ಸೆ. 22: ಸೋಮವಾರ: ಮಾಸ್ಟರ್ ಅಶ್ಮಿತ್, ಮಂಗಳೂರು (ಭಕ್ತಿಸಂಗೀತ), ಸೆ. 23: ಮಂಗಳವಾರ: ವಿದ್ಯಾ ಎಸ್. […]" /> ಸೆ. 22: ಸೋಮವಾರ: ಮಾಸ್ಟರ್ ಅಶ್ಮಿತ್, ಮಂಗಳೂರು (ಭಕ್ತಿಸಂಗೀತ), ಸೆ. 23: ಮಂಗಳವಾರ: ವಿದ್ಯಾ ಎಸ್. […]"> Dharmasthala-ಸೆ. 22 ರಿಂದ ಅಕ್ಟೋಬರ್ 1 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ - Nikhara News | Kannada News Website
Connect with us

ಕಾರ್ಯಕ್ರಮಗಳು

Dharmasthala-ಸೆ. 22 ರಿಂದ ಅಕ್ಟೋಬರ್ 1 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on

Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಸೆ. 22 ರಿಂದ ಅ. 1 ರ ವರೆಗೆ ವಿಶೇಷಪೂಜೆ ಹಾಗೂ ಪ್ರತಿದಿನ ಸಂಜೆ 6 ಗಂಟೆಯಿಂದ ಪ್ರವಚನಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಸೆ. 22 ರಿಂದ ಅ. 1 ರ ವರೆಗೆ ವಿಶೇಷಪೂಜೆ ಹಾಗೂ ಪ್ರತಿದಿನ ಸಂಜೆ 6 ಗಂಟೆಯಿಂದ ಪ್ರವಚನಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಸೆ. 22: ಸೋಮವಾರ: ಮಾಸ್ಟರ್ ಅಶ್ಮಿತ್, ಮಂಗಳೂರು (ಭಕ್ತಿಸಂಗೀತ), ಸೆ. 23: ಮಂಗಳವಾರ: ವಿದ್ಯಾ ಎಸ್. ರಾವ್ ಮತ್ತು ಬಳಗ ಉಡುಪಿ (ಶಾಸ್ತ್ರೀಯ ಸಂಗೀತ), ಸೆ. 24: ಬುಧವಾರ: ಕುಮಾರಿ ಅನಘಾ ಅವಧೂತ್, ಬೆಳಗಾವಿ (ಸಿತಾರ್ ವಾದನ), ಸೆ. 25: ಗುರುವಾರ: ಕುಮಾರಿ ಶ್ರೀವಿದ್ಯಾ, ಉಜಿರೆ (ಶಾಸ್ತ್ರೀಯ ಸಂಗೀತ), ಸೆ. 26: ಶುಕ್ರವಾರ: ಕುಮಾರಿ ಸಿಂಚನಾ ಎಂ. ಗೌಡ ಮತ್ತು ಬಳಗ, ಪುತ್ತೂರು (ಭಕ್ತಿರಸಮಂಜರಿ), ಸೆ. 27: ಶನಿವಾರ: ವಿದುಷಿ ಚಂದ್ರಿಕಾ ರಾಜಾರಾಮ್, ಬೆಂಗಳೂರು (ಶಾಸ್ತ್ರೀಯ ಸಂಗೀತ), ಸೆ. 28: ಆದಿತ್ಯವಾರ: ವಿದುಷಿ ಅನುರಾಧ ಭಟ್, ಅಡ್ಕಸ್ಥಳ, ಕೇಪು, ವಿಟ್ಲ (ಶಾಸ್ತ್ರೀಯ ಸಂಗೀತ), ಸೆ. 29: ಸೋಮವಾರ: ಕುಮಾರಿ ಶ್ರೀಲಕ್ಷ್ಮಿ, ಬೆಳ್ಮಣ್ಣು, ಬೆಂಗಳೂರು (ಶಾಸ್ತ್ರೀಯ ಸಂಗೀತ), ಸೆ. 30: ಮಂಗಳವಾರ: ಕುಮಾರಿ ನವ್ಯ ಎಂ. ಆರ್. ಮತ್ತು ಬಳಗ, ಪುತ್ತೂರು (ಸುಗಮ ಸಂಗೀತ), ಅಕ್ಟೋಬರ್ 1: ಬುಧವಾರ : ಕುಮಾರಿ ಆರಾಧ್ಯ ರಾವ್, ಬೆಂಗಳೂರು : ಭಕ್ತಿರಸಮಂಜರಿ (ಸಂಜೆ 6-30 ರಿಂದ 8-30 ರ ವರೆಗೆ), ಕುಮಾರಿ ಕ್ಷಿತಿ ರೈ, ಧರ್ಮಸ್ಥಳ : ಸುಗಮಸಂಗೀತ (ರಾತ್ರಿ ಗಂಟೆ 9 ರಿಂದ 11.30 ರ ವರೆಗೆ)

