ಬಂಧಿತ ಆರೋಪಿಗಳು: ಬೆಂಗಳೂರಿನ ನಂದಿನಿ ಲೇಔಟ್‌ನ ಶಿಕ್ಷಕ ಭರಮಪ್ಪ, ಹೊಸಪೇಟೆಯಲ್ಲಿ ಪ್ರಥಮ […]" /> ಬಂಧಿತ ಆರೋಪಿಗಳು: ಬೆಂಗಳೂರಿನ ನಂದಿನಿ ಲೇಔಟ್‌ನ ಶಿಕ್ಷಕ ಭರಮಪ್ಪ, ಹೊಸಪೇಟೆಯಲ್ಲಿ ಪ್ರಥಮ […]"> Fake medical document-ಬೆಂಗಳೂರು: ಸರ್ಕಾರಿ ವೈದ್ಯಕೀಯ ಸೀಟಿಗಾಗಿ ನಕಲಿ ವೈದ್ಯಕೀಯ ದಾಖಲೆ ಸೃಷ್ಟಿ; ಮೂವರು ಆರೋಪಿಗಳ ಬಂಧನ - Nikhara News | Kannada News Website
Connect with us

ಬೆಂಗಳೂರು

Fake medical document-ಬೆಂಗಳೂರು: ಸರ್ಕಾರಿ ವೈದ್ಯಕೀಯ ಸೀಟಿಗಾಗಿ ನಕಲಿ ವೈದ್ಯಕೀಯ ದಾಖಲೆ ಸೃಷ್ಟಿ; ಮೂವರು ಆರೋಪಿಗಳ ಬಂಧನ

Published

on

Ad Widget

Ad Widget

Ad Widget

Ad Widget

ನಕಲಿ ವೈದ್ಯಕೀಯ ದಾಖಲೆಗಳನ್ನು ಒದಗಿಸಿ ಅಂಗವಿಕಲರ ಕೋಟಾದಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದವರಿಗೆ ಸಹಾಯ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಮಲ್ಲೇಶ್ವರಂ ಪೊಲೀಸರು ಬುಧವಾರ ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ಸೆ.17: ನಕಲಿ ವೈದ್ಯಕೀಯ ದಾಖಲೆಗಳನ್ನು ಒದಗಿಸಿ ಅಂಗವಿಕಲರ ಕೋಟಾದಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದವರಿಗೆ ಸಹಾಯ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಮಲ್ಲೇಶ್ವರಂ ಪೊಲೀಸರು ಬುಧವಾರ ಬಂಧಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಬಂಧಿತ ಆರೋಪಿಗಳು: ಬೆಂಗಳೂರಿನ ನಂದಿನಿ ಲೇಔಟ್‌ನ ಶಿಕ್ಷಕ ಭರಮಪ್ಪ, ಹೊಸಪೇಟೆಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಉಮೇಶ್ ಚೌಧರಿ, ಮತ್ತು ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಮಂಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕ ಸುಧಾಕರ್. ಆರೋಪಿಗಳಿಂದ ನಕಲಿ ದಾಖಲೆಗಳು ಮತ್ತು ಅವುಗಳನ್ನು ತಯಾರಿಸಲು ಬಳಸಿದ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ, ಹೆಚ್ಚಿನ ತನಿಖೆಗಾಗಿ 10 ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ನೇಮಗೌಡ ತಿಳಿಸಿದ್ದಾರೆ. ಸುಧಾಕರ್‌ನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಕೊಪ್ಪಳ ಡಿಎಚ್‌ಒ ಡಾ. ಲಿಂಗರಾಜು ದೃಢಪಡಿಸಿದ್ದಾರೆ.

ತನಿಖೆಯಿಂದ ಆರೋಪಿಗಳು ನಕಲಿ ದಾಖಲೆಗಳನ್ನು ತಯಾರಿಸಿ ಅಭ್ಯರ್ಥಿಗಳಿಗೆ ನೀಡುತ್ತಿದ್ದದ್ದು ಬಯಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರ ಸೂಚನೆಯಂತೆ, ಮುಖ್ಯ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ್ ಅವರು 21 ಅಭ್ಯರ್ಥಿಗಳು ಮತ್ತು ನಕಲಿ ದಾಖಲೆ ತಯಾರಿಕೆಗೆ ಸಹಕರಿಸಿದ ನಾಲ್ವರ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ಮೊದಲ ಹಂತದಲ್ಲಿ ಮೂವರನ್ನು ಬಂಧಿಸಿದ್ದಾರೆ.

