ಅಪರಾಧ
Puttur-ಪುತ್ತೂರು: ಫೇಸ್ಬುಕ್ನಲ್ಲಿ ಬಿಜೆಪಿ ನಾಯಕರ ನಿಂದನೆ: ಬಿಜೆಪಿ ನಗರ ಮಂಡಲ ಅಧ್ಯಕ್ಷರಿಂದ ನವೀನ್ ರೈ ಪನಡ್ಕ ವಿರುದ್ದ ದೂರು
ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಫೇಸ್ಬುಕ್ನಂತಹ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿ, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರ ದೂರಿನ ಆಧಾರದ ಮೇಲೆ, ನವೀನ್ ಕೈಕಾರ ಎಂಬಾತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಫೇಸ್ಬುಕ್ನಂತಹ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿ, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರ ದೂರಿನ ಆಧಾರದ ಮೇಲೆ, ನವೀನ್ ಕೈಕಾರ ಎಂಬಾತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರು ಸಲ್ಲಿಸಿದ ದೂರಿನ ಪ್ರಕಾರ, ಸೆಪ್ಟೆಂಬರ್ 15 ರಂದು ಅವರು ಮನೆಯಲ್ಲಿದ್ದಾಗ ನವೀನ್ ರೈ ಕೈಕಾರ ಎಂಬಾತ ತನ್ನ ಫೇಸ್ಬುಕ್ ಪೇಜ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಉದ್ದೇಶಿಸಿ ಅಶ್ಲೀಲ ಮತ್ತು ಅಸಂಬದ್ಧ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಅದನ್ನು ಫೇಸ್ಬುಕ್ನಲ್ಲಿ ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Punacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪುತ್ತೂರು: ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.
ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.
ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ಅಪರಾಧ
Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.
ಅಲ್ಲದೆ, ಬಿಎನ್ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.
-
ನಿಧನ ವಾರ್ತೆ6 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಸ್ಥಳೀಯ22 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ಅಂತರ ರಾಜ್ಯ6 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ6 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಮಂಗಳೂರು22 hours agoPriyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
-
ಅಪರಾಧ6 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ರಾಜಕೀಯ6 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ4 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















