Connect with us

ಕಾರ್ಯಕ್ರಮಗಳು

Anil Kumar-27ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ: ಅನಿಲ್ ಕುಮಾರ್

Published

on



Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ 2025ನೇ ಸಾಲಿನ ಸಪ್ಟೆಂಬರ್ 14 ರಿಂದ 21ರವರೆಗೆ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ 2ನೇ ದಿನದ ಕಾರ್ಯಾಗಾರದಲ್ಲಿ ‘ ಗ್ರಾಮೀಣ ನಾಯಕತ್ವ ಭಜನಾ ಮಂಡಳಿಗಳ ಪಾತ್ರ’ ಎಂಬ ವಿಚಾರದ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಉಪನ್ಯಾಸ ನೀಡಿದರು.

Ad Widget

Ad Widget

Ad Widget

Ad Widget

ಧರ್ಮಸ್ಥಳ, ಸೆ.15,: ಭಜನಾ ಕಮ್ಮಟಗಳು ಮಾನವನ ವ್ಯಕ್ತಿತ್ವ ರೂಪಿಸುವ ಉತ್ತಮ ವೇದಿಕೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಅಭಿಪ್ರಾಯಪಟ್ಟರು.

Ad Widget

Ad Widget

Ad Widget alt="Ad Widget"/>

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ 2025ನೇ ಸಾಲಿನ ಸಪ್ಟೆಂಬರ್ 14 ರಿಂದ 21ರವರೆಗೆ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ 2ನೇ ದಿನದ ಕಾರ್ಯಾಗಾರದಲ್ಲಿ ‘ ಗ್ರಾಮೀಣ ನಾಯಕತ್ವ ಭಜನಾ ಮಂಡಳಿಗಳ ಪಾತ್ರ’ ಎಂಬ ವಿಚಾರದ ಕುರಿತು ಉಪನ್ಯಾಸ ನೀಡಿದರು.

Ad Widget

Ad Widget <> Ad Widget

ಇಂದಿನ ಪೀಳಿಗೆ ಸಾಮಾಜಿಕ ಮಾದ್ಯಮದತ್ತ  ಒಲವನ್ನು ತೋರುತ್ತಿದ್ದು ಪ್ರಪಂಚದಾದ್ಯಂತ ಋಣಾತ್ಮಕ ಚಿಂತನೆಗಳನ್ನು ಸೃಷ್ಟಿಸಿ ಅತ್ಯಮೂಲ್ಯ ಸಮಯದ ವ್ಯರ್ಥಮಾಡುತ್ತಿದೆ.ಈ ಚಿಂತನೆಗಳು ಬದಲಾಗಿ ಯುವಕರು ಧಾರ್ಮಿಕ ಮತ್ತು ಆಧ್ಯಾತ್ಮಿಕತೆಗೆ ಒಲವು ತೋರಿದಾಗ ಭಾರತ ತನ್ನನ್ನು ತಾನು ಶ್ರೇಷ್ಠ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾದ್ಯ.



Ad Widget

ಆಧ್ಯಾತ್ಮಿಕ ವಿಚಾರಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಆದರ್ಶಗಳು ರೂಪುಗೊಳ್ಳುತ್ತವೆ. ಮಾನವನ ಉತ್ತುಂಗದ ಸಾಧನೆ ಮತ್ತು ಅಧಃಪತನ ಇವೆರಡೂ ನಿರ್ಧಾರಗೊಳ್ಳುವುದು ಆತನ ಸ್ವಭಾವ ಅಥವಾ ವ್ಯಕ್ತಿತ್ವದಿಂದ ಮಾತ್ರ ಎಂದು ಹೇಳಿದರು.

Ad Widget

Ad Widget

ಜೀವನದಲ್ಲಿ ಒಳಿತನ್ನು ಉತ್ತುಂಗಕ್ಕೆ, ಕೆಡುಕನ್ನ ಮಿತಕ್ಕೆ ಕೊಂಡೊಯ್ಯುವ ಪ್ರಯತ್ನ ನಮ್ಮ ಕೈಯಲ್ಲೇ ಇದೆ.ನಮ್ಮೆಲ್ಲರ ಹಣೆಬರಹ ನಮ್ಮ ಅಂಗೈಯಲ್ಲಿದೆ.ಹಣೆಬರಹ  ಬದಲಾಯಿಸಲು ಸಾಧ್ಯವಾಗದಿದ್ದರೂ,ಅದನ್ನು ಏರಿಸುವ ಮತ್ತು ಇಳಿಸುವ ಪ್ರಯತ್ನ ನಮ್ಮೆಲ್ಲರಿಂದ ಸಾಧ್ಯವಿದೆ.ನೈತಿಕ ವಿಚಾರಗಳನ್ನು ಅನುಸರಿಸಿದರೆ ಜೀವನದಲ್ಲಿ ಯಶಸ್ಸು ಸಾಧ್ಯ.

