ಬೆಂಗಳೂರು
ಧರ್ಮಸ್ಥಳ ಪ್ರಕರಣ: ಜನಾರ್ದನ ರೆಡ್ಡಿ ವಿರುದ್ಧ ಸೆಂಥಿಲ್ ಕೊಟ್ಟ ದೂರನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾಯಾಲಯ
ಬೆಂಗಳೂರು: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಆಧಾರರಹಿತ ಹೇಳಿಕೆಗಳನ್ನು ನೀಡಿ ಮಾನಹಾನಿಯುಂಟು ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ತಮಿಳುನಾಡಿನ ತಿರುವಳ್ಳೂರು ಸಂಸದ ಸಸಿಕಾಂತ್ ಸೆಂಥಿಲ್ ಸಲ್ಲಿಸಿರುವ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ.
ಮಾಜಿ ಐಎಎಸ್ ಅಧಿಕಾರಿಯೂ ಆದ ಸಸಿಕಾಂತ್ ಸೆಂಥಿಲ್ ಸಲ್ಲಿಸಿದ್ದ ದೂರಿನ ಸಂಬಂಧ ಕಾಗ್ನಿಜೆನ್ಸ್ (ವಿಚಾರಣೆಗೆ ಪರಿಗಣಿಸುವ) ತೆಗೆದುಕೊಳ್ಳುವ ಕುರಿತು ವಾದ ಆಲಿಸಿ ಕಾಯ್ದಿರಿಸಿದ್ದ ಆದೇಶವನ್ನು ಬೆಂಗಳೂರಿನ 42ನೇ ಎಸಿಎಂಎಂ (ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಸ್ಥಾಪಿತಗೊಂಡಿರುವ) ವಿಶೇಷ ಮ್ಯಾಜಿಸ್ಟ್ರೇಟ್ ಕೆ.ಎನ್. ಶಿವಕುಮಾರ್ ಅವರು ಶನಿವಾರ ಪ್ರಕಟಿಸಿದರು.
ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿರುವುದಾಗಿ ತಿಳಿಸಿದ ನ್ಯಾಯಾಲಯ, ದೂರುದಾರರ ಸ್ವಯಂ ಹೇಳಿಕೆ ದಾಖಲಿಸಲು ವಿಚಾರಣೆಯನ್ನು ಸೆಪ್ಟೆಂಬರ್ 29ಕ್ಕೆ ಮುಂದೂಡಿತು.
ಸಸಿಕಾಂತ್ ಸೆಂಥಿಲ್ ಪರ ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಸಂಜಯ ಯಾದವ್ ಹಾಜರಿದ್ದರು.
ಗಾಲಿ ಜನಾರ್ದನ ರೆಡ್ಡಿ ಅವರು ರಾಜಕೀಯ ದುರುದ್ದೇಶದಿಂದ ದೂರುದಾರರ ಹೆಸರನ್ನು ಉಲ್ಲೇಖಿಸಿ ಆಧಾರಹಿತ ಸುಳ್ಳು ಆರೋಪಗಳನ್ನು ಮಾಡಿದ್ದಾರೆ.
