ಶಿಕ್ಷಣ
Philomina-ಕಬ್ಬಡಿ ಪಂದ್ಯಾಟ: ಫಿಲೋಮಿನಾ ಪ. ಪೂ ಕಾಲೇಜು ಬಾಲಕಿಯರ ತಂಡ ದ್ವಿತೀಯ
ಸೆಪ್ಟೆಂಬರ್ 17 ರಂದು ನಡೆದ ಪುತ್ತೂರು ತಾಲೂಕು ಮಟ್ಟದ ‘ಮ್ಯಾಟ್ ಕಬ್ಬಡಿ ಪಂದ್ಯಾಟ 2025- 26 ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕಿಯರ ವಿಭಾಗವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ, ಮಂಗಳೂರು ಹಾಗೂ ಸರಕಾರಿ ಪ.ಪೂ ಕಾಲೇಜು ಉಪ್ಪಿನಂಗಡಿ ಇದರ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 17 ರಂದು ನಡೆದ ಪುತ್ತೂರು ತಾಲೂಕು ಮಟ್ಟದ ‘ಮ್ಯಾಟ್ ಕಬ್ಬಡಿ ಪಂದ್ಯಾಟ 2025- 26 ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕಿಯರ ವಿಭಾಗವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ದ್ವಿತೀಯ ಕಲಾ ವಿಭಾಗದ ಅಸ್ಥಿಕಾ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಸುಪ್ರಿಯಾ ಇವರು ಸುಳ್ಯ ನೆಹರು ಮೆಮೋರಿಯಲ್ ಕಾಲೇಜುನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು,ಬೆಸ್ಟ್ ರೈಡರ್ ಆಗಿ ಅಸ್ಥಿಕಾ ಹೊರಹೊಮ್ಮಿದ್ದಾರೆ.
ಉಳಿದಂತೆ ಪಂದ್ಯಾಟದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಶ್ರೇಯಾ ಶ್ರೀ, ವರ್ಷಾ ಕೆ, ಪ್ರಥಮ ವಾಣಿಜ್ಯ ವಿಭಾಗದ ಮೋಕ್ಷಾ, ಶ್ರೀನಿಧಿ ಬಿಲ್ಲವ, ಪಯಸ್ವಿನಿ ಎ. ಪಿ, ಪ್ರಥಮ ವಿಜ್ಞಾನ ವಿಭಾಗದ ಹಶಿತಾ ಎನ್. ಆರ್, ಪ್ರತೀಕ್ಷಾ ಡಿ. ಯು, ಏಂಜೆಲ್. ಜೆ ಹಾಗೂ ಅಮಿಶಾ ಮೋಹನ್ ಭಾಗವಹಿಸಿದ್ದರು. ಇವರಿಗೆ ಮಹಮದ್ ಅಬೀಬ್ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ21 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು19 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು16 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ20 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ20 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ20 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ16 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ20 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ




















