ಮೈಸೂರು
Mysore-ಮೈಸೂರು : ಚಾಮುಂಡೇಶ್ವರಿ ಸನ್ನಿಧಿಯಲ್ಲಿ 415ನೇ ದಸರಾ ಮಹೋತ್ಸವಕ್ಕೆ ಇಂದಿನಿಂದ ವೈಭವದ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸೆಪ್ಟೆಂಬರ್ 22ರ ಸೋಮವಾರ ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 415ನೇ ದಸರಾ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ಮುಂದಿನ 11 ದಿನಗಳ ಕಾಲ ನಗರದಾದ್ಯಂತ ವಿವಿಧ ಉಪ ಸಮಿತಿಗಳಿಂದ ಆಯೋಜಿತ ಕಾರ್ಯಕ್ರಮಗಳು ಕರ್ನಾಟಕದ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಅನಾವರಣಗೊಳಿಸಲಿವೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸೆಪ್ಟೆಂಬರ್ 22ರ ಸೋಮವಾರ ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 415ನೇ ದಸರಾ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ಮುಂದಿನ 11 ದಿನಗಳ ಕಾಲ ನಗರದಾದ್ಯಂತ ವಿವಿಧ ಉಪ ಸಮಿತಿಗಳಿಂದ ಆಯೋಜಿತ ಕಾರ್ಯಕ್ರಮಗಳು ಕರ್ನಾಟಕದ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಅನಾವರಣಗೊಳಿಸಲಿವೆ.
ವೈಭವದ ಉದ್ಘಾಟನೆ:
ಈ ಬಾರಿಯ ದಸರಾ ಉತ್ಸವಕ್ಕೆ ಮೈಸೂರು ನಗರಿ ನವವಧುವಿನಂತೆ ಸಿಂಗಾರಗೊಂಡಿದ್ದು, ಬುಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ಕಾಕ್ ಅವರು ಬೆಳಿಗ್ಗೆ 10:10 ರಿಂದ 10:40ರ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಉದ್ಘಾಟನ ಸಮಾರಂಭವು ಸ್ಥಳೀಯ ಶಾಸಕ ಜಿ.ಟಿ. ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಜಿಲ್ಲಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯ ಬಳಿಕ, ವಿಶೇಷ ವೇದಿಕೆಯಲ್ಲಿ ಬೆಳ್ಳಿರಥದಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿಗೆ ಬಾನು ಮುಷ್ಕಾಕ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವವನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.
ವಿವಿಧ ಕಾರ್ಯಕ್ರಮಗಳಿಗೆ ಚಾಲನೆ:
ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನಡೆದೊಡನೆ, ಮೈಸೂರಿನಾದ್ಯಂತ ದಸರಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು. ಸೆಪ್ಟೆಂಬರ್ 22ರಂದು ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ದಸರಾ ಕುಸ್ತಿ ಪಂದ್ಯಾವಳಿ, ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ, ಪುಸ್ತಕ ಮೇಳ, ವಿದ್ಯುತ್ ದೀಪಾಲಂಕಾರ ಮತ್ತು ದಸರಾ ವಸ್ತುಪ್ರದರ್ಶನಗಳು ಉದ್ಘಾಟನೆಗೊಂಡವು. ಈ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದರು. ಜೊತೆಗೆ, ಅರಮನೆ ಅಂಗಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು, ಇದರಲ್ಲಿ ಪಂ. ವೆಂಕಟೇಶ ಕುಮಾರ್ ಅವರಿಗೆ ಅಸ್ಥಾನ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದೇವಾಲಯದಲ್ಲಿ ವಿಶೇಷ ಪೂಜೆ:
ನವರಾತ್ರಿಯ ಮೊದಲ ದಿನವಾದ ಸೆಪ್ಟೆಂಬರ್ 22ರಂದು ಮುಂಜಾನೆ 4:30ರಿಂದ ಚಾಮುಂಡೇಶ್ವರಿ ದೇವಾಲಯದಲ್ಲಿ ಪ್ರಧಾನ ಆಗಮಿಕ ಡಾ. ಎನ್. ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಮಹಾನ್ಯಾಸಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿದವು.
ಉದ್ಘಾಟನೆಯ ವಿವಾದ ಮತ್ತು ಭದ್ರತೆ:
ದಸರಾ ಉದ್ಘಾಟಕಿಯಾಗಿ ಬಾನು ಮುಷ್ಕಾಕ್ ಆಯ್ಕೆಯಾದ ಬಗ್ಗೆ ವಿವಾದ ಉಂಟಾಗಿತ್ತು. ಅವರ ಕನ್ನಡಾಂಬೆ ಕುರಿತ ಹೇಳಿಕೆಗೆ ಜನರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ ಅಥವಾ ಗಲಾಟೆಯ ಸಾಧ್ಯತೆ ಇದ್ದ ಕಾರಣ, ಉದ್ಘಾಟನಾ ಸಮಾರಂಭದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು.
ಏರ್ ಶೋ ಮತ್ತು ಡ್ರೋನ್ ಶೋ:
ಈ ಬಾರಿಯ ದಸರಾದಲ್ಲಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆಪ್ಟೆಂಬರ್ 27 ಮತ್ತು ಅಕ್ಟೋಬರ್ 1ರಂದು ಏರ್ ಶೋ ನಡೆಯಲಿದೆ. ಜೊತೆಗೆ, ಸೆಪ್ಟೆಂಬರ್ 28ರಿಂದ ನಾಲ್ಕು ದಿನಗಳ ಕಾಲ ಡ್ರೋನ್ ಶೋ ಆಯೋಜನೆಗೊಂಡಿದೆ. ಇವೆರಡೂ ಈ ಬಾರಿಯ ದಸರಾದ ಪ್ರಮುಖ ಆಕರ್ಷಣೆಗಳಾಗಿವೆ.
ಜಂಬೂ ಸವಾರಿ:
ಅಕ್ಟೋಬರ್ 2ರಂದು ನಡೆಯುವ ಜಂಬೂ ಸವಾರಿಯು ದಸರಾ ಉತ್ಸವದ ಕೇಂದ್ರಬಿಂದುವಾಗಿದೆ. ಮಧ್ಯಾಹ್ನ 1 ಗಂಟೆಗೆ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಸಂಜೆ 4:42 ರಿಂದ 5:06ರ ಶುಭ ಕುಂಭ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡಲಿದ್ದಾರೆ. ಇದರೊಂದಿಗೆ ವಿಜಯದಶಮಿಯ ಜಂಬೂ ಸವಾರಿಯ ಮೂಲಕ ದಸರಾ ಮಹೋತ್ಸವ ಸಂಪನ್ನಗೊಳ್ಳಲಿದೆ.
ಮೈಸೂರು
H. Vishwanath-ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ಸಂಚಲನ: ಎಚ್. ವಿಶ್ವನಾಥ್
ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರು: ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಜನರು ರಾಜಕೀಯದ ಬಗ್ಗೆ ಸಾಕಷ್ಟು ಅಸಹ್ಯಪಟ್ಟುಕೊಂಡಿದ್ದಾರೆ. ನನ್ನ ಪುಸ್ತಕ ಬಿಡುಗಡೆಯಾದರೆ ರಾಜಕೀಯದ ಬಗ್ಗೆ ಜನರಲ್ಲಿ ಮತ್ತಷ್ಟು ಅಸಹ್ಯ ಮೂಡುವ ಸಾಧ್ಯತೆಯಿದೆ” ಎಂದು ಹೇಳಿದರು.
ಯತೀಂದ್ರ ಇತಿಹಾಸ ತಿಳಿದು ಮಾತನಾಡಲಿ
ರಾಜವಂಶಸ್ಥರ ಕುರಿತು ಸಚಿವ ಡಾ. ಯತೀಂದ್ರ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವನಾಥ್, “ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ರಾಜವಂಶಸ್ಥರ ಕುರಿತು ಯತೀಂದ್ರ ಮಾತನಾಡಿರುವ ಹಗುರವಾದ ಹೇಳಿಕೆಯೇ ಸಾಕ್ಷಿ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರು ರಾಜಮನೆತನದ ಇತಿಹಾಸ ಹಾಗೂ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.
“ಚಾಮುಂಡೇಶ್ವರಿ ಉಪಚುನಾವಣೆಯ ಪ್ರಚಾರಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಆಗಮಿಸದೇ ಇದ್ದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ” ಎಂದು ಎಚ್. ವಿಶ್ವನಾಥ್ ಟೀಕಿಸಿದರು.
ಮೈಸೂರು
Siddaramaiah–Vijayendra-ಸ್ಟಿಂಗ್ ಮತ್ತು ಪರಿಷತ್ ಫಲಿತಾಂಶ ನಡುವೆಯೇ ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ–ವಿಜಯೇಂದ್ರ; ಗಮನ ಸೆಳೆದ ಗೌರವ ವಿನಿಮಯ
ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರು, ಅ.28: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರಿನ ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ವಿಜಯೇಂದ್ರ ಅವರ ಬೆನ್ನು ತಟ್ಟಿದರು.
ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ವೇದಿಕೆಯಲ್ಲಿ ಪರಸ್ಪರ ಗೌರವ ವಿನಿಮಯ ಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.
ಮೈಸೂರು
Mysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು
ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರು: ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
‘ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೆ’ ಎಂದು ಸಚಿವರು ಹೇಳಿದ್ದು, ಈ ಹೇಳಿಕೆ ರಾಜಮನೆತನ ಮತ್ತು ಸರಕಾರದ ನಡುವಿನ ಚರ್ಚೆಗೆ ಹೊಸ ತಿರುವು ನೀಡಿದೆ.
ರವಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಮೋದಾದೇವಿ ಒಡೆಯರ್, ದಸರಾ ಸಂದರ್ಭದಲ್ಲಿ ರಾಜಮನೆತನ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಆದರೆ, ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಲು ಸಾಧ್ಯವಿಲ್ಲ ಎಂದರು.
‘ಸರಕಾರದ ದಸರಾಕ್ಕೂ ಇತಿಹಾಸವಿದೆ’
‘ಅವರು ಹೇಳಿದಂತೆ ಏಳು ದಿನ ದಸರಾ ಆಚರಿಸಲು ಸಾಧ್ಯವಿಲ್ಲ. ಸರಕಾರದ ದಸರಾ ಅಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಂಬಾರಿಯನ್ನು ಸರಕಾರ ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರಕಾರ ಹಣ ಪಾವತಿಸುತ್ತದೆ ಎಂದು ತಿಳಿಸಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರಕಾರದ ಗಮನಕ್ಕೆ ತರಬಹುದಿತ್ತು ಎಂದರು.
‘ನಾವು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದೆವು. ಆದರೆ, ನಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತಂದಿರಲಿಲ್ಲ. ಸರಕಾರಕ್ಕೆ ಪತ್ರ ಬರೆಯದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದರೆ ಹೇಗೆ?’ ಎಂದು ಪ್ರಶ್ನಿಸಿದರು.
ಅಗತ್ಯವಿದ್ದರೆ ಸರಕಾರದ ವತಿಯಿಂದ ಪ್ರತಿನಿಧಿಗಳನ್ನು ರಾಜಮನೆತನದವರ ಬಳಿಗೆ ಕಳುಹಿಸಲಾಗುವುದು. ಮುಖ್ಯಮಂತ್ರಿ ಅವರು ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.
ಅಂಬಾರಿ ಆನೆ ಆಯ್ಕೆಯಲ್ಲಿ ಗೊಂದಲ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾವ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ರಾಜಮನೆತನಕ್ಕೆ ತಿಳಿಸುವ ಕಾನೂನುಬದ್ಧ ಅಗತ್ಯವಿಲ್ಲ ಎಂದು ಹೇಳಿದರು.
ಆರಂಭದಲ್ಲಿ ಮಹೇಂದ್ರ, ಬಳಿಕ ಧನಂಜಯ ಹಾಗೂ ನಂತರ ಪ್ರಶಾಂತ್ ಆನೆಯ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಅಂಬಾರಿ ಆನೆಯ ಆಯ್ಕೆ ವಿಳಂಬವಾಯಿತು ಎಂದು ಅವರು ವಿವರಿಸಿದರು.
ಜೆಟ್ಟಿ ಕಾಳಗ ರದ್ದತಿ ವಿಚಾರ ಪರಿಶೀಲನೆ
ದಸರಾ ಸಂದರ್ಭದಲ್ಲಿ ಜೆಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರಮೋದಾದೇವಿ ಒಡೆಯರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ, ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಸಚಿವರು ಹೇಳಿದರು.
ಜೆಟ್ಟಿಗಳು ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆ ತೊಂದರೆಯಾಯಿತು; ಪೊಲೀಸರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂಬುದು ಪೊಲೀಸರ ಹೇಳಿಕೆಯಾಗಿದೆ. ಈ ಕುರಿತು ಸರಕಾರ ಪರಿಶೀಲನೆ ನಡೆಸುತ್ತಿದ್ದು, ಎಲ್ಲಿ ತಪ್ಪಾಗಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
-
ಅಪರಾಧ23 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ23 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್22 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ20 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ22 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ21 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್6 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಮಂಗಳೂರು22 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















