ಸ್ಥಳೀಯ
Pallavi Hosamani-ಕಲಬುರಗಿ: ಮೂರು ವರ್ಷಗಳಲ್ಲಿ ಒಂಬತ್ತು ಸರ್ಕಾರಿ ಹುದ್ದೆ ಗಿಟ್ಟಿಸಿಕೊಂಡ ʻಹುದ್ದೆಗಳ ರಾಣಿʼ ಪಲ್ಲವಿ ಹೊಸಮನಿ
ಕಲಬುರಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ದೇವಲ ಗಾಣಗಾಪುರದ ಪಲ್ಲವಿ ಹೊಸಮನಿ ಎಂಬ ಯುವತಿ, ಕೇವಲ ಮೂರು ವರ್ಷಗಳಲ್ಲಿ ಒಂಬತ್ತು ಸರ್ಕಾರಿ ಹುದ್ದೆಗಳನ್ನು ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಕಲಬುರಗಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಉದ್ಯೋಗ ಪಡೆಯುವುದು ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ದೇವಲ ಗಾಣಗಾಪುರದ ಪಲ್ಲವಿ ಹೊಸಮನಿ ಎಂಬ ಯುವತಿ, ಕೇವಲ ಮೂರು ವರ್ಷಗಳಲ್ಲಿ ಒಂಬತ್ತು ಸರ್ಕಾರಿ ಹುದ್ದೆಗಳನ್ನು ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ನಾಗೇಶ್ ಹೊಸಮನಿ ಮತ್ತು ವಿಜಯಲಕ್ಷ್ಮೀ ದಂಪತಿಯ ದ್ವಿತೀಯ ಪುತ್ರಿಯಾದ ಪಲ್ಲವಿ, ತಮ್ಮ ಅಸಾಧಾರಣ ಸಾಧನೆಯಿಂದ ಗುರುತಿಸಿಕೊಂಡಿರುವ ಯುವತಿ.
ರಾಯಚೂರಿನಲ್ಲಿ ಬಿ.ಟೆಕ್ ಅಗ್ರಿಕಲ್ಟರ್ ವಿಭಾಗದ ಪದವೀಧರೆಯಾಗಿ ತೇರ್ಗಡೆಯಾದ ಪಲ್ಲವಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಲಾಸ್ಟ್ ಬೆಂಚ್ ವಿದ್ಯಾರ್ಥಿನಿಯಾಗಿ ಓದು ಮುಗಿಸಿದ್ದರು. ‘ಪದವಿ ಮುಗಿದ ಬಳಿಕ ಯಾವುದೋ ಕೆಲಸಗಳು ಸಿಗುತ್ತವೆ ಎನ್ನುವ ನಿರೀಕ್ಷೆಗಳು ಸಿಗಲಿಲ್ಲ. ಹಾಗಾಗಿ ಕೆಪಿಟಿಸಿಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬರ ಸಲಹೆಯ ಮೇರೆಗೆ ತನಗೂ ಸರಕಾರಿ ಹುದ್ದೆ ಪಡೆಯಬೇಕೆಂಬ ಹಂಬಲ ಹುಟ್ಟಿತು. ಅಲ್ಲಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಿದ್ಧತೆ ಮಾಡಿಕೊಂಡೇ ಈಗ ಬರೆದ ಎಲ್ಲ ಪರೀಕ್ಷೆಗಳಲ್ಲೂ ನೌಕರಿ ಪಡೆದಿದ್ದೇನೆ’ ಎನ್ನುತ್ತಾರೆ ಪಲ್ಲವಿ.
ಓದಿಗಾಗಿ ಹೆಚ್ಚಿನ ಸಮಯ ನೀಡಿದ್ದಕ್ಕಾಗಿಯೇ ಇಂದು ಇಷ್ಟೊಂದು ಸರಕಾರಿ ನೌಕರಿ ಪಡೆಯಲು ಸಾಧ್ಯವಾಗಿದೆ. ತಂದೆ, ತಾಯಿ ನನ್ನ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಧ್ಯಯನ ಮಾಡುತ್ತಿದ್ದಾಗ ಹಲವು ಬಾರಿ ಆರ್ಥಿಕ ಸಮಸ್ಯೆಗಳನ್ನು ಎದುರಿಸಿದ್ದೇನೆ. ಮಧ್ಯಮ ವರ್ಗದ ಕುಟುಂಬವಾದರೂ ನಮಗೆ ಕೆಲವೊಂದು ಕಟ್ಟುಪಾಡು, ಸಮಸ್ಯೆಗಳು ಇತ್ತು. ಅವುಗಳನ್ನು ಮೆಟ್ಟಿದ್ದರಿಂದಲೇ ಇಂದು ಸರಕಾರಿ ನೌಕರಿಗಳು ಪಡೆದುಕೊಂಡಿರುವುದಾಗಿ ಪಲ್ಲವಿ ವಿವರಿಸುತ್ತಾರೆ.
