ಮೈಸೂರು
Mysore-ಮೈಸೂರು: ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮ ವೀಕ್ಷಣೆಗೆ ಟಿಕೆಟ್ – ಪಾಸ್ ಕಡ್ಡಾಯ : ಜನಸಾಮಾನ್ಯರಿಗಿಲ್ಲ ಇದರ ಮಾಹಿತಿ..!
ಮೈಸೂರು ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತವು ಟಿಕೆಟ್ ಮತ್ತು ಪಾಸ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ. ಇದರಿಂದ ಸಾಮಾನ್ಯ ಜನರಿಗೆ ಕಾರ್ಯಕ್ರಮಗಳನ್ನು ವೀಕ್ಷಿಸುವುದು ಕಷ್ಟಕರವಾಗಿದೆ. ಹಣವಂತರು ಮತ್ತು ಪ್ರಭಾವಿಗಳಿಗೆ ಮಾತ್ರ ಪ್ರವೇಶ ಸೀಮಿತವಾಗಿದ್ದು, ಹೊರ ಜಿಲ್ಲೆಗಳಿಂದ ಆಗಮಿಸುವ ಸಾವಿರಾರು ಜನರಿಗೆ ತೊಂದರೆಯಾಗಲಿದೆ.
ಮೈಸೂರು, ಸೆ. 20: ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತವು ಟಿಕೆಟ್ ಮತ್ತು ಪಾಸ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ. ಇದರಿಂದ ಸಾಮಾನ್ಯ ಜನರಿಗೆ ಕಾರ್ಯಕ್ರಮಗಳನ್ನು ವೀಕ್ಷಿಸುವುದು ಕಷ್ಟಕರವಾಗಿದೆ. ಹಣವಂತರು ಮತ್ತು ಪ್ರಭಾವಿಗಳಿಗೆ ಮಾತ್ರ ಪ್ರವೇಶ ಸೀಮಿತವಾಗಿದ್ದು, ಹೊರ ಜಿಲ್ಲೆಗಳಿಂದ ಆಗಮಿಸುವ ಸಾವಿರಾರು ಜನರಿಗೆ ತೊಂದರೆಯಾಗಲಿದೆ.
ನಾಡಹಬ್ಬ ದಸರಾ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ನಡೆಯಲಿದೆ. ಚಾಮುಂಡಿಬೆಟ್ಟದ ಉದ್ಘಾಟನಾ ಸಮಾರಂಭಕ್ಕೆ ಮೊದಲ ಬಾರಿಗೆ ಪಾಸ್ ಕಡ್ಡಾಯಗೊಳಿಸಲಾಗಿದೆ. ಆದರೆ, ಪಾಸ್‌ಗಳನ್ನು ಎಲ್ಲಿ, ಯಾರಿಗೆ, ಯಾವ ಮಾನದಂಡದಲ್ಲಿ ವಿತರಿಸಲಾಗುವುದು ಎಂಬ ಮಾಹಿತಿಯನ್ನು ಜಿಲ್ಲಾಡಳಿತ ಇನ್ನೂ ಸ್ಪಷ್ಟಪಡಿಸಿಲ್ಲ, ಇದು ಗೊಂದಲಕ್ಕೆ ಕಾರಣವಾಗಿದೆ.
ಜಂಬೂಸವಾರಿ ಮತ್ತು ಇತರ ಕಾರ್ಯಕ್ರಮಗಳಿಗೆ ಟಿಕೆಟ್-ಪಾಸ್
ಅಂಬಾವಿಲಾಸ ಅರಮನೆ ಆವರಣದಲ್ಲಿ ನಡೆಯುವ ಜಂಬೂಸವಾರಿಯನ್ನು ವೀಕ್ಷಿಸಲು ಗೋಲ್ಡ್ ಕಾರ್ಡ್, ಜಂಬೂಸವಾರಿ ಟಿಕೆಟ್ ಅಥವಾ ಪಾಸ್ ಹೊಂದಿರುವವರಿಗೆ ಮಾತ್ರ ಅವಕಾಶವಿದೆ. ಈ ಬಾರಿ ಇತರ ಕಾರ್ಯಕ್ರಮಗಳಿಗೂ ಪಾಸ್ ಕಡ್ಡಾಯಗೊಳಿಸಲಾಗಿದೆ. ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ mysoredasara.gov.in ಜಾಲತಾಣದ ಮೂಲಕ ಖರೀದಿಸಬಹುದು. ಆದರೆ, ಪಾಸ್‌ಗಳ ಕುರಿತು ಸ್ಪಷ್ಟ ಮಾಹಿತಿ ಲಭ್ಯವಿಲ್ಲ.
