Connect with us

ಬಿಗ್ ನ್ಯೂಸ್

SIT-BIG BREAKING-ಕೊನೆ ಕ್ಷಣದಲ್ಲಿ ರಣತಂತ್ರ ಬದಲಾಯಿಸಿತೇ SIT?; ಅಸ್ಥಿಪಂಜರ ಶೋಧ ಮುಂದೂಡಿಕೆ: ಎಸ್‌ಐಟಿ ಸಭೆ, ಹೊಸ ತಂತ್ರಕ್ಕೆ ಸಿದ್ಧತೆ

Published

on



Ad Widget

Ad Widget

Ad Widget

Ad Widget

ಬೆಳ್ತಂಗಡಿ ತಾಲೂಕಿನ ಬಂಗ್ಲೆಗುಡ್ಡೆ ಕಾಡಿನಲ್ಲಿ ನಡೆಯಬೇಕಿದ್ದ ಅಸ್ಥಿಪಂಜರ ಶೋಧ ಕಾರ್ಯವನ್ನು ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಸೆ 15: ಬೆಳ್ತಂಗಡಿ ತಾಲೂಕಿನ ಬಂಗ್ಲೆಗುಡ್ಡೆ ಕಾಡಿನಲ್ಲಿ ನಡೆಯಬೇಕಿದ್ದ ಅಸ್ಥಿಪಂಜರ ಶೋಧ ಕಾರ್ಯವನ್ನು ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ನಿನ್ನೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ತಜ್ಞ ವೈದ್ಯರನ್ನು ಸಂಪರ್ಕಿಸಿದ್ದ ಎಸ್‌ಐಟಿ ತಂಡ, ಶೋಧ ಕಾರ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಆದರೆ, ಅನಿರೀಕ್ಷಿತವಾಗಿ ಶೋಧ ಕಾರ್ಯವನ್ನು ಮುಂದೂಡಲಾಗಿದೆ. ಇದರಿಂದ ಇಂದು ಬೆಳ್ತಂಗಡಿಗೆ ಭೇಟಿ ನೀಡಬೇಕಿದ್ದ ಫೋರೆನ್ಸಿಕ್ ತಂಡದ ಕಾರ್ಯಕ್ರಮ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ನಾಳೆ ಶೋಧ ಕಾರ್ಯ ನಡೆಯುವ ಸಾಧ್ಯತೆ:

Ad Widget

Ad Widget <> Ad Widget

ಮೂಲಗಳ ಪ್ರಕಾರ, ಬಂಗ್ಲೆಗುಡ್ಡೆ ಕಾಡಿನಲ್ಲಿ ಅಸ್ಥಿಪಂಜರ ಶೋಧ ಕಾರ್ಯ ನಾಳೆ ನಡೆಯುವ ಸಾಧ್ಯತೆಯಿದೆ. ಸಹಾಯಕ ಆಯುಕ್ತರು (ಎಸಿ) ಅಥವಾ ತಹಶೀಲ್ದಾರ್ ಸಮ್ಮುಖದಲ್ಲಿ ಈ ಕಾರ್ಯ ನಡೆಯಲಿದೆ. ನಾಳೆ ಸೌಜನ್ಯ ಅವರ ಮಾವ ವಿಠಲ ಗೌಡ ಅವರನ್ನು ಕರೆದುಕೊಂಡು ಹೋಗಿ ಮತ್ತೆ ಶೋಧ ನಡೆಸುವ ಸಾಧ್ಯತೆಯಿದೆ. ವಿಠಲ ಗೌಡ ಅವರು ಕಾಡಿನಲ್ಲಿ ಎಂಟು ಅಸ್ಥಿಪಂಜರಗಳು ಇರುವುದಾಗಿ ಈ ಹಿಂದೆ ಹೇಳಿಕೆ ನೀಡಿದ್ದರು. ಅಲ್ಲದೆ, ಮಹಜರು ವೇಳೆ ಅಧಿಕಾರಿಗಳಿಗೆ ಅಸ್ಥಿಪಂಜರಗಳನ್ನು ತೋರಿಸಿದ್ದಾಗಿ ತಿಳಿಸಿದ್ದರು.