Ad Widget

Ad Widget

21 ಅಭ್ಯರ್ಥಿಗಳು ಶ್ರವಣ ದೋಷವಿದೆ ಎಂದು ನಕಲಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿದ್ದರು. ಇವರಲ್ಲಿ ಹೆಚ್ಚಿನವರು ವಿಜಯನಗರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಯಿಂದ ಯುಡಿ ಐಡಿ (ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ) ಪಡೆದಿದ್ದರು. ಈ ಯುಡಿ ಐಡಿಗಾಗಿ ಇತ್ತೀಚೆಗೆ ತೆಗೆದುಕೊಂಡ ನಕಲಿ ವೈದ್ಯಕೀಯ ಪ್ರಮಾಣಪತ್ರಗಳನ್ನು ಒದಗಿಸಿದ್ದರು. ದಾಖಲೆಗಳ ಪರಿಶೀಲನೆಯಲ್ಲಿ ಈ ಪ್ರಮಾಣಪತ್ರಗಳು ನಕಲಿ ಎಂದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

Ad Widget
Click to comment

Leave a Reply

ಬಿಗ್ ನ್ಯೂಸ್

Heavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡ ಗಂಜೂರಿನಲ್ಲಿ ಗರಿಷ್ಠ 54 ಮಿ.ಮೀ. ಮಳೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 51 ಮಿ.ಮೀ. ಹಾಗೂ ಚಿಂತಾಮಣಿ ತಾಲ್ಲೂಕಿನ ಮುಂಗನಹಳ್ಳಿಯಲ್ಲಿ 47.5 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget <> Ad Widget

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬಿಸ್ಕೂರಿನಲ್ಲಿ 47 ಮಿ.ಮೀ., ಹುಲ್ಲೇನಹಳ್ಳಿಯಲ್ಲಿ 46 ಮಿ.ಮೀ. ಹಾಗೂ ಅದರಂಗಿಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಪಶ್ಚಿಮ ಭಾಗದ ಕೋನೇನ ಅಗ್ರಹಾರ ಮತ್ತು ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರದಲ್ಲಿ ತಲಾ 40 ಮಿ.ಮೀ. ಮಳೆ ಸುರಿದಿದೆ.

ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹಾಗೂ ಚಿಂತಾಮಣಿ ತಾಲ್ಲೂಕಿನ ಪೆರಮಂಚನಹಳ್ಳಿಯಲ್ಲಿ ತಲಾ 35.5 ಮಿ.ಮೀ., ಸಂಕಿಘಟ್ಟದಲ್ಲಿ 35 ಮಿ.ಮೀ. ಮಳೆಯಾಗಿದೆ. ಆನೇಕಲ್ ತಾಲ್ಲೂಕಿನ ನೇರಿಗದಲ್ಲಿ 33.5 ಮಿ.ಮೀ., ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ 33 ಮಿ.ಮೀ. ಹಾಗೂ ಚಿಂತಾಮಣಿಯಲ್ಲಿ 32.8 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget

ಬೆಂಗಳೂರು ನಗರದ ದಾಸನಪುರದಲ್ಲಿ 29 ಮಿ.ಮೀ., ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ.ತಿಮ್ಮಸಂದ್ರದಲ್ಲಿ 28.5 ಮಿ.ಮೀ., ಅರಿಕುಂಟೆಯಲ್ಲಿ 27.5 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ 27.25 ಮಿ.ಮೀ. ಮಳೆಯಾಗಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವಿರುಪಸಮುದ್ರದಲ್ಲಿ 26 ಮಿ.ಮೀ. ಹಾಗೂ ಮಧುಗಿರಿ ತಾಲ್ಲೂಕಿನ ಬೇಡತೂರಿನಲ್ಲಿ 25.5 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಮತ್ತು ಚಿಂತಾಮಣಿ ತಾಲ್ಲೂಕಿನ ಮಾಸ್ತೇನಹಳ್ಳಿಯಲ್ಲಿ ತಲಾ 24.5 ಮಿ.ಮೀ. ಮಳೆಯಾಗಿದೆ.

ಇನ್ನು ಚಿಂತಾಮಣಿ ತಾಲ್ಲೂಕಿನ ತಳಗವಾರದಲ್ಲಿ 23.5 ಮಿ.ಮೀ., ಮುರುಗಮಲೆಯಲ್ಲಿ 23.25 ಮಿ.ಮೀ. ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೆಂಕಟಾಪುರದಲ್ಲಿ 23 ಮಿ.ಮೀ. ಮಳೆಯಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಳಗುರುಕೋಟೆ ಹಾಗೂ ಗೌರಿಬಿದನೂರು ತಾಲ್ಲೂಕಿನ ಮೆಲ್ಯಾದಲ್ಲಿ ತಲಾ 22.75 ಮಿ.ಮೀ. ಮಳೆ ಸುರಿದಿದೆ. ಬೆಂಗಳೂರಿನ ಚಿಕ್ಕಬಾಣಾವರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ತಲಾ 22.5 ಮಿ.ಮೀ. ಮಳೆಯಾಗಿದೆ.

ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಮತ್ತು ಶಿಡ್ಲಘಟ್ಟದಲ್ಲಿ ತಲಾ 22 ಮಿ.ಮೀ., ಬೆಂಗಳೂರಿನ ಲಕ್ಕಸಂದ್ರ, ವನ್ನಾರಪೇಟೆ ಹಾಗೂ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದಲ್ಲಿ ತಲಾ 21.5 ಮಿ.ಮೀ. ಮಳೆಯಾಗಿದೆ.