ಡ್ರೋನ್ ಷೋ, ಪಂಜಿನ ಕವಾಯತಿಗೂ ಟಿಕೆಟ್
ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆಪ್ಟೆಂಬರ್ 27ರಂದು ಸಂಜೆ 4ಕ್ಕೆ ವೈಮಾನಿಕ ಪ್ರದರ್ಶನ, ಸೆಪ್ಟೆಂಬರ್ 28 ಮತ್ತು 29ರಂದು ಸಂಜೆ 6ಕ್ಕೆ ಡ್ರೋನ್ ಷೋ, ಅಕ್ಟೋಬರ್ 1ರಂದು ಸಂಜೆ 4ಕ್ಕೆ ವೈಮಾನಿಕ ಪ್ರದರ್ಶನ, ಡ್ರೋನ್ ಷೋ, ಪಂಜಿನ ಕವಾಯತು ಪೂರ್ವಾಭ್ಯಾಸ, ಮತ್ತು ಅಕ್ಟೋಬರ್ 2ರಂದು ಸಂಜೆ 6ಕ್ಕೆ ಪಂಜಿನ ಕವಾಯತು ಹಾಗೂ ಡ್ರೋನ್ ಷೋ ನಡೆಯಲಿದೆ. ಡ್ರೋನ್ ಷೋಗೆ ₹1,000 ಮತ್ತು ಪಂಜಿನ ಕವಾಯತಿಗೆ ₹1,500 ಟಿಕೆಟ್ ದರ ನಿಗದಿಯಾಗಿದೆ.
ಯುವ ದಸರಾ ಮತ್ತು ಇತರ ಕಾರ್ಯಕ್ರಮಗಳಿಗೆ ಟಿಕೆಟ್
ಉತ್ತನಹಳ್ಳಿಯಲ್ಲಿ ಸೆಪ್ಟೆಂಬರ್ 23ರಿಂದ 27ರವರೆಗೆ ನಡೆಯುವ ‘ಯುವ ದಸರಾ’ಗೆ ₹5,000 ಮತ್ತು ₹2,500 ದರದ ಟಿಕೆಟ್‌ಗಳನ್ನು ‘ಬುಕ್ ಮೈ ಷೋ’ ಮೂಲಕ ಖರೀದಿಸಬಹುದು. ಕುಪ್ಪಣ್ಣ ಉದ್ಯಾನದ ‘ಫಲಪುಷ್ಪ ಪ್ರದರ್ಶನ’ ಮತ್ತು ‘ದಸರಾ ವಸ್ತುಪ್ರದರ್ಶನ’ಗೂ ಟಿಕೆಟ್ ವ್ಯವಸ್ಥೆ ಇದೆ. ಆದರೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ರೈತ ದಸರಾ, ಮಹಿಳಾ ದಸರಾ, ಯೋಗ ದಸರಾ, ಕವಿಗೋಷ್ಠಿ, ಕನ್ನಡ ಪುಸ್ತಕ ಮೇಳ, ಕ್ರೀಡಾಕೂಟ, ಮತ್ತು ಕುಸ್ತಿ ಪಂದ್ಯಗಳಿಗೆ ಉಚಿತ ಪ್ರವೇಶವಿದೆ.