ಸೆಂಥಿಲ್ ಅವರು ಈ ಹಿಂದೆ ಬಳ್ಳಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಶಾಸಕರಾಗಿದ್ದರು. ಬಳ್ಳಾರಿಯಲ್ಲಿ ರೆಡ್ಡಿ ಎಸಗಿದ್ದ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಇಸಿ ಮತ್ತು ಸಿಬಿಐಗೆ ನೆರವು ನೀಡಿದ್ದ ಸೆಂಥಿಲ್, ಹಲವು ಕ್ರಮಗಳನ್ನು ಬಯಲು ಮಾಡಿದ್ದರು. ಇದರಿಂದ, ಜನಾರ್ದನ ರೆಡ್ಡಿ ದ್ವೇಷ ಸಾಧಿಸುತ್ತಿದ್ದರು. 2025ರ ಆಗಸ್ಟ್ 18ರಿಂದ 21ರ ನಡುವೆ ರಾಜ್ಯದ ಹಲವು ಪ್ರಾದೇಶಿಕ ಸುದ್ದಿವಾಹಿನಿಗಳಿಗೆ ಹೇಳಿಕೆ ನೀಡಿರುವ ರೆಡ್ಡಿ, ಸಸಿಕಾಂತ್ ಅವರನ್ನು ‘ಹಿಂದೂ ವಿರೋಧಿ’, ಧರ್ಮಸ್ಥಳ ಪ್ರಕರಣದ ಹಿಂದಿನ ‘ಮಾಸ್ಟರ್ ಮೈಂಡ್’ ಹಾಗೂ “ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಖ್ಯಾತಿ ತರಲು ಕೆಲ ವ್ಯಕ್ತಿಗಳ ಮೂಲಕ ‘ಪ್ರಚೋದನೆ’ ನೀಡುತ್ತಿದ್ದಾರೆ” ಎಂದು ಆಧಾರರಹಿತ ಆರೋಪ ಮಾಡಿದ್ದಾರೆ. ಈ ಹೇಳಿಕೆಗಳನ್ನು ಕೆಲ ಮುದ್ರಣ ಮಾಧ್ಯಮಗಳೂ ವರದಿ ಮಾಡಿವೆ ಎಂದು ದೂರಿನಲಿ ಉಲೇಖಿಸಲಾಗಿದೆ.
ಆರೋಪಿಯ ದುರುದ್ದೇಶಪೂರಿತ ಹೇಳಿಕೆಗಳಿಂದ ದೂರುದಾರರ ಖ್ಯಾತಿಗೆ ಹಾಗೂ ಸಮಾಜದಲ್ಲಿ ಅವರ ಸ್ಥಾನಮಾನಕ್ಕೆ ತೀವ್ರ ಹಾನಿಯುಂಟಾಗಿದೆ. ಜನರು ಅವರನ್ನು ಅನುಮಾನದ ದೃಷ್ಟಿಯಿಂದ ನೋಡುತ್ತಿದ್ದು, ಇದರಿಂದ, ದೂರುದಾರರು ತೀವ್ರ ಖಿನ್ನತೆಗೆ ಒಳಗಾಗಿದ್ದಾರೆ. ಸಂಸತ್ ಸದಸ್ಯರಾಗಿರುವ ಅವರ ಕೆಲಸದ ಮೇಲೂ ಪರಿಣಾಮ ಬೀರಿದೆ. ಆದ್ದರಿಂದ, ದೂರು ದಾಖಲಿಸಿಕೊಂಡು ಆರೋಪಿಯ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 356 (1) ಮತ್ತು 356(2) ರ ಅಡಿಯಲ್ಲಿ ಕ್ರಮ ಜರುಗಿಸಬೇಕೆಂದು ಸಂಸದ ಸಸಿಕಾಂತ್ ಸೆಂಥಿಲ್ ಮನವಿ ಮಾಡಿದ್ದಾರೆ.
ಬಿಗ್ ನ್ಯೂಸ್
High Court notice-ಜಾರಿಯಾಗದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಧನಕೀರ್ತಿ ಅರಿಗ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್. ವಿನಯ್ ವಾದ ಮಂಡಿಸಿ, ಪ್ರಕರಣದ 10ನೇ ಪ್ರತಿವಾದಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಈಗಾಗಲೇ ಗಡೀಪಾರು ಆದೇಶ ಹೊರಡಿಸಲಾಗಿದೆ. ಆದರೆ, ಈ ಆದೇಶವನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅದನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ಪ್ರಕರಣದ 1ರಿಂದ 9ನೇ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಎಡಿಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.
ಬಿಗ್ ನ್ಯೂಸ್
Rakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್‌ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಸೂಚಿಸಿದ್ದಾರೆ.
ಬೆಂಗಳೂರು, ನ.23: ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಸೂಚಿಸಿದ್ದಾರೆ.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕೇಶ್ ಶೆಟ್ಟಿ ಹಾಗೂ ಸುದ್ದಿವಾಹಿನಿಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್‌ಬಾಬು ಸರ್ಕಾರಕ್ಕೆ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಈ ಮನವಿಯ ಬೆನ್ನಲ್ಲೇ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ಪತ್ರ ಬರೆದಿದ್ದಾರೆ.
ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಸಚಿವರು, ಆಡಳಿತ ಪಕ್ಷದ ಶಾಸಕರು ಹಾಗೂ ಪ್ರತಿಪಕ್ಷದ ಶಾಸಕರಿಗೆ ಹಣದ ಆಮಿಷವೊಡ್ಡಿ ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವ ಮೂಲಕ ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಸುರೇಶ್‌ಬಾಬು ತಮ್ಮ ಪತ್ರದಲ್ಲಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ರಾಕೇಶ್ ಶೆಟ್ಟಿ ಹಾಗೂ ಸುದ್ದಿವಾಹಿನಿಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದರು.
ಸುರೇಶ್‌ಬಾಬು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ನಿರ್ದೇಶನ ನೀಡಿದ್ದಾರೆ.
ಬಿಗ್ ನ್ಯೂಸ್
Railway-ರೈಲ್ವೆ ಗುಂಪು ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ: ಬರ್ತ್‌ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್‌ನಲ್ಲಿ ಬರ್ತ್‌ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.
ಬೆಂಗಳೂರು: ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್‌ನಲ್ಲಿ ಬರ್ತ್‌ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.
2026ರ ನವೆಂಬರ್ 18ರಂದು ನೈಋತ್ಯ ರೈಲ್ವೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದರ ಅನ್ವಯ ಪ್ರಮುಖ ಕಾಯ್ದಿರಿಸುವಿಕೆ ಕೇಂದ್ರಗಳಲ್ಲಿ ಗುಂಪು ಬುಕಿಂಗ್‌ಗೆ ಬೆಳಗ್ಗೆ 9 ಗಂಟೆಯಿಂದ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಪ್ರಯಾಣಿಕರ ಮುಂಗಡ ಕಾಯ್ದಿರಿಸುವಿಕೆ ಆರಂಭವಾದ ಒಂದು ಗಂಟೆಯ ಬಳಿಕ ಈ ಸೌಲಭ್ಯ ಲಭ್ಯವಾಗಲಿದೆ.
ನವೆಂಬರ್ 19ರಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾದ ಸುತ್ತೋಲೆಯ ಪ್ರಕಾರ, ಮದುವೆ ಸಮಾರಂಭಗಳು, ಹಬ್ಬಗಳು, ಯಾತ್ರೆಗಳು, ಕ್ರೀಡಾ ತಂಡಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಇತರ ಸಮಾನ ಉದ್ದೇಶಗಳಿಗಾಗಿ ಗುಂಪಾಗಿ ಪ್ರಯಾಣಿಸುವವರು ನಿಲ್ದಾಣದ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಬೃಹತ್ ಪ್ರಮಾಣದ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಈ ಸೌಲಭ್ಯ ಖಚಿತಗೊಂಡ (Confirmed), ಆರ್‌ಎಸಿ (RAC) ಹಾಗೂ ಕಾಯುವ ಪಟ್ಟಿಯ (Waitlisted) ಟಿಕೆಟ್‌ಗಳಿಗೂ ಅನ್ವಯಿಸುತ್ತದೆ.
ಗುಂಪು ಬುಕಿಂಗ್‌ಗೆ ಬರ್ತ್‌ಗಳ ಸಂಖ್ಯೆಯ ಮಿತಿ ಇಲ್ಲ
ಪರಿಷ್ಕೃತ ಮಾರ್ಗಸೂಚಿಯ ಪ್ರಮುಖ ಬದಲಾವಣೆಯೆಂದರೆ, ಗುಂಪು ಕಾಯ್ದಿರಿಸುವಿಕೆಯಲ್ಲಿ ಅನುಮತಿಸಲಾದ ಬರ್ತ್‌ಗಳು ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಈ ಹಿಂದೆ ಇದ್ದ ನಿರ್ದಿಷ್ಟ ಸಂಖ್ಯೆಯ ಮಿತಿಯನ್ನು ತೆಗೆದುಹಾಕಲಾಗಿದೆ. ಮಂಗಳೂರು ಸೇರಿದಂತೆ ಪ್ರಮುಖ ನಿಲ್ದಾಣಗಳ ಕಾಯ್ದಿರಿಸುವಿಕೆ ಅಧಿಕಾರಿಗಳಿಗೆ ಇಂತಹ ಗುಂಪು ಬುಕಿಂಗ್‌ಗಳನ್ನು ಅನುಮೋದಿಸುವ ಅಧಿಕಾರವನ್ನೂ ನೀಡಲಾಗಿದೆ.