ಆನೇಕಲ್ ತಾಲ್ಲೂಕಿನ ಮುಗಳೂರು ಮತ್ತು ನೆಲಮಂಗಲ ತಾಲ್ಲೂಕಿನ ವಿಶ್ವೇಶ್ವರಪುರದಲ್ಲಿ ತಲಾ 21 ಮಿ.ಮೀ. ಮಳೆಯಾಗಿದ್ದರೆ, ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ 20.75 ಮಿ.ಮೀ. ಮಳೆ ದಾಖಲಾಗಿದೆ.

ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಹಾಗೂ ಚಿಂತಾಮಣಿ ತಾಲ್ಲೂಕಿನ ಬುರುದಗುಂಟೆಯಲ್ಲಿ ತಲಾ 20.5 ಮಿ.ಮೀ., ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಪೈಲಗುರ್ಕಿಯಲ್ಲಿ 20 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಬಾಣವಾಡಿಯಲ್ಲಿ 19.5 ಮಿ.ಮೀ. ಮಳೆಯಾಗಿದೆ.

Ad Widget
Continue Reading

ಅಪರಾಧ

Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ

Published

on

Ad Widget

Ad Widget

Ad Widget

Ad Widget

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget alt="Ad Widget"/>

Ad Widget

ಪಟ್ಟಣಗೆರೆಯ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜನ್ ಮತ್ತು ವಿಜಯ್ ಕುಮಾರ್ ಅವರು ಈ ಹಿಂದೆ ಪೊಲೀಸರಿಗೆ ಹಾಗೂ ನ್ಯಾಯಾಲಯದಲ್ಲಿ ಘಟನೆಯ ಕುರಿತು ಮಾಹಿತಿ ನೀಡಿದ್ದರು. ಘಟನೆ ನಡೆದ ದಿನ ಇಬ್ಬರೂ ಶೆಡ್‌ನಲ್ಲಿ ಹಾಜರಿದ್ದರು ಎನ್ನಲಾಗಿದೆ.

Ad Widget

Ad Widget <> Ad Widget

ಆದರೆ, ಮಂಗಳವಾರ ನಡೆದ ವಿಚಾರಣೆಯ ವೇಳೆ ಇಬ್ಬರೂ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನೀಡಿದ್ದಾರೆ.

‘ನಾವು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದೆವು. ಬಳಿಕ ಮನೆಗೆ ತೆರಳುತ್ತಿದ್ದೆವು. ಅಂದು ಶೆಡ್‌ನಲ್ಲಿ ಇದ್ದರೂ ಕಾರಿನಲ್ಲಿ ಯಾರೆಲ್ಲ ಬಂದಿದ್ದರು ಎಂಬುದು ನಮಗೆ ತಿಳಿದಿಲ್ಲ. ಶೆಡ್‌ನಲ್ಲಿ ನಡೆದ ಘಟನೆಗಳನ್ನು ನಾವು ಕಣ್ಣಾರೆ ನೋಡಿಲ್ಲ’ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

Ad Widget

Ad Widget

ಈಗಾಗಲೇ ಪಟ್ಟಣಗೆರೆ ಶೆಡ್‌ನ ಕಾವಲುಗಾರ ನರೇಂದ್ರ ಸಿಂಗ್ ಹಾಗೂ ಸಿಬ್ಬಂದಿ ಕಿರಣ್ ಕೂಡ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.

ಧನ್ವಿರ್‌ಗೆ ನ.30ರಂದು ಸಿಸಿಬಿ ಮುಂದೆ ಹಾಜರಾಗಲು ಹೈಕೋರ್ಟ್ ಸೂಚನೆ
ಇನ್ನೊಂದೆಡೆ, ಪರಪ್ಪನ ಅಗ್ರಹಾರ ಜೈಲಿನ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವಿರ್ ಅವರು ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ತಮ್ಮನ್ನು ಆರೋಪಿಯನ್ನಾಗಿ ಹೆಸರಿಸಿರುವ ಪ್ರಕರಣದಲ್ಲಿ ಬೆಂಗಳೂರಿನ ಒಂದನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನವೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಧನ್ವಿರ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ನಡೆಸಿತು.

ವಿಚಾರಣೆ ವೇಳೆ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಅನೂಪ್ ಕುಮಾರ್ ಅವರು, ಅರ್ಜಿದಾರರ ವಿರುದ್ಧದ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದ್ದರೂ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಆದ್ದರಿಂದ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಧನ್ವಿರ್‌ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸುತ್ತಿದ್ದ ದೃಶ್ಯಗಳು ಬಹಿರಂಗಗೊಂಡ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೊ ಹರಿದಾಡಲು ನಟ ಧನ್ವಿರ್ ಅವರ ಮೊಬೈಲ್ ಬಳಕೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ.

Ad Widget
Continue Reading

ರಾಜಕೀಯ

Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್

Published

on

Ad Widget

Ad Widget

Ad Widget

Ad Widget

ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.

ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್‌ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.

Ad Widget

Ad Widget

ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್‌ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.

ಎಫ್‌ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್‌ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!