ಪಲ್ಲವಿ ಅವರು ಈಗಾಗಲೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್ ಐಡಿಎಲ್) ಇಲಾಖೆ ಕಲಬುರಗಿ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಆಯ್ಕೆಯಾಗಿರುವ ವಾಣಿಜ್ಯ ತೆರಿಗೆ ಇನ್‌ಸ್ಪೆಕ್ಟರ್ (ಸಿಟಿಐ) ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಸೇವೆ ಸಲ್ಲಿಸಲಿದ್ದಾರೆ.
9 ಹುದ್ದೆಗಳು:
2023ರಲ್ಲಿ ಕೆಪಿಟಿಸಿಎಲ್ ನಲ್ಲಿ ದ್ವಿತೀಯ ದರ್ಜೆ ಸಹಾಯಕ, ಡಿಸಿಸಿ ಬ್ಯಾಂಕ್ ನಲ್ಲಿ ಪ್ರಥಮ ದರ್ಜೆ ಸಹಾಯಕ, ಲೇಬರ್ ಇನ್‌ಸ್ಪೆಕ್ಟರ್, ಸ್ಟಾಟಿಸ್ಟಿಕ್ಸ್ ಮತ್ತು ಆರ್ಥಿಕ ಇಲಾಖೆಯಲ್ಲಿ ಡಾಟಾ ಎಂಟ್ರಿ, ಕೆಆರ್‌ಐಡಿಎಲ್‌ನಲ್ಲಿ ಪ್ರಥಮ ದರ್ಜೆ ಸಹಾಯಕ, ಕಾರ್ಮಿಕ ಇಲಾಖೆಯಲ್ಲಿ ಫಿಲ್ಡ್ ಇನ್‌ಸ್ಪೆಪೆಕ್ಟರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕ, 2024 ರಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಇನ್‌ಸ್ಪೆಕ್ಟರ್ ಆಗಿ ನೇಮಕ ಹಾಗೂ ಸದ್ಯ 2025ನೇ ಸಾಲಿನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗೆ ಆಯ್ಕೆಯಾಗುವ ಮೂಲಕ ಹುದ್ದೆಗಳ ರಾಣಿ’ಯಾಗಿ ಪಲ್ಲವಿ ಹೊಸಮನಿ ಗಮನ ಸೆಳೆದಿದ್ದಾರೆ.
ಸರಕಾರಿ ಹುದ್ದೆಗಳನ್ನು ಪಡೆಯಲು ದಿನಪೂರ್ತಿ ಓದುವುದಕ್ಕಿಂತ ಹೆಚ್ಚಾಗಿ ಬೆಳಗಿನ ಜಾವದಲ್ಲಿ ಎದ್ದು ನಾಲೈದು ಗಂಟೆ ಓದುವುದನ್ನು ರೂಢಿಸಿಕೊಳ್ಳಬೇಕು. ಮುಂಜಾನೆಯ ಅಧ್ಯಯನವು ದಿನಪೂರ್ತಿ ಓದುವುದಕ್ಕೆ ಸಮ. ಕೋಚಿಂಗ್ ಕೇಂದ್ರಗಳು ನಮಗೆ ದಾರಿ ಮಾಡಿಕೊಡುತ್ತವೆ ಅಷ್ಟೇ; ಅವುಗಳಿಂದ ನಮಗೆ ಉದ್ಯೋಗ ಸಿಗುವುದಿಲ್ಲ. ನಾವು ಕಠಿಣ ಶ್ರಮದಿಂದ ಅಧ್ಯಯನ ಮಾಡಿದಾಗ ಮಾತ್ರ ಯಶಸ್ಸು ಸಿಗುವುದು ನಿಶ್ಚಿತ. ಸ್ಪರ್ಧಾಕಾಂಕ್ಷಿಗಳು ಹೆಚ್ಚಾಗಿ ಸ್ವಯಂ ಅಧ್ಯಯನಕ್ಕೆ ಒತ್ತು ನೀಡಬೇಕು. -ಪಲ್ಲವಿ ಹೊಸಮನಿ
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್8 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ14 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು16 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized15 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್16 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ14 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್15 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















