click to comment

Leave a Reply

ಸ್ಥಳೀಯ

Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ

Published

on



Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.



Ad Widget
Ad Widget
Continue Reading

ಕಾರ್ಯಕ್ರಮಗಳು

Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ

Published

on



Ad Widget

Ad Widget

Ad Widget

Ad Widget

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್‌ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್‌ ಮಿಷನ್‌ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

Ad Widget

Ad Widget <> Ad Widget

ವಿಟ್ಲದ ಎಂಆರ್‌ಎಫ್‌ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.



Ad Widget

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

Ad Widget

Ad Widget

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.

Ad Widget
Continue Reading

ಕಾರ್ಯಕ್ರಮಗಳು

Bantare Serige-2026-ಅ.3ರಂದು ‘ಬಂಟೆರೆ ಸೇರಿಗೆ-2026’: 15 ಸಾಧಕರಿಗೆ ಪ್ರಶಸ್ತಿ; ಬಂಟರ ಸಂಘಕ್ಕೆ 5.50 ಎಕರೆ ಜಾಗದ ಹಕ್ಕುಪತ್ರ ಹಸ್ತಾಂತರ; 3,000 ಮಂದಿಯ ಸಾಮರ್ಥ್ಯದ ಮದುವೆ ಹಾಲ್ ನಿರ್ಮಾಣಕ್ಕೆ ಯೋಜನೆ

Published

on



Ad Widget

Ad Widget

Ad Widget

Ad Widget

ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳಿಗ್ಗೆ 9ಕ್ಕೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎರಡು ರಥಗಳಲ್ಲಿ ಸಾಧಕರು, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ರಾಜರಸ್ತೆ ಮೂಲಕ ಬಂಟರ ಭವನಕ್ಕೆ ಕರೆತರಲಾಗುವುದು. ಅರಿಯಡ್ಕ ಚಿಕ್ಕಪ್ಪ ನ್ಯಾಕ್ ಮಹಾದ್ವಾರ ಉದ್ಘಾಟಿಸಲಿದ್ದು, ದಂಬೆಕ್ಕಾನ ಸದಾಶಿವ ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ.

Ad Widget

Ad Widget <> Ad Widget

ಬೆಳಿಗ್ಗೆ 11ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜಿತ್ ಕುಮಾರ್ ರೈ ಮಾಲಾಡಿ ಶುಭಾಶಂಸನೆ ಮಾಡಲಿದ್ದು, ಶಶಿಧರ್ ಶೆಟ್ಟಿ ಬರೋಡಾ ಪ್ರಶಸ್ತಿ ಪ್ರದಾನ, ಆರ್.ಕೆ. ಶೆಟ್ಟಿ ಮುಂಬೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಜಗನ್ನಾಥ ರೈ ಬೀಡು ಮುಖ್ಯ ಅತಿಥಿಯಾಗಿರುವರು.



Ad Widget

ಪ್ರಶಸ್ತಿ ಪುರಸ್ಕೃತರು: ಸಹಕಾರರತ್ನ *ಸವಣೂರು ಸೀತಾರಾಮ ರೈ, **ಚನಿಲ ತಿಮ್ಮಪ್ಪ ಶೆಟ್ಟಿ, **ಮಿತ್ರಂಪಾಡಿ ಪುರಂದರ ರೈ, **ಡಾ. ಸಂದೀಪ್ ರೈ, ಸಹಕಾರರತ್ನ **ಅಗರಿ ನವೀನ್ ಭಂಡಾರಿ, **ಸುಬೇದಾರ್ ಮೇಜರ್ ರಮೇಶ್ ರೈ ಬೋಳೋಡಿ, **ಚಂದ್ರಹಾಸ್ ರೈ ಬನ್ನೂರು ಬಾಳಿಕೆ, **ಜಯಲಕ್ಷ್ಮಿ ಶೆಟ್ಟಿ, **ಸತೀಶ್ ರೈ ಕುತ್ಯಾಡಿ, **ಪ್ರವೀಣ್ ಭಂಡಾರಿ ಪುರ, **ಡಾ. ಸತ್ಯವತಿ ಆಳ್ವ, **ಸರೋಜ ಉಮೇಶ್ ರೈ ಮನವಳಿಕೆ, ಪಿಯುಸಿ ವಿಭಾಗದ **ಸಸ್ತಿ ಶೆಟ್ಟಿ, *ಸಮೃದ್ಧಿ ಶೆಟ್ಟಿ ಹಾಗೂ ಶರಣ್ಯ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು.

Ad Widget

Ad Widget

ಅಶೋಕ್ ರೈಗೆ ವಿಶೇಷ ಸನ್ಮಾನ

ಪುತ್ತೂರಿನ ಮರೀಲ್‌ನಲ್ಲಿ ಬಂಟರ ಸಂಘಕ್ಕೆ ಸರ್ಕಾರದಿಂದ 5.50 ಎಕರೆ ಜಾಗ ಮಂಜೂರು ಮಾಡಿಸಲು ಸಹಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹಕ್ಕುಪತ್ರವನ್ನು ಸಂಘಕ್ಕೆ ಹಸ್ತಾಂತರಿಸಲಿದ್ದು, ಜಾಗಕ್ಕೆ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಶಾಸಕರೇ ಭರಿಸಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.

ಮಂಜೂರಾದ ಜಾಗದಲ್ಲಿ ಮೊದಲ ಹಂತವಾಗಿ ಅಡ್ಯಾರ್ ಗಾರ್ಡನ್ ಮಾದರಿಯ ಮದುವೆ ಹಾಲ್ ಮತ್ತು ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 3,000 ಮಂದಿಗೆ ಅವಕಾಶ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ಹಂತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪುತ್ತೂರು ಮೂಲದ ಸೌಮ್ಯ ಪ್ರಿಯ ಹೆಗ್ಡೆ ಅರಿಯಡ್ಕ ಹಾಗೂ ಉಮೇಶ್ ಪೂಂಜ ದೇರ್ಲ ಅವರನ್ನು ಸನ್ಮಾನಿಸಲಾಗುವುದು. ಪ್ರಧಾನ ಕಾರ್ಯದರ್ಶಿ ಅಮರನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಾಂಸಾಹಾರಿ ಭೋಜನದ ವ್ಯವಸ್ಥೆ ಇದೆ.

ಸುದ್ದಿಗೋಷ್ಠಿಯಲ್ಲಿ ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ, ನಿತ್ಯಾನಂದ ಶೆಟ್ಟಿ ಮನವಳಿಕೆ, ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ಭಾಗ್ಗೇಶ್ ರೈ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading