ಬಿಗ್ ನ್ಯೂಸ್
Dharmasthala-ಸೌಜನ್ಯ ಮಾವ ವಿಠಲ್ ಗೌಡ ವಿರುದ್ಧ ಷಡ್ಯಂತ್ರದ ಆರೋಪ : ಧರ್ಮಸ್ಥಳ ಗ್ರಾಮಸ್ಥನಿಂದ ಎಸ್‌ಐಟಿಗೆ ದೂರು
ಧರ್ಮಸ್ಥಳದ ಗ್ರಾಮಸ್ಥ ಸಂದೀಪ್ ರೈ ಎಂಬವರು ಸೌಜನ್ಯ ಮಾವ ವಿಠಲ್ ಗೌಡ ವಿರುದ್ಧ ಎಸ್‌ಐಟಿಗೆ ದೂರು ಸಲ್ಲಿಸಿದ್ದಾರೆ. ತನಿಖಾ ಪ್ರಕ್ರಿಯೆಯಲ್ಲಿ ವಿಠಲ್ ಗೌಡ ಎಸ್‌ಐಟಿ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ ಎಂಬ ಆರೋಪ ದೂರಿನಲ್ಲಿ ಕೇಳಿಬಂದಿದೆ.
ಧರ್ಮಸ್ಥಳದ ಗ್ರಾಮಸ್ಥ ಸಂದೀಪ್ ರೈ ಎಂಬವರು ಸೌಜನ್ಯ ಮಾವ ವಿಠಲ್ ಗೌಡ ವಿರುದ್ಧ ಎಸ್‌ಐಟಿಗೆ ದೂರು ಸಲ್ಲಿಸಿದ್ದಾರೆ. ತನಿಖಾ ಪ್ರಕ್ರಿಯೆಯಲ್ಲಿ ವಿಠಲ್ ಗೌಡ ಎಸ್‌ಐಟಿ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ ಎಂಬ ಆರೋಪ ದೂರಿನಲ್ಲಿ ಕೇಳಿಬಂದಿದೆ.
ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ಯಾವುದೇ ಮಾಹಿತಿ ಬಹಿರಂಗಪಡಿಸದಿರುವ ಹೊರತು, ವಿಠಲ್ ಗೌಡ ವಿಡಿಯೋಗಳನ್ನು ಹರಡಿ ತನಿಖೆಯ ಹಾದಿಯನ್ನು ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ವಿಠಲ್ ಗೌಡ ಕೆಲವು ವ್ಯಕ್ತಿಗಳೊಂದಿಗೆ ಷಡ್ಯಂತ್ರ ಮಾಡಿ, ವಿಚಾರಣೆ ಮುಗಿಯುತ್ತಿದ್ದಂತೆ ಹೊರಬಂದು ಯೂಟ್ಯೂಬ್ ಚಾನೆಲ್‌ಗಳಿಗೆ ಸಂದರ್ಶನ ನೀಡಿದ್ದಾರೆ. ಇದರ ಮೂಲಕ ತನಿಖೆ ಹಾದಿ ತಪ್ಪಿಸಲು ಯತ್ನಿಸಿದ್ದಾರೆ ಎಂಬ ಆರೋಪವಿದೆ.
ಇದಲ್ಲದೆ, ಸಾಕ್ಷ್ಯಗಳನ್ನು ನಾಶಮಾಡುವ ಉದ್ದೇಶದಿಂದ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡಿದ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಿಠಲ್ ಗೌಡ ವಿರುದ್ಧ ತನಿಖೆ ನಡೆಸುವಂತೆ ಎಸ್‌ಐಟಿಯನ್ನು ಒತ್ತಾಯಿಸಲಾಗಿದೆ. ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ದೂರು ಸ್ವೀಕರಿಸಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.
ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.
120 ಎಕರೆ ಸರ್ಕಾರಿ ಜಮೀನಿನತ್ತ ಗಮನ
ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.
ಸಮನ್ವಯದ ಚಿಕಿತ್ಸೆಗೆ ಅವಕಾಶ
ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರಿ ಸ್ವಾಮ್ಯಕ್ಕೆ ಒತ್ತು
ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.
ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Vitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ, ಮೇಸ್ತಿ ಕೆಲಸ ಮಾಡುತ್ತಿದ್ದ ರಾಮಣ್ಣ ಮೂಲ್ಯ (45) ಎಂದು ಗುರುತಿಸಲಾಗಿದೆ.
ರಾಮಣ್ಣ ಮೂಲ್ಯ ಅವರು ಕುಡ್ತಮುಗೇರು ಕಡೆಯಿಂದ ಕುಳಾಲು ಕಡೆಗೆ ಆಕ್ಟಿವಾದಲ್ಲಿ ತೆರಳುತ್ತಿದ್ದ ವೇಳೆ, ಬೊಲ್ಪಾದೆಯ ಅಪಾಯಕಾರಿ ತಿರುವಿನ ಏರು ರಸ್ತೆಯಲ್ಲಿ ಎದುರಿನಿಂದ ಬಂದ ಮಾರುತಿ ಕಾರು ಆಕ್ಟಿವಾಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು, ರಾಮಣ್ಣ ಮೂಲ್ಯ ಅವರ ಬಲಗೈ ಮೂಳೆ ಮುರಿದಿದೆ. ಡಿಕ್ಕಿಯ ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದಿದೆ.
ಮಂಗಳೂರು
Soujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲ್ಸಾರ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮುಂದಿನ ಎರಡು ದಿನಗಳಲ್ಲಿ ಎಸ್‌ಐಟಿ ತಂಡ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೌಜನ್ಯ ಅವರ ಮನೆ ಹಾಗೂ ಕೊಲೆ ನಡೆದ ಸ್ಥಳವನ್ನು ಪರಿಶೀಲಿಸಲಿದೆ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಲು ತಂಡ ಮುಂದಾಗಿದೆ. ಅಲ್ಲದೆ, ಸೌಜನ್ಯ ಅವರ ಪೋಷಕರು ಆರೋಪಿಸಿರುವ ವ್ಯಕ್ತಿಗಳನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಪ್ರಕರಣದ ಮರುತನಿಖೆ ನಡೆಸಿ 90 ದಿನಗಳೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಗೆ ಮಹತ್ವ ಬಂದಿದೆ. ಸುಮಾರು 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
-
ನಿಧನ ವಾರ್ತೆ7 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
Uncategorized20 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಸ್ಥಳೀಯ6 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಸ್ಥಳೀಯ7 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಮಂಗಳೂರು4 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ರಾಜಕೀಯ6 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
Uncategorized23 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ
-
ಶಿಕ್ಷಣ24 hours agoSahyadri College-ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ಹದಿನಾರನೇ ಎಂಜಿನಿಯರಿಂಗ್ ಪದವಿ ಪ್ರದಾನ ಸಮಾರಂಭ


