Ad Widget

Ad Widget <> Ad Widget

Ad Widget
Click to comment

Leave a Reply

ಕಾರ್ಯಕ್ರಮಗಳು

Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್

Published

on

Ad Widget

Ad Widget

Ad Widget

Ad Widget

ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget

Ad Widget

ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಮೈತ್ರೇಯಿ ಆಯುರ್ವೇದ ಗುರುಕುಲಂನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಸುಧಾರಾವ್ ಮಾತನಾಡಿ “1994ರಲ್ಲಿ ಸ್ಥಾಪನೆಯಾದ ಮೈತ್ರೇಯಿ ಗುರುಕುಲಂನ ಸುದೀರ್ಘ ಸೇವಾ ಪರಂಪರೆಯಿಂದ ಪ್ರೇರಣೆ ಪಡೆದು, ಅಜೇಯ ಟ್ರಸ್ಟ್‌ನ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೈತ್ರೇಯಿ ಆಯುರ್ವೇದ ಗುರುಕುಲಂರೂಪುಗೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಮೌಲ್ಯಾಧಾರಿತ ವಸತಿ ಸಹಿತ ಶಿಕ್ಷಣವನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಇದೀಗ ಆಯುರ್ವೇದ ಶಿಕ್ಷಣ ಕ್ಷೇತ್ರಕ್ಕೂತನ್ನ ಸೇವೆಯನ್ನು ವಿಸ್ತರಿಸುತ್ತಿದೆ.

Ad Widget

Ad Widget <> Ad Widget

ಮೈತ್ರೇಯಿ ಆಯುರ್ವೇದ ಗುರುಕುಲಂ ಮಹಿಳೆಯರಿಗಾಗಿ ಮೀಸಲಾದ ವಸತಿ ಸಹಿತ ಶಿಕ್ಷಣ ಸಂಸ್ಥೆಯಾಗಿದ್ದು, ಒಟ್ಟು 7½ ವರ್ಷಗಳ ಸಮಗ್ರ ಶಿಕ್ಷಣ ಕಾರ್ಯಕ್ರಮವನ್ನು ರೂಪಿಸಿದೆ. ಇದರಲ್ಲಿ 2 ವರ್ಷಗಳ ಪೂರ್ವ ಆಯುರ್ವೇದ ಶಿಕ್ಷಣ, 4½ ವರ್ಷಗಳ BAMS ಪದವಿ ಶಿಕ್ಷಣ ಹಾಗೂ 1 ವರ್ಷದ ಕಡ್ಡಾಯ ಇಂಟರ್ನ್‌ಶಿಪ್ ಒಳಗೊಂಡಿರುತ್ತದೆ. ಮೈತ್ರೇಯಿ ಆಯುರ್ವೇದ ಗುರುಕುಲಂ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ, ನವದೆಹಲಿ ಇದರ ಸಂಯೋಜನೆ ಹೊಂದಿದ್ದು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಹಾಗೂ ನವದೆಹಲಿಯ ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆ ಮತ್ತು ಅನ್ವಯಿಸುವ ನಿಯಂತ್ರಣಾತ್ಮಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ಈ ಶಿಕ್ಷಣ ಕಾರ್ಯಕ್ರಮವು ಸಂಸ್ಕೃತ, ಯೋಗ, ಭಾರತೀಯ ಜ್ಞಾನಪರಂಪರೆ, ಶಿಸ್ತು ಮತ್ತು ನೈತಿಕ ಮೌಲ್ಯಗಳೊಂದಿಗೆ ಆಯುರ್ವೇದ ಶಿಕ್ಷಣವನ್ನು ಸಂಯೋಜಿಸುವ ಉದ್ದೇಶವನ್ನು ಹೊಂದಿದೆ. ಆಯುರ್ವೇದದ ಶಾಸ್ತ್ರೀಯ ಗ್ರಂಥಗಳನ್ನು ಸಂಸ್ಕೃತ ಭಾಷೆಯಲ್ಲಿ ಅಧ್ಯಯನ ಮಾಡುವುದಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ, ಜ್ಞಾನವಂತ, ಕೌಶಲ್ಯ ಪೂರ್ಣ ಹಾಗೂ ಕರುಣಾಮಯಿ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ. ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಮಹಿಳೆಯರಿಗೆ ಗುಣಮಟ್ಟದ ವಸತಿ ಸಹಿತ ಶಿಕ್ಷಣವನ್ನು ಒದಗಿಸುವುದರ ಜೊತೆಗೆ, ಜನಸಾಮಾನ್ಯರಿಗೆ ಗುಣಮಟ್ಟದ ಆಯುರ್ವೇದ ಆರೋಗ್ಯ ಸೇವೆಗಳನ್ನು ನೀಡುವ ಆಶಯವನ್ನು ಸಂಸ್ಥೆ ಹೊಂದಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯಕ್ ವಹಿಸಲಿದ್ದಾರೆ.ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸೆಂಚುರಿ ಗ್ರೂಪ್ ಆಫ್ ಕಂಪನೀಸ್‌ನ ಅಧ್ಯಕ್ಷರು ಡಾ. ಪಿ. ದಯಾನಂದ ಪೈ, ಮೈಸೂರು ಮಂಗಳೂರು ಗಣೇಶ್ ಬೀಡಿ ವರ್ಕ್ಸ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಗನ್ನಾಥ ಶೆಣೈ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ ಶೆಟ್ಟಿ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಉಪಸ್ಥಿತರಿರಲಿದ್ದಾರೆ.

Ad Widget

Ad Widget

ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಸಂಸ್ಕೃತ ಭಾರತಿ ಸಂಘಟನೆಯ ದಿನೇಶ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಜೇಯ ಟ್ರಸ್ಟ್‌ನ ಅಧ್ಯಕ್ಷರಾದ ಸುಬ್ರಾಯ ಪೈ, ಮೈತ್ರೇಯಿ ಆಯುರ್ವೇದ ಗುರುಕುಲಂನ ಪ್ರಾಂಶುಪಾಲರಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.

Ad Widget
Continue Reading

ಸ್ಥಳೀಯ

Wedding-ಕ್ಯಾಸೆಟ್‌ಗಳ ಅಬ್ಬರವಿಲ್ಲ, ಡ್ಯಾನ್ಸ್‌ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!

Published

on

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget

Ad Widget

Ad Widget

ಉಜಿರೆ: ಕ್ಯಾಸೆಟ್‌ಗಳ ಅಬ್ಬರ, ಮೈಕಾಸುರನ ಹಾವಳಿಯಿಂದ ಶಬ್ದ ಮಾಲಿನ್ಯವಿಲ್ಲ. ಸಿನೆಮಾ ಹಾಡು, ಬ್ರೇಕ್‌ಡ್ಯಾನ್ಸ್ ಉಪಟಳವಿಲ್ಲ. ಅತ್ಯಂತ ಸರಳವಾಗಿ, ಶಿಸ್ತುಬದ್ಧವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget alt="Ad Widget"/>

Ad Widget

ಮದುಮಗ ಕೆ.ಜೆ. ಸುದರ್ಶನ್ ತಾಯಿ-ತಂದೆ ಬಗ್ಯೆ ಅಪಾರ ಗೌರವ, ಪ್ರೀತಿ-ವಿಶ್ವಾಸವನ್ನು ವ್ಯಕ್ತಪಡಿಸಿ ಅವರೇ ತನಗೆ ಪ್ರತ್ಯಕ್ಷ ದೇವರು ಎಂದು ಗೌರವ ಸಲ್ಲಿಸಿದರು.

Ad Widget

Ad Widget <> Ad Widget

ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ಭಾವುಕರಾಗಿ ಆನಂದಭಾಷ್ಪ ಸುರಿಸಿದರು. ಇಂತಹ ಮಗನನ್ನು ಪಡೆದ ತಾವೇ ಭಾಗ್ಯವಂತರು ಎಂದು ಸಂತಸವ್ಯಕ್ತಪಡಿಸಿದರು.

ಉಷಾಜನಾರ್ಧನ ಗಣೇಶನ ಸ್ತುತಿಯನ್ನು ಸುಶ್ರಾವ್ಯವಾಗಿ ಹಾಡಿದರು. ಸೊಸೆಯನ್ನು ಕೂಡಾ ಮಗಳಂತೆ ಪ್ರೀತಿಯಿಂದ ನೋಡಿಕೊಳ್ಳುವುದಾಗಿ ತಿಳಿಸಿದರು.

Ad Widget

Ad Widget

ಹಿರಿಯ ದಂಪತಿ ಮತ್ತು ನವದಂಪತಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿ, ಗೌರವಿಸಿದರು. ಎಲ್ಲರಿಗೂ ಸರಳ, ಶುದ್ಧ ಹಾಗೂ ಶುಚಿ-ರುಚಿಯಾದ ಶಾಕಾಹಾರ ಭೋಜನ ನೀಡಿದರು.
ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೇಟ್ನಾಯ, ಶಾಸಕ ಕೆ. ಹರೀಶ್‌ ಪೂಂಜ, ಮಾಜಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡಬಿದ್ರೆಯ ಎಕ್ಸಲೆಂಟ್‌ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್‌ ಜೈನ್‌ ಮತ್ತು ರಶ್ಮಿತಾ ಜೈನ್‌ ನಾರಾವಿ ಸೇರಿದಂತೆ ಅನೇಕ ಗಣ್ಯರು, ಹಿರಿಯರು ಆಗಮಿಸಿ ನೂತನ ದಂಪತಿಗೆ ಶುಭ ಹಾರೈಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!