Connect with us

ಸ್ಥಳೀಯ

Belur-ಬೇಲೂರಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಮಹಿಳೆ ಲೀಲಮ್ಮ ಬಂಧನ

Published

on

Ad Widget

Ad Widget

Ad Widget

Ad Widget

ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿರುವ ಸಂಕಷ್ಟಹರ ವಿನಾಯಕ ದೇವಸ್ಥಾನದ ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅಪಮಾನಿಸಿದ ಘಟನೆಯಿಂದ ಭಕ್ತರಲ್ಲಿ ತೀವ್ರ ಆಕ್ರೋಶ ಹುಟ್ಟಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಹಾಸನದ ವಿಜಯನಗರ ಬಡಾವಣೆಯ ಲೀಲಮ್ಮ (55) ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಹಾಸನ: ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿರುವ ಸಂಕಷ್ಟಹರ ವಿನಾಯಕ ದೇವಸ್ಥಾನದ ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅಪಮಾನಿಸಿದ ಘಟನೆಯಿಂದ ಭಕ್ತರಲ್ಲಿ ತೀವ್ರ ಆಕ್ರೋಶ ಹುಟ್ಟಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಹಾಸನದ ವಿಜಯನಗರ ಬಡಾವಣೆಯ ಲೀಲಮ್ಮ (55) ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಶನಿವಾರ ರಾತ್ರಿ (ಸೆ.20) ಈ ಘಟನೆ ನಡೆದಿದ್ದು, ಭಾನುವಾರ ಬೆಳಗ್ಗೆ ಭಕ್ತರು ದೇವಸ್ಥಾನಕ್ಕೆ ಬಂದು ಕೈಮುಗಿಯಲು ಹೊರಟಾಗ ಗಣೇಶ ಮೂರ್ತಿಯ ಮೇಲೆ (ಎಡ, ಬಲ ಭಾಗಗಳಲ್ಲಿ) ಚಪ್ಪಲಿ ಹಾರ ಹಾಕಿರುವುದು ಕಂಡುಬಂದಿದೆ. ಮಹಿಳೆಯು ಮುಖ ಮುಚ್ಚಿಕೊಂಡು ದೇವಸ್ಥಾನದ ಕಬ್ಬಿಣದ ಬಾಗಿಲನ್ನು ತೆರೆದು ಒಳಗೆ ನುಗ್ಗಿ ಈ ಕೃತ್ಯವನ್ನು ಮಾಡಿದ್ದಾಳೆ ಎಂದು ಸಿಸಿಟಿವಿ ದೃಶ್ಯಗಳು ಸ್ಪಷ್ಟಪಡಿಸಿವೆ. ಆರೋಪಿಯನ್ನು ಆಕೆಯ ಮನೆಯಲ್ಲಿ ವಶಪಡಿಸಿಕೊಂಡ ಪೊಲೀಸರು, ಈ ಕೃತ್ಯವು ಧಾರ್ಮಿಕ ಭಾವನೆಗಳನ್ನು ದಲ್ಲು ಮಾಡುವಂತಹದ್ದು ಎಂದು ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget <> Ad Widget

ಮಹಿಳೆಯ ಮಾನಸಿಕ ಸ್ಥಿತಿ ಕುರಿತು:
ಲೀಲಮ್ಮನ ಮನೆಯವರು ಆಕೆಯ ಮಾನಸಿಕ ಸ್ಥಿತಿ ಸ್ಥಿರವಲ್ಲ ಎಂದು ತಿಳಿಸಿದ್ದಾರೆ. ಶನಿವಾರ ರಾತ್ರಿ ಬೇಲೂರಿಗೆ ಬಂದು ಚಿಕ್ಕಮಗಳೂರಿಗೆ ಹೋಗಿ ಮತ್ತೆ ವಾಪಸ್ ಬಂದು ಈ ದುಷ್ಕೃತ್ಯವನ್ನು ಮಾಡಿರುವುದು ದೃಶ್ಯಾವಳಿಗಳಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ ಎಂದು ಹಾಸನ ಎಸ್‌ಪಿ ಮೊಹಮ್ಮದ್ ಸುಜೀತಾ ತಿಳಿಸಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ತನಿಖೆಯನ್ನು ಮುಂದುವರೆಸಲಾಗುತ್ತದೆ ಎಂದರು.

ಘಟನೆಯನ್ನು ಖಂಡಿಸಿ ಸೋಮವಾರ ಬೇಲೂರು ಪಟ್ಟಣಕ್ಕೆ ಸೀಮಿತವಾಗಿ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ.

ನಿಧನ ವಾರ್ತೆ

Accident-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ

Published

on

Ad Widget

Ad Widget

Ad Widget

Ad Widget

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Ad Widget

Ad Widget <> Ad Widget

ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

ಕುಟುಂಬದ ಸದಸ್ಯರು ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ದೇವರ ದರ್ಶನ ಪಡೆದು ಮನೆಗೆ ಮರಳುತ್ತಿದ್ದ ಕುಟುಂಬದ ಪ್ರಯಾಣ ಕೆಲವೇ ಸಮಯದಲ್ಲಿ ಭೀಕರ ದುರಂತದಲ್ಲಿ ಅಂತ್ಯಗೊಂಡಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.

Ad Widget
Continue Reading

ಬಿಗ್ ನ್ಯೂಸ್

Rakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನವೆಂಬರ್ 20ರಂದು ಬೆಂಗಳೂರಿನ 66ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

Ad Widget

Ad Widget <> Ad Widget

ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿರುವುದು ಜಾಮೀನು ಪಡೆಯಬಹುದಾದ ಅಪರಾಧಗಳಾಗಿವೆ. ಒಂದು ವೇಳೆ ಬಂಧನಕ್ಕೊಳಗಾದರೂ ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಪಡೆಯಲು ಅವಕಾಶವಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಊರ್ಜಿತವಲ್ಲ ಎಂದು ಅಭಿಪ್ರಾಯಪಟ್ಟಿತು.

ಇದಕ್ಕೂ ಮುನ್ನ ರಾಕೇಶ್ ಶೆಟ್ಟಿ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧಗಳ ಆರೋಪ ಹೊರಿಸಲಾಗಿದೆ. ಆದ್ದರಿಂದ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದ್ದರು.

Ad Widget

Ad Widget

ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಪ್ರಕರಣದಲ್ಲಿ ಜಾಮೀನು ಪಡೆಯಬಹುದಾದ ಅಪರಾಧಗಳು ದಾಖಲಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವುದು ಕಾನೂನುಬದ್ಧವಾಗಿ ಊರ್ಜಿತವಲ್ಲ ಎಂದು ವಾದಿಸಿದರು.

ನ್ಯಾಯಪೀಠದ ಅಭಿಪ್ರಾಯದ ಬೆನ್ನಲ್ಲೇ ರಾಕೇಶ್ ಶೆಟ್ಟಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದುಕೊಂಡರು.

Ad Widget
Continue Reading

ಕ್ರೈಂ

Murder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್

Published

on

Ad Widget

Ad Widget

Ad Widget

Ad Widget

ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಆರೋಪಿತೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕನ್ಯಾನ ಗ್ರಾಮದ ಶಿರಂಕಲ್ಲು ನಂದರಬೆಟ್ಟು ಎಂಬಲ್ಲಿ ನ.24ರ ರಾತ್ರಿ ನಡೆದ ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಘಟನೆಯ ವಿವರ
ಶಿರಂಕಲ್ಲು ನಂದರಬೆಟ್ಟು ದಾಸರಕೋಡಿ ಎಂಬಲ್ಲಿ ಕೋಟಿ ಪೂಜಾರಿ ಹಾಗೂ ಚೆನ್ನಯ್ಯ ಪೂಜಾರಿ ಎಂಬ ಅವಳಿ ಸಹೋದರರು ವಾಸವಾಗಿದ್ದರು. ಕೋಟಿ ಪೂಜಾರಿಯವರ ವಿವಾಹಿತ ಪುತ್ರಿ ಕೃತ್ತಿಕಾ ಇತ್ತೀಚೆಗೆ ತವರು ಮನೆಗೆ ಬಂದಿದ್ದರು.

ನ.24ರಂದು ರಾತ್ರಿ ಸುಮಾರು 7 ಗಂಟೆಯ ವೇಳೆಗೆ ಚೆನ್ನಯ್ಯ ಪೂಜಾರಿ ಅವರು ಕೃತ್ತಿಕಾ ವಾಸವಿದ್ದ ಮನೆಯ ಬಳಿ ಗಲಾಟೆ ನಡೆಸಿದ್ದು, ಈ ವೇಳೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಮಾತಿನ ಚಕಮಕಿ ತೀವ್ರಗೊಂಡಾಗ ಆಕ್ರೋಶಗೊಂಡ ಕೃತ್ತಿಕಾ ಮನೆಯಲ್ಲಿದ್ದ ಹರಿತವಾದ ಕತ್ತಿಯಿಂದ ತನ್ನ ಚಿಕ್ಕಪ್ಪ ಚೆನ್ನಯ್ಯ ಪೂಜಾರಿ ಅವರ ಎದೆಗೆ ಬಲವಾಗಿ ಚುಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget

Ad Widget

ಕತ್ತಿಯೇಟಿನಿಂದ ಎದೆಗೆ ಗಂಭೀರ ಗಾಯಗೊಂಡ ಚೆನ್ನಯ್ಯ ಪೂಜಾರಿ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಅವರನ್ನು ಸ್ಥಳೀಯರು ತಕ್ಷಣ ವಿಟ್ಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಪುತ್ತೂರಿಗೆ ಕರೆತರುತ್ತಿದ್ದ ವೇಳೆ ತೀವ್ರ ರಕ್ತಸ್ರಾವದಿಂದ ಚೆನ್ನಯ್ಯ ಪೂಜಾರಿ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಕೃತ್ತಿಕಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!