ಉತ್ತಮ ಜೀವನವನ್ನು ನಿರ್ಧರಿಸುವ ಮೂಲಮಂತ್ರವೇ ಆಲೋಚನೆ,ಮಾನವ ಜೀವನದಲ್ಲಿ ಯಶಸ್ಸು ಅಥವಾ ಅವನತಿಗೆ ಆಲೋಚನೆಗಳೇ ಕಾರಣ.ಆಲೋಚನೆಗಳು ಹವ್ಯಾಸವಾಗಿ ನಮ್ಮ ಚಾರಿತ್ರ‍್ಯವನ್ನು ನಿರ್ಧರಿಸುತ್ತವೆ ಮತ್ತು ಚಾರಿತ್ರ‍್ಯವು ಭವಿಷ್ಯವನ್ನು ರೂಪಿಸುತ್ತದೆ.ನಮ್ಮ ಆಲೋಚನೆಗಳು ರಚನಾತ್ಮಕವಾಗಿದಷ್ಟು ಜಗತ್ತಿನಲ್ಲಿ ಸಾಧನೆಗೆ ದಾರಿಗಳು ತೆರೆದುಕೊಳ್ಳುತ್ತವೆ ಎಂದರು.

ಜೀವನದಲ್ಲಿ ಯಶಸ್ಸು ಕಂಡ ವ್ಯಕ್ತಿತ್ವಗಳ ಸಾಧನೆಯ ಗುಟ್ಟೇ ಅವರ ಪರಿಶ್ರಮ ಮತ್ತು ಧನಾತ್ಮಕ ಆಲೋಚನೆಗಳು.ಇದಕ್ಕೆ ನಿದರ್ಶನವೆಂಬಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳ ದೃಷ್ಟಿಕೋನ ಮತ್ತು ಬೃಹತ್ ಆಲೋಚನೆಗಳು ಸಮಾಜದಲ್ಲಿ ಉತ್ತಮ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳನ್ನು ಮಾಡಲು ಸಾಧ್ಯವಾಗಿದೆ ಎಂದು ನುಡಿದರು.

ಕಾರ್ಯಕ್ರಮದ ಗೌರವ ಉಪಸ್ಥಿತಿಯನ್ನು ವಹಿಸಿದ ಬೆಳ್ತಂಗಡಿಯ ವಾಣಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಪದ್ಮ ಗೌಡ ಮಾತನಾಡಿದರು.ದೇವಾಲಯಗಳ ಅಭಿವೃದ್ಧಿಗೆ ಧಾರ್ಮಿಕ ಪ್ರಜ್ಞೆ ಅತೀ ಮುಖ್ಯ.ಜೀವನದ ಆಂತರಿಕ ಮತ್ತು ಬಾಹ್ಯ ಸರ್ವ ಸಂಸ್ಥೆಗಳಿಗೂ ಮನ:ಶಾಂತಿ ತಂದುಕೊಡಬಲ್ಲ ಶಕ್ತಿ ಕೇವಲ ಧ್ಯಾನ ಮತ್ತು ಭಜನೆಗಳಿಂದ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಣಿಲ ಶ್ರೀಧಾಮ, ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದಿವ್ಯಸಾನಿದ್ಯ ವಹಿಸಿದ್ದರು. ಶ್ರೀ ಕ್ಷೇತ್ರ ಭಜನಾ ಕಮ್ಮಟದ ಕೋಶಾಧಿಕಾರಿ ಪದ್ಮರಾಜ್ ಜೈನ್ ಕಾರ್ಯಕ್ರಮನಿರ್ವಹಿಸಿದರು.

Ad Widget
Click to comment

Leave a Reply

ಸ್ಥಳೀಯ

Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ

Published

on



Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.



Ad Widget
Ad Widget
Continue Reading

ಕಾರ್ಯಕ್ರಮಗಳು

Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ

Published

on



Ad Widget

Ad Widget

Ad Widget

Ad Widget

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್‌ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್‌ ಮಿಷನ್‌ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

Ad Widget

Ad Widget <> Ad Widget

ವಿಟ್ಲದ ಎಂಆರ್‌ಎಫ್‌ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.



Ad Widget

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

Ad Widget

Ad Widget

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.

Ad Widget
Continue Reading

ಕಾರ್ಯಕ್ರಮಗಳು

Bantare Serige-2026-ಅ.3ರಂದು ‘ಬಂಟೆರೆ ಸೇರಿಗೆ-2026’: 15 ಸಾಧಕರಿಗೆ ಪ್ರಶಸ್ತಿ; ಬಂಟರ ಸಂಘಕ್ಕೆ 5.50 ಎಕರೆ ಜಾಗದ ಹಕ್ಕುಪತ್ರ ಹಸ್ತಾಂತರ; 3,000 ಮಂದಿಯ ಸಾಮರ್ಥ್ಯದ ಮದುವೆ ಹಾಲ್ ನಿರ್ಮಾಣಕ್ಕೆ ಯೋಜನೆ

Published

on



Ad Widget

Ad Widget

Ad Widget

Ad Widget

ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳಿಗ್ಗೆ 9ಕ್ಕೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎರಡು ರಥಗಳಲ್ಲಿ ಸಾಧಕರು, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ರಾಜರಸ್ತೆ ಮೂಲಕ ಬಂಟರ ಭವನಕ್ಕೆ ಕರೆತರಲಾಗುವುದು. ಅರಿಯಡ್ಕ ಚಿಕ್ಕಪ್ಪ ನ್ಯಾಕ್ ಮಹಾದ್ವಾರ ಉದ್ಘಾಟಿಸಲಿದ್ದು, ದಂಬೆಕ್ಕಾನ ಸದಾಶಿವ ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ.

