Connect with us

ಮಂಗಳೂರು

Electric train-ಮಂಗಳೂರು-ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಸೇವೆ ಆರಂಭ

Published

on

Ad Widget

Ad Widget

Ad Widget

Ad Widget

ಸೋಮವಾರ ಮಂಗಳೂರು-ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಚಲನೆ ಆರಂಭಿಸಿದ್ದು, ಹಳಿಯುದ್ದಕ್ಕೂ ಜನರು ಕಾತುರದಿಂದ ಕಾದು ನಿಂತು ಕರೆಂಟ್ ರೈಲನ್ನು ಕಂಡು ಖುಷಿಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು : ನಲವತ್ತಾರು ವರ್ಷಗಳ ಹಿಂದೆ ಈ ಮಾರ್ಗದಲ್ಲಿ ಮೊದಲ ರೈಲು ಓಡಿದಾಗ ಗ್ರಾಮಸ್ಥರು ಆನಂದಿಸಿದಂತೆ, ಇದೀಗ ವಿದ್ಯುತ್ ಚಾಲಿತ ರೈಲು ಸೇವೆ ಆರಂಭವಾಗಿರುವುದು ಸ್ಥಳೀಯರಲ್ಲಿ ಭಾರಿ ಸಂತಸ ಮೂಡಿಸಿದೆ. ಸೋಮವಾರ ಮಂಗಳೂರು-ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಚಲನೆ ಆರಂಭಿಸಿದ್ದು, ಹಳಿಯುದ್ದಕ್ಕೂ ಜನರು ಕಾತುರದಿಂದ ಕಾದು ನಿಂತು ಕರೆಂಟ್ ರೈಲನ್ನು ಕಂಡು ಖುಷಿಪಟ್ಟಿದ್ದಾರೆ.

Ad Widget

Ad Widget alt="Ad Widget"/>

Ad Widget

2025ರ ಏಪ್ರಿಲ್ 12ರಂದು ಮಂಗಳೂರು-ಪುತ್ತೂರು ನಡುವಿನ ಪ್ಯಾಸೆಂಜರ್ ರೈಲು ಸೇವೆಯನ್ನು ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ ವಿಸ್ತರಿಸಿ, ರೈಲ್ವೆ ಇಲಾಖೆ ಐತಿಹಾಸಿಕ ಕ್ರಮ ಕೈಗೊಂಡಿತ್ತು. ಈ ವಿಸ್ತರಣೆಗೆ ಪ್ರಯಾಣಿಕರಿಂದ ಉತ್ಸಾಹಭರಿತ ಸ್ಪಂದನೆ ದೊರೆತಿದ್ದು, ಪ್ರತಿದಿನ ನೂರಾರು ಜನ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟು, ಐದು ಬೋಗಿಗಳ ರೈಲಿಗೆ ಹೆಚ್ಚುವರಿ ಬೋಗಿ ಜೋಡಿಸುವಂತೆ ಒತ್ತಾಯವೂ ಎದ್ದಿದೆ.

Ad Widget

Ad Widget <> Ad Widget

ಈ ಬೆಳವಣಿಗೆಯ ನಡುವೆ, ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಸಂಚರಿಸುವ ಮೂರು ಪ್ಯಾಸೆಂಜರ್ ರೈಲುಗಳಿಗೂ ವಿದ್ಯುತ್ ಚಾಲಿತ ಎಂಜಿನ್‌ಗಳನ್ನು ಜೋಡಿಸಿ ಓಡಿಸಲು ಆರಂಭಿಸಲಾಗಿದೆ. ಇದರಿಂದ ಮಂಗಳೂರು ಜಂಕ್ಷನ್‌ನಲ್ಲಿ ಡೀಸೆಲ್ ತುಂಬಿಸಲು ರೈಲು ನಿಲ್ಲಿಸುವ ಅಗತ್ಯ ತಪ್ಪಿದೆ.