ಗುಂಪು ಟಿಕೆಟ್‌ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕಾರಿಗಳಿಗೆ ನೇರ ಅರ್ಜಿ: ಗುಂಪು ಬುಕಿಂಗ್‌ಗಾಗಿ ಅರ್ಜಿದಾರರು ಸಂಬಂಧಪಟ್ಟ ನಿಲ್ದಾಣದ ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು (CRS) ಅಥವಾ ನಿಲ್ದಾಣ ವ್ಯವಸ್ಥಾಪಕರಿಗೆ (SM) ನೇರವಾಗಿ ಅರ್ಜಿ ಸಲ್ಲಿಸಬೇಕು. ಇವರಿಗೆ ಗುಂಪು ಕಾಯ್ದಿರಿಸುವಿಕೆಯನ್ನು ಅನುಮೋದಿಸುವ ಅಧಿಕಾರ ನೀಡಲಾಗಿದೆ.
- ಪ್ರಯಾಣಿಕರ ಸಂಖ್ಯೆಗೆ ಮಿತಿ ಇಲ್ಲ: ಗುಂಪು ಬುಕಿಂಗ್‌ನಲ್ಲಿ ಬರ್ತ್ ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಎಲ್ಲಾ ಪ್ರಯಾಣ ದರ್ಜೆಗಳಲ್ಲೂ ಗುಂಪು ಕಾಯ್ದಿರಿಸುವಿಕೆ ಮಾಡಿಕೊಳ್ಳಬಹುದು.
- ಟ್ರಾವೆಲ್ ಏಜೆನ್ಸಿಗಳ ಮೂಲಕ ಅರ್ಜಿ ಸಲ್ಲಿಸುವಂತಿಲ್ಲ: ವಿದೇಶಿ ಪ್ರವಾಸಿಗರು ಹಾಗೂ ಅನಿವಾಸಿ ಭಾರತೀಯರ (NRI) ಪರವಾಗಿ ಸಲ್ಲಿಸುವ ಅರ್ಜಿಗಳನ್ನು ಹೊರತುಪಡಿಸಿ, ಇತರ ಗುಂಪು ಬುಕಿಂಗ್ ಅರ್ಜಿಗಳನ್ನು ಸ್ಥಳೀಯ ಪ್ರವಾಸ ಸಂಸ್ಥೆಗಳ ಮೂಲಕ ಸಲ್ಲಿಸಲು ಅವಕಾಶವಿಲ್ಲ. ಅರ್ಜಿದಾರರು ನೇರವಾಗಿ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಬೇಕು.
- ಪ್ರಯಾಣದ ಉದ್ದೇಶ ಕಡ್ಡಾಯ: ಗುಂಪು ಪ್ರಯಾಣದ ಉದ್ದೇಶವನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಪ್ರಯಾಣದ ಉದ್ದೇಶವನ್ನು ತಿಳಿಸದಿದ್ದರೆ ಅನುಮತಿ ನೀಡಲಾಗುವುದಿಲ್ಲ.
- ಪ್ರಯಾಣಿಕರ ವಿವರ ಸಲ್ಲಿಕೆ: ಅರ್ಜಿ ಸಲ್ಲಿಸುವಾಗ ಗುಂಪಿನಲ್ಲಿರುವ ಎಲ್ಲಾ ಪ್ರಯಾಣಿಕರ ಹೆಸರು, ವಯಸ್ಸು, ಲಿಂಗ, ವಿಳಾಸ ಹಾಗೂ ಪ್ರಯಾಣದ ಉದ್ದೇಶದ ವಿವರಗಳನ್ನು ಒದಗಿಸಬೇಕು.
- ಹಿಂತಿರುಗುವ ಪ್ರಯಾಣಕ್ಕೂ ಅವಕಾಶ: ಹಿಂದಿರುಗುವ ಪ್ರಯಾಣಕ್ಕೂ ಅದೇ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಗುಂಪು ಬುಕಿಂಗ್‌ಗೆ ಅನುಮತಿ ಪಡೆಯಬಹುದು. ಆದರೆ, ಹಿಂದಿರುಗುವ ಪ್ರಯಾಣವನ್ನು ಪ್ರತ್ಯೇಕ ಕಾಯ್ದಿರಿಸುವಿಕೆಯಾಗಿ ಪರಿಗಣಿಸಲಾಗುತ್ತದೆ.
- ದಾಖಲೆಗಳ ನಿರ್ವಹಣೆ: ಅನುಮೋದಿಸಲಾದ ಎಲ್ಲಾ ಗುಂಪು ಬುಕಿಂಗ್‌ಗಳ ಪ್ರತ್ಯೇಕ ದಾಖಲೆ ಪುಸ್ತಕವನ್ನು ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು ಅಥವಾ ನಿಲ್ದಾಣ ವ್ಯವಸ್ಥಾಪಕರು ನಿರ್ವಹಿಸಬೇಕು. ಅರ್ಜಿ ನಮೂನೆ ಹಾಗೂ ಪ್ರಯಾಣಿಕರ ಪಟ್ಟಿಯ ಪ್ರತಿ ಪುಟಕ್ಕೂ ಮೊಹರು ಮತ್ತು ಸಹಿ ಹಾಕಬೇಕು.
- ದುರುಪಯೋಗ ತಡೆಯಲು ಎಚ್ಚರಿಕೆ
- ಗುಂಪು ಬುಕಿಂಗ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು ಬರ್ತ್‌ಗಳನ್ನು ಅಕ್ರಮವಾಗಿ ಕಾಯ್ದಿರಿಸುವುದಕ್ಕೆ ಅವಕಾಶ ನೀಡದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ನೈಜ ಗುಂಪು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವುದು ಹಾಗೂ ಕಾಯ್ದಿರಿಸುವಿಕೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಈ ಪರಿಷ್ಕೃತ ನಿಯಮಗಳ ಉದ್ದೇಶವಾಗಿದೆ.
- ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ (ಪ್ರಯಾಣಿಕರ ಸೇವೆಗಳು) ಪಿ. ಕಿರಣ್ ಕುಮಾರ್ ಅವರು ನವೆಂಬರ್ 18ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಹೊಸ ಮಾರ್ಗಸೂಚಿಗಳನ್ನು ವಿವರಿಸಿದ್ದಾರೆ. ಸಾಮಾನ್ಯ ಮುಂಗಡ ಕಾಯ್ದಿರಿಸುವಿಕೆ ಕೌಂಟರ್‌ಗಳು ಆರಂಭವಾದ ಒಂದು ಗಂಟೆಯ ಬಳಿಕ, ಅಂದರೆ ಬೆಳಗ್ಗೆ 9 ಗಂಟೆಯಿಂದ ಗುಂಪು ಕಾಯ್ದಿರಿಸುವಿಕೆಗಳನ್ನು ಸ್ವೀಕರಿಸಬಹುದು. ಪ್ರತ್ಯೇಕ ಗುಂಪು ಬುಕಿಂಗ್ ಕೌಂಟರ್ ಇದ್ದಲ್ಲಿ ಅಲ್ಲಿಯೇ ಅಥವಾ ಸಾಮಾನ್ಯ ಕೌಂಟರ್‌ಗಳ ಮೂಲಕವೂ ಅರ್ಜಿ ಸಲ್ಲಿಸಲು ವ್ಯವಸ್ಥೆ ಕಲ್ಪಿಸಬಹುದು ಎಂದು ಸೂಚಿಸಲಾಗಿದೆ.
-
ಶಿಕ್ಷಣ20 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು20 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್22 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್‌ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು21 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ4 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಅಪರಾಧ20 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ19 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಮಂಗಳೂರು3 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