Ad Widget

ಭೂಮಿಯ ಮೇಲ್ಭಾಗದ ಅಸ್ಥಿಪಂಜರಗಳ ಸಂಗ್ರಹ:
ಈ ಬಾರಿಯ ಶೋಧ ಕಾರ್ಯದಲ್ಲಿ ಉತ್ಖನನದ ಬದಲು, ಭೂಮಿಯ ಮೇಲ್ಭಾಗದಲ್ಲಿ ಸಿಗುವ ಅಸ್ಥಿಪಂಜರಗಳನ್ನು ಸಂಗ್ರಹಿಸುವ ಸಾಧ್ಯತೆಯಿದೆ. ಮಹಜರು ವೇಳೆ ವಿಠಲ ಗೌಡ ಅವರು ಕಾಡಿನಲ್ಲಿ ಮತ್ತಷ್ಟು ಕಡೆ ಅಸ್ಥಿಪಂಜರಗಳ ಅವಶೇಷಗಳು ಇರುವುದಾಗಿ ಹೇಳಿಕೆ ನೀಡಿದ್ದರು. ಅಲ್ಲದೆ, ಚಿನ್ನಯ್ಯ ಸುಳ್ಳು ಹೇಳುತ್ತಿದ್ದು, ಆತ ಹೂತಿಟ್ಟಿದ್ದನ್ನು ತಾನು ನೋಡಿದ್ದಾಗಿ ವಿಠಲ ಗೌಡರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಫೋರೆನ್ಸಿಕ್ ತಂಡವು ಮಹಜರು ನಡೆಸಿ ಅಸ್ಥಿಪಂಜರಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

Ad Widget

Ad Widget

ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಸಭೆ:
ನಿನ್ನೆ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಸಿದ್ದ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರು ಮಂಗಳೂರಿನಲ್ಲೇ ತಂಗಿದ್ದಾರೆ. ಇಂದು ಮತ್ತೆ ಎಸ್‌ಐಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಡಿಜಿಪಿ, ಇನ್ನಷ್ಟು ಮಾಹಿತಿ ಕಲೆಹಾಕಿ ಶೋಧ ಕಾರ್ಯಕ್ಕೆ ಪಕ್ಕಾ ನೀಲನಕ್ಷೆ ಸಿದ್ಧಪಡಿಸಲಿದ್ದಾರೆ. ಈ ಸಭೆಯ ನಂತರ ಶೋಧ ಕಾರ್ಯದ ದಿನಾಂಕ ಮತ್ತು ವಿಧಾನದ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

Ad Widget
Click to comment

Leave a Reply

ಅಂತರ ರಾಜ್ಯ

ID-ಪ್ರತಿಭಟನೆ ವರದಿ ಮಾಡುವ ಪತ್ರಕರ್ತರಿಗೆ ಐಡಿ ಕಡ್ಡಾಯ; ಮಹಿಳಾ ಪತ್ರಕರ್ತರ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೇ ದಿಲ್ಲಿ ಪೊಲೀಸರ ಹೊಸ ಮಾರ್ಗಸೂಚಿ

Published

on



Ad Widget

Ad Widget

Ad Widget

Ad Widget

ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ.

Ad Widget

Ad Widget <> Ad Widget

‘ಸುದ್ದಿ ಮುಖ್ಯ, ಅದನ್ನು ಹೇಗೆ ಪಡೆಯುತ್ತೀರಿ ಎಂಬುದೂ ಮುಖ್ಯ’ ಎಂಬ ಸಂದೇಶದೊಂದಿಗೆ ದಿಲ್ಲಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪತ್ರಕರ್ತರು ಕರ್ತವ್ಯ ನಿರ್ವಹಿಸುವ ವೇಳೆ ಪಾಲಿಸಬೇಕಾದ ನಾಲ್ಕು ಪ್ರಮುಖ ನಿರ್ದೇಶನಗಳನ್ನು ಹಂಚಿಕೊಂಡಿದ್ದಾರೆ.



Ad Widget

ಪ್ರತಿಭಟನೆಗಳನ್ನು ವರದಿ ಮಾಡಲು ನಿಯೋಜಿಸಲ್ಪಟ್ಟಿರುವ ಎಲ್ಲ ಪತ್ರಕರ್ತರು ತಮ್ಮ ಸಂಸ್ಥೆಗಳು ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ ಮಾನ್ಯ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕೊಂಡೊಯ್ಯಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

Ad Widget

Ad Widget

ಸ್ಥಳದಲ್ಲಿರುವ ಕಾನೂನು ಜಾರಿ ಸಿಬ್ಬಂದಿಗೆ ಪತ್ರಕರ್ತರ ಗುರುತು ಸುಲಭವಾಗಿ ತಿಳಿಯುವಂತೆ ಗುರುತಿನ ಚೀಟಿಗಳನ್ನು ಸದಾ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ತಿಳಿಸಿದ್ದಾರೆ.