ಮೊದಲ ದಿನ ವಿಳಂಬ:
ತಾಂತ್ರಿಕ ಕಾರಣದಿಂದ ಸೋಮವಾರ ಬೆಳಗ್ಗೆ ಮಂಗಳೂರಿನಿಂದ ಹೊರಟ ಪ್ಯಾಸೆಂಜರ್ ರೈಲು ವಿಳಂಬವಾಗಿ ಸುಬ್ರಹ್ಮಣ್ಯ ತಲುಪಿ, ಅಲ್ಲಿಂದ ಹಿಂತಿರುಗಿತು. ಸುಮಾರು ಒಂದೂವರೆ ಗಂಟೆ ವಿಳಂಬದಿಂದಾಗಿ ನಿತ್ಯ ಪ್ರಯಾಣಿಕರು ತೊಂದರೆ ಅನುಭವಿಸಿದರು. ಆದರೂ, ಮಾರ್ಗಮಧ್ಯದ ಎಲ್ಲ ನಿಲ್ದಾಣಗಳಲ್ಲಿ ಪ್ರಯಾಣಿಕರು ವಿದ್ಯುತ್ ಚಾಲಿತ ರೈಲನ್ನು ಉತ್ಸಾಹದಿಂದ ಸ್ವಾಗತಿಸಿದರು. ರೈಲು ಹಾದುಹೋಗುವ ಗ್ರಾಮಗಳು, ಪಟ್ಟಣಗಳು ಮತ್ತು ಕ್ರಾಸಿಂಗ್‌ಗಳಲ್ಲಿ ಸಾರ್ವಜನಿಕರು ಕರೆಂಟ್ ರೈಲನ್ನು ಕಣ್ತುಂಬಿಕೊಳ್ಳಲು ಕಾದು ನಿಂತಿದ್ದರು. ರೈಲಿನ ಎಂಜಿನ್‌ಗೆ ವಿದ್ಯುತ್ ತಂತಿಯಿಂದ ಸಂಪರ್ಕ ಕಲ್ಪಿಸಿ, ಮುಖ್ಯ ಲೈನ್‌ನೊಂದಿಗೆ ಸಾಗುವ ದೃಶ್ಯವನ್ನು ಕಂಡು ಜನ ರೋಮಾಂಚಿತರಾದರು.

Ad Widget

Ad Widget

ರೈಲ್ವೆ ಇಲಾಖೆಯ ಈ ಧನಾತ್ಮಕ ಬೆಳವಣಿಗೆಗಳು ಈ ಭಾಗದ ಪ್ರಯಾಣಿಕರಿಗೆ ಸಂತಸ ತಂದಿರುವುದರ ಜೊತೆಗೆ, ಆಧುನಿಕ ಸೌಲಭ್ಯಗಳೊಂದಿಗೆ ಪ್ರಯಾಣವನ್ನು ಮತ್ತಷ್ಟು ಸುಗಮಗೊಳಿಸಿವೆ.

ಡೀಸೆಲ್ ಎಂಜಿನ್‌ನಲ್ಲಿ ಓಡುತ್ತಿದ್ದ ಮಂಗಳೂರು-ಸುಬ್ರಹ್ಮಣ್ಣ ಪ್ಲಾಸೆಂಜರ್ ರೈಲು ಈಗ ವಿದ್ಯುತ್ ಚಾಲಿತವಾಗಿ ಚಲಿಸಲಾರಂಭಿಸಿರುವುದು ನನಗೆ ತುಂಬಾ ಖುಷಿ ನೀಡಿದೆ. ಹಳಿಯ ಮೇಲಿನ ಪ್ರಗತಿ ಇದಾಗಿದೆ. ಇದಲ್ಲದೆ ಸಾಂಪ್ರದಾಯಿಕ ರೇಕ್ ಶೀಘ್ರದಲ್ಲೇ ಮೆಮು ಲೈನ್ ಆಗಿ ಬದಲಾಗುವುದನ್ನುನಿರೀಕ್ಷಿಸುತ್ತಿದ್ದೇವೆ. ಈ ಬಗ್ಗೆ ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. -ಕ್ಯಾ.ಬ್ರಿಜೇಶ್ ಚೌಟ, ಸಂಸದರು, ದ.ಕ.

Ad Widget

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!