ಜಿಲ್ಲಾಧಿಕಾರಿಯ ಹೇಳಿಕೆ
“ಸೀಮಿತ ಆಸನಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಪಾಸ್ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ. ಟಿಕೆಟ್ ಖರೀದಿಸುವವರಿಗೂ ಪ್ರವೇಶ ಸಿಗಲಿದೆ,” ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಟಿಕೆಟ್ ದರಗಳು
ಗೋಲ್ಡ್ ಕಾರ್ಡ್: ₹6,500
ಜಂಬೂಸವಾರಿ (ಅರಮನೆ ಆವರಣ): ₹3,500
ಪಂಜಿನ ಕವಾಯತು: ₹1,500
ಯುವ ದಸರಾ: ₹5,000, ₹2,000
ಡ್ರೋನ್ ಷೋ: ₹1,000
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಅಪರಾಧ
Case filed-ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾ ಕಲಾ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, ಸೆಪ್ಟೆಂಬರ್ 18ರಂದು ಟಿ.ನರಸೀಪುರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ನೂರಾರು ಜನರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಕ್ಯಾಮೆರಾ-ಮೈಕ್‌ಗಳ ಮುಂದೆ ನಿಂತು ದಲಿತ ಸಮುದಾಯವನ್ನು ಹೀಯಾಳಿಸುವ ಮತ್ತು ಕೀಳಾಗಿ ಚಿತ್ರಿಸುವ ಉದ್ದೇಶದಿಂದ ಅತ್ಯಂತ ಅವಹೇಳನಕಾರಿ ಹಾಗೂ ನಿಂದನಾತ್ಮಕ ಭಾಷಣ ಮಾಡಿದ್ದಾರೆ.
ತಮ್ಮ ಭಾಷಣದಲ್ಲಿ ದಲಿತ ಸಮುದಾಯದ ಕಾರ್ಯಕರ್ತರನ್ನು ನೇರವಾಗಿ ಗುರಿಯಾಗಿಸಿ, “ನೀವು ಕೇವಲ ನೀಲಿ ಶಾಲು ಹೊದ್ದು ನಾವು ಏನೇ ಮಾಡಿದರೂ ಅಡ್ಡ ಬಂದು ನಿಲ್ಲುತ್ತೀರಿ. ನಿಮಗೆ ಅಂಬೇಡ್ಕರ್ ಅವರ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಓದಿ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿತರು ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಬದಲಿಗೆ ಶೋಷಿತರ ಹಕ್ಕುಗಳಿಗಾಗಿ ಹೋರಾಡುವ ದಲಿತ ಸಂಘಟನೆಯ ಪದಾಧಿಕಾರಿಗಳನ್ನು “ಹಣದ ಆಸೆಗಾಗಿ ಅಥವಾ ವೈಯಕ್ತಿಕ ಲಾಭಕ್ಕಾಗಿ ಹೋರಾಟ ಮಾಡುವವರು” ಎಂದು ಸಾರಾಸಗಟಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದು ಸಂಘಟನೆಯ ನೈತಿಕತೆಯನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಉದ್ದೇಶಪೂರ್ವಕ ಜಾತಿ ನಿಂದನೆ ಎಂದು ದೂರುದಾರರು ತಿಳಿಸಿದ್ದಾರೆ.
ಇದಲ್ಲದೆ, ಅವರು ಒಬ್ಬ ಪೊಲೀಸ್ ಅಧಿಕಾರಿಯ ಜಾತಿಯನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ, “ನಿಮ್ಮ ಜಾತಿಯ ಅಧಿಕಾರಿ ಎಂಬ ಒಂದೇ ಕಾರಣಕ್ಕೆ ನೀವು ಅವರನ್ನು ಬೆಂಬಲಿಸುತ್ತೀರಿ ಮತ್ತು ರಕ್ಷಣೆಗೆ ನಿಲ್ಲುತ್ತೀರಿ. ಆತ ಒಬ್ಬ ಕ್ಷುಲ್ಲಕ, ಕಳಪೆ ವ್ಯಕ್ತಿತ್ವದ ಇನ್ಸ್‌ಪೆಕ್ಟರ್” ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಧನಂಜಯರನ್ನು ಜಾತಿ ಹೆಸರಿನಲ್ಲಿ ನಿಂದಿಸಿ, ಬೆದರಿಕೆ ಹಾಗೂ ತುಚ್ಛವಾಗಿ ಮಾತನಾಡಿದ್ದಾರೆ. ಆ ಮೂಲಕ ಸಾರ್ವಜನಿಕವಾಗಿ ಅಪಮಾನಗೊಳಿಸಿ, ಜಾತಿ ವ್ಯವಸ್ಥೆಯನ್ನು ಕೆರಳಿಸುವ ಮತ್ತು ಸಮಾಜದಲ್ಲಿ ವಿವಿಧ ಜಾತಿಗಳ ನಡುವೆ ತಾರತಮ್ಯ, ದ್ವೇಷ ಹಾಗೂ ನಾಗರಿಕ ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ತೀವ್ರ ಪ್ರಯತ್ನ ಮಾಡಿದ್ದಾರೆ ಎಂದು ದೂರಲಾಗಿದೆ.
ಈ ಇಡೀ ಕೃತ್ಯವು ಆಕಸ್ಮಿಕವಾಗಿ ನಡೆದದ್ದಲ್ಲ. ಮುಖ್ಯ ಆರೋಪಿತರು ಹಾಗೂ ಶೋಭಾ ಯಾತ್ರೆಯ ಮುಖ್ಯ ಆಯೋಜಕರು (ಸಹ ಆರೋಪಿಗಳು) ಒಟ್ಟಾಗಿ ಸೇರಿ, ಪಟ್ಟಣದ ಸಾಮಾಜಿಕ ಶಾಂತಿ ಮತ್ತು ಸೌಹಾರ್ದ ಕೆಡಿಸುವ ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವ ಉದ್ದೇಶದಿಂದಲೇ ಮೊದಲೇ ಯೋಜಿತ ಸಂಚು ರೂಪಿಸಿ ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಕ್ತವಾಗಿ ಅವಕಾಶ ಮಾಡಿಕೊಟ್ಟು, ಅದಕ್ಕೆ ಕುಮ್ಮಕ್ಕು ನೀಡಿ ಸಹಕರಿಸಿರುವ ಆಯೋಜಕರು ಸಹ ಈ ಅಪರಾಧದಲ್ಲಿ ಸಮಾನ ಭಾಗಿಗಳು ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು
Pramodadevi-ದಸರಾ ವೇಳೆ ಕಂಬಳ ಆಯೋಜನೆ ಅಗತ್ಯವಿಲ್ಲ; ಕರಾವಳಿಯ ಕ್ರೀಡೆಗೆ ಪ್ರತ್ಯೇಕ ಮಹತ್ವ ಸಿಗಲಿ: ಪ್ರಮೋದಾದೇವಿ
ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಕಂಬಳಕ್ಕೆ ಕರಾವಳಿ ಭಾಗದಲ್ಲಿ ತನ್ನದೇ ಆದ ವಿಶಿಷ್ಟ ಪರಂಪರೆ ಹಾಗೂ ಮಹತ್ವವಿದೆ. ಹೀಗಾಗಿ ದಸರಾ ಉತ್ಸವದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಿದರೆ ಕ್ರೀಡೆಗೆ ಇನ್ನಷ್ಟು ಮಹತ್ವ ಹಾಗೂ ಗಮನ ಸಿಗಲಿದೆ. ಆದರೆ ದಸರಾ ಉತ್ಸವದ ಭಾಗವಾಗಿ ಆಯೋಜಿಸಿದರೆ ಕಂಬಳಕ್ಕೆ ಸಿಗಬೇಕಾದ ಪ್ರತ್ಯೇಕ ಗಮನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
-
ಮಂಗಳೂರು10 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ14 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ15 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್16 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್8 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು9 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ8 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಸಿನೆಮಾ14 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು


