ಅದೇ ರೀತಿ, ಪತ್ರಕರ್ತರ ಉಪಸ್ಥಿತಿ ಅಥವಾ ಚಟುವಟಿಕೆಗಳು ಪೊಲೀಸ್ ಕಾರ್ಯಾಚರಣೆಗಳಿಗೆ ಹಾಗೂ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಉದ್ವಿಗ್ನ ಪರಿಸ್ಥಿತಿಗಳಲ್ಲಿ ಘಟನೆಗಳನ್ನು ವರದಿ ಮಾಡುವಾಗ ಹಾಗೂ ದೃಶ್ಯಗಳನ್ನು ದಾಖಲಿಸುವಾಗ ಪತ್ರಕರ್ತರು ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಪ್ರತಿಭಟನಾಕಾರರಿಂದ ತಮ್ಮನ್ನು ಸ್ಪಷ್ಟವಾಗಿ ಪ್ರತ್ಯೇಕಿಸುವ ರೀತಿಯಲ್ಲಿ ಅಂತರ ಕಾಯ್ದುಕೊಂಡು ವರದಿ ಮಾಡಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

#EthicsofJournalism ಹ್ಯಾಶ್‌ಟ್ಯಾಗ್‌ನೊಂದಿಗೆ ದಿಲ್ಲಿ ಪೊಲೀಸರು ಈ ನಾಲ್ಕು ನಿರ್ದೇಶನಗಳನ್ನು ಪ್ರಕಟಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ವಿರುದ್ಧ ಮೂವರು ಮಹಿಳಾ ಪತ್ರಕರ್ತರಿಂದ ಲೈಂಗಿಕ ಕಿರುಕುಳ ಆರೋಪ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಶನಿವಾರ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ದಿಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಈ ಸಂಬಂಧ ದಿಲ್ಲಿ ಪೊಲೀಸರು ದೂರುಗಳನ್ನು ಸ್ವೀಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಿದ್ದಾರೆ.

ಅಕ್ಟೋಬರ್ 3ರಂದು ಹೊಸದಿಲ್ಲಿ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ‘ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ’ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಎಂದು ದಿಲ್ಲಿ ಪೊಲೀಸರು ರವಿವಾರ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದರು.

ಮೂವರು ಮಹಿಳಾ ಪತ್ರಕರ್ತರಿಂದ ಬಂದ ದೂರುಗಳನ್ನು ಹೊಸದಿಲ್ಲಿ ಜಿಲ್ಲೆ ಸ್ವೀಕರಿಸಿದ್ದು, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಆರೋಪಗಳ ಬಳಿಕ ಹಲವು ಸ್ವತಂತ್ರ ಪತ್ರಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅವರು ಒತ್ತಾಯಿಸಿದರು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ

Published

on



Ad Widget

Ad Widget

Ad Widget

Ad Widget

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.6: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣಪ್ರಸನ್ನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಸಮಸ್ತ ಹಿಂದೂ ಸಮಾಜಕ್ಕೆ ಸೇರಿದ್ದಾಗಿದ್ದು, ದೇವಸ್ಥಾನದ ಪ್ರಮುಖ ವಿಚಾರಗಳಲ್ಲಿ ಭಕ್ತರ ವಿಶ್ವಾಸ ಪಡೆದುಕೊಳ್ಳುವುದು ಅಗತ್ಯ ಎಂದರು.

Ad Widget

Ad Widget <> Ad Widget

ಭಕ್ತರ ಸಭೆ ನಡೆಸದೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಸಮಿತಿ ರಚಿಸದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.



Ad Widget

ದೇವಸ್ಥಾನದ ಐತಿಹಾಸಿಕ ಪವಿತ್ರ ಪುಷ್ಕರಿಣಿಯ ಅಭಿವೃದ್ಧಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ಅಪೂರ್ಣವಾಗಿರುವ ನಡುವೆಯೇ ಜಾತ್ರಾ ಸಂದರ್ಭದಲ್ಲಿ ದೇವರಿಗೆ ಕೆರೆ ಉತ್ಸವ ನಡೆಸಿರುವುದು ಆಗಮ ಶಾಸ್ತ್ರಕ್ಕೆ ವಿರುದ್ಧವಾಗಿದೆ ಎಂದು ಕೃಷ್ಣಪ್ರಸನ್ನ ಆಕ್ಷೇಪಿಸಿದರು. ಪುಷ್ಕರಿಣಿಯ ಕಾಮಗಾರಿಯನ್ನು ವ್ಯವಸ್ಥಾಪನಾ ಸಮಿತಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

Ad Widget

Ad Widget

ದೇವಸ್ಥಾನದ ಆಡಳಿತದ ಕಾರ್ಯವೈಖರಿಯಿಂದ ಭಕ್ತರ ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳಿಗೆ ಧಕ್ಕೆ ಉಂಟಾಗುವ ಸಂದರ್ಭಗಳಲ್ಲಿ ವಿಶ್ವಹಿಂದು ಪರಿಷತ್ ಧ್ವನಿ ಎತ್ತಲಿದೆ. ಅಗತ್ಯ ಬಿದ್ದರೆ ಹಿಂದೂ ಸಮಾಜವನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲೂ ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಉಪಾಧ್ಯಕ್ಷ ಸತೀಶ್ ಬಿ.ಎಸ್., ನಗರ ಸಂಚಾಲಕ ಚೇತನ್ ಹಾಗೂ ಸೇವಾ ಪ್ರಮುಖ್ ಹರೀಶ್ ದೋಳ್ಪಾಡಿ ಉಪಸ್ಥಿತರಿದ್ದರು.

Ad Widget
Continue Reading

ಬಿಗ್ ನ್ಯೂಸ್

Athletes-ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ; ಸರ್ಕಾರದಿಂದ ಅಧಿಸೂಚನೆ

Published

on



Ad Widget

Ad Widget

Ad Widget

Ad Widget

ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ರಾಜ್ಯ ಸಿವಿಲ್‌ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ನೀಡುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮ’ಗಳಿಗೆ ಸಚಿವ ಸಂಪುಟ ಈಗಾಗಲೇ ಅನುಮೋದನೆ ನೀಡಿತ್ತು. 2022ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದ್ದರು.

Ad Widget

Ad Widget <> Ad Widget

ಎಲ್ಲ ವರ್ಗಗಳಿಗೂ ಅನ್ವಯ
ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಲ್ಲೂ ಶೇ.2ರಷ್ಟು ಮೀಸಲಾತಿ ಅನ್ವಯವಾಗಲಿದೆ.



Ad Widget

ಮೀಸಲಾತಿ ಪಡೆಯಲು ಅರ್ಹರಾಗುವ ಕ್ರೀಡಾಪಟುಗಳು ನಿರ್ದಿಷ್ಟ ಕ್ರೀಡೆ ಅಥವಾ ಸ್ಪರ್ಧೆಯಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ವೈಯಕ್ತಿಕವಾಗಿ ಅಥವಾ ತಂಡದ ಸದಸ್ಯರಾಗಿ ಭಾಗವಹಿಸಿರಬೇಕು. ಇತರ ರಾಜ್ಯಗಳು ಅಥವಾ ಭಾರತೀಯ ರೈಲ್ವೆಯಂತಹ ಸಂಸ್ಥೆಗಳನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು ಕನಿಷ್ಠ ಒಂದು ರಾಷ್ಟ್ರೀಯ ಚಾಂಪಿಯನ್‌ಷಿಪ್‌ ಅಥವಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪರ್ಧಿಸಿರುವುದು ಅಗತ್ಯವಾಗಿರುತ್ತದೆ.

Ad Widget

Ad Widget

ಅರ್ಹ ಕ್ರೀಡಾಪಟುಗಳಿಗೆ ಅವರ ಕ್ರೀಡಾ ಸಾಧನೆಗೆ ಅನುಗುಣವಾಗಿ ಕೃಪಾಂಕಗಳನ್ನು ನೀಡಲಾಗುತ್ತದೆ. ಒಲಿಂಪಿಕ್ಸ್‌ ಅಥವಾ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದವರಿಗೆ 50, ಬೆಳ್ಳಿ ಪದಕ ಪಡೆದವರಿಗೆ 49 ಹಾಗೂ ಕಂಚಿನ ಪದಕ ವಿಜೇತರಿಗೆ 48 ಕೃಪಾಂಕಗಳನ್ನು ನಿಗದಿಪಡಿಸಲಾಗಿದೆ. ಇದೇ ರೀತಿ ಅಧಿಸೂಚಿತ 34 ಕ್ರೀಡೆಗಳಲ್ಲಿ ಸಾಧನೆಗೆ ಅನುಗುಣವಾಗಿ ಕೃಪಾಂಕ ನೀಡಲಾಗುತ್ತದೆ.

‘ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಬೆಂಬಲ’
ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಜಿ. ಪರಮೇಶ್ವರ, “ಕ್ರೀಡಾಪಟುಗಳು ಪದಕ ಗೆಲ್ಲುವ ಕ್ಷಣದಲ್ಲಿ ಮಾತ್ರವಲ್ಲ, ಅವರ ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಅವರ ಜೊತೆಗೆ ನಿಲ್ಲಲಿದೆ. ಪ್ರತಿಭೆಗೆ ಅವಕಾಶ, ಸಾಧನೆಗೆ ಗೌರವ ಮತ್ತು ಭವಿಷ್ಯಕ್ಕೆ ಭದ್ರತೆ ನೀಡುವುದು ನಮ್ಮ ಕರ್ತವ್ಯ” ಎಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಬಹುಮಾನದ ಮೊತ್ತವನ್ನು ಇತರ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಮೊತ್ತಕ್ಕೆ ಹೋಲಿಕೆ ಮಾಡಿ ಪರಿಷ್ಕರಿಸಲಾಗುವುದು ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading