ಸ್ಥಳೀಯ
Adani Group-ಅದಾನಿ ಗ್ರೂಪ್‌ಗೆ SEBIಯಿಂದ ಕ್ಲೀನ್ ಚಿಟ್; ಹಿಂಡೆನ್‌ಬರ್ಗ್ ಆರೋಪಗಳಿಗೆ ತೆರೆ
ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಅದಾನಿ ಗ್ರೂಪ್‌ಗೆ ದೊಡ್ಡ ರಿಲೀಫ್ ನೀಡಿದ್ದು, ಯುಎಸ್ ಮೂಲದ ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್‌ನ ಆರೋಪಗಳನ್ನು ನಿರಾಧಾರವೆಂದು ಘೋಷಿಸಿದೆ. ಕಳೆದ ಎರಡು ವರ್ಷಗಳಿಂದ ಈ ಗ್ರೂಪ್‌ನ ಮೇಲೆ ಭಾರೀ ಒತ್ತಡ ಇದ್ದರೂ, SEBIಯ ತೀರ್ಪು ಇದನ್ನು ತೊಡೆದುಹಾಕಿದೆ.
ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಅದಾನಿ ಗ್ರೂಪ್‌ಗೆ ದೊಡ್ಡ ರಿಲೀಫ್ ನೀಡಿದ್ದು, ಯುಎಸ್ ಮೂಲದ ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್‌ನ ಆರೋಪಗಳನ್ನು ನಿರಾಧಾರವೆಂದು ಘೋಷಿಸಿದೆ. ಕಳೆದ ಎರಡು ವರ್ಷಗಳಿಂದ ಈ ಗ್ರೂಪ್‌ನ ಮೇಲೆ ಭಾರೀ ಒತ್ತಡ ಇದ್ದರೂ, SEBIಯ ತೀರ್ಪು ಇದನ್ನು ತೊಡೆದುಹಾಕಿದೆ.
ಹಿಂಡೆನ್‌ಬರ್ಗ್‌ನ ಗಂಭೀರ ಆರೋಪಗಳು
ಜನವರಿ 2023ರಲ್ಲಿ ಅಮೆರಿಕಾದ ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಗ್ರೂಪ್ ವಿರುದ್ಧ ಮಾರುಕಟ್ಟೆ ಕುಶಲತೆ (ಸ್ಟಾಕ್ ಮ್ಯಾನಿಪ್ಯುಲೇಷನ್) ಮತ್ತು ಲೆಕ್ಕಪತ್ರ ವಂಚನೆಯ ಆರೋಪಗಳೊಂದಿಗೆ ವರದಿಯನ್ನು ಬಿಡುಗಡೆ ಮಾಡಿತ್ತು. ಈ ವರದಿಯಲ್ಲಿ ಅದಾನಿ ಷೇರುಗಳನ್ನು ಕಡಿಮೆ ಮೌಲ್ಯದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದೆ ಎಂದು ಹೇಳಿತ್ತು.
ವರದಿ ಬಿಡುಗಡೆಯ ನಂತರ ಅದಾನಿ ಗ್ರೂಪ್‌ನ 10 ಕಂಪನಿಗಳ ಷೇರುಗಳಲ್ಲಿ ತೀವ್ರ ಕುಸಿತ ಕಂಡುಬಂದಿತು. ಬಹುತೇಕ ಷೇರುಗಳು ಶೇ. 70ರಷ್ಟು ಕುಸಿದು, ಗ್ರೂಪ್‌ನ ಮಾರುಕಟ್ಟೆ ಬಂಡವಾಳೀಕರಣವು ಸುಮಾರು 20 ಲಕ್ಷ ಕೋಟಿ ರೂಪಾಯಿಗಳಿಂದ 7.50 ಲಕ್ಷ ಕೋಟಿ ರೂಪಾಯಿಗಳಿಗೆ ಸೀಮಿತವಾಯಿತು. ಇದರಿಂದ $150 ಬಿಲಿಯನ್ (ಸುಮಾರು 12.5 ಲಕ್ಷ ಕೋಟಿ ರೂ.) ನಷ್ಟ ಉಂಟಾಯಿತು.
ಅದಾನಿ ಗ್ರೂಪ್‌ನ ನಿರಾಕರಣೆ
ಆರೋಪಗಳನ್ನು ತಟಸ್ಥಪಡಿಸಿಕೊಂಡ ಅದಾನಿ ಗ್ರೂಪ್, ಇವುಗಳನ್ನು “ಆಧಾರರಹಿತ, ದುರುದ್ದೇಶಪೂರಿತ ಮತ್ತು ಕಂಪನಿಯನ್ನು ದುರ್ಬಲಗೊಳಿಸುವ ಪ್ರಯತ್ನ” ಎಂದು ನಿರಾಕರಿಸಿತು. ಹಿಂಡೆನ್‌ಬರ್ಗ್‌ನ ವರದಿಯು ತಮ್ಮ ಶಾರ್ಟ್ ಸೆಲ್ಲಿಂಗ್ (ಕಡಿಮೆ ಬೆಲೆಯಲ್ಲಿ ಖರೀದಿ ಮಾಡಿ ಹೆಚ್ಚು ಬೆಲೆಯಲ್ಲಿ ಮಾರಾಟದ ಲಾಭ) ಉದ್ದೇಶದಿಂದ ಮಾಡಿದ್ದು, ಷೇರು ಬೆಲೆ ಕುಸಿದರೆ ಅವರಿಗೆ ಆರ್ಥಿಕ ಲಾಭ ಎಂದು ದೂರಿತು.
ದೇಶಾದ್ಯಂತ ಭಾರೀ ಸದ್ದು ಮಾಡಿದ್ದ ಈ ವಿವಾದದ ಕುರಿತು ಮಾರುಕಟ್ಟೆ ನಿಯಂತ್ರಕ ಸೆಬಿ ತನಿಖೆಯನ್ನು ನಡೆಸಿತು. ಹಿಂಡೆನ್‌ಬರ್ಗ್ ಮತ್ತು ಅದಾನಿ ಗ್ರೂಪ್ ವಿರುದ್ಧ ತೀವ್ರ ತನಿಖೆ ನಡೆಸಿದ ಬಳಿಕ ಇದೀಗ ತೀರ್ಪು ನೀಡಿದ್ದು, ಹಿಂಡೆನ್‌ಬರ್ಗ್ ಆರೋಪಗಳೆಲ್ಲಾ ನಿರಾಧಾರವಾಗಿದೆ ಎಂದು ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್ ನೀಡಿದೆ.
ಜೂನ್ 2024ರಲ್ಲಿ ಸೆಬಿಯು ಹಿಂಡೆನ್‌ಬರ್ಗ್‌ಗೆ ಶೋಕಾಸ್ ನೋಟಿಸಸ್ ನೀಡಿತ್ತು. ಈ ನೋಟಿಸ್‌ನಲ್ಲಿ ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಹಾಗೂ ಶಾರ್ಟ್ ಸೆಲ್ಲಿಂಗ್ ಚಟುವಟಿಕೆಗೆ ಸಂಬಂಧಿಸಿದಂತೆ ನಿಯಮಗಳ ಸಂಭಾವ್ಯ ಉಲ್ಲಂಘನೆಗಳನ್ನು ವಿವರಿಸಿತ್ತು. ಆದ್ರೆ ಈ ನೋಟಿಸ್‌ಗೆ ಸಂಬಂಧಿಸಿದಂತೆ ಹಿಂಡೆನ್‌ಬರ್ಗ್ ತಮ್ಮ ಸಂಶೋಧನಾ ವರದಿಯು ವ್ಯಾಪಕವಾದ ಸೂಕ್ತ ಮಾಹಿತಿ ಹಾಗೂ ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ ಎಂದು ಸಮರ್ಥಿಸಿಕೊಂಡಿತ್ತು. ಅಲ್ಲದೆ ಅವರ ಶಾರ್ಟ್ ಸೆಲ್ಲಿಂಗ್ ಚಟುವಟಿಕೆಯು ಭಾರತದಲ್ಲಿನ ಎಲ್ಲಾ ಕಾನೂನು ಮತ್ತು ನಿಯಂತ್ರಕ ವಿಧಾನಗಳನ್ನು ಅನುಸರಿಸಿದೆ ಎಂದು ಹಿಂಡೆನ್‌ಬರ್ಗ್ ತನ್ನ ವಾದವನ್ನು ಮಾಡಿತ್ತು.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Uncategorized11 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized10 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized8 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized12 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized10 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized9 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