Ad Widget

Ad Widget <> Ad Widget

ಬೆಳಿಗ್ಗೆ 11ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜಿತ್ ಕುಮಾರ್ ರೈ ಮಾಲಾಡಿ ಶುಭಾಶಂಸನೆ ಮಾಡಲಿದ್ದು, ಶಶಿಧರ್ ಶೆಟ್ಟಿ ಬರೋಡಾ ಪ್ರಶಸ್ತಿ ಪ್ರದಾನ, ಆರ್.ಕೆ. ಶೆಟ್ಟಿ ಮುಂಬೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಜಗನ್ನಾಥ ರೈ ಬೀಡು ಮುಖ್ಯ ಅತಿಥಿಯಾಗಿರುವರು.



Ad Widget

ಪ್ರಶಸ್ತಿ ಪುರಸ್ಕೃತರು: ಸಹಕಾರರತ್ನ *ಸವಣೂರು ಸೀತಾರಾಮ ರೈ, **ಚನಿಲ ತಿಮ್ಮಪ್ಪ ಶೆಟ್ಟಿ, **ಮಿತ್ರಂಪಾಡಿ ಪುರಂದರ ರೈ, **ಡಾ. ಸಂದೀಪ್ ರೈ, ಸಹಕಾರರತ್ನ **ಅಗರಿ ನವೀನ್ ಭಂಡಾರಿ, **ಸುಬೇದಾರ್ ಮೇಜರ್ ರಮೇಶ್ ರೈ ಬೋಳೋಡಿ, **ಚಂದ್ರಹಾಸ್ ರೈ ಬನ್ನೂರು ಬಾಳಿಕೆ, **ಜಯಲಕ್ಷ್ಮಿ ಶೆಟ್ಟಿ, **ಸತೀಶ್ ರೈ ಕುತ್ಯಾಡಿ, **ಪ್ರವೀಣ್ ಭಂಡಾರಿ ಪುರ, **ಡಾ. ಸತ್ಯವತಿ ಆಳ್ವ, **ಸರೋಜ ಉಮೇಶ್ ರೈ ಮನವಳಿಕೆ, ಪಿಯುಸಿ ವಿಭಾಗದ **ಸಸ್ತಿ ಶೆಟ್ಟಿ, *ಸಮೃದ್ಧಿ ಶೆಟ್ಟಿ ಹಾಗೂ ಶರಣ್ಯ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು.

Ad Widget

Ad Widget

ಅಶೋಕ್ ರೈಗೆ ವಿಶೇಷ ಸನ್ಮಾನ

ಪುತ್ತೂರಿನ ಮರೀಲ್‌ನಲ್ಲಿ ಬಂಟರ ಸಂಘಕ್ಕೆ ಸರ್ಕಾರದಿಂದ 5.50 ಎಕರೆ ಜಾಗ ಮಂಜೂರು ಮಾಡಿಸಲು ಸಹಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹಕ್ಕುಪತ್ರವನ್ನು ಸಂಘಕ್ಕೆ ಹಸ್ತಾಂತರಿಸಲಿದ್ದು, ಜಾಗಕ್ಕೆ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಶಾಸಕರೇ ಭರಿಸಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.

ಮಂಜೂರಾದ ಜಾಗದಲ್ಲಿ ಮೊದಲ ಹಂತವಾಗಿ ಅಡ್ಯಾರ್ ಗಾರ್ಡನ್ ಮಾದರಿಯ ಮದುವೆ ಹಾಲ್ ಮತ್ತು ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 3,000 ಮಂದಿಗೆ ಅವಕಾಶ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ಹಂತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪುತ್ತೂರು ಮೂಲದ ಸೌಮ್ಯ ಪ್ರಿಯ ಹೆಗ್ಡೆ ಅರಿಯಡ್ಕ ಹಾಗೂ ಉಮೇಶ್ ಪೂಂಜ ದೇರ್ಲ ಅವರನ್ನು ಸನ್ಮಾನಿಸಲಾಗುವುದು. ಪ್ರಧಾನ ಕಾರ್ಯದರ್ಶಿ ಅಮರನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಾಂಸಾಹಾರಿ ಭೋಜನದ ವ್ಯವಸ್ಥೆ ಇದೆ.

ಸುದ್ದಿಗೋಷ್ಠಿಯಲ್ಲಿ ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ, ನಿತ್ಯಾನಂದ ಶೆಟ್ಟಿ ಮನವಳಿಕೆ, ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ಭಾಗ್ಗೇಶ್ ರೈ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading