Connect with us

ಉಡುಪಿ

Udupi-ಉಡುಪಿ: ವಿಟ್ಲಪಿಂಡಿಯಲ್ಲಿ ಗಮನ ಸೆಳೆದ ಕೋಹ್ಲಿ,ಗೇಲ್..!

Published

on

Ad Widget

Ad Widget

Ad Widget

Ad Widget

ಶ್ರೀ ಕೃಷ್ಣ ಮಠದಲ್ಲಿ ಸೋಮವಾರ ನಡೆದ ವಿಟ್ಲಪಿಂಡಿ ಲೀಲೋತ್ಸವ ಸಂಭ್ರಮದಲ್ಲಿ, ಉತ್ಸವದ ಅಬ್ಬರದ ನಡುವೆ, ಆರ್‌ಸಿಬಿ ತಂಡದ ಜೆರ್ಸಿಯಲ್ಲಿ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಮತ್ತು ಮಿ. ನ್ಯಾಗ್ಸ್ (ದಾನಿಶ್ ಸೇಟ್) ರೀತಿಯ ವೇಷ ಧರಿಸಿದ ಯುವಕರು ಜನರ ಗಮನಕ್ಕೆ ಕೇಂದ್ರಬಿಂದುವಾದರು.

Ad Widget

Ad Widget

Ad Widget

Ad Widget

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸೋಮವಾರ ನಡೆದ ವಿಟ್ಲಪಿಂಡಿ ಲೀಲೋತ್ಸವ ಸಂಭ್ರಮದಲ್ಲಿ, ಹುಲಿವೇಷ ಸೇರಿದಂತೆ ವಿವಿಧ ವೇಷಧಾರಿಗಳು ಭಕ್ತರ ಗಮನ ಸೆಳೆದವು. ಆದರೆ, ಎಲ್ಲವನ್ನೂ ಮೀರಿಸಿ, ಭಾರತದ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿಯ ಗೆಟಪ್‌ನ ಯುವಕನೊಬ್ಬ ಎಲ್ಲರ ಕಣ್ಣು ತಿರುಗಿಸಿದ.

Ad Widget

Ad Widget alt="Ad Widget"/>

Ad Widget

ಉತ್ಸವದ ಅಬ್ಬರದ ನಡುವೆ, ಆರ್‌ಸಿಬಿ ತಂಡದ ಜೆರ್ಸಿಯಲ್ಲಿ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಮತ್ತು ಮಿ. ನ್ಯಾಗ್ಸ್ (ದಾನಿಶ್ ಸೇಟ್) ರೀತಿಯ ವೇಷ ಧರಿಸಿದ ಯುವಕರು ಜನರ ಗಮನಕ್ಕೆ ಕೇಂದ್ರಬಿಂದುವಾದರು.

Ad Widget

Ad Widget <> Ad Widget

ವಿಶೇಷವಾಗಿ ಕೊಹ್ಲಿಯ ಗೆಟಪ್‌ನಲ್ಲಿದ್ದ ಯುವಕನನ್ನು ಕಂಡು, ಸಾವಿರಾರು ಭಕ್ತರು ಒಂದು ಕ್ಷಣ “ನಿಜವಾಗಿಯೂ ವಿರಾಟ್ ಕೊಹ್ಲಿ ಉಡುಪಿಗೆ ಬಂದಿದ್ದಾರಾ?” ಎಂದು ಆಶ್ಚರ್ಯಗೊಂಡರು.

Ad Widget
Click to comment

Leave a Reply

ಉಡುಪಿ

Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Published

on

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Ad Widget

Ad Widget <> Ad Widget

ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Ad Widget

Ad Widget

ಉಡುಪಿ ನಗರ ಪೊಲೀಸ್ ಠಾಣೆಯ ಎಸ್‌ಐ ರತ್ನಾಕರ ಹಾಗೂ ಸಿಬ್ಬಂದಿಗಳಾದ ಆನಂದ ಗಾಣಿಗ, ಎಲ್ಲಾಲಿಂಗ ಮತ್ತು ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದರು.

Ad Widget
Continue Reading

ಉಡುಪಿ

H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ

Published

on

Ad Widget

Ad Widget

Ad Widget

Ad Widget

ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget

Ad Widget alt="Ad Widget"/>

Ad Widget

ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.

ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

ಕೊಲ್ಲೂರು ಬಳಿಕ ಕಾಪು ಹೊಸ ಮಾರಿಗುಡಿ ದೇವಿ ಸನ್ನಿಧಾನದಕ್ಕೆ ಹೆಚ್ ಡಿಕೆ ಕುಟುಂಬ ಭೇಟಿ ನೀಡಲಿದೆ.

Ad Widget
Continue Reading

ಉಡುಪಿ

Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ

Published

on

Ad Widget

Ad Widget

Ad Widget

Ad Widget

ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.

Ad Widget

Ad Widget

Ad Widget

Ad Widget

ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.

Ad Widget

Ad Widget alt="Ad Widget"/>

Ad Widget

ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.

Ad Widget

Ad Widget <> Ad Widget

ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.

Ad Widget

Ad Widget

